ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಈ ಹಿಂದೆ CCB ವಿಭಾಗದಲ್ಲಿ DCP ಆಗಿದ್ದ ಕುಲ್ದೀಪ್ ಕುಮಾರ್ ಜೈನ್ರನ್ನು ACB ಎಸ್ಪಿಯಾಗಿ ನೇಮಿಸಲಾಗಿದ್ದು, ರವಿಕುಮಾರ್ವರನ್ನು CCBಯ ಡಿಸಿಪಿ ಗ್ರೇಡ್ 2 ರಿಂದ CCB ಡಿಸಿಪಿ ಗ್ರೇಡ್ 1 ಆಗಿ ವರ್ಗಾಯಿಸಲಾಗಿದೆ. ಅಂತೆಯೇ ಬೆಳಗಾವಿಯ ಡಿಸಿಪಿ ಆಗಿದ್ದ ಸೀಮಾ ಅನಿಲ್ ಲಟ್ಕರ್ರನ್ನು CCB ಎಐಜಿ …
Read More »ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್ 1 ರಿಂದ ಆಫ್‍ಲೈನ್ ಆಗಲಿದೆ.
ಬೆಂಗಳೂರು: ಕೋವಿಡ್ 19ನಿಂದಾಗಿ ಸದ್ಯ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್ 1 ರಿಂದ ಆಫ್‍ಲೈನ್ ಆಗಲಿದೆ. ಎಂದಿನಂತೆ ತರಗತಿ ಆರಂಭಿಸುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ಆರಂಭವಾಗಿದೆ. ಕೊರೊನಾದೊಂದಿಗೆ ಬದುಕಬೇಕಿರುವ ಕಾರಣ ಉನ್ನತ ಶಿಕ್ಷಣ ಇಲಾಖೆ ಅಕ್ಟೋಬರ್ ತಿಂಗಳಿನಿಂದ ಡಿಗ್ರಿ ಕಾಲೇಜು ಆರಂಭಿಸಲು ಮುಂದಾಗುತ್ತಿದೆ. ಈಗ ಹೇಗೆ ಕಚೇರಿಗಳನ್ನು ತೆರೆಯಲು ಸರ್ಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆಯೋ ಅದೇ ರೀತಿಯಾಗಿ ಕಾಲೇಜಿನಲ್ಲಿ ಅಳವಡಿಸಬೇಕಾದ ನಿಯಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ …
Read More »ಬುಲೆಟ್ ಮೇಲಿತ್ತು 103 ಪ್ರಕರಣಗಳು – ಫೈನ್ ಕಂಡು ಬೆಚ್ಚಿಬಿದ್ದ ಮಾಲೀಕ
ಬೆಂಗಳೂರು: ಬುಲೆಟ್ ಬೈಕ್ ಮಾಲೀಕನೊಬ್ಬ ಬರೋಬ್ಬರಿ 58 ಸಾವಿರದ 200 ರೂಪಾಯಿ ದಂಡ ಕಟ್ಟಿರುವ ಘಟನೆ ಸಿಲಿಕಾನ್ ಸಿಟಿಯ ಆಡುಗೊಡಿಯಲ್ಲಿ ನಡೆದಿದೆ. ಸಿಗ್ನಲ್ ಜಂಪ್, ಹೆಲ್ಮೆಟ್ ಇಲ್ಲದೇ ಸಂಚಾರ, ಒನ್ ವೇ ಹೀಗೆ ಸುಮಾರು 103 ಬಾರಿ ಬೈಕ್ ಸವಾರ ರಾಜೇಶ್ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಾನೆ. ಈ ಕಾರಣದಿಂದ ಸಂಚಾರಿ ಪೊಲೀಸರು ಆತನಿಗೆ ನೋಟಿಸ್ ನೀಡಿದ್ದರು. ಪರಿಣಾಮ ಇಂದು ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಗೆ ಬಂದ ರಾಜೇಶ್ ಬರೋಬ್ಬರಿ …
Read More »ಸಿಎಂ ಆಗಲೇಬೇಕು ಎಂಬ ಹಠಕ್ಕೆ ಬಿದ್ದಂತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್………!
ಬೆಂಗಳೂರು: ಸಿಎಂ ಆಗಲೇಬೇಕು ಎಂಬ ಹಠಕ್ಕೆ ಬಿದ್ದಂತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜ್ಯೋತಿಷ್ಯದ ಮೊರೆ ಹೋಗಿದ್ದು, ಕಚೇರಿಯಲ್ಲಿ ಓಡಾಡಲು ಪ್ರತ್ಯೇಕ ಬಾಗಿಲನ್ನೇ ನಿರ್ಮಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಸಿಎಂ ಆಗಲು ಕಚೇರಿ ಹಾಗೂ ಅಧಿಕೃತ ನಿವಾಸ ಕಚೇರಿಯನ್ನು ಶ್ವೇತ ವರ್ಣಕ್ಕೆ ಬದಲಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿಯ ಪಟ್ಟಕ್ಕೇರಲು ಜ್ಯೋತಿಷಿಗಳ ಸಲಹೆಯಂತೆ ಕಾಂಗ್ರೆಸ್ ಕಚೇರಿಯಲ್ಲಿ ಓಡಾಡಲು ಕುಬೇರ ಮೂಲೆಯಲ್ಲಿ ಹೊಸ ಬಾಗಿಲನ್ನೇ …
Read More »ಇಂದು ರಾಜ್ಯದಲ್ಲಿ 8,580 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,00,406ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ ಮೂರು ಲಕ್ಷದ ಗಡಿ ದಾಟಿದೆ. ಇಂದು ರಾಜ್ಯದಲ್ಲಿ 8,580 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,00,406ಕ್ಕೆ ಏರಿಕೆಯಾಗಿದೆ. ಮರಣ ಕೇಕೆ ಮುಂದುವರಿಸಿರುವ ಕೊರೊನಾಗೆ ಇಂದು 133 ಸೋಂಕಿತರು ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 5,091ಕ್ಕೆ ಏರಿಕೆ ಕಂಡಿದೆ. ಇಂದು 7,249 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ 83,608 ಸಕ್ರಿಯ ಪ್ರಕರಣಗಳಿವೆ. 760 ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ …
Read More »ಜೂಜಾಡಲು ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಬಂಧನ
ಬೆಂಗಳೂರು: ಜೂಜಾಡುವ ಗೀಳಿಗೆ ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಶಂಕರಪ್ಪ (40) ಎಂದು ಗುರುತಿಸಲಾಗಿದೆ. ಶಂಕರಪ್ಪ ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಗಿರಿನಗರದ ಉದ್ಯಮಿಯೊಬ್ಬರ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದನು. ಆದರೆ ಆರೋಪಿ ಜೂಜಾಡುವ ಚಟ ಹೊಂದಿದ್ದನು. ಒಂದು ದಿನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಮಾರು 15 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದನು. ನಂತರ ಬೆಂಗಳೂರಿನಲ್ಲಿ ಮನೆಗಳವು ಮಾಡಿದ …
Read More »ಸಿಸಿಟಿವಿಗೆ ಚೂಯಿಂಗ್ ಗಮ್ ಅಂಟಿಸಿ ಎಟಿಎಂ ದರೋಡೆ
ಬೆಂಗಳೂರು: ಸಿಸಿಟಿವಿಗೆ ಚೂಯಿಂಗ್ ಗಮ್ ಅಂಟಿಸಿ ಎಟಿಎಂ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಮರ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಹ್‍ಯಾ ಬಂಧಿತ ಆರೋಪಿಗಳಾಗಿದ್ದು, ಜಾಲಹಳ್ಳಿ ಕೆನರಾ ಬ್ಯಾಂಕ್ ಎಟಿಎಂ ನಿಂದ 27 ಲಕ್ಷ ಹಣ ದರೋಡೆ ಮಾಡಿದ್ದರು. ಆಗಸ್ಟ್ 10ರ ರಾತ್ರಿ ಎಟಿಎಂ ಕೇಂದ್ರ ಒಳಗಿದ್ದ ಮೂವರು ಆರೋಪಿಗಳು ಮೊದಲು ಸಿಸಿಟಿವಿ ಕ್ಯಾಮೆರಾಗೆ ಚೂಯಿಂಗ್ ಗಮ್ ಅಂಟಿಸಿ ಬಳಿಕ ವೈಯರ್ ಕಟ್ ಮಾಡಿ ಕೃತ್ಯ …
Read More »ಮುಂಜಾಗ್ರತಾ ಕ್ರಮಗಳೊಂದಿಗೆ ಪದವಿ ಕಾಲೇಜುಗಳನ್ನ ಆರಂಭಿಸಲು ಮುಂದಾಗಿರುವ ಸರ್ಕಾರ
ಬೆಂಗಳೂರು: ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಪದವಿ ಕಾಲೇಜುಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿವೆ. ಸೆಪ್ಟೆಂಬರ್ 1 ರಿಂದ ಆನ್‍ಲೈನ್ ತರಗತಿಗಳು ಮತ್ತು ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿ ಪ್ರಾರಂಭಿಸಲಾಗುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಮೂಲಗಳ ಮಾಹಿತಿ ತಿಳಿದು ಬಂದಿದೆ. ಯುಜಿಸಿ ಸೂಚನೆ ಮೇರೆಗೆ ರಾಜ್ಯದಲ್ಲಿ ತರಗತಿ ಪ್ರಾರಂಭಕ್ಕೆ ಸರ್ಕಾರದ ನಿರ್ಧಾರ ಮಾಡಿದೆ ಎನ್ನಲಾಗಿದೆ. ಅನ್‍ಲಾಕ್ 4.O ಮಾರ್ಗಸೂಚಿಗಾಗಿ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಈ …
Read More »ಶೀಘ್ರದಲ್ಲಿ ಬಾರ್, ಕ್ಲಬ್, ಪಬ್ ಓಪನ್ ಸಾಧ್ಯತೆ: ಎಚ್.ನಾಗೇಶ್
ಬೆಂಗಳೂರು: ಶೀಘ್ರದಲ್ಲಿ ಬಾರ್, ಕ್ಲಬ್ ಮತ್ತು ಪಬ್ ಓಪನ್ ಆಗುವ ಸಾಧ್ಯತೆ ಇದೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದರು. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಮಾತನಾಡಿದ ಎಚ್.ನಾಗೇಶ್, ಶೀಘ್ರದಲ್ಲಿ ಬಾರ್, ಕ್ಲಬ್ ಮತ್ತು ಪಬ್ ಓಪನ್ ಆಗುವ ಸಾಧ್ಯತೆ ಇದೆ. ಈ ವಿಚಾರದಲ್ಲಿ ಸಿಎಂ ಜೊತೆಗೆ ನಾನು ಚರ್ಚೆ ನಡೆಸುವೆ. ಬಾರ್ ಮತ್ತು ಪಬ್ ಕಾರ್ಮಿಕರಿಗೆ ತೊಂದರೆಯಾಗಿದೆ. ಕ್ಲಬ್‍ಗಳಲ್ಲಿ ಸ್ಪೋರ್ಟ್ಸ್ ಚಟುವಟಿಕೆಯನ್ನು ಇಂದಿನಿಂದ ಆರಂಭವಾಗಿದೆ. ಅಲ್ಲಿ ಪಾರ್ಸಲ್‍ಗಳಿಗೆ ಮಾತ್ರ ಅನುಮತಿ …
Read More »ಇತರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್‍ಆರ್‍ಟಿಸಿ ಸಿದ್ಧ
ಬೆಂಗಳೂರು: ದೇಶಾದ್ಯಂತ ಲಾಕ್‍ಡೌನ್ ಸಡಿಲಗೊಳಿಸಿರುವುದರಿಂದ ರಾಜ್ಯದಿಂದ ಇತರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್‍ಆರ್‍ಟಿಸಿ ಸಿದ್ಧವಾಗಿದ್ದು, ನೆರೆಯ ರಾಜ್ಯಗಳು ಒಪ್ಪಿಗೆ ಸೂಚಿಸಿದರೆ ಇತರೆ ರಾಜ್ಯಗಳಿಗೆ ಬಸ್ ಸಂಚಾರ ಆರಂಭವಾಗಲಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಡಿಸಿಎಂ, ನೆರೆಯ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯಗಳು ಒಪ್ಪಿಗೆ ಸೂಚಿಸಿದರೆ …
Read More »