Breaking News

ಬೆಂಗಳೂರು

ಗೋಕಾಕ್‍ನ ಉಪ್ಪಾರಗಲ್ಲಿ, ಹಳೆದನದಪೇಟೆ, ಕುಂಬಾರಗಲ್ಲಿ, ಮಟನ್ ಮಾರ್ಕೆಟ್ ಮತ್ತು ಮಹಾಲಿಂಗೇಶ್ವರ ನಗರ ಜಲಾವೃತ

ಬೆಂಗಳೂರು: ಮಳೆಯಬ್ಬರ ತಗ್ಗಿದ್ದು, ಉತ್ತರ ಕರ್ನಾಟಕದಲ್ಲೂ ಪ್ರವಾಹ ಇಳಿಮುಖವಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಕೇವಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಬರಬಹುದು. ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ.ಕಳೆದ ಆರೇಳು ದಿನಗಳಿಂದ ಆಗುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಡ್ಯಾಂಗಳು ಬಹುತೇಕ …

Read More »

ದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ ಬದಲಾವಣೆ : ಹೀಗಿದೆ ಬದಲಾದ ಪರೀಕ್ಷಾ ದಿನಾಂಕಗಳು

ಬೆಂಗಳೂರು : ದ್ವಿತೀಯ ಪಿಯುಸಿಯ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ನಂತ್ರ, ಆಗಸ್ಟ್ 10ರಂದು ಪೂರಕ ಪರೀಕ್ಷೆಯ ದಿನಾಂಕವನ್ನು ಕೂಡ ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಅದರಂತೆ ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 18ರವರೆಗೆ ಪೂರಕ ಪರೀಕ್ಷೆಯ ವಿಷಯವಾರು ವೇಳಾ ಪಟ್ಟಿಯನ್ನು ಕೂಡ ಪ್ರಕಟಿಸಿತ್ತು. ಇಂತಹ ವೇಳಾಪಟ್ಟಿಯಲ್ಲಿ ಬದಲಾವಣೆಯನ್ನು ಮಾಡಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಕನಗವಲ್ಲಿ ಮಾಹಿತಿ ನೀಡಿದ್ದು, ಸೆಪ್ಟೆಂದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ …

Read More »

ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಓರ್ವನಿಗೆ ಐಸಿಸ್ ನಂಟಿರುವುದು ಬೆಳಕಿಗೆ ಬಂದಿದೆ: ಪ್ರಮೋದ್ ಮುತಾಲಿಕ.

ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಓರ್ವನಿಗೆ ಐಸಿಸ್ ನಂಟಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕ್ರಿಯೆ ನೀಡಿರುವ ಮುತಾಲಿಕ್, ಬೆಂಗಳೂರು ಗಲಭೆಯಂತಹ ಸಾಕಷ್ಟು ಪ್ರಕ್ರಿಯೆಗಳು ನಮ್ಮ ರಾಜ್ಯದಲ್ಲಿ ನಡೆದಿದೆ. ಗಲಭೆ ಪ್ರಕರಣದ ಆರೋಪಿಯೊಬ್ಬನಿಗೆ ಐಸಿಸ್ ನಂಟು ಇದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಾಗಬೇಕಿದೆ ಎಂದರು. ಬೆಂಗಳೂರಿನಲ್ಲಿ ಗಲಾಟೆಗಳು ನಡೆದ ಬಳಿಕ …

Read More »

ನಾವು ಯಾವ ಅಮಾಯಕರನ್ನೂ ಅರೆಸ್ಟ್ ಮಾಡಿಲ್ಲ:ಪೊಲೀಸ್ ಆಯುಕ್ತ ಕಮಲ್‍ ಪಂತ್

ಬೆಂಗಳೂರು: ನಾವು ಯಾವ ಅಮಾಯಕರನ್ನೂ ಅರೆಸ್ಟ್ ಮಾಡಿಲ್ಲ ಎಂದು ಪೊಲೀಸ್ ಆಯುಕ್ತ ಕಮಲ್‍ ಪಂತ್ ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.ಡಿಜೆ ಹಳ್ಳಿ ಪೊಲೀಸ್ ಠಾಣೆಯ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಲ್‍ ಪಂತ್, ಇವತ್ತು ಕರ್ಫ್ಯೂ ತೆರವು ಆದಮೇಲೆ ಯಾವ ಪರಿಸ್ಥಿತಿ ಇದೆ ಅನ್ನೋದನ್ನು ನೋಡೋಕೆ ಬಂದಿದ್ದೆ. ತನಿಖೆ ಯಾವ ರೀತಿ ನಡೆಯುತ್ತಿದೆ. ಮುಂದೆ ಏನು ಮಾಡಬೇಕು ಅನ್ನೋದನ್ನು ಚರ್ಚೆ ಮಾಡಿದ್ದೀವಿ. ನಮಗೆ ಯಾವುದೇ ರೀತಿಯ ಒತ್ತಡ ಇಲ್ಲ …

Read More »

ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ

ಬೆಂಗಳೂರು:  ಅತಿವೃಷ್ಟಿಯಿಂದಾಗಿ ಇಡೀ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಆದ್ರೆ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾದ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ವರ್ಷ ಅತಿವೃಷ್ಟಿ ಪರಿಹಾರದಲ್ಲಿ ಆದ ವೈಫಲ್ಯದಿಂದ ಈ ಬಾರಿ ಜನರ ಕಷ್ಟ ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ. ಅತಿವೃಷ್ಟಿಯಿಂದ ಕಂಗೆಟ್ಟ ಜನರಿಗೆ ಪರಿಹಾರ ಕೊಡುವ ಕೆಲಸ ಮಾಡುವ ಬದಲು ಕಂದಾಯ ಸಚಿವರು ಬೆಂಗಳೂರಿನಲ್ಲಿ ಕುಳಿತು ಕಾವಲಭೈರಸಂದ್ರ ಗಲಭೆ ಬಗ್ಗೆ …

Read More »

8 ತಿಂಗಳಿನಿಂದ ಬಾರದ ಸಂಬಳ : ರಾಜ್ಯ ಸರ್ಕಾರಕ್ಕೆ ರಾತ್ರಿ ಹೊತ್ತು ಕಾವಲುಗಾರನಾಗಿ ಕೆಲಸ ಮಾಡಲು ಪತ್ರ ಬರೆದ ‘ಸರ್ಕಾರಿ ನೌಕರ’

ಬೆಂಗಳೂರು : ಮನೆಯಲ್ಲಿ ಗರ್ಭಿಣಿ ಪತ್ನಿಯಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಪೋಷಕರು ಇದ್ದಾರೆ. ಅವರನ್ನು ಉಳಿಸಿಕೊಳ್ಳಲು ಕಚೇರಿ ಕರ್ತವ್ಯಕ್ಕೆ ಧಕ್ಕೆಯಾಗದಂತೆ ರಾತ್ರಿ ಪಾಳಿಯಲ್ಲಿ ಅಲ್ಪಾವಧಿ ಕೆಲಸ ಮಾಡಲು ಅನುಮತಿ ನೀಡುವಂತೆ ನೊಂದಣಿ ಮತ್ತು ಮುದ್ರಣಾಂಕ ಶಾಖೆಯ ಆಡಿಟ್ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರಥಮ ದರ್ಜೆ ಸಹಾಯಕರೊಬ್ಬರು ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಪತ್ರದಿಂದಾಗಿ ರಾಜ್ಯ ಸರ್ಕಾರಿ ನೌಕರರ ಪರಿಸ್ಥಿತಿ ಮನ ಮಿಡಿಯುವಂತಾಗಿದೆ. ರಾಜ್ಯ …

Read More »

ರಾಜ್ಯದಲ್ಲಿ ಒಂದೇದಿನ ಕೊರೋನಾಕ್ಕೆ 139 ಬಲಿ: 7665 ಕೇಸ್!

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 7,665 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ದಾಖಲೆಯ 139 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 4,201ಕ್ಕೆ ಏರಿಕೆಯಾಗಿದೆ. ಮಂಗಳವಾರ ರಾಜ್ಯದಲ್ಲಿ ಒಂದು ದಿನದ ಗರಿಷ್ಠ ಸಾವು ವರದಿಯಾಗಿದ್ದು, ಕಳೆದ ಭಾನುವಾರ ಒಂದೇ ದಿನ 124 ಮಂದಿ ಸಾವನ್ನಪ್ಪಿದ್ದು ಈವರೆಗಿನ ದಾಖಲೆಯಾಗಿತ್ತು. ಮಂಗಳವಾರ 7,665 ಸೋಂಕು ದೃಢಪಡುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2.41 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರ …

Read More »

ಕ್ಲೇಮ್‌ ಕಮಿಷನರ್‌: ಸರ್ಕಾರದ ಪರ ಎಸಿಎಸ್‌ ಅರ್ಜಿ

ಬೆಂಗಳೂರು: ಗಲಭೆ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲು ‘ಕ್ಲೇಮ್‌ ಕಮಿಷನರ್’ ನೇಮಿಸುವಂತೆ ರಾಜ್ಯ ಸರ್ಕಾರದ ಪರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಜವಾಬ್ದಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್‌) ನೀಡಲಾಗಿದೆ. ಈ ಸಂಬಂಧ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ನೇಮಿಸುವ ‘ಕ್ಲೇಮ್‌ ಕಮಿಷನರ್‌’ ಗಲಭೆ ವೇಳೆ ನಷ್ಟವಾದ ಆಸ್ತಿಯ ಮೌಲ್ಯ ಲೆಕ್ಕ ಹಾಕಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ನಿರ್ಧರಿಸಲಿದ್ದಾರೆ. …

Read More »

ಶಾಸಕ ಜಮೀರ ಅಹ್ಮದ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ ಅಹ್ಮದ ಖಾನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ ಮೂಲಕ ಸ್ವತಃ ಮಾಹಿತಿ ನೀಡಿರುವ ಶಾಸಕರು “ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದು …

Read More »

ಸಿಇಟಿ ಪರೀಕ್ಷೆಯ ಫಲಿತಾಂಶ ಆ. 20ರಂದು ಪ್ರಕಟಆನ್​ಲೈನ್​ನಲ್ಲಿಯೇ ಕೌನ್ಸೆಲಿಂಗ್

ಬೆಂಗಳೂರು: ಕರ್ನಾಟಕದ ಸಿಇಟಿ ಪರೀಕ್ಷೆಯ ಫಲಿತಾಂಶ ಆ. 20ರಂದು ಪ್ರಕಟವಾಗಲಿದೆ. ಈ ಬಗ್ಗೆ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದು, ಕಳೆದ ವರ್ಷ ಎಷ್ಟು ಶುಲ್ಕವನ್ನು ವಿಧಿಸಲಾಗುತ್ತಿತ್ತೋ ಈ ಬಾರಿಯೂ ಅಷ್ಟೇ ಶುಲ್ಕವಿರಲಿದೆ. ಹಾಗೇ, ಕಳೆದ ವರ್ಷದ ಅನುಪಾತದಲ್ಲೇ ಈ ವರ್ಷವೂ ಸೀಟು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 30ರಿಂದ ಆಗಸ್ಟ್​ 1ರವರೆಗೆ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಪರೀಕ್ಷೆ ನಡೆದ …

Read More »