ಬೆಂಗಳೂರು: ಕಾಂಗ್ರೆಸ್ ಪಕ್ಷ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ನಡೆಸಿತ್ತು ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ಕಾಲದ ಹಗರಣಗಳ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿಕೊಂಡು ಓಡಾಡಿದ ಖ್ಯಾತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ದೂರಿದೆ. ‘ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಎಲ್ಲ ಯೋಜನೆಗಳಲ್ಲೂ ಹಗರಣ ನಡೆದಿದೆ. ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿನ ಕಮಿಷನ್, ಸ್ಟೀಲ್ ಬ್ರಿಡ್ಜ್ …
Read More »ಪೌರ ಕಾರ್ಮಿಕರ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ
ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಸಂಪುಟದಲ್ಲಿ (Legislative Assembly) ಪೌರ ಕಾರ್ಮಿಕರ (Civic Workers) ಕಾಯಂ ಮಾಡುವ ತೀರ್ಮಾನ ತೆಗೆದುಕೊಂಡಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಪೌರಕಾರ್ಮಿರ ದಿನಾಚರಣೆಯ ಪ್ರಯುಕ್ತ ಉಪಾಹಾರ ಸವಿದಿದ್ದಾರೆ. ರೇಸ್‌ಕೋರ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ 500ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಉಪಹಾರ ವ್ಯವಸ್ಥೆ ಏರ್ಪಡಿಸಿದ್ದರು. ಬೆಳಿಗ್ಗೆ 9.30ಕ್ಕೆ ಸಿಎಂ ಸಹ ಪೌರ ಕಾರ್ಮಿಕರೊಂದಿಗೆ ಇಡ್ಲಿ, ವಡೆ, ಉಪ್ಪಿಟ್ಟು, ಕೇಸರಿಬಾತ್ ಉಪಹಾರ ಸವಿದಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, …
Read More »ಕಾಂಗ್ರೆಸ್, ಜೆಡಿಎಸ್ ಧರಣಿ ನಡುವೆ ನಾಲ್ಕು ವಿಧೇಯಕಗಳ ಅಂಗೀಕಾರ: ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿಧೇಯಕಗಳನ್ನು ಪ್ರತಿಪಕ್ಷಗಳ ಧರಣಿ ನಡುವೆ ವಿಧಾನ ಪರಿಷತ್ನಲ್ಲಿ ಅಂಗೀಕಾರ ಮಾಡಲಾಗಿದ್ದು, ಕಲಾಪವನ್ನು ಅನಿರ್ದಿಷ್ಟಾವದಿಗೆ ಮುಂದೂಡಿಕೆ ಮಾಡಲಾಯಿತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು ಮಾಣಿಪ್ಪಾಡಿ ವರದಿ ಕುರಿತು ನಿಯಮ 59 ರ ಅಡಿ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ …
Read More »ನಾನು ಹೊಡೆದ ಗುಂಡನ್ನು ವಿಫಲಗೊಳಿಸಲು ಷಡ್ಯಂತ್ರ ನಡೆಯುತ್ತಿದೆ: ಕುಮಾರಸ್ವಾಮಿ
ಬೆಂಗಳೂರು: ಬಿಎಂಎಸ್ ಶಿಕ್ಷಣ ಟ್ರಸ್ಟ್ ಅನ್ನು ಖಾಸಗಿ ವ್ಯಕ್ತಿಗಳಿಗೆ ವರ್ಗಾಯಿಸುವಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಶಾಮೀಲಾಗಿದ್ದು, ಹಣಕಾಸಿನ ಅವ್ಯವಹಾರವೂ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ವಿಧಾನಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದರು. ಇದೀಗ ನಾನು ಹೊಡೆದ ಗುಂಡನ್ನು ವಿಫಲಗೊಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ. …
Read More »P.D.O.ಗಳ ಮುಂಭಡ್ತಿಗೆ ಶೀಘ್ರ ಕ್ರಮ: C.M.
ಬೆಂಗಳೂರು: ರಾಜ್ಯದಲ್ಲಿ 12 ವರ್ಷಗಳಿಂದ ಪದೋನ್ನತಿ ಇಲ್ಲದೆ ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳ ಮುಂಭಡ್ತಿಗೆ ಶೀಘ್ರ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗುರುವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಅವರ ಪ್ರಶ್ನೆಗೆ ಲಿಖೀತ ರೂಪದಲ್ಲಿ ಪ್ರತಿಕ್ರಿಯಿಸಿದ ಅವರು, ಪಿಡಿಒಗಳು ಸುಮಾರು 12 ವರ್ಷಗಳಿಂದ ಒಂದೇ ಹುದ್ದೆಯಲ್ಲಿರುವುದು ಸರಕಾರದ ಗಮನಕ್ಕೆ ಬಂದಿದೆ. ಅವರನ್ನು ಸಹಾಯಕ ನಿರ್ದೇಶಕ ಹುದ್ದೆಗೆ ಭಡ್ತಿಗೊಳಿಸಲು ಶೀಘ್ರ …
Read More »ಸರ್ಕಾರದ ಗೋಮಾಳ, ಕಾಣೆ,ಬಾಣೆ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ!
ಬೆಂಗಳೂರು : ಸರ್ಕಾರಕ್ಕೆ ಸೇರಿದ ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿನೀಡಿದ್ದು, ಶೀಘ್ರವೇ ಜಮೀನು ಸಕ್ರಮಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸರ್ಕಾರಕ್ಕೆ ಸೇರಿದ ಗೋಮಾಳ, ಗಾಯರಾಣ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ ಸೇರಿದಂತೆ ಕಾಣೆ, ಬಾಣೆ, ಕಮ್ಮಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಜಮೀನುಗಳನ್ನು ಸಕ್ರಮ ಮಾಡುವ ಸಂಬಂಧ ನೀತಿ ರೂಪಿಸಲು …
Read More »ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ
ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶಹಬ್ಬಾಸ್ ಗಿರಿ ನೀಡಿದ್ದಾರೆ. ಪಿಎಸ್‌ಐ ತನಿಖೆ ಗಂಭೀರತೆ ಪಡೆದುಕೊಂಡಿದೆ. ಈ ಹಿಂದೆ ಇಂತಹ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬರುತ್ತಿದ್ದರು. ಈ ಕೇಸ್ ನಲ್ಲಿ ಆ ರೀತಿ ಆಗಿಲ್ಲ. ಸರ್ಕಾರ ಬಿಗುವಾಗಿ ತನಿಖೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಮತ್ತೆ ದಾರಿ ತಪ್ಪುವುದು ಬೇಡ. ಈ …
Read More »ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು
ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ದೇವೇಗೌಡರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ದೇವೇಗೌಡರ ಕಾಲುಮಟ್ಟಿ ನಮಸ್ಕರಿಸಲು ಮುಂದಾಗಿದ್ದು, ಈ ವೇಳೆ ದೇವೇಗೌಡರು ತಕ್ಷಣ ಯಡಿಯೂರಪ್ಪನವರ ಕೈ ಹಿಡಿದುಕೊಂಡಿದ್ದಾರೆ. ದೇವೇಗೌಡರಿಗೆ ಮಂಡಿ ನೋವು ಇದೆ. ನೆನಪಿನ ಶಕ್ತಿ ಚೆನ್ನಾಗಿದೆ. ಒಂದು ತಿಂಗಳ ಹಿಂದೆಯೇ ಅವರನ್ನು …
Read More »ಪಂಚಮಸಾಲಿ ಮೀಸಲಾತಿ ಬಗ್ಗೆ ಸದನದಲ್ಲಿ ಮತ್ತೆ ಪ್ರಸ್ತಾಪ ಮಾಡಿದ ಯತ್ನಾಳ್
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ಕುರಿತು ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದ ನಂತರ ಕಾನೂನು ಬದ್ದವಾಗಿ ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪಂಚಮಸಾಲಿ ಸಮುದಾಯ, ವಾಲ್ಮೀಕಿ ಸಮುದಾಯ, ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಅನೇಕ ಸಮುದಾಯಗಳು ಮೀಸಲಾತಿ ಹೆಚ್ಚಳದ ಬಗ್ಗೆ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಏನೇ ಕ್ರಮ ಕೈಗೊಂಡರೂ ಅದು ಕಾನೂನು ಬದ್ದವಾಗಿರಬೇಕು. ಹಾಗಾಗಿ ಯಾರಿಗೂ ಕೂಡ ಅನ್ಯಾಯವಾಗದಂತೆ ಕ್ರಮ …
Read More »ಸಂಚಾರಿ ಪೊಲೀಸ್ ಎಂದು ಹೇಳಿಕೊಂಡು ದಂಡ ವಸೂಲಿ ಮಾಡುತ್ತಿದ್ದ ಅರಣ್ಯ ಅಧಿಕಾರಿಗೆ ಸಾರ್ವಜನಿಕರಿಂದ ಥಳಿತ
ಬಳ್ಳಾರಿ: ಬಳ್ಳಾರಿ ವಿಭಾಗದ ಅರಣ್ಯ ಅಧಿಕಾರಿಯೊಬ್ಬರು ರಾಜ್ಯ ಅರಣ್ಯ ಇಲಾಖೆಗೆ ಮುಜುಗರ ಉಂಟು ಮಾಡುವಂತೆ ಮಾಡಿದ್ದು, ತಾನು ಬಳ್ಳಾರಿ ಸಂಚಾರಿ ಪೋಲೀಸರಂತೆ ಪೋಸು ಕೊಟ್ಟು, ವಾಹನ ಸವಾರರಿಂದ ಹಣ ವಸೂಲಿ ಮಾಡಿದ್ದಕ್ಕೆ ಸಾರ್ವಜನಿಕರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸ್ ಅಧಿಕಾರಿಯ ಬಗ್ಗೆ ಅನುಮಾನಗೊಂಡ ಸಾರ್ವಜನಿಕರು, ಆರೋಪಿ ಉಪ ವಲಯ ಅರಣ್ಯಾಧಿಕಾರಿಯನ್ನು ಹಿಡಿದ ಥಳಿಸಿದ ಘಟನೆ ಸೋಮವಾರ ಬಳ್ಳಾರಿ ನಗರದಲ್ಲಿ ವರದಿಯಾಗಿದೆ. ಆರೋಪಿ ಅಧಿಕಾರಿ ಭಾನುವಾರ ‘ಡ್ಯೂಟಿ’ಯಲ್ಲಿದ್ದು, ಹಲವು ವಾಹನ …
Read More »