ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಿಂದ ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಾರಾ ಅನ್ನೋ ಚರ್ಚೆ ಕೆಲ ದಿನಗಳಿಂದ ಆರಂಭಗೊಂಡಿತ್ತು. ಈ ಎಲ್ಲ ಊಹಾಪೋಹಗಳಿಗೆ ಸ್ವತಃ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾ ಪ್ರಕಟನೆ: ಇಂತಹ ಕಪೋಲಕಲ್ಪಿತ ಸುದ್ದಿ- ವದಂತಿಗಳನ್ನು ಯಾರು ಹಬ್ಬಿಸುತ್ತಾರೋ? ಯಾಕೆ ಹಬ್ಬಿಸುತ್ತಾರೋ? ಇದರಿಂದ ಕುತ್ಸಿತ ಮನಸುಗಳಿಗೆ ಆಗುವ ಲಾಭ ಏನೆಂಬುದು ನನಗೆ ತಿಳಿಯದಾಗಿದೆ. ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ …
Read More »4 ಸಾವಿರ ಕೆಜಿ ಉಪ್ಪು, 250 ಕೆಜಿ ಬಣ್ಣ, 400 ಕೆಜಿ ಹೂವಿನಲ್ಲಿ ಅರಳಿತು ಧ್ವಜ
ಬೆಂಗಳೂರು: ಸಿಲಿಕಾನ್ ಸಿಟಿಯ ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ತಾಂತ್ರಿಕ ಮಹಾವಿದ್ಯಾಲಯ 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ “ತ್ರಿವರ್ಣೋತ್ಸವ” ವನ್ನು ಹಮ್ಮಿಕೊಂಡಿತ್ತು. ಸುಮಾರು 4,000 ಕೆ.ಜಿ. ಉಪ್ಪು, 250 ಕೆ.ಜಿ. ಬಣ್ಣ ಹಾಗೂ 400 ಕೆ.ಜಿ ಹೂಗಳನ್ನು ಬಳಸಿ ಮನೋಹರವಾದ ತ್ರಿವರ್ಣ ಧ್ವಜವನ್ನು ನಿರ್ಮಿಸಿದ್ದರು. ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿ ಕೊರೊನಾ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ, ವೈದ್ಯರಾದ ಡಾ.ಉದಯಶಂಕರ್, ಡಾ.ಕಾರ್ತಿಕ್, ಡಾ.ಅನೂಷ, ಸ್ಟಾಫ್ ನರ್ಸ್ ನಾಗರಾಜ್, ಪೊಲೀಸರಾದ ಅರುಣ್ ಕುಮಾರ್ ಮತ್ತು ಲಕ್ಷಣ್ ಆಶಾ ಕಾರ್ಯಕರ್ತೆ …
Read More »ಐದು ಭಾಷೆ, 65 ಸಿಂಗರ್ಸ್, ಒಂದು ಹಾಡು – ಲಹರಿ ಸಂಸ್ಥೆಯಿಂದ ವಿಷೇಶ ಗೀತೆ ಬಿಡುಗಡೆ
ಬೆಂಗಳೂರು: ಲಹರಿ ಸಂಸ್ಥೆಯಿಂದ ಸ್ವಾತಂತ್ರ ದಿನಾಚರಣೆಗೆ ವಿಶೇಷವಾದ ‘ಒಟ್ಟಿಗೆ ಒಂದಾಗಿ..’ ಎಂಬ ಹಾಡೊಂದನ್ನು ಇಂದು ಬೆಳಗ್ಗೆ 11 ಗಂಟೆಗೆ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಸುಮಾರು 65 ಸಿಂಗರ್‍ಗಳು ಹಾಡಿದ್ದು, 5 ಭಾಷೆಯಲ್ಲಿ ಈ ಹಾಡು ಮೂಡಿ ಬಂದಿದೆ. ಈ ಹಾಡು ಕನ್ನಡ, ಹಿಂದಿ, ತಮಿಳು, ತೆಲಗು ಹಾಗೂ ಮಲಯಾಳಂ ಭಾಷೆಯಲ್ಲಿ ಹಾಡಲಾಗಿದೆ. ಈ ಹಾಡು ಲಹರಿ ಯುಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಹಾಡು ಭಾರತದವರಾದ ನಾವು ಎಲ್ಲರೂ …
Read More »ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಒಬ್ಬ ಒಳ್ಳೆಯ ಶಾಸಕ. ಆತನಿಗೆ ಅನ್ಯಾಯ ಆಗಬಾರದಾಗಿತ್ತು: ರಮೇಶ ಜಾರಕಿಹೊಳಿ
ಬೆಳಗಾವಿ: ಬೆಂಗಳೂರು ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ನಡೆದದ್ದು, ಕಾಂಗ್ರೆಸ್ ಗಲಾಟೆ ಅದಕ್ಕೂ ನಮಗೂ ಸಂಬಂಧವಿಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 74 ನೇ ಸ್ವಾತಂತ್ರೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಸತ್ಯಶೋಧನಾ ಸಮಿತಿ ರಚಿಸಿದ್ದಾರೆ. ಅದರಿಂದಲೇ ಸಂತ್ಯಾಂಶ ಹೊರ ಬರಲಿದೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಒಬ್ಬ ಒಳ್ಳೆಯ ಶಾಸಕ. ಆತನಿಗೆ ಅನ್ಯಾಯ …
Read More »ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಯಡಿಯೂರಪ್ಪ,
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಯೋಜನೆ 2ನೇ ಹಂತಕ್ಕೆ 30,695 ಕೋಟಿ ರೂ. ಮೀಸಲಿಡಲಾಗಿದೆ. 2024ರ ಜೂನ್ ವೇಳೆಗೆ 2ನೇ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದೆ. 10 ಲಕ್ಷ ರೈತರಿಗೆ 6,500 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ. ಕೊಡಗು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಸೇರಿದಂತೆ 11 ಜಿಲ್ಲೆಗಳನ್ನು ಪ್ರವಾಹಪೀಡಿತ ಜಿಲ್ಲೆಗಳೆಂದು ಘೋಷಿಸಲಾಗಿದೆ. ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಮುಖ್ಯಮಂತ್ರಿ ಬಿ.ಎಸ್. …
Read More »“ನಮಗಿಲ್ಲದ ಸೌಲಭ್ಯ ಹಾಲಿವುಡ್‍ಗೆ ನೀಡುವುದು ಸರಿಯಲ್ಲ”
ಬೆಂಗಳೂರು,- ಕನ್ನಡದ ನೆಲ- ಜಲ, ಸವಲತ್ತುಗಳನ್ನು ಬಳಸಿಕೊಂಡು ಬೃಹತ್ತಾಗಿ ಬೆಳೆದಿರುವ ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಮೀನಾ ನಾಗಾರಾಜ್ ಅವರಿಗೆ ತಾಕೀತು ಮಾಡಿದ್ದಾರೆ. ಐಟಿಬಿಟಿ ಸಂಸ್ಥೆಗಳು ಕನ್ನಡಿಗರನ್ನು ಕಡೆಗಣಿಸುತ್ತಿವೆ, ಅಲ್ಲದೆ ಕನ್ನಡಿರಿಗೆ ಸಿಗಬೇಕಾದ ಉದ್ಯೋಗಗಳು ಅನ್ಯಭಾಷಿಕರ ಪಾಲಾಗುತ್ತಿವೆ ಎಂಬ ದೂರುಗಳು ಪ್ರಾಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕನ್ನಡ …
Read More »ಆರ್‌ಸಿಬಿಗೆ ಕಿಚ್ಚ ಸುದೀಪ್- ರಚಿತಾ ರಾಮ್ ರಾಯಭಾರಿ..?
ಬೆಂಗಳೂರು, – ರನ್ನ, ಮುಕುಂದ ಮುರಾರಿ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದ ಕಿಚ್ಚ ಸುದೀಪ್ ಹಾಗೂ ಡಿಂಪಲ್‍ಕ್ವೀನ್ ರಚಿತಾರಾಮ್ ಮುಂಬರುವ ಐಪಿಎಲ್‍ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಆರ್‍ಸಿಬಿ ತಂಡದ ರಾಯಭಾರಿಯಾಗುತ್ತಾರೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಸೆಪ್ಟೆಂಬರ್ 19 ರಿಂದ ನವೆಂಬರ್ 10ರವರೆಗೆ ಯುಎಇಯಲ್ಲಿ ನಡೆಯಲಿರುವ ಐಪಿಎಲ್ 13ರಲ್ಲಿ ಆರ್‍ಸಿಬಿ ತಂಡಕ್ಕೆ ಕಿಚ್ಚ ಸುದೀಪ್ ಹಾಗೂ ರಚಿತಾರಾಮ್ ತಂಡದ ರಾಯಭಾರಿಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದರೂ ಕೂಡ ಇದರ ಬಗ್ಗೆ ಆರ್‍ಸಿಬಿ ತಂಡದ …
Read More »ಕೋವಿಡ್‍ನಿಂದ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ,ಬೆಳಗ್ಗೆ 9 ಗಂಟೆಗೆ ಸಿಎಂ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಂಗಳೂರು: ಇಂದು 74ನೇ ಸ್ವಾತಂತ್ರ್ಯ ದಿನಾಚರಣೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ.ರಾಜ್ಯ ರಾಜಧಾನಿಯಲ್ಲಿ ಸಿಎಂ ಯಡಿಯೂರಪ್ಪ ಧ್ವಜಾರೋಹಣ ಮಾಡಲಿದ್ದಾರೆ. ಉಳಿದ ಜಿಲ್ಲಾ ಕೇಂದ್ರಗಳಲ್ಲಿ ಸ್ಥಳೀಯ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಲಿದ್ದಾರೆ. ಇನ್ನೂ ಕೆಲ ಜಿಲ್ಲೆಗಳಲ್ಲಿ ಡಿಸಿಗಳಿಂದ ಧ್ವಜಾರೋಹಣ ಆಗಲಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9 …
Read More »ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ,
ಬೆಂಗಳೂರು,ಆ.14- ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ನೀಡುವ ಶೌರ್ಯ ಪ್ರಶಸ್ತಿ ಈ ಬಾರಿ ರಾಜ್ಯದ 19 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಇಗೆ ಲಭಿಸಿದೆ. ಅತ್ಯುತ್ತಮ ಸೇವೆ ಸಲ್ಲಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆಪ್ರಶಸ್ತಿ ಪುರಸ್ಕೃತರು : 1. ಹೇಮಂತ್ಕುಮಾರ್- ಉಪಪೊಲೀಸ್ ವರಿಷ್ಠಾಧಿಕಾರಿ, ಲೋಕಾಯುಕ್ತ, ಬೆಂಗಳೂರು 2. ಪರಮೇಶ್ವರ್ ಹೆಗ್ಡೆ -ಉಪಪೊಲೀಸ್ ವರಿಷ್ಠಾಧಿಕಾರಿ, ಆರ್ಥಿಕ ಅಪರಾಧ ವಿಭಾಗ, ಸಿಐಡಿ, ಬೆಂಗಳೂರು 3. …
Read More »ನಾನು ಹುಟ್ಟಿ ಬೆಳೆದಂತಹ ಮನೆ ಸಂಪೂರ್ಣವಾಗಿ ನಾಶವಾಗಿದೆ.3 ಕೋಟಿ ನಷ್ಟ ಆಗಿದೆ: ಶ್ರೀನಿವಾಸ ಮೂರ್ತಿ
ಬೆಂಗಳೂರು: ನಾವು ಯಾರ ಮೇಲೂ ದ್ವೇಷಕ್ಕೆ ಹೋಗಿಲ್ಲ. ಎಲ್ಲರೂ ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಟ್ಟಾಗಿ ಇದ್ದೇವೆ ಎಂದು ಅಖಂಡ ಶ್ರೀನಿವಾಸ ಮೂರ್ತಿ ಹೇಳಿದರು.ಮಾಧ್ಯಮಗಳ ಜೊತೆ ಮಾತನಾಡಿದ ಅಖಂಡ ಶ್ರೀನಿವಾಸ ಮೂರ್ತಿ, ಯಾರು ಈ ಕೃತ್ಯಗಳನ್ನು ಮಾಡಿದ್ದಾರೆ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಿ, ನ್ಯಾಯ ಒದಗಿಸಿಕೊಡಬೇಕು ಎಂದು ದೂರನ್ನು ಕೊಟ್ಟಿದ್ದೇವೆ. ಈ ಗಲಭೆಯಿಂದ ಏನೇನು ನಷ್ಟ ಆಗಿದೆ ಎಂದು ಒಂದು ಪಟ್ಟಿ ಮಾಡಿ ಮಾಡಿಕೊಡುತ್ತೇನೆ. …
Read More »