ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸಚಿವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಟ್ವೀಟ್: ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೊರೊನಾ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ …
Read More »8 ಐಪಿಎಸ್ ಅಧಿಕಾರಿಗಳ ಟ್ರಾನ್ಸ್ ಫರ್; ಡಿವೈಎಸ್‌ಪಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಡಿವೈಎಸ್‌ಪಿ (ಸಿವಿಲ್) ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಎಸ್.ಪಿ. (ಸಿವಿಲ್, ನಾನ್ ಐಪಿಎಸ್) ವೃಂದಕ್ಕೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಎಸ್.ಟಿ.ಸಿದ್ದಲಿಂಗಪ್ಪ ಅವರನ್ನು ರಾಜ್ಯ ಗುಪ್ತವಾರ್ತೆ ಪೊಲೀಸ್ ಅಧೀಕ್ಷಕರಾಗಿ, ಮುಹಮ್ಮದ್ ಹುಸೇನ್ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಬಸಪ್ಪ ಎಸ್.ಅಂಗಡಿ ಅವರನ್ನು ಬೆಂಗಳೂರು ನಗರ ಅಪರಾಧ-2ರ ಉಪ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ. ಬಿ.ಎಲ್.ವೇಣುಗೋಪಾಲ್ ಅವರನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಗುರುನಾಥ್ ಬಿ.ಮತ್ತೂರು ಅವರನ್ನು ಬಳ್ಳಾರಿ ಭ್ರಷ್ಟಾಚಾರ …
Read More »ಪೊಲೀಸರ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಕೈಪಿಡಿ
ಬೆಂಗಳೂರು: ಪೊಲೀಸರ ಆರೋಗ್ಯ ರಕ್ಷಣೆಗಾಗಿ ಮಾರ್ಗಸೂಚಿ ಕೈಪಿಡಿ ಬಿಡುಗಡೆ ಮಾಡಲಾಗಿದೆ. ನಗರದ ಹಲವು ಪೊಲೀಸರು ಕೊರೊನಾ ಸೋಂಕಿತರಾಗಿದ್ದರು. ಹೀಗಾಗಿ, ಪೊಲೀಸರು ಆರೋಗ್ಯದ ಬಗ್ಗೆ ಕಾಳಜಿ ವಹಿಸಲೆಂದು ಈ ಕೈಪಿಡಿ ಸಿದ್ಧಪಡಿಸಲಾಗಿದೆ. ಇದರಲ್ಲಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೂಚನೆ ನೀಡಿದ್ದಾರೆ. ‘ಠಾಣೆಯಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಆಗಾಗ ಕೈ ತೊಳೆಯಬೇಕು, ಹೊರಗಡೆ ಕರ್ತವ್ಯನಿರತ ಸಿಬ್ಬಂದಿ ನೇರವಾಗಿ ಮನೆಗೆ ಹೋಗಬೇಕು, ಸಂಬಂಧಿಕರು-ಸ್ನೇಹಿತರನ್ನು ಭೇಟಿಯಾಗಲು ಹೋಗಬಾರದು. …
Read More »ವರುಣನ ಆರ್ಭಟದಿಂದ ಕೊರೊನಾ ನಿಯಂತ್ರಣವನ್ನು ಮರೆತುಬಿಡ್ತಾ ರಾಜ್ಯ ಸರ್ಕಾರ..?
ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ವ್ಯಾಪಕ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊರೊನಾ ಸೋಂಕಿನ ನಿಯಂತ್ರಣವನ್ನು ಮರೆತಂತಿದೆ. ಸೋಂಕಿನ ನಿಯಂತ್ರಣದಲ್ಲಿದ್ದ ರಾಜ್ಯ ಸರ್ಕಾರಕ್ಕೆ ಸದ್ಯ ಪ್ರವಾಹ ಮತ್ತೊಂದು ಹೊಡೆತವನ್ನು ನೀಡಿದೆ. ರಾಜ್ಯದ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಮೊದಲು ಜನ ಮತ್ತು ಜಾನುವಾರಗಳನ್ನು ರಕ್ಷಿಸುವುದು …
Read More »ತಬ್ಲೀಗ್ ಸಮಾವೇಶ: 9 ವಿದೇಶಿಯರಿಗೆ 10 ವರ್ಷ ನಿರ್ಬಂಧ
ಬೆಂಗಳೂರು: ತಬ್ಲೀಗ್ ಜಮಾತ್ ಸಮಾವೇಶದ ಅಂಗವಾಗಿ ರಾಜ್ಯದಲ್ಲಿದ್ದ ಒಂಬತ್ತು ವಿದೇಶಿಯರ(ದಕ್ಷಿಣ ಆಫ್ರಿಕಾ ಮತ್ತು ಇಂಡೋನೇಷ್ಯಾದವರು) ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಪಡಿಸಿರುವ ಹೈಕೋರ್ಟ್, ಮುಂದಿನ 10 ವರ್ಷ ಭಾರತಕ್ಕೆ ಭೇಟಿ ನೀಡುವುದಿಲ್ಲ ಎಂಬ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶಿಸಿದೆ. ಸಂಬಂಧಪಟ್ಟ ಪ್ರಾಧಿಕಾರ ವಿಧಿಸುವ ದಂಡದ ಮೊತ್ತ ಪಾವತಿಸಿ, ಮುಂದಿನ ಹತ್ತು ವರ್ಷಗಳವರೆಗೆ ಭಾರತಕ್ಕೆ ಭೇಟಿ ನೀಡುವುದಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದ ಬಳಿಕ ನಿರ್ಗಮನ ಪರವಾನಗಿ ನೀಡುವಂತೆ ವಿದೇಶಿಯರ ಪ್ರಾದೇಶಿಕ ನೋಂದಣಿ …
Read More »ಯತೀಂದ್ರ ಸಿದ್ದರಾಮಯ್ಯಗೂ ಕೊರೊನಾ ಪಾಸಿಟಿವ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಇದೀಗ ಅವರ ಪುತ್ರ ಯತೀಂದ್ರರಿಗೂ ಕೊರೊನಾ ಪಾಸಿಟಿವ್ ದೃಢವಾಗಿದೆ. ಬಗ್ಗೆ ಟ್ವೀಟ್ ,ಆಡಿರುವ ಯತೀಂದ್ರ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಆಗಸ್ಟ್ 4ರಂದು ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ಹರಡಿರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ಮಣಿಪಾಲ್ ಆಸ್ಪತ್ರೆಗೆ …
Read More »ಸಿಎಂ ಬಿಎಸ್‌ವೈಗೆ ಕೊರೋನಾ ಸೋಂಕು, ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸುವವರು ಯಾರು..?
ಬೆಂಗಳೂರು,ಆ.7-ಕೊರೋನಾ ಬಾಧೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸುವವರು ಯಾರು ಎಂಬ ಈಗ ಪ್ರಶ್ನೆ ಎದುರಾಗಿದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರೂ ಕ್ವಾರಂಟೈನ್ ಕಟ್ಟುಪಾಡಿನ ಪ್ರಕಾರ ಯಡಿಯೂರಪ್ಪನವರು 14 ದಿನಗಳ ಕಾಲ ಅಂದರೆ 16ನೇ ತಾರೀಖಿನವರೆಗೆ ಮನೆಯಲ್ಲಿಯೇ ಇರಬೇಕಾಗುತ್ತದೆ. ಈ ಕಾರಣ ಅವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅನುಮಾನ. ಹಾಗೊಂದು ವೇಳೆ ಅವರು ಭಾಗವಹಿಸಲೇಬೇಕು ಎಂದಾದರೇ ಕ್ವಾರಂಟೈನ್ ನಿಯಮಗಳನ್ನು ಸಡಿಲಿಸಬೇಕಾಗುತ್ತದೆ. ಸಾಮಾನ್ಯವಾಗಿ ಮುಖ್ಯಮಂತ್ರಿ ಗೈರಿನಲ್ಲಿ …
Read More »ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಫೇಸ್‌ಬುಕ್‌ನಲ್ಲಿ ಈ ವಿಚಾರವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸುದ್ದಿ ಗೋಷ್ಠಿ ನಡೆಸಿ ಸುರೇಶ್ ಕುಮಾರ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕೊರೊನಾ ಸೋಂಕು ಭೀತಿಯ ನಡುವೆಯೂ ಸರ್ಕಾರವು ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇ.98 ರಷ್ಟು …
Read More »ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ,
ಬೆಂಗಳೂರು- ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಈ ಹಿಂದಿನ ರೀತಿಯೇ ಪರಿಹಾರವನ್ನು ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ, ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು ಎಂದು ಅವರು ಸೂಚಿಸಿದರು. ಜಿಲ್ಲಾ ಕೇಂದ್ರಗಳ ಹಾಸ್ಟೆಲ್, ಶಾಲಾ ಕಾಲೇಜುಗಳು ಕೋವಿಡ್ ಕೇಂದ್ರಗಳಾಗಿ ಈಗಾಗಲೇ …
Read More »ಪ್ರವಾಹದ ಭೀತಿ ಹೆಚ್ಚಾಗಿದ್ದು ರಮೇಶ್ ಜಾರಕಿಹೊಳಿ, ಬೆಂಗಳೂರಿನಿಂದ ಬೆಳಗಾವಿ ಜಿಲ್ಲೆಗೆ……
ಬೆಂಗಳೂರು: ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯಿಂದ ಪ್ರವಾಹದ ಭೀತಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲೆಗೆ ತೆರಳುವಂತೆ ಸಿಎಂ ಬಿಎಸ್ ವೈ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಗೆ ಸೂಚನೆ ನೀಡಿದ್ದಾರೆ. ಇಂದು ಬೆಳಗ್ಗೆ ರಮೇಶ್ ಜಾರಕಿಹೊಳಿ ಜೊತೆಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಸಿಎಂ, ಬೆಳಗಾವಿಯಲ್ಲಿ ಯಾವುದೇ ಅನಾಹುತಗಳು ನಡೆಯಂತೆ ಎಚ್ಚರ ವಹಿಸಿ. ಸಂಪೂರ್ಣವಾಗಿ ಬೆಳಗಾವಿಯ ಮಳೆಯ ಅನಾಹುತಗಳು ನಮ್ಮ ಹಿಡಿತದಲ್ಲಿರಬೇಕು. ಪ್ರವಾಹ ಪರಿಸ್ಥಿತಿಯನ್ನು ನಾವು ನಿಯಂತ್ರಿಸಬೇಕು. ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆಗೆ …
Read More »