ಬೆಂಗಳೂರು: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿ ಅರೆಸ್ಟ್ ಆಗಿರುವ ಕೆಪಿಸಿಸಿ ಸೋಶಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್‍ನನ್ನು ಶಾಂತಿನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ ಮಹಮ್ಮದ್ ನಲ್‍ಪಾಡ್ ಅವರು ಭೇಟಿಯಾಗಿದ್ದಾರೆ. ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದರು. ಟ್ವಿಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆನಂದ್ ಪ್ರಸಾದ್ …
Read More »ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752,ಬೆಳಗಾವಿ ಜಿಲ್ಲೆಯಲ್ಲಿ ಇಂದು 60
ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752. ಒಟ್ಟೂ ಮೃತರ ಸಂಖ್ಯೆ 98. 4776 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 139571, ಗುಣಮುಖರಾದವರ ಸಂಖ್ಯೆ 62,500. ಒಟ್ಟೂ ಸಾವಿಗೀಡಾದವರ ಸಂಖ್ಯೆ 2594. ಬೆಂಗಳೂರಿನಲ್ಲಿ 1497 ಜನರಿಗೆ ಇಂದು ಸೋಂಕು ಪತ್ತೆಯಾಗಿದೆ. ಇಂದು 27 ಜನರು ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೇವಲ 60 ಹೊಸ ಪ್ರಕರಣ ಪತ್ತೆಯಾಗಿದೆ. ಆದರೆ ಒಂದೇ …
Read More »ಸಿಎಂ ಬಿ.ಎಸ್ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್ ವಾಲಾ ಕೊರೊನಾ ಪರೀಕ್ಷೆ
ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್ ವಾಲಾ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕಳೆದ ಶುಕ್ರವಾರ, ಯಡಿಯೂರಪ್ಪ ರಾಜ್ಯಪಾಲರನ್ನ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವಜೂಭಾಯ್ ವಾಲಾ, ಅವರ ಆಪ್ತ ಸಹಾಯಕ ಹಾಗೂ ಏಡ್ ಡಿ ಕ್ಯಾಮ್(ಎಡಿಸಿ) ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಮೂವರ ವರದಿಯಲ್ಲೂ ಕೊರೊನಾ ನೆಗೆಟಿವ್ ಬಂದಿದೆ ಎಂದು ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ರಾಜ್ಯಪಾಲರ …
Read More »ಸಿಎಂ ನಿವಾಸ ಕಾವೇರಿಯ 9 ಮಂದಿಗೆ ಕೊರೊನಾ: ಕುಟುಂಬಸ್ಥರಿಗೆ ಪರೀಕ್ಷೆ
ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ 8 ಮಂದಿಗೆ ಕೊರೊನಾದ ರೋಗ ಲಕ್ಷಣ ಕಂಡು ಬಂದಿಲ್ಲ. ಆದ್ರೆ ಕೊರೊನಾ ಇರುವುದು ದೃಢಪಟ್ಟಿದ್ದು,ಚಿಕಿತ್ಸೆ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಂಪರ್ಕಕ್ಕೆ ಬಂದಿದ್ದ ಜನರಿಗೆ ಸೆಲ್ಫ್ ಕ್ವಾರಂಟೈನ್ ಆಗುವಂತೆ ಹೇಳಲಾಗಿದೆ.ಸಿಎಂ ಕುಟುಂಬದ ಎಲ್ಲ ಸದಸ್ಯರಿಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕುಟುಂಬ ಸದಸ್ಯರಿಗೆ ಬಿಬಿಎಂಪಿ ಆಂಟಿಜೆನ್ ಟೆಸ್ಟ್ ಮಾಡ್ತಿದೆ. ಸಿಎಂ ನಿವಾಸದ …
Read More »ಸಿಎಂ ಬಿಎಸ್ವೈ ಮಗ ವಿಜಯೇಂದ್ರಗೆ ಕೊರೋನಾ ನೆಗೆಟಿವ್, ಮಗಳಿಗೆ ಪಾಸಿಟಿವ್
ಬೆಂಗಳೂರು (ಆ.3): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್ ಬಂದ ಬೆನ್ನಲ್ಲೇ ಅವರ ಆಪ್ತ ವಲಯದಲ್ಲಿ ಆತಂಕ ಸೃಷ್ಟಿಯಾಗಿದೆ. ಕಳೆದ ಕೆಲ ದಿನಗಳಿಂದ ಅವರ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅಲ್ಲದೆ, ಅವರ ಸಂಪರ್ಕಕ್ಕೆ ಬಂದವರನ್ನು ಹೋಂ ಕ್ವಾರಂಟೈನ್ ಕೂಡ ಮಾಡಲಾಗುತ್ತಿದೆ. ಈ ಮಧ್ಯೆ ಬಿಎಸ್ವೈ ಮಗನಿಗೆ ಕೊರೋನಾ ನೆಗೆಟಿವ್ ಬಂದರೆ, ಮಗಳಿಗೆ ಪಾಸಿಟಿವ್ ಬಂದಿದೆ. ಭಾನುವಾರ ಟ್ವೀಟ್ ಮಾಡಿದ್ದ ಬಿಎಸ್ವೈ ತಮಗೆ ಕೊರೋನಾ ಪಾಸಿಟಿವ್ ಇರುವುದಾಗಿ ಹೇಳಿಕೊಂಡಿದ್ದರು. ನನ್ನ …
Read More »ರಾಜ್ಯದಲ್ಲಿ ಕೊರೋನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ
ಬೆಂಗಳೂರು : ಭಾನುವಾರವೂ ರಾಜ್ಯದಲ್ಲಿ ಕೊರೊನಾ ಅರ್ಭಟ ಮುಂದುವರೆದಿದ್ದು,ಇಂದು 5,532 ಜನರಿಗೆ ಕೋವಿಡ್-19 ಸೋಂಕು ತಗುಲಿದೆ. ಇಂದು84 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿತ ಪ್ರಕರಣಗಳ ಸಂಖ್ಯೆ 1,34,819 ಆಗಿದ್ದು, ಇದರಲ್ಲಿ 57,725 ಜನರು ಬಿಡುಗಡೆಯಾಗಿದ್ದರೆ, 74,590 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 2,496 ಜನರು ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರು ನಗರದಲ್ಲಿ ಕೋವಿಡ್ ಮಹಾಮಾರಿಯ ಆರ್ಭಟ ಎಂದಿನಂತೆ ಮುಂದುವರಿದಿದ್ದು, 2105 ಹೊಸ ಪ್ರಕರಣಗಳು ವರದಿಯಾಗಿವೆ. …
Read More »ಪ್ರತಿ ಭಾನುವಾರ ಸಿಎಂಗೆ ನಡೀತಿತ್ತು ಕೊರೊನಾ ಟೆಸ್ಟ್……….
ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಡಿಯೂರಪ್ಪನವರು ಪ್ರತಿ ದಿನ ಕೊರೊನಾ ನಿಯಂತ್ರಣ ಸಂಬಂಧ ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ ಪ್ರತಿ ದಿನ ಸಿಎಂ ಭೇಟಿಗೆ ಗಣ್ಯರು ಸಹ ಆಗಮಿಸುತ್ತಿದ್ದರು. ಹೀಗಾಗಿ ಪ್ರತಿ ಭಾನುವಾರ ಸಿಎಂಗೆ ಕೋವಿಡ್ ಪರೀಕ್ಷೆ ನಡೆಯುತ್ತಿತ್ತು. ನಿನ್ನೆ ನಡೆದ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಭಾನುವಾರ ರಾತ್ರಿ ಟ್ವೀಟ್ ಮಾಡಿದ್ದ ಸಿಎಂ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ …
Read More »ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, ನನಗೆ ಕೊರೋನಾ ಪಾಸಿಟಿವ್ ಬಂದಿದೆ. ರೋಗ ಲಕ್ಷಣ ಇಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲವೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದೂ ಅವರು ಕೋರಿದ್ದಾರೆ. ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆಗ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು. …
Read More »ಕರಾವಳಿಯಲ್ಲಿ ಉತ್ತಮ ಮಳೆ
ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ, ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟಾರೆ 5 ಸೆಂ.ಮೀ. ದಾಖಲಾಗಿದೆ. ಹವಾಮಾನ ಇಲಾಖೆಯು ಸಮುದ್ರದಲ್ಲಿ ಗಾಳಿ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಸಿದೆ. ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. …
Read More »ಮಂತ್ರಿಗಿರಿ ಉಳಿಸಿಕೊಳ್ಳಲು ಸಚಿವೆ ಜೊಲ್ಲೆ ಯತ್ನ.? : ರಮೇಶ್ ಜಾರಕಿಹೊಳಿ ಭೇಟಿಯಾದ ಶಶಿಕಲಾ..!
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನುವ ಸುದ್ದಿಯ ನಡುವೆಯೇ ಹಲವು ಸಚಿವರನ್ನು ಸಂಪುಟದಿಂದ ಕೈ ಬಿಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅದರಲ್ಲೂ ರಾಜ್ಯದ ಏಕೈಕ ಮಹಿಳಾ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊಕ್ ಕೊಡಲಾಗುತ್ತದೆ ಎನ್ನುವ ಮಾಹಿತಿ ಇದೆ. ಹೀಗಾಗಿ ಸಚಿವೆ ಶಶಿಕಲಾ ಜೊಲ್ಲೆ ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಮುಂದುವರಿಸಿದ್ದಾರೆ. 2 ದಿನಗಳ ಹಿಂದೆಯಷ್ಟೇ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ಬಂದಿರುವ ಜೊಲ್ಲೆ ಇಂದು ಜಲಸಂಪನ್ಮೂಲ …
Read More »