Breaking News

ಬೆಂಗಳೂರು

ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ತೀವ್ರ ಕುತೂಹಲ

ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದ್ದು ರಾಜಕೀಯ ಮೊಗಸಾಲೆಯಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.  ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ವರ್ಷ ತುಂಬುತ್ತಿದ್ದಂತೆ ದೆಹಲಿಗೆ ಹಾರಿರುವ ಲಕ್ಷ್ಮಣ ಸವದಿ ಇಂದು ಬಿಜೆಪಿ ವರಿಷ್ಠರ ಜೊತೆ ಸಭೆ ನಡೆಸಲಿದ್ದಾರೆ. ಮೊನ್ನೆಯಷ್ಟೇ ರಾಜ್ಯಪಾಲ ವಜೂಭಾಯ್ ವಾಲಾ ಕರೆಗೆ ಓಗೊಟ್ಟು ಸವದಿ ರಾಜಭವನಕ್ಕೆ ತೆರಳಿದ್ದರು. ಈ ವೇಳೆ ರಾಜ್ಯಪಾಲರು, ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವಂತೆ ಸವದಿಗೆ …

Read More »

ಸರ್ ನೀವು ನನ್ನ ಬದುಕಿಸಿದ್ದೀರಿ’ – ಕಿಚ್ಚನಿಗೆ ಜಯಶ್ರೀ ಧನ್ಯವಾದ

ಬೆಂಗಳೂರು: ಇತ್ತೀಚೆಗೆ ‘ಬಿಗ್‍ಬಾಸ್ ಸೀಸನ್ 3’ ರಲ್ಲಿ ಸ್ಪರ್ಧಿಯಾಗಿದ್ದ ಜಯಶ್ರೀ ರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಟಿ ಜಯಶ್ರೀ ಫೇಸ್‍ಬುಕ್‍ನಲ್ಲಿ ಬರೆದುಕೊಳ್ಳುವ ಮೂಲಕ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ನಿಮ್ಮ ಕಾಳಜಿಗೆ ಧನ್ಯವಾದಗಳು ಸುದೀಪ್ ಸರ್. ನೀವು ನನ್ನನ್ನು ಬದುಕಿಸಿದ್ದೀರಿ. ಸುದೀಪ್ ಅವರ ತಂಡದ ಸದಸ್ಯರು, ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾನು ತುಂಬಾ ಪ್ರೀತಿಸುತ್ತೇನೆ. …

Read More »

ಲೆಕ್ಕದ ವಿಚಾರದಲ್ಲಿ ಕಿತ್ತಾಟಕ್ಕಿಳಿದ ಕಾಂಗ್ರೆಸ್‌ ಮತ್ತು ಬಿಜೆಪಿಗೆ H.D.K.ಪಂಚ ಪ್ರಶ್ನೆ

ಬೆಂಗಳೂರು,-ಕೋವಿಡ್‌ ಹಗರಣದ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ಕೊರೊನಾ ವೈರಸ್‌ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್‌ ಭ್ರಷ್ಟಾಚಾರದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಕಾಂಗ್ರೆಸ್‌, ಹಗರಣದ ಬಗ್ಗೆ ಈ ವರೆಗೆ ಯಾವುದೇ ತನಿಖಾ ಸಂಸ್ಥೆಗೆ ದೂರು ನೀಡದೇ …

Read More »

ನಾಳೆ ನೇರಪ್ರಸಾರವಾಗಲಿದೆ ರಾಜ್ಯ ಸರ್ಕಾರದ ವರ್ಷಾಚರಣೆ ಸಮಾರಂಭ

ಬೆಂಗಳೂರು, ಜು.26- ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಸುಸಂದರ್ಭದಲ್ಲಿ ರಾಜ್ಯ ಮಟ್ಟದ ಸಮಾರಂಭವು ಜುಲೈ 27ರ ಸೋಮವಾರದಂದು ಬೆಳಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜನಸ್ನೇಹಿ ಆಡಳಿತ, ಒಂದು ವರ್ಷ; ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ ಕಾರ್ಯಕ್ರಮವು ಏಕಕಾಲಕ್ಕೆ ಬಿತ್ತರಗೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ …

Read More »

ಕಾರ್ಗಿಲ್ ಹುತಾತ್ಮ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ: ಸಿಎಂ

ಬೆಂಗಳೂರು: ಇಂದು 21ನೇ ಕಾರ್ಗಿಲ್ ವಿಜಯ್ ದಿವಸ್ ಆದ ಹಿನ್ನೆಲೆ, ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಿಎಎಸ್​ ಯಡಿಯೂರಪ್ಪ ನಮನ‌ ಸಲ್ಲಿಸಿದ್ರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಎಸ್​ವೈ ಭಾಗಿಯಾದ್ರು. ಇದೇ ವೇಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಉಪಸ್ಥಿತರಿದ್ರು. ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಗಿಲ್ ವಿಜಯ್ ದಿವಸ್​ನಲ್ಲಿ ಹೆಮ್ಮೆಯಿಂದ ಪಾಲ್ಗೊಂಡಿದ್ದೇನೆ. ಭಾರತ …

Read More »

ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರ ವಾಹಗಳನ್ನು ಸೀಜ್ ಮಾಡುತ್ತಿದ್ದಾರೆ.

ಬೆಂಗಳೂರು: ಸಂಡೇ ಲಾಕ್‍ಡೌನ್ ಆದರೂ ನಗರದಲ್ಲಿ ಜನರು ಸುಮ್ಮನೇ ಓಡಾಡುತ್ತಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರ ವಾಹಗಳನ್ನು ಸೀಜ್ ಮಾಡುತ್ತಿದ್ದಾರೆ. ಕೆಂಗೇರಿ ಪೊಲೀಸರು ಅನಗತ್ಯವಾಗಿ ಓಡಾಟ ಮಾಡುವವರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಈ ಮೂಲಕ ಕೆಂಗೇರಿ ಚೆಕ್‍ಪೋಸ್ಟ್ ನಲ್ಲಿ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನ ಪೊಲೀಸರು ಸೀಜ್ ಮಾಡುತ್ತಿದ್ದಾರೆ. ಪೊಲೀಸರು ರಸ್ತೆಯ ಎರಡು ಬದಿಯಲ್ಲಿ ಓಡಾಡುತ್ತಿರುವ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ತಪಾಸಣೆ ವೇಳೆ ಅನಗತ್ಯವಾಗಿ ಓಡಾಟ ಮಾಡುತ್ತಿರುವುದು ಕಂಡು ಬಂದರೆ ಅಂತಹ …

Read More »

ನೆನಪಿರಲಿ ಪ್ರೇಮ್‌ ಅವರ ತಾಯಿಗೆ ಕೊರೊನಾ ಪಾಸಿಟಿವ್ :ಆಸ್ಪತ್ರೆಯಿಂದ ಸದ್ಯ ಅವರು ಗುಣಮುಖರಾಗಿ ಮನೆಗೆ ಮರಳಿದ್ದಾರೆ

ಬೆಂಗಳೂರು: ನೆನಪಿರಲಿ ಪ್ರೇಮ್‌ ಅವರ ತಾಯಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ರು. ಸದ್ಯ ಅವರು ಗುಣಮುಖರಾಗಿ ಮನೆಗೆ ಮರಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಡುವುದರ ಮೂಲಕ ಈ ಖುಷಿಯನ್ನ ಪ್ರೇಮ್‌ ಹಂಚಿಕೊಂಡಿದ್ದಾರೆ. ಇನ್‍ಸ್ಟಾಗ್ರಾಂನಲ್ಲಿ ವಿಡಿಯೋವನ್ನು ಶೇರ್ ಮಾಡಿದ ಪ್ರೇಮ್‌, “ನನ್ನ ತಾಯಿ ಮೊದಲಿಗಿಂತಲೂ ಹೆಚ್ಚು ಆರೋಗ್ಯವಂತರಾಗಿ ಮತ್ತೆ ಮನೆಗೆ ಮರಳಿದ್ದಾರೆ. ಇದಕ್ಕೆ ಕಾರಣರಾದ ಆರೈಕೆ ಮಾಡಿ, ಔಷಧ ನೀಡಿ ಗುಣಪಡಿಸಿದ ವೈದ್ಯರಿಗೆ ಧನ್ಯವಾದಗಳು. ಜೊತೆಗೆ ನಮ್ಮ ತಾಯಿ ಆರೋಗ್ಯವಂತರಾಗಿ …

Read More »

50 ವರ್ಷ ಮೇಲ್ಪಟ್ಟವರನ್ನು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಂಬಳಸಹಿತ ರಜೆ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರ ನಡುವೆಯೂ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಬಿಬಿಎಂಪಿ ಅನೇಕ ಸವಲತ್ತುಗಳನ್ನು ಪ್ರಕಟಿಸಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವವವರಲ್ಲಿ 50 ವರ್ಷ ಮೇಲ್ಪಟ್ಟವರನ್ನು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಂಬಳಸಹಿತ ರಜೆ ನೀಡುವುದಕ್ಕೆ ಆಯಾ ವಲಯದ ಮುಖ್ಯ ಎಂಜಿನಿಯರ್‌ಗಳು ಹಾಗೂ ಜಂಟಿ ಆಯುಕ್ತರ ಮೂಲಕ ಕೇಂದ್ರ ಕಚೇರಿಗೆ ಪ್ರಸ್ತಾವ ಸಲ್ಲಿಸಬೇಕು ಎಂದು ವಿಶೇಷ ಆಯುಕ್ತ ಡಿ.ರಂದೀಪ್‌ (ಆರೋಗ್ಯ) ಸುತ್ತೋಲೆ ಹೊರಡಿಸಿದ್ದಾರೆ. ಪೌರಕಾರ್ಮಿಕರಿಗೆ, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ …

Read More »

ರಾಜ್ಯದ ಹಲವೆಡೆ ಧಾರಾಕಾರ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆ ಆಗ್ತಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಹಳ್ಳದಲ್ಲಿ ಕೊಚ್ಚಿಹೋಗ್ತಿದ್ದ ವಾಹನವನ್ನು ಸ್ಥಳೀಯರು ಹಗ್ಗ ಕಟ್ಟಿ ಎಳೆದಿದ್ದಾರೆ. ವಾಹನದಲ್ಲಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಜಗಳೂರು ತಾಲೂಕಿನ ಸಾಲಹಳ್ಳಿ-ಹಾಲಹಳ್ಳಿ ಮಧ್ಯೆ ಇರೋ ಚೆಕ್‍ಡ್ಯಾಂ ಕೊಚ್ಚಿಕೊಂಡು ಹೋಗಿದೆ. ದಾವಣಗೆರೆ ಬಾಡಾದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ರಾಯಚೂರು ಜಿಲ್ಲೆಯಲ್ಲೂ ಧಾರಾಕಾರ ಮಳೆ ಆಗ್ತಿದೆ. ಮಸ್ಕಿ ತಾಲೂಕಿನ ಮಾರಲದಿನ್ನಿಯಲ್ಲಿರುವ ಮಸ್ಕಿ ಜಲಾಶಯದಿಂದ …

Read More »

ಕೃಷ್ಣಜನ್ಮಾಷ್ಟಮಿಗೆ ಇಸ್ಕಾನ್‍ನಲ್ಲಿ ನೇರ ದರ್ಶನ ಇಲ್ಲ- ಆನ್‍ಲೈನ್ ಮೂಲಕ ನೇರ ಪ್ರಸಾರ

ಬೆಂಗಳೂರು: ಕೊರೊನಾ ಎಫೆಕ್ಟ್ ಹಬ್ಬಹರಿದಿನಗಳಿಗೆ ತಟ್ಟಿದೆ. ವರಮಹಾಲಕ್ಷ್ಮೀಹಬ್ಬ, ಗಣೇಶ್ ಚತುರ್ಥಿ, ಶ್ರೀಕೃಷ್ಣಜನ್ಮಾಷ್ಟಮಿ ಹೀಗೆ ಸಾಲು ಸಾಲು ಹಬ್ಬಗಳು ಬರಲಿವೆ. ಶ್ರೀಕೃಷ್ಣಜನ್ಮಾಷ್ಟಮಿಗೆ ಈಗಾಗಲೇ ಇಸ್ಕಾನ್‍ನಲ್ಲಿ ಸಿದ್ಧತೆ ಆರಂಭಿಸಲಾಗಿದೆ. ಕೊರೊನಾದಿಂದ ಈ ಬಾರಿ ಇಸ್ಕಾನ್‍ನಲ್ಲಿ ನೇರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಆದರೆ ಆನ್‍ಲೈನ್ ಮೂಲಕ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಆಗಸ್ಟ್ 11, 12 ರಂದು ನಡೆಯುವ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮಗಳನ್ನ ಯೂಟ್ಯೂಬ್, ಫೇಸ್‍ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ವೀಕ್ಷಿಸಬಹುದಾಗಿದೆ. ಶ್ರೀರಾಧಾಕೃಷ್ಣಚಂದ್ರ ದೇವರಿಗೆ ಮಾಡುವ ಅಭಿಷೇಕವನ್ನ ನೇರಪ್ರಸಾರ …

Read More »