ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಆಸ್ಫೋಟಗೊಂಡಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 5007 ಮಂದಿಗೆ ಪಾಸಿಟಿವ್ ಬಂದಿದ್ದು, 110 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಸಂಖ್ಯೆ 85870ಕ್ಕೆ ಏರಿಕೆಯಾಗಿದೆ. ಹಾಗೂ ಒಟ್ಟು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1724 ಏರಿಕೆಯಾಗಿದೆ. ಇತ್ತ ರಾಜಧಾನಿ ಬೆಂಗಳೂರಲ್ಲೂ ಸಹ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು ಇಂದು 2267 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದೆ. ಜೊತೆಗೆ 50 ಮಂದಿ …
Read More »ಕೊರೊನಾ ಪರಿಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿಲ್ಲ.: ಡಾ.ಕೆ.ಸುಧಾಕರ್
ಬೆಂಗಳೂರು: ಕೊರೊನಾ ಪರಿಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿಲ್ಲ. ಪ್ರಮಾಣಿಕವಾಗಿ ಕೆಲಸ ಮಾಡಿದ್ದೆವೆ ಎಂದರೆ ಭಯವೇಕೆ ? ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಿ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಸವಾಲು ಹಾಕಿದ್ದಾರೆ. ನಿನ್ನೆ ಸಚಿವ ಸುಧಾಕರ್ ಅವರ ಮಾತಿಗೆ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಪ್ರಸ್ತಾವನೆ, ಮಂಜೂರಾತಿ, ಅನುಮೋದನೆ, ವೆಚ್ಚ ಅಂದರೆ ಏನು ಎಂದು ಗೊತ್ತಿಲ್ಲದೇ ನಾನು 13 ಬಜೆಟ್ ಮಂಡಿಸಿದ್ದೇನಾ..? ನಾನು …
Read More »ಸರ್ಕಾರದ ಆದೇಶ ಪಾಲಿಸದ ಖಾಸಗಿ ಆಸ್ಪತ್ರೆಗಳು, ಅಧಿಕಾರಿಗಳಿಗೆ ಚಾಟಿ ಬೀಸಿದ ಸಿಎಂ..!
ಬೆಂಗಳೂರು,ಜು.24- ಸರ್ಕಾರದ ಆದೇಶವನ್ನು ಪಾಲನೆ ಮಾಡಲು ಮೀನಾಮೇಷ ಎಣಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಮತ್ತೆ ಚಾಟಿ ಬೀಸಿದ್ದಾರೆ. ಒಪ್ಪಂದದಂತೆ ಖಾಸಗಿ ಆಸ್ಪತ್ರೆಯವರು ಸರ್ಕಾರಕ್ಕೆ ಈವರೆಗೂ ಕೊಟ್ಟ ಭರವಸೆಯಂತೆ ಹಾಸಿಗೆಗಳನ್ನು ನೀಡದೆ ನಮ್ಮ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿನ ಬೆಲೆ ನೀಡುತ್ತಿಲ್ಲ. ಒಂದು ಹಂತದವರೆಗೂ ಸಹಿಸಿಕೊಳ್ಳಬಹುದು. ಖಾಸಗಿ ಆಸ್ಪತ್ರೆಗಳ ವರ್ತನೆ ಅತಿಯಾಗಿದೆ. ಕೂಡಲೇ ಕಾನೂನು ಕ್ರಮ ಜರುಗಿಸಿ ಎಂದು ಎಚ್ಚರಿಕೆ ಕೊಟ್ಟರು. …
Read More »ಕೊರೊನಾ ಪಾಸಿಟಿವ್ ಬಂದ ಸಂದರ್ಭದಲ್ಲಿ ಏರಿಯಾ ಸೀಲ್ ಮಾಡುವ ಬದಲು ಮನೆ ಬಾಗಿಲನ್ನೇ ಸೀಲ್‍ಡೌನ್
ಬೆಂಗಳೂರು: ಕೊರೊನಾ ಪಾಸಿಟಿವ್ ಬಂದ ಸಂದರ್ಭದಲ್ಲಿ ಏರಿಯಾ ಸೀಲ್ ಮಾಡುವ ಬದಲು ಮನೆ ಬಾಗಿಲನ್ನೇ ಸೀಲ್‍ಡೌನ್ ಮಾಡಿರುವ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ. ಬಿಬಿಎಂಪಿಯ ಮಹಾ ಎಡವಟ್ಟು ಮಾಡಿಕೊಂಡಿದ್ದು, ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯ ಮನೆ ಬಾಗಿಲಿಗೆ ಅಡ್ಡಲಾಗಿ ಕಬ್ಬಿಣದ ಶೀಟ್ ಅಳವಡಿಕೆ ಮಾಡಿದ್ದರು. ಆ ಮೂಲಕ ಸೋಂಕಿತ ವ್ಯಕ್ತಿ ಮನೆಯಿಂದ ಹೊರಬರದಂತೆ ಸೀಲ್‍ಡೌನ್ ಮಾಡಲಾಗಿತ್ತು. ಶಾಂತಿನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ಘಟನೆ ನಡೆದಿದೆ.ಅಧಿಕಾರಿಗಳ ಯಡ್ಡವಟ್ಟು ಮಾಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು …
Read More »ಮಕ್ಕಳ ಅಶ್ಲೀಲ ಫೋಟೋವನ್ನ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡ್ತಿದ್ದ ರೌಡಿಶೀಟರ್ ಬಂಧನ
ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ರೌಡಿಶೀಟರ್‌ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಬಂಧಿತ ರೌಡಿಶೀಟರ್. ಆರೋಪಿ ಚಾಮರಾಜಪೇಟೆ ಮೂಲದವನಾಗಿದ್ದು, ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದನು. ಬಂಧಿತ ಆರೋಪಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಿ ಲೈಂಗಿಕ ಅಪರಾಧ ಮಾಡುತ್ತಿದ್ದನು. ಆರೋಪಿ ವಿರುದ್ಧ ಕ್ರಮ ಜರಗಿಸುವಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಸಾರ್ವಜನಿಕರು ದೂರು …
Read More »ಸಿಲಿಕಾನ್ ಸಿಟಿಯಲ್ಲಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಪ್ರಾಣಬಿಟ್ಟ ಸರ್ಕಾರಿ ವೈದ್ಯ ಸಾವು
ಬೆಂಗಳೂರು: ಕೋವಿಡ್ 19 ವರದಿ ಇಲ್ಲದೆ ಮೂರು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿದ ಪರಿಣಾಮ ಸರ್ಕಾರಿ ವೈದರೊಬ್ಬರು ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು. ಮೃತ ದುರ್ದೈವಿಯನ್ನು ಡಾ. ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರು ಕೋವಿಡ್ 19 ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಅನಾರೋಗ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ನಿರಾಕರಿಸಿದವು. ಮಂಜುನಾಥ್ ಅವರು ರಾಮನಗರ ಜಿಲ್ಲೆಯಲ್ಲಿರುವ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ …
Read More »2019ರಲ್ಲಿ ನೀವು ಮಂಗಳ ಗ್ರಹದಲ್ಲಿ ಇದ್ರಾ: ಅಶೋಕ್‍ಗೆ ಸಿದ್ದು ಪ್ರಶ್ನೆ…..
ಬೆಂಗಳೂರು: 2019ರಲ್ಲಿ ಅಕ್ರಮವಾಗಿದ್ದರೆ ಆಗ ನೀವು ಮಂಗಳ ಗ್ರಹದಲ್ಲಿ ಇದ್ರಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಆರ್ ಅಶೋಕ್‍ಗೆ ಮರು ಪ್ರಶ್ನೆ ಹಾಕಿದ್ದಾರೆ. ಬಿಜೆಪಿ ಸರ್ಕಾರ 2 ಸಾವಿರ ಕೋಟಿ ರೂ. ಅಕ್ರಮ ಎಸಗಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಭಾರೀ ಚರ್ಚೆಗೀಡಾಗಿದೆ. ಮಾಜಿ ಸಿಎಂ ಆರೋಪಕ್ಕೆ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿ, 2019ರಲ್ಲಿ ಚಂದ್ರಲೋಕದಿಂದ ವೆಂಟಿಲೇಟರ್ ಬಂದಿತ್ತಾ ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು …
Read More »ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವರು ರಮೇಶ ಜಾರಕಿಹೊಳಿ
ಆಲಮಟ್ಟಿ(ಜು.23): ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನೆರೆ ಹಾವಳಿ ಪೀಡಿತ ಐದು ಜಿಲ್ಲೆಗಳ (ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ರಾಯಚೂರು) ಜಿಲ್ಲಾಡಳಿತದೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗೆಜೆಟ್ …
Read More »ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವರು ರಮೇಶ ಜಾರಕಿಹೊಳಿ
ಆಲಮಟ್ಟಿ(ಜು.23): ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನೆರೆ ಹಾವಳಿ ಪೀಡಿತ ಐದು ಜಿಲ್ಲೆಗಳ (ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ರಾಯಚೂರು) ಜಿಲ್ಲಾಡಳಿತದೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗೆಜೆಟ್ …
Read More »ಸಂಕಷ್ಟದಲ್ಲಿ ಐಟಿಬಿಟಿ ಕಂಪೆನಿಗಳು, ಬಿಬಿಎಂಪಿಗೆ 2 ಸಾವಿರ ಕೋಟಿ ತೆರಿಗೆ ನಷ್ಟದ ಆತಂಕ..!
ಬೆಂಗಳೂರು, ಜು.22- ಲಾಕ್‍ಡೌನ್‍ನಿಂದ ಐಟಿಬಿಟಿ ಕಂಪೆನಿಗಳು ತೀವ್ರವಾಗಿ ಕಂಗೆಟ್ಟಿದ್ದು, ಇದರಿಂದ ಬಿಬಿಎಂಪಿಗೆ ಬರೋಬ್ಬರಿ 2 ಸಾವಿರ ಕೋಟಿ ರೂ.ಗಳಷ್ಟು ತೆರಿಗೆ ನಷ್ಟವಾಗುವ ಆತಂಕ ಎದುರಾಗಿದೆ. ಮೊದಲ ಲಾಕ್‍ಡೌನ್ ಹಾಗೂ ರಾಜ್ಯಸರ್ಕಾರದಿಂದ ಮತ್ತೊಂದು ಸುತ್ತಿನ ಲಾಕ್‍ಡೌನ್ ಜಾರಿಗೊಳಿಸಿದ ಪರಿಣಾಮ ಐಟಿಬಿಟಿ ಕಂಪೆನಿಗಳು, ವಾಣಿಜ್ಯ ಮಳಿಗೆಗಳು, ಕೈಗಾರಿಕಾ ಕ್ಷೇತ್ರ ಕಂಗೆಟ್ಟು ಹೋಗಿವೆ. ಕಳೆದ ಮಾರ್ಚ್‍ನಿಂದ ಎಲ್ಲ ವಹಿವಾಟುಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ 2020-21ನೆ ಸಾಲಿನ ವಾಣಿಜ್ಯ ತೆರಿಗೆ ಮನ್ನಾ ಮಾಡಬೇಕೆಂದು ಐಟಿಬಿಟಿ ಕಂಪೆನಿಗಳು, …
Read More »