ಬೆಂಗಳೂರು: ಮುಂದಿನ ದಿನಗಳಲ್ಲಿ ಡಿಜಿಟಲ್ ಕ್ಷೇತ್ರದಲ್ಲಿ ಅದರಲ್ಲೂ ಭಾರತದಲ್ಲಿ ಭಾರೀ ಬೆಳವಣಿಗೆ ಆಗಲಿದೆ ಎಂಬುದನ್ನು ಊಹಿಸಿರುವ ಬಹುರಾಷ್ಟ್ರೀಯ ಕಂಪನಿಗಳು ಈಗ ದೇಶದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದು, ಗೂಗಲ್ ಒಟ್ಟು 10 ಶತಕೋಟಿ ಡಾಲರ್(75 ಸಾವಿರ ಕೋಟಿ ರೂ.) ಹೂಡಿಕೆ ಮಾಡುವುದಾಗಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ ಬಳಿಕ ಗೂಗಲ್ ಕಂಪನಿಯ ಸಿಇಒ ಸುಂದರ್ ಪಿಚೈ 10 ಶತಕೋಟಿ ಡಾಲರ್ …
Read More »ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸುವಂತೆ ಸಿಎಂಗೆ ಡಿಸಿಎಂ ಸಲಹೆ
ಬೆಂಗಳೂರು: ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಕಾಲಕ್ಕೆ …
Read More »ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟ
ಬೆಂಗಳೂರು: ಮಾರ್ಚ್ 18ರ ಸುಮಾರಿಗೆ ಫಲಿತಾಂಶ ಬರಬಹುದೆಂದು ನಿರೀಕ್ಷಿಸಲಾಗಿದ್ದ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್ಬುಕ್ ಲೈವ್ನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಮಂಗಳವಾರ ಬೆಳಗ್ಗೆ 11:30ಕ್ಕೆ ವಿದ್ಯಾರ್ಥಿಗಳ ಮೊಬೈಲ್ಗೆ SMS ಮೂಲಕ ರಿಸಲ್ಟ್ ತಲುಪಲಿದೆ. 12 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ …
Read More »ಬೆಂಗಳೂರು ಲಾಕ್‍ಡೌನ್-800 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ
ಬೆಂಗಳೂರು: ಮಂಗಳವಾರ ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ಈ ಹಿನ್ನೆಲೆ ಬೆಂಗಳೂರಿನಿಂದ ಹೊರ ಹೋಗುತ್ತಿರುವ ಜನ ಅನಕೂಲಕ್ಕಾಗಿ 800 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಇಂದು (ಸೋಮವಾರ) ಮತ್ತು ನಾಳೆ (ಮಂಗಳವಾರ) ಪ್ರತಿದಿನ 800 ಹೆಚ್ಚುವರಿ ಬಸ್ಸುಗಳನ್ನು ಅಂದರೆ ಒಟ್ಟು 1600 ಬಸ್ಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಕಾರ್ಯಾಚರಣೆಗೊಳಿಸಲಾಗುತ್ತಿದೆ. ಇದಲ್ಲದೇ ಅಗತ್ಯವಿದ್ದರೆ …
Read More »ಲಾಕ್‍ಡೌನ್ ಜೊತೆಗೆ ಬೆಂಗಳೂರಿನಲ್ಲಿ ಸೀಲ್‍ಡೌನ್‍ಗೂ ಸಿದ್ಧರಾಗಿ- ಯಾವ್ಯಾವ ಏರಿಯಾ ಸೀಲ್?
ಬೆಂಗಳೂರು: ಸಿಲಿಕಾನ್ ಸಿಟಿ ಜನರು ಒಂದು ವಾರದ ಲಾಕ್‍ಡೌನ್ ಕಾಲಕ್ಕೆ ಸಜ್ಜಾಗುತ್ತಿದ್ದಾರೆ. ಈ ಮಧ್ಯೆ ಲಾಕ್‍ಡೌನ್ ಜೊತೆಗೆ ಸೀಲ್‍ಡೌನ್‍ಗೆ ಪಾಲಿಕೆ ಪ್ಲ್ಯಾನ್ ಸಿದ್ಧಗೊಳಿಸುತ್ತಿದೆ. ಹೌದು.ಕೊರೊನಾ ಹೆಚ್ಚಿರುವ ವಾರ್ಡ್‌ಗಳನ್ನು ಲಾಕ್‍ಡೌನ್ ಜೊತೆಗೆ ಸೀಲ್‍ಡೌನ್ ಮಾಡಲು ಬಿಬಿಎಂಪಿ ಪ್ಲ್ಯಾನ್ ಮಾಡಿಕೊಂಡಿದೆ. ಕಳೆದ 15 ದಿನಗಳಲ್ಲಿ ಕೊರೊನಾ ಸ್ಫೋಟಗೊಂಡ ವಾರ್ಡ್‌ಗಳಲ್ಲಿ ಟಫ್ ಸೀಲ್‍ಡೌನ್ ಜಾರಿಯಾಗುವ ಸಾಧ್ಯತೆಯಿದೆ. ಸೀಲ್‍ಡೌನ್ ಜಾರಿಯಾದರೆ ತುರ್ತು ಮತ್ತೊಂದು ಕಾರಣ ಹೇಳಿ ಓಡಾಡಲು ಸಾಧ್ಯವಿಲ್ಲ. ಭಾನುವಾರ ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ …
Read More »ಒಂದು ವಾರ ಸಚಿವ ಬಿ.ಸಿ.ಪಾಟೀಲ್ ಕ್ವಾರಂಟೈನ್
ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಕೆಲ ರಾಜಕೀಯ ನಾಯಕರು ಕೂಡ ಕ್ವಾರಂಟೈನ್ ಆಗಿದ್ದಾರೆ. ಇದೀಗ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೂಡ ಒಂದು ವಾರಗಳ ಕಾಲ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಅವರ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರಿನ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಬಿ.ಸಿ.ಪಾಟೀಲ್ ಒಂದು ವಾರ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಮಾತ್ರವಲ್ಲದೇ ಅವರ ಕುಟುಂಬಸ್ಥರು ಮತ್ತು ಸಿಬ್ಬಂದಿ ವರ್ಗ ಕೂಡ ಕ್ವಾರಂಟೈನ್ ಆಗಿದ್ದಾರೆ. ಈ …
Read More »ಏಳು ದಿನಗಳ ಕಾಲ ಲಾಕ್ ಡೌನ್ ಸಂಪೂರ್ಣ ವಿಭಿನ್ನ ಹಾಗೂ ಕಠಿಣವಾಗಿರುತ್ತೆ:ಬಸವರಾಜ ಬೊಮ್ಮಾಯಿ
ಬೆಂಗಳೂರು: ಲಾಕ್‍ಡೌನ್‍ನಿಂದ ಯಾರಿಗೂ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾಳೆ ಮತ್ತು ನಾಡಿದ್ದು ಸಂಜೆಯವರೆಗೂ ಬೆಂಗಳೂರು ಮಂದಿಗೆ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲು, ಊರಿಗೆ ಹೋಗೋರಿದ್ರೆ ಹೋಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಬೆಂಗಳೂರಿಗೆ ಬರೋರಿಗೆ, ಬೆಂಗಳೂರಿಂದ ಹೋಗೋರಿಗೆ ಯಾವುದೇ ಅಡ್ಡಿ ಮಾಡಲ್ಲ. ಆದರೆ ಲಾಕ್‍ಡೌನ್ ಶುರುವಾದ ನಂತರ ಓಡಾಟ ಇರಬಾರದು. ಜನ ಮನೆಯಲ್ಲೇ ಇರಬೇಕು ಎಂದು ಸಚಿವ ಅಶೋಕ್ ಸರ್ಕಾರದ ಪರವಾಗಿ ಮನವಿ ಮಾಡಿಕೊಂಡಿದ್ದಾರೆ. ನಾಳೆ ಸಂಜೆ ಹೊತ್ತಿಗೆ ಲಾಕ್‍ಡೌನ್ ಮಾರ್ಗಸೂಚಿಯನ್ನು …
Read More »ಸಂಡೇ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಊರುಗಳತ್ತ ಜನ- ಬೆಳ್ಳಂಬೆಳಗ್ಗೆ ಟ್ರಾಫಿಕ್
ಸಂಡೇ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಊರುಗಳತ್ತ ಜನ- ಟ್ರಾಫಿಕ್ ಬೆಂಗಳೂರು: ಬೆಂಗಳೂರು ಲಾಕ್‍ಡೌನ್‍ಗೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಮಂಗಳವಾರ ರಾತ್ರಿ 8 ಗಂಟೆಯಿಂದ 7 ದಿನ ಕಾಲ ಲಾಕ್‍ಡೌನ್ ಜಾರಿಯಾಗಲಿದೆ. ಈ ವೇಳೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‍ಗಳ ಸಂಚಾರ ಸಂಪೂರ್ಣ ಸ್ಥಬ್ಧವಾಗಲಿದೆ. ಹೀಗಾಗಿ ಜನರು ಸಂಡೇ ಲಾಕ್‍ಡೌನ್ ಮುಗಿಯುತ್ತಿದ್ದಂತೆ ತಮ್ಮ ತಮ್ಮ ಗ್ರಾಮಗಳತ್ತ ಹೋಗುತ್ತಿದ್ದಾರೆ. ಸಂಡೇ ಲಾಕ್‍ಡೌನ್ ಸಮಯ ಮುಗಿದ ತಕ್ಷಣ ಬೈಕ್ ಮತ್ತು …
Read More »ಮಯೂರಿ ಬರ್ತ್‍ಡೇ ಸಂಭ್ರಮಕ್ಕೆ ಕಿಕ್ಕೇರಿಸಿತು ‘ಆದ್ಯಂತ’ ಫಸ್ಟ್ ಲುಕ್!
ಕಿರುತೆಯಿಂದ ಕಲಾಯಾನ ಆರಂಭಿಸಿ ಹಿರಿತೆರೆಯಲ್ಲೂ ಯಶಸ್ವಿ ನಾಯಕಿಯಾಗಿ ನೆಲೆ ಕಂಡುಕೊಂಡಿರುವವರು ಮಯೂರಿ ಕ್ಯಾತರಿ. ಪ್ರಬುದ್ಧವಾದ ನಿರ್ಧಾರಗಳ ಮೂಲಕ ಚೆಂದದ ಪಾತ್ರಗಳನ್ನ ಆಯ್ಕೆ ಮಾಡಿಕೊಳ್ಳುತ್ತಿರೋ ಮಯೂರಿ ಇತ್ತೀಚೆಗಷ್ಟೇ ಸಾಂಸಾರಿಕ ಜೀವನಕ್ಕೆ ಅಡಿಯಿರಿಸಿದ್ದಾರೆ. ಆ ಖುಷಿಯಲ್ಲಿರೋ ಅವರ ಪಾಲಿಗೆ ಈ ಬಾರಿಯ ಹುಟ್ಟುಹಬ್ಬ ನಿಜಕ್ಕೂ ಸ್ಪೆಷಲ್ಲು. ಅದನ್ನು ಮತ್ತೂ ಕಳೆಗಟ್ಟಿಸುಯವಂತೆ ‘ಆದ್ಯಂತ’ ಚಿತ್ರದ ಚೆಂದದ ಫಸ್ಟ್ ಲುಕ್ ಬಿಡುಗಡೆಗೊಂಡಿದೆ. ಆದ್ಯಂತ ಮಯೂರಿ ನಾಯಕಿಯಾಗಿ ನಟಿಸಿರೋ ಚಿತ್ರ. ಅವರ ಪಾಲಿಗಿದು ಮಹತ್ವಾಕಾಕ್ಷೆಯ ಮೈಲಿಗಲ್ಲು. …
Read More »ಆನ್ ಲೈನ್ ನಲ್ಲಿ ಪುಸ್ತಕ ಲೋಕಾರ್ಪಣೆ
ಬೆಂಗಳೂರು, ಜು.12- ಹಿರಿಯ ಸಾಹಿತಿ ಡಾ.ಜಿ.ಕೃಷ್ಣಪ್ಪ ಅವರು ರಚಿಸಿರುವ ಕುವೆಂಪು ಹನುಮದ್ದರ್ಶನ(ಶ್ರೀ ರಾಮಾಯಣ ದರ್ಶನಂ-ಒಂದು ಚಿತ್ರಣ) ಗ್ರಂಥ ವನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಲೋಕಾರ್ಪಣೆ ಮಾಡಿದರು. https://youtu.be/I1U-UG-NHuk ನಗರದಲ್ಲಿಂದು ತಮ್ಮ ನಿವಾಸದಲ್ಲಿ ಆನ್ ಲೈನ್ ಮೂಲಕವೇ ಬಿಡುಗಡೆ ಮಾಡಿದ ಅವರು, ಶ್ರೀ ರಾಮಾಯಣ ದರ್ಶನಂ ವಿಶೇಷ ಗ್ರಂಥವಾಗಿದ್ದು, ಡಾ.ಜಿ.ಕೃಷ್ಣಪ್ಪ ಅವರು ಹನುಮದ್ದರ್ಶನ ಕುರಿತು ಹೆಚ್ಚಿನ ಮಾಹಿತಿ ಬೆಳಕು ಚೆಲ್ಲಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಮಹಮದೀಯರ ಕನ್ನಡ …
Read More »