Breaking News

ಬೆಂಗಳೂರು

ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ

ಬೆಂಗಳೂರು,ಜು.7- ಕಳೆದ ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ತಮ್ಮ ಸೇವೆಯನ್ನು ಖಾಯಂಗೊಳಿಸದಿದ್ದರೆ ನಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ಪ್ರಾರಂಭಿಸುವುದಾಗಿ ಗುತ್ತಿಗೆ ವೈದ್ಯರುಎಚ್ಚರಿಕೆ ನೀಡಿದ ಬೆನ್ನಲ್ಲೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ಸೂಚನೆ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರ …

Read More »

ಕೋವಿಡ್ ಪರೀಕ್ಷೆಗೆ ದುಬಾರಿ ಶುಲ್ಕ ವಸೂಲಿ ಆರೋಪ, ಅಪೋಲೋ ಆಸ್ಪತ್ರೆಗೆ ನೋಟಿಸ್

ಬೆಂಗಳೂರು, ಜು.7- ಕೋವಿಡ್ ಪರೀಕ್ಷೆಗೆ ದುಬಾರಿ ಶುಲ್ಕ ವಸೂಲಿ ಮಾಡುವ ಆಸ್ಪತ್ರೆ ಮತ್ತು ಲ್ಯಾಬ್‍ಗಳ ವಿರುದ್ಧ ನಿರ್ಧಾಕ್ಷೀಣ್ಯವಾಗಿ ಕ್ರಮ ಜರುಗಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಎಚ್ಚರಿಸಿದ್ದಾರೆ. ಜೊತೆಯಲ್ಲಿ ಅಪೋಲೋ ಆಸ್ಪತ್ರೆಗೆ ನೀಡಿರುವ ನೋಟಿಸ್‍ನ ಪ್ರತಿಯನ್ನು ಪ್ರಕಟಿಸಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಖಾಸಗಿ ಲ್ಯಾಬ್ ಮತ್ತು ಆಸ್ಪತ್ರೆಗಳಲ್ಲಿ ಒಬ್ಬ ವ್ಯಕ್ತಿಯ ಕೋವಿಡ್ ಪರೀಕ್ಷೆಗೆ ಗರಿಷ್ಠ 4500 ರೂಪಾಯಿಗಳ ದರ ನಿಗದಿ ಮಾಡಲಾಗಿದೆ. ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ …

Read More »

ಪ್ರಥಮ ಪಿಯುಸಿ ಪೂರಕ ಪರೀಕ್ಷೆಗೆ ದಿನಾಂಕ ನಿಗದಿ…….

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಪಿಯುಸಿ ಪೂರಕ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿ ಪಿಯುಸಿ ಬೋರ್ಡ್ ಆದೇಶ ಹೊರಡಿಸಿದೆ. ಜುಲೈ 16 ರಿಂದ 27ರ ಒಳಗೆ ಪರೀಕ್ಷೆ ಮುಗಿಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ. ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಆಯಾ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ಜೊತೆಗೆ ಕಾಲೇಜುಗಳು ಅಗತ್ಯ ವೇಳಾಪಟ್ಟಿ ರಚನೆ ಮಾಡಿಕೊಂಡು ಪೂರಕ …

Read More »

ಕೋವಿಡ್ ಕೇರ್‌ ಕೇಂದ್ರಗಳಲ್ಲಿ 20,000 ಬೆಡ್ ಮತ್ತು ಐಸಿಯು ವ್ಯವಸ್ಥೆ

ಬೆಂಗಳೂರು: ಕೋವಿಡ್- 19 ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲಿಯೇ ಎದುರಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವ ರಾಜ್ಯ ಸರಕಾರ, ನಗರದ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿನ ಬೆಡ್‌ಗಳ ಪ್ರಮಾಣವನ್ನು ೨0 ಸಾವಿರದವರೆಗೂ ಹೆಚ್ಚಿಸಲು ನಿರ್ದರಿದೆ. ಬೆಂಗೂರಿನಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಿದ ಕೋವಿಡ್‌ ಕೇರ್‌ ಕೇಂದ್ರಗಳ (ಸಿಸಿಸಿ) ಉಸ್ತುವಾರಿಯೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಈಗಾಗಲೇ ನಮ್ಮಲ್ಲಿ 1250 ಬೆಡ್ ಗಳು ಲಭ್ಯ ಇವೆ. ಬೆಂಗಳೂರು …

Read More »

ಕರೋನ ವಾರಿಯರ್ಸ್‍ಗಳಂತೆ ಕೆಲಸ ಮಾಡಿ : ಬಿಬಿಎಂಪಿ ಸದಸ್ಯರಿಗೆ ಸಚಿವ ಅಶೋಕ್ ಸಲಹೆ

ಬೆಂಗಳೂರು, ಜು.6- ನಿಮ್ಮ ನಿಮ್ಮ ವಾರ್ಡ್‍ಗಳಿಗೆ 20 ಲಕ್ಷ ರೂ. ನೀಡಿದ್ದೇವೆ. ಅದನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ. ಪಕ್ಷಾತೀತವಾಗಿ ನೀವೇ ವಾರಿಯರ್ಸ್‍ಗಳಂತೆ ಕೆಲಸ ಮಾಡಬೇಕು ಎಂದು ಪಾಲಿಕೆ ಸದಸ್ಯರಿಗೆ ಸಚಿವ ಆರ್.ಅಶೋಕ್ ಸಲಹೆ ನೀಡಿದರು. ಕೊರೊನಾ ಸಂಬಂಧ ಪಾಲಿಕೆ ಸಭೆಯಲ್ಲಿಂದು ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ವಾರ್ಡ್‍ಗೂ ತಾರತಮ್ಯ ಮಾಡುವುದಿಲ್ಲ. ಎಲ್ಲ ಪಕ್ಷವೂ ಒಂದೇ. ನಿಮಗೆ ನೀಡಿರುವ ಹಣವನ್ನು ರೋಗಿಗಳಿಗೆ ಬಳಸಿ ಎಂದರು. ಕೊರೊನಾದಿಂದಾಗಿ ಹೆಚ್ಚಿನ ಸಮಸ್ಯೆಗಳು …

Read More »

ರಾಘವೇಂದ್ರ ಕೋ -ಆಪರೇಟಿವ್‌ ಬ್ಯಾಂಕ್‌ ಮಾಜಿ ಸಿಇಓ ಆತ್ಮಹತ್ಯೆ

ಬೆಂಗಳೂರು: ಶ್ರೀ ಗುರುರಾಘವೇಂದ್ರ ಕೋ- ಆಪರೇಟೀವ್ ಬ್ಯಾಂಕ್ ಮಾಜಿ ಸಿಇಓ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿರುವ ನಿವಾಸದಲ್ಲಿ  ವಾಸುದೇವ ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆ ಮುಂದೆ ಕಾರಿನಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಕಾರಿನಲ್ಲಿ ಮದ್ಯ ಸೇವಿಸಿದ್ದಾರೆ. ಮದ್ಯದಲ್ಲಿ ವಿಷವನ್ನು ಮಿಶ್ರಣ ಮಾಡಿರುವ ವಿಚಾರ ಈಗ ತಿಳಿದುಬಂದಿದೆ. ಬ್ಯಾಂಕ್ ವಿರುದ್ದ 1,400 ಕೋಟಿ ರೂ. ಅವ್ಯವಹಾರ ಕೇಳಿ ಬಂದಿತ್ತು. ಹಗರಣದಲ್ಲಿ ವಸುದೇವ ಮಯ್ಯ ಪ್ರಮುಖ ಆರೋಪಿಯಾಗಿದ್ದರು. ಜೂನ್ 18 …

Read More »

ಸಿಲಿಕಾನ್ ಸಿಟಿ ಬಿಟ್ಟು ಹೋಗುವವರಿಗೆ ಇದೀಗ ಅಷ್ಟದಿಗ್ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬಿಟ್ಟು ಹೋಗುವವರಿಗೆ ಇದೀಗ ಅಷ್ಟದಿಗ್ಬಂಧನ ಹೇರಲಾಗಿದೆ. ಈ ಟೈಟ್ ನಿಯಮಗಳನ್ನು ಸರ್ಕಾರ ಕ್ಯಾಬಿನೆಟ್ ಸಭೆಯ ಬಳಿಕ ತರುವ ಸಾಧ್ಯತೆಗಳಿವೆ. ಬೆಂಗಳೂರಿಂದ ತಮ್ಮ ಊರಿಗೆ ಈಗ ಹೋಗೋರಿಗೆ ತರುವ ರೂಲ್ಸ್ ಗಳ ಇನ್ ಸೈಡ್ ಡೀಟೆಲ್ಸ್ ಲಭ್ಯವಾಗಿದೆ. ಹೌದು. ಸಾವಿರಾರು ಮಂದಿ ಶನಿವಾರ, ಸೋಮವಾರದಿಂದ ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕೊರೊನಾ ಭಯ, ಬದುಕಿಗೆ ಬರೆ ಹಾಗೂ ಜೀವನ ಕುಂಟುವುದು ಖರೆ ಅಂತ ಜಾಗ …

Read More »

ಅತಿ ಕಡಿಮೆ ‘ಆಕ್ಟಿವ್ ಕೇಸ್’ ಹೊಂದಿರುವ ಕರ್ನಾಟಕದ ಐದು ಜಿಲ್ಲೆಗಳು..

ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23 ಸಾವಿರ ಗಡಿ ದಾಟಿದೆ. ದೇಶದಲ್ಲಿ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪೈಕಿ ಟಾಪ್ ಹತ್ತರೊಳಗೆ ಕರ್ನಾಟಕ ಗುರುತಿಸಿಕೊಂಡಿದೆ. ಒಂದು ಹಂತದಲ್ಲಿ ಇತರೆ ರಾಜ್ಯಗಳಿಗೆ ಮಾದರಿ ಎನಿಸಿಕೊಂಡಿದ್ದ ಕರ್ನಾಟಕ ಈಗ ಗಂಭೀರ ಸ್ಥಿತಿ ತಲುಪಿತ್ತಿದೆ. ಈವರೆಗೂ ರಾಜ್ಯದಲ್ಲಿ 23,474 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಅದರಲ್ಲಿ 9847 ಜನರು ಗುಣಮುಖರಾಗಿದ್ದು, 13,251 ಕೇಸ್‌ಗಳು ಸಕ್ರಿಯವಾಗಿದೆ. ಈ ಪೈಕಿ ಬೆಂಗಳೂರು …

Read More »

ಬೆಂಗಳೂರಿನಿಂದ ಬರುವವರಿಗೆ5 ಸಾವಿರ ದಂಡ

ಮಂಡ್ಯ: ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಅನೇಕ ಗ್ರಾಮಗಳು, ಜಿಲ್ಲೆ ಸ್ವಯಂ ಲಾಕ್‍ಡೌನ್ ಘೋಷಿಸಿಕೊಂಡಿವೆ. ಇದೀಗ ಜಿಲ್ಲೆಯ ಗ್ರಾಮವೊಂದರಲ್ಲಿ ಬೆಂಗಳೂರಿನಿಂದ ಬರುವವರಿಗೆ ದಂಡ ವಿಧಿಸುವುದಾಗಿ ಡಂಗೂರದ ಮೂಲಕ ಸಾರಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬೆಂಗಳೂರಿಗರ ಭಯ ಶುರುವಾಗಿದೆ. ಹೀಗಾಗಿ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಊರಿನ ಒಳಗೆ ಬೆಂಗಳೂರಿನವರು ಬರುವಾಗಿಲ್ಲ ಎಂದು ಡಂಗೂರದ ಮೂಲಕ ಸಾರಿಸಿದ್ದಾರೆ. ಇದೀಗ ಡಂಗೂರ ಸಾರಿಸಿರುವ ವಿಡಿಯೋ ವೈರಲ್ ಆಗಿದೆ. …

Read More »

60 ವರ್ಷ ಮೇಲ್ಪಟ್ಟವರು ಹೊರಬರದಂತೆ ರಾಜ್ಯದಲ್ಲಿ ಕಾನೂನು

ಬೆಂಗಳೂರು(ಜು.06): ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುವವರೆಗೂ ಕಿಡ್ನಿ, ಲಿವರ್‌, ಹೃದಯ ಸಂಬಂಧಿ ಸಮಸ್ಯೆ ಸೇರಿದಂತೆ ಪೂರ್ವ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ 60 ವರ್ಷ ಮೇಲ್ಪಟ್ಟವರು ಮನೆಯಿಂದ ಹೊರಬರಬಾರದೆಂಬ ಕಾನೂನು ರೂಪಿಸುವ ಚಿಂತನೆ ನಡೆಸುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಪೈಕಿ ಬಹುತೇಕ ಮಂದಿ 60 ವರ್ಷ ಮೇಲ್ಪಟ್ಟವರು ಹಾಗೂ ಈಗಾಗಲೇ ಪೂರ್ವ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದವರಾಗಿದ್ದಾರೆ. …

Read More »