Breaking News

ಬೆಂಗಳೂರು

17 ದಿನಗಳ ಮಗುವಿನ ಅಂತ್ಯಕ್ರಿಯೆ ನಡೆಸಿ ಕಣ್ಣೀರು ಹಾಕಿದ್ರು ಆರೋಗ್ಯ ಸಿಬ್ಬಂದಿ…

ಬೆಂಗಳೂರು: ಒಂದು ಮಗುವಿನ ಆಗಮನ ಅಂದ್ರೆ ಆ ಮನೆ ತುಂಬಾ ಸಂತೋಷ ತುಂಬಿರುತ್ತದೆ. ಇನ್ನು ತಾಯಿಗಂತೂ ಅದು ಮರುಜನ್ಮ, ಒಂಬತ್ತು ತಿಂಗಳು ಹೊತ್ತು, ಹೆರಿಗೆ ನೋವು ಸಹಿಸಿಕೊಂಡ ಆಕೆಗೆ, ಬಳಿಕ ಆ ಮಗುವಿನ ಮುಕ ನೋಡಿ, ಒಮ್ಮೆ ಮಗುವನ್ನು ಮುದ್ದಾಡಿದರೇ ಎಲ್ಲ ನೋವು ಶಮನ. ಆದ್ರೆ ದುರಾದೃಷ್ಟವಶಾತ್​ ಈ ತಾಯಿಗೆ ಆ ಸಂತೋಷ ಸಿಗದಂತಾಗಿದೆ. ಈ ಕಥೆ ಓದಿದ್ರೆ ನಿಜಕ್ಕೂ ಕಣ್ಣೀರು ಬರುತ್ತದೆ. ಕೊರೊನಾ ತಂದಿಟ್ಟ ಪರಿಸ್ಥಿತಿ ನೋಡಿದರೆ ನಿಜಕ್ಕೂ …

Read More »

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಹವಾಮಾನ ಇಲಾಖೆಯು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಇಂದಿನಿಂದ ಜುಲೈ 10 ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.     ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಇಂದಿನಿಂದ ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ …

Read More »

ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭ…………….

ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ …

Read More »

ವಿಧಾನಸೌಧ ಸ್ಯಾನಿಟೈಸ್, ಅಧಿಕಾರಿ-ನೌಕರರಿಗೆ ತಡವಾಗಿ ಕಚೇರಿಗೆ ಬರಲು ಸೂಚನೆ

ಬೆಂಗಳೂರು, ಜು.6-ವಿಧಾನಸೌಧ ಮೊದಲನೇ ಮಹಡಿಯಲ್ಲಿರುವ ವಿಧಾನಸಭಾ ಕಾವಲುಗಾರರ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಯೊಬ್ಬರಿಗೆ ಕೊರೋನ ಪಾಸಿಟಿವ್ ಬಂದಿದೆ. ಆದುದರಿಂದ ವಿಧಾನಸೌಧದಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ವಿಧಾನ ಸೌಧದಲ್ಲಿರುವ ವಿಧಾನಸಭೆ ಸಚಿವಾಲಯದ ಪ್ರತಿ ಶಾಖೆಯಲ್ಲಿ ಒಬ್ಬರು ಮಾತ್ರ ಬಂದು ಶಾಖೆಯ ಒಳಗೆ ಸ್ಯಾನಿಟೈಸ್ ಮಾಡುವಾಗ ನೋಡಿಕೊಳ್ಳಬೇಕು.   55ವರ್ಷ ದಾಟಿದ ಅಧಿಕಾರಿ ಹಾಗೂ ನೌಕರರುಗಳು ಮಾತ್ರ ನಾಳೆ ಒಂದು ದಿನ ಮಾತ್ರ ವಿಧಾನ ಸಭಾಧ್ಯಕ್ಷರ ಆದೇಶಾನುಸಾರ ರಜೆಯನ್ನು ಘೋಷಿಸಲಾಗಿದೆ. ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ …

Read More »

ಕೊರೊನಾ ತಡೆಗೆ ಸೀನಿಯರ್ ಸಿಟಿಜನ್ಸ್ ಲಾಕ್- ರಾಜ್ಯದಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು!

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಇನ್ನಿಲ್ಲದ ಪ್ರಯತ್ನಕ್ಕೆ ಮುಂದಾಗಿದೆ. ಸೀನಿಯರ್ ಸಿಟಿಜನ್‍ಗಳನ್ನ ಲಾಕ್ ಮಾಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 23 ಸಾವಿರ ಗಡಿ ದಾಟಿದೆ. ಅದರಲ್ಲೂ ಮಹಾನಗರಿ ಬೆಂಗಳೂರಲ್ಲಿ ಪ್ರತಿದಿನ ಸಾವಿರಕ್ಕೂ ಅಧಿಕ ಕೇಸ್‍ಗಳು ಬರ್ತಿವೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ನಾನಾ ಕಸರತ್ತು ಮಾಡ್ತಿದೆ. ರಾಜ್ಯದಲ್ಲಿ ಹಿರಿಯ ನಾಗರೀಕರನ್ನ ಮನೆಯಿಂದ ಹೊರ ಬರದಂತೆ ತಡೆಯಲು ಹೊಸ ಕಾನೂನು ರೂಪಿಸಲು ಸರ್ಕಾರ ಮುಂದಾಗಿದೆ. ಹೌದು. ಕೊರೊನಾ …

Read More »

ಗುಡ್ಡ ಕುಸಿತ- ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಮಂಗಳೂರಿನ ಗುರುಪುರದ ಬಳಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದು, ಮಕ್ಕಳ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿಗಳು ಸಂತಾಪ ಸೂಚಿಸಿ ಇಬ್ಬರು ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ದುಃಖಕರ. ರಕ್ಷಣಾ ಕಾರ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, …

Read More »

‘ಸ್ಟ್ರೈಕರ್’ ಚಿತ್ರ ಅಮೆಜಾನ್ ಪ್ರೈಮ್‍ನಲ್ಲಿ…..

ಕೊರೊನಾ ಕಾಟದಿಂದ ಚಿತ್ರಮಂದಿರಗಳು ಮುಚ್ಚಿಕೊಂಡಿರೋದರ ಬಗ್ಗೆ ಚಿತ್ರ ಪ್ರೇಮಿಗಳಲ್ಲೊಂದು ಕೊರಗಿದೆ. ಅದನ್ನು ಕೊಂಚ ನೀಗಿಸಿ ಮನೆಯೊಳಗೆ ಬಣ್ಣದ ಜಗತ್ತು ಕಣ್ತೆಯುವಂತೆ ಮಾಡುವಲ್ಲಿ ಅಮೆಜಾನ್ ಪ್ರೈಮ್‍ನ ಪಾತ್ರ ದೊಡ್ಡದು. ಈಗಾಗಲೇ ಕನ್ನಡದ ಒಂದಷ್ಟು ಸಿನಿಮಾಗಳು ಅಮೆಜಾನ್ ಪ್ರೈಮ್ ಮೂಲಕ ಲಾಕ್‍ಡೌನ್ ಕಾಲವನ್ನು ಸಹನೀಯವಾಗಿಸಿವೆ. ಅದರಲ್ಲಿಯೇ ಕೆಲ ಚಿತ್ರಗಳು ದೊಡ್ಡ ಮಟ್ಟದಲ್ಲಿ ಗೆದ್ದು ಬೀಗಿವೆ. ಅಂಥಾದ್ದೇ ಆವೇಗದೊಂದಿಗೆ ಇದೀಗ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರೋ ‘ಸ್ಟ್ರೈಕರ್’ ಚಿತ್ರ ಅಮೆಜಾನ್ ಪ್ರೈಮ್‍ನಲ್ಲಿ ಆಟ ಶುರುವಿಟ್ಟಿದೆ. …

Read More »

ಒಂದೇ ದಿನ 55ಖಾಕಿ ಗಳಿಗೆ ಕರೋನ್…….ನೀವು ಸೇಫ್ ಆಗಿ ಇದೀರಾ….?

ಬೆಂಗಳೂರು: ಕೊರೊನಾ ಮಹಾ ಸುನಾಮಿ ರಾಜ್ಯದ ಮೇಲೆ ಕಳೆದೊಂದು ವಾರದಿಂದ ನಿರಂತರವಾಗಿ ದೊಡ್ಡ ದಾಳಿ ಮಾಡುತ್ತಿದೆ. ಡೆಡ್ಲಿ ವೈರಸ್ ಪ್ರತಿ ದಿನವೂ ತನ್ನೆಲ್ಲಾ ಹಿಂದಿನ ದಾಖಲೆಗಳನ್ನು ಪುಡಿಗಟ್ಟಿ ಹೊಸ ಇತಿಹಾಸ ಬರೆಯುತ್ತಿದೆ. ನೋಡ ನೋಡುತ್ತಲೇ ಸೋಂಕಿತರ ಸಂಖ್ಯೆ 23,474ಕ್ಕೆ ಬಂದು ನಿಂತಿದೆ. ಇಂದು ಒಂದೇ ದಿನ 1,925 ಮಂದಿಯನ್ನ ಹೆಮ್ಮಾರಿ ವಕ್ಕರಿಸಿಕೊಂಡಿದೆ. ಬೆಂಗಳೂರಿನ ಅಂಕಿ ಅಂಶಗಳಂತೂ ಮಹಾನಗರವನ್ನ ಬಿಟ್ಟು ಹೋಗುವಂತೆ ಮಾಡಿದೆ. ಇಂದು ರಾಜಧಾನಿ ಬೆಂಗಳೂರಲ್ಲಿ ಹೊಸದಾಗಿ 1235 ಜನರ …

Read More »

ಕೊರೊನಾಗೆ ಬೆಂಗ್ಳೂರು ತತ್ತರ- ಒಂದೇ ದಿನ 1,235 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿಂದು 1,925 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 23,474 ಕ್ಕೇರಿಕೆಯಾಗಿದೆ. ಇಂದು ಸಹ ಮಹಾಮಾರಿಗೆ 38 ಮಂದಿಗೆ ಬಲಿಯಾಗಿದ್ದಾರೆ. ರಾಜಧಾನಿ ಮತ್ತೆ ಕೊರೊನಾ ಅಟ್ಟಹಾಸಕ್ಕೆ ತತ್ತರಿಸಿದ್ದು, ಇಂದು 1,235 ಮಂದಿಗೆ ಕೊರೊನಾ ಸೋಂಕು ತಗುಲಿದೆ. 23,474 ಪ್ರಕರಣಗಳಲ್ಲಿ 13,250 ಸಕ್ರಿಯ ಕೇಸ್ ಗಳಿವೆ. ಇಂದು 603 ಮಂದಿ ಡಿಸ್ಚಾರ್ಜ್ ಆಗಿದ್ದು, 38 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 243 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬಿಡುಗಡೆಯಾದ ಬುಲೆಟಿನ್ …

Read More »

ಪೊಲೀಸರನ್ನು ಬೆಂಬಿಡದೆ ಕಾಡುತ್ತಿದೆ ಕೊರೊನಾ………

ಬೆಂಗಳೂರು: ಕೊರೊನಾ ಮಹಾಮಾರಿ ಪೊಲೀಸರನ್ನು ಬೆಂಬಿಡದೆ ಕಾಡುತ್ತಿದ್ದು, ಇಂದು ಒಟ್ಟು 8 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಹೊಡದಾಗಿ ಎರಡು ಪೊಲೀಸ್ ಠಾಣೆಗಳು ಸೀಲ್‍ಡೌನ್ ಆಗಿವೆ. ಸಿಲಿಕಾನ್ ಸಿಟಿಯ ಮಲ್ಲೇಶ್ವರ ಹಾಗೂ ರಾಜಾಜಿ ನಗರ ಸಂಚಾರ ಪೊಲೀಸ್ ಠಾಣೆಗಳು ಸೀಲ್ ಪಟ್ಟಿಗೆ ಸೇರ್ಪಡೆಯಾಗಿದ್ದು, ನಗರದಲ್ಲಿ ಇಂದು ಒಟ್ಟು 8 ಜನರಿಗೆ ಸೋಂಕು ತಗುಲಿದೆ. ಮಲ್ಲೇಶ್ವರಂ ಠಾಣೆಯ ಇಬ್ಬರು ಸಿಬ್ಬಂದಿಗೆ ಕರೊನಾ ಸೋಂಕು ದೃಢಪಟ್ಟಿದ್ದು, 36 ವರ್ಷದ ಓರ್ವ ಕಾನ್ಸ್‍ಸ್ಟೇಬಲ್ ಮತ್ತು …

Read More »