Breaking News

ಬೆಂಗಳೂರು

ಮೆಟ್ರೋ ಸಂಚಾರ ಆರಂಭವಾಗೋದು ಡೌಟ್‌! ಕಾಮಗಾರಿ ವಿಳಂಬ:

ಬೆಂಗಳೂರು(ಜು.03): 2020-21ನೇ ಸಾಲಿನಲ್ಲಿ ಸುಮಾರು 445 ಕೋಟಿ ಆದಾಯ ಗುರಿ ಹೊಂದಿದ್ದ ನಮ್ಮ ಮೆಟ್ರೋ ನಿಗಮ ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾ.22ರಿಂದ ಮೆಟ್ರೋ ರೈಲು ಸಂಚಾರ ರದ್ದುಪಡಿಸಿದ್ದರಿಂದ ಅಂದಾಜು 110 ಕೋಟಿಗಿಂತ ಅಧಿಕ ನಷ್ಟಕ್ಕೊಳಗಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ ಬಿಎಂಆರ್‌ಸಿಎಲ್‌ 430 ಕೋಟಿ ಆದಾಯ ಗಳಿಸಿತ್ತು. ಇದರಿಂದ ಸಹಜವಾಗಿಯೇ 2020-21ನೇ ಸಾಲಿನಲ್ಲಿ ಮೆಟ್ರೋ ನಿಗಮ ಸುಮಾರು 445 ಕೋಟಿ ಆದಾಯದ ಗುರಿಯನ್ನು ಹೊಂದಲಾಗಿತ್ತು.ಯಲಚೇನಹಳ್ಳಿ- ನಾಗಸಂದ್ರ(ಹಸಿರು ಮಾರ್ಗ) ಮತ್ತು ಬೈಯ್ಯಪ್ಪನಹಳ್ಳಿ- ಮೈಸೂರು …

Read More »

ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಬೆಂಗಳೂರು(ಜು.03): ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಂಕು ಲಕ್ಷಣಗಳಿದಿದ್ದರೂ ಪಾಸಿಟಿವ್‌ ವರದಿಗಳು ಬರುತ್ತಿವೆ. ಬೆಂಗಳೂರಲ್ಲಿ ಪ್ರತಿನಿತ್ಯ ಸೋಂಕಿನ ಪ್ರಕರಣಗಳು ಅಧಿಕಗೊಳ್ಳುತ್ತಿವೆ. ಇದರಿಂದ ಹಾಸಿಗೆ ಲಭ್ಯವಾಗುತ್ತಿಲ್ಲ ಎಂದು ಜನರು ಭೀತಿಗೊಳಗಾಗಿದ್ದಾರೆ. ಆದರೆ, ಜನರು ಯಾವುದೇ ರೀತಿಯಲ್ಲಿಯೂ ಭಯಗೊಳ್ಳಬೇಕಾದ ಅಗತ್ಯ ಇಲ್ಲ. ಸರ್ಕಾರ ಎಲ್ಲಾ ರೀತಿಯ …

Read More »

ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ.

ಬೆಂಗಳೂರು: ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ. ಗುರುವಾರ ನಗರದಲ್ಲಿ ನಡೆದ ಕೆಪಿಸಿಸಿ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ವಿಶೇಷವಾಗಿ ಮುಂಬೈ ಕರ್ನಾಟಕದ ಪ್ರಭಾವಿ ನಾಯಕರಾಗಿರುವ ಸತೀಶ ಜಾರಕಿಹೊಳಿ ಅವರು ರಾಜ್ಯಾದ್ಯಂತ ಸಂಚರಿಸಬೇಕು ಎಂದು ವೇದಿಕೆ ಮೇಲಿಂದಲೇ ಮನವಿ ಮಾಡಿದ ಅವರು ರಾಜ್ಯದ ಮೂಲೆ ಮೂಲೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದರು. ಉತ್ತಮ ಅವಕಾಶ ಸಿಕ್ಕಿದೆ. …

Read More »

ವ್ಯಕ್ತಿ ಪೂಜೆ ಬೇಡ . ಪಕ್ಷ ಪೂಜೆ ಮಾಡೋಣ:ಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌

ಬೆಂಗಳೂರು: ವ್ಯಕ್ತಿ ಪೂಜೆಯೂ ಬೇಡ . ಪಕ್ಷ ಪೂಜೆ ಮಾಡೋಣ. ಈ ಮೂಲಕ ಪಕ್ಷವನ್ನು ಕಟ್ಟೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ ಹಿಂಬಾಲಕರು ಬೇಡ. ನನಗೆ ಯಾವುದೇ ಗುಂಪು ಜಾತಿ, ಧರ್ಮದಲ್ಲಿ ನಂಬಿಕೆ ಇಲ್ಲ. ನಮ್ಮದು ಕಾಂಗ್ರೆಸ್ ಗುಂಪು, ಕಾಂಗ್ರೆಸ್ ಧರ್ಮ, ಕಾಂಗ್ರೆಸ್ ಜಾತಿ ಎಂದು ತಿಳಿಸಿದರು. ಕೇರಳ ಮಾದರಿಯಲ್ಲಿ ಎಲ್ಲಾ ನಾಯಕರು ಮೊದಲು …

Read More »

ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಯಾವ ದಿನ, ಏನು ಆಹಾರ?

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳಿಗೆ ಯಾವ ದಿನ, ಯಾವ ಆಹಾರ ನೀಡಬೇಕು ಎಂಬುದರ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲ ಜಿಲ್ಲೆಯ ಕೊರೊನಾ ಆಸ್ಪತ್ರೆಗಳಲ್ಲಿ ಮೆನು ಪ್ರಕಾರ ಆಹಾರ ನೀಡುವಂತೆ ಸೂಚಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಹಾಗೂ ಪೌಷ್ಠಿಕಾಂಶಯುಕ್ತ ಆಹಾರ ನೀಡಲಾಗುತ್ತಿಲ್ಲ. ಸೂಕ್ತ ಆಹಾರವಿಲ್ಲದೆ ಕೊರೊನಾ ರೋಗಿಗಳು ನರಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಸರ್ಕಾರ ತಜ್ಞರ ಜೊತೆ ಚರ್ಚಿಸಿ ಪ್ರತಿ …

Read More »

ಮೂವರು ಆರೋಪಿಗಳಿಗೆ ಸೋಂಕು- ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್

ಬೆಂಗಳೂರು: ಮೂವರು ಕೊಲೆ ಆರೋಪಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಸಿಲಿಕಾನ್ ಸಿಟಿಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲು ರೆಡಿಯಾಗಿದೆ. ಈ ಮೂಲಕ ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ಮತ್ತೊಂದು ಸ್ಟೇಷನ್ ಸೀಲ್‍ಡೌನ್‍ಗೆ ಸಿದ್ಧತೆ ನಡೆದಿದೆ. ಪಶ್ಚಿಮ ವಿಭಾಗದ ಪೊಲೀಸರಿಗೆ ಕೊರೊನಾ ಕಂಟಕವಾಗಿದೆ. ಡಿಸಿಪಿ ಕಚೇರಿ, ಎಸಿಪಿ ಕಚೇರಿ, ಉಪ್ಪಾರಪೇಟೆ, ಮಾರ್ಕೆಟ್, ಕಲಾಸಿಪಾಳ್ಯ, ಚಾಮರಾಜಪೇಟೆ, ಜೆಜೆ ಆರ್ ನಗರ, ಕಾಮಾಕ್ಷಿಪಾಳ್ಯ, ಕೆಪಿ ಅಗ್ರಹಾರ, ಕೆಂಗೇರಿ ಪೊಲೀಸ್ ಠಾಣೆಗಳು ಸೀಲ್ …

Read More »

ಬೆಂಗಳೂರಲ್ಲಿ ಎಸಿಪಿ-ಇನ್ಸ್‌ಪೆಕ್ಟರ್‌ ಹೆಗಲೇರಿದೆ ಕೊರೋನಾ………..

ಬೆಂಗಳೂರು,ಜು.1- ನಗರದ ಪಶ್ಚಿಮ ವಿಭಾಗದ ಒಬ್ಬರು ಎಸಿಪಿ ಮತ್ತು ಇನ್‍ಸ್ಪೆಕ್ಟರ್ ಒಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.  ಎಸಿಪಿ ಮತ್ತು ಇನ್‍ಸ್ಪೆಕ್ಟರ್ ಅವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್.ಬಿ ಈ ಸಂಜೆಗೆ ತಿಳಿಸಿದ್ದಾರೆ. ಇದುವರೆಗೂ ಪಶ್ಚಿಮ ವಿಭಾಗದಲ್ಲಿ 43 ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರಲ್ಲಿ ಕೆಲವರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ.ಈಗಾಗಲೇ ಕಾನ್‍ಸ್ಟೆಬಲ್, ಹೆಡ್‍ಕಾನ್‍ಸ್ಟೆಬಲ್, ಎಎಸ್‍ಐಗಳಲ್ಲಿ ಕಾಣಿಸಿಕೊಂಡಿದ್ದ ಮಹಾಮಾರಿ ಕೊರೊನಾ ಇದೀಗ …

Read More »

ಬೆಂಗಳೂರಲ್ಲಿ ಕೊರೊನಾ ನಿಯಂತ್ರಿಸಲು ಮತ್ತೊಂದು ತಿಂಗಳು ನಿಷೇಧಾಜ್ಞೆ…….

ಬೆಂಗಳೂರು,ಜು.1-ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಿಷೇಧಾಜ್ಞೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದುವರೆಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಜೂ.26ರ ಮಧ್ಯರಾತ್ರಿ 12 ಗಂಟೆಗೆ ಅಂತ್ಯವಾಗಿರುವ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144/1 ನಿಷೇಧಾಜ್ಞೆಯನ್ನು ಜು.26ರ ಮಧ್ಯರಾತ್ರಿವರೆಗೂ 30 ದಿನಗಳ ಕಾಲ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ.ನಿಷೇಧಾಜ್ಞೆ ವೇಳೆ ಒಳಾಂಗಣ ಕಾರ್ಯಕ್ರಮದಲ್ಲಿ 20 ಜನಕ್ಕೂ ಹೆಚ್ಚು ಜನ ಸೇರುವಂತಿಲ್ಲ. ಸಾರ್ವಜನಿಕ …

Read More »

ಲೋಕಾಯುಕ್ತ ಕಚೇರಿಗೂ ಕೊರೊನಾ ಎಂಟ್ರಿ …………

ಬೆಂಗಳೂರು,ಜು.1- ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತ ಕಚೇರಿಗೂ ಕೊರೊನಾ ಎಂಟ್ರಿ ಕೊಟ್ಟಿದೆ. ವಿಕಾಸಸೌಧದ ಭದ್ರತೆಗೆ ನಿಯೋಜಿಸಿದ್ದ ಪೆÇಲೀಸ್ ಕಾನ್‍ಸ್ಟೆಬಲ್‍ಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಸೋಂಕಿತ ಕಾನ್‍ಸ್ಟೆಬಲ್ ಲೋಕಾಯುಕ್ತ ಕಚೇರಿಗೂ ಎಂಟ್ರಿ ಕೊಟ್ಟಿದ್ದ. ಹೀಗಾಗಿ ಇಡೀ ಲೋಕಾಯುಕ್ತ ಕಚೇರಿಯನ್ನು ಸ್ಯಾನಿಟೈಸರ್ ಮಾಡಲಾಗುತ್ತಿದೆ.ಕಚೇರಿ ಸಿಬ್ಬಂದಿಗೆ ಒಂದು ದಿನ ರಜೆ ಕೊಟ್ಟು ಕಳುಹಿಸಲಾಗಿದೆ. ಸೋಂಕಿತ ಕಾನ್‍ಸ್ಟೆಬಲ್ ಜೊತೆ ಸಂಪರ್ಕವಿರಿಸಿಕೊಂಡಿದ್ದ ಲೋಕಾಯುಕ್ತ ಸಿಬ್ಬಂದಿಯಲ್ಲಿ ಆತಂಕ ಎದುರಾಗಿದೆ.

Read More »

ಬೆಚ್ಚಿಬಿದ್ದ ಬೆಂಗಳೂರಿಗರು, 4197 ಮಂದಿಗೆ ಕೊರೊನಾ ಪಾಸಿಟಿವ್….!

ಬೆಂಗಳೂರು, ಜು.1- ಸಿಲಿಕಾನ್ ಸಿಟಿ ಜನರೇ ಎಚ್ಚರ..! ಮನೆ ಬಿಡುವ ಮುನ್ನ ಸ್ವಲ್ಪ ಯೋಚಿಸಿ. ಇಲ್ಲದಿದ್ದರೆ ಮಾರಿಯನ್ನು ನೀವೇ ಮನೆಗೆ ಆಹ್ವಾನಿಸಿದಂತಾಗುತ್ತದೆ. ಏಕೆಂದರೆ ಕಳೆದ ಒಂದು ತಿಂಗಳಿನಲ್ಲಿ ಬರೋಬ್ಬರಿ 4197 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜುಲೈನಲ್ಲಿ ಸೋಂಕಿತರ ಸಂಖ್ಯೆ 15 ಸಾವಿರ ದಾಟುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ನೀವು ಉದಾಸೀನವಾಗಿ ಓಡಾಡುವುದು, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಕಾದಿದೆ ಗ್ರಹಚಾರ… ಕಳೆದ ಮಾರ್ಚ್‍ನಿಂದ …

Read More »