Breaking News

ಬೆಂಗಳೂರು

ಅಟ್ಟಾಡಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ………..

ಬೆಂಗಳೂರು: ವ್ಯಕ್ತಿಯೊಬ್ಬ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಜಗೋಪಾಲನಗರದ ಲವಕುಶನಗರದಲ್ಲಿ ನಡೆದಿದೆ. ಹೇಮಾ ಕೊಲೆಯಾದ ದುರ್ದೈವಿ. ಆರೋಪಿ ಪತಿ ಮಂಜುನಾಥ್ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಕುಣಿಗಲ್ ಮೂಲದ ಹೇಮಾಗೆ ಆರೋಪಿ ಮಂಜುನಾಥ್ ಜೊತೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ಮೃತ ಹೇಮಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಂಗಳವಾರ ಸಂಜೆ ಹೇಮಾ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಳು. ಅದೇ ವಿಚಾರವಾಗಿ …

Read More »

ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ

ಬೆಂಗಳೂರು: ಕೊರೊನಾ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಅಂತ ಬೆಂಗಳೂರಿನ ಕಮರ್ಷಿಯಲ್ ಏರಿಯಾದ ಜನ ಮುಂದಾಗಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ದಿನಕ್ಕೆ ನಾಲ್ಕೈದು ಪ್ರಕರಣಗಳು ಬರುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಸಡಿಲಿಕೆ ಬಳಿಕ ಸೆಂಚುರಿ ಮೇಲೆ ಸೆಂಚುರಿ ಬಾರಿಸಿದ್ದ ಕೊರೊನಾ ಈಗ ದಿನಕ್ಕೆ 800ರ ಬಳಿ ಬಂದಿದೆ. ಹೀಗೆ ಹೋದರೆ ಬೆಂಗಳೂರು ಮತ್ತೊಂದು ಮುಂಬೈ ನಗರ ಆಗುವುದರಲ್ಲಿ ಅನುಮಾನವೇ ಇಲ್ಲ. …

Read More »

ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ

ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೊರೊನಾ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬೇಸರದಿಂದಲೇ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಅಂತ್ಯ …

Read More »

ಬಳಕೆದಾರರ ಗೌಪ್ಯತೆ, ಭಾರತದ ಸಮಗ್ರತೆಗೆ ದಕ್ಕೆ ಉಂಟುಮಾಡಿಲ್ಲ – ಬ್ಯಾನ್ ಬಳಿಕ ಟಿಕ್‍ಟಾಕ್ ಪ್ರತಿಕ್ರಿಯೆ

ನವದೆಹಲಿ: ಭಾರತದಲ್ಲಿನ ಕಾನೂನುಗಳನ್ನು ಪಾಲಿಸುತ್ತಿದ್ದೇವೆ. ಬಳಕೆದಾರರ ವೈಯಕ್ತಿಕ ಮಾಹಿತಿ ಮತ್ತು ಭಾರತದ ಭದ್ರತೆ, ಸಮಗ್ರತೆಗೆ ದಕ್ಕೆ ಉಂಟು ಮಾಡುವುದಿಲ್ಲ ಎಂದು ಟಿಕ್ ಟಾಕ್ ಸ್ಪಷ್ಟನೆ ನೀಡಿದೆ. ಸೋಮವಾರ ಭಾರತದಲ್ಲಿ ಟಿಕ್‍ಟಾಕ್ ಸೇರಿ 59 ಚೀನಾ ಆ್ಯಪ್‍ಗಳನ್ನು ಬ್ಯಾನ್ ಮಾಡಿದ ಬಳಿಕ ಇಂದು ಟಿಕ್‍ಟಾಕ್ ಮೊದಲ ಪ್ರತಿಕ್ರಿಯೆ ಪ್ರಕಟಿಸಿದೆ. ಕೇಂದ್ರ ಸರ್ಕಾರದ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಲಿದ್ದೇವೆ ಎಂದು ಹೇಳಿದೆ. ಸರ್ಕಾರ ಅವಕಾಶ ನೀಡಿದರೆ ನಾವು ಸ್ಪಷ್ಟೀಕರಣ ನೀಡಲಿದ್ದೇವೆ …

Read More »

ಕೊರೊನಾ ಮಹಾಮಾರಿಗೆ ವಿಧಾನಸೌಧದ ನೌಕರನೊಬ್ಬ ಕಳೆದ ರಾತ್ರಿ ಬಲಿಯಾಗಿದ್ದಾನೆ

ಬೆಂಗಳೂರು,ಜೂ.30- ಕೊರೊನಾ ಮಹಾಮಾರಿಗೆ ವಿಧಾನಸೌಧದ ನೌಕರನೊಬ್ಬ ಕಳೆದ ರಾತ್ರಿ ಬಲಿಯಾಗಿದ್ದಾನೆ. ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ(ಡಿಪಿಎಆರ್) ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 36 ವರ್ಷ ನೌಕರನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ನೌಕರನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಜೆ ತೆಗೆದುಕೊಳ್ಳಲು ಸೂಚನೆ ಕೊಡಲಾಗಿತ್ತು. ಅದರಂತೆ ಆತ ಮೈಸೂರಿಗೆ ತೆರಳಿ ಕೋವಿಡ್-19 ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಸೋಂಕಿತ ವ್ಯಕ್ತಿ ಸಾವನ್ನಪ್ಪಿರುವುದರಿಂದ ಆತನ …

Read More »

ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಕೊರೊನಾ ಸೋಂಕಿತ ಸಾವು………..

ಬೆಂಗಳೂರು,ಜೂ.30- ಖಾಸಗಿ ಆಸ್ಪತ್ರೆಗಳ ನಿರ್ಲಕ್ಷದಿಂದ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ನಗರ್ತಪೇಟೆಯ ನಿವಾಸಿಯೊಬ್ಬರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ತಕ್ಷಣ ಅವರು ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಖಾಸಗಿ ಆಸ್ಪತ್ರೆಗಳನ್ನು ಎಡತಾಕಿದರೂ ಯಾರೂ ಅಡ್ಮಿಟ್ ಮಾಡಿಕೊಳ್ಳದ ಪರಿಣಾಮ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ ಈ ಮಧ್ಯೆ ಗುಟ್ಟಿಗೆರೆ ಮೂಲದ ವ್ಯಕ್ತಿಯೊಬ್ಬರಿಗೂ ಸೋಂಕು ಕಾಣಿಸಿಕೊಂಡಿದ್ದು ಅವರು 7 ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಅಡ್ಮಿಟ್ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ. ಆದರೆ ಮತ್ತೊಂದು …

Read More »

ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಕುರಿತು ಸಭೆ……..

ಬೆಂಗಳೂರು: ಕಂಠೀರವ ಸ್ಟುಡಿಯೋ ಆವರಣದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮತಿ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಕುರಿತು ಸಭೆ ಮಾಡಲಾಗಿದೆ. ಸಭೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣ ಮಾಡಲು ಸಿಎಂ ಅನುಮತಿ ನೀಡಿದ್ದಾರೆ. ಸ್ಮಾರಕಕ್ಕೆ ಕಂಠೀರವ ಸ್ಟುಡಿಯೋ ಆವರಣದಲ್ಲಿ 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ರಾಜ್ಯ ಸರ್ಕಾರವು 5 …

Read More »

ಸುಧಾಕರ್, ಅಶೋಕ್ ಮಧ್ಯೆ ಕೊರೊನಾ ಫೈಟ್?

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಹಾವಳಿ ಮಧ್ಯೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ತಲೆನೋವು ಶುರುವಾಗಿದೆ. ಇಂದಿನಿಂದ ಬೆಂಗಳೂರು ಕೊರೊನಾ ನಿರ್ವಹಣೆ ಪಾತ್ರ ಯಾರಿಗೆ ಸಿಗಲಿದೆ ಎಂಬ ಪ್ರಶ್ನೆ ಎದ್ದಿದೆ. ಸಚಿವ ಡಾ.ಕೆ.ಸುಧಾಕರ್ ಕ್ವಾರಂಟೈನ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಅಶೋಕ್‍ಗೆ ಸಿಕ್ಕಿತ್ತು. ಮುಖ್ಯಮಂತ್ರಿಗಳು ಆರ್ ಅಶೋಕ್‍ಗೆ ಮೌಖಿಕವಾಗಿ ತಾತ್ಕಾಲಿಕ ಹೊಣೆ ಹೊರಿಸಿದ್ದರು. ಆದರೆ ಇದೀಗ ಸುಧಾಕರ್ ಹೋಂ ಕ್ವಾರಂಟೈನ್ ಅವಧಿ ಮುಗಿಸಿ ರೀ ಎಂಟ್ರಿ ಕೊಟ್ಟಿದ್ದಾರೆ. ಕೊರೊನಾ ಹೊಣೆ ಯಾರಿಗೆ..? …

Read More »

ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಎಚ್ಚರಿಕೆ …….

ಬೆಂಗಳೂರು,ಜೂ.29- ನಾಳೆಯೊಳಗೆ ಖಾಸಗಿ ಆಸ್ಪತ್ರೆಯವರು ಸೋಂಕಿತರಿಗೆ ಕೊರೊನಾ ಚಿಕಿತ್ಸೆ ನೀಡಲು ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಲೇಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಖಾಸಗಿ ಆಸ್ಪತ್ರೆ ವೈದ್ಯರಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಇಂದು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದ ಅವರು, ಏನು ಮಾಡುತ್ತೀರೋ ಬಿಡುತ್ತೀರೋ ಗೊತ್ತಿಲ್ಲ.ನಾಳೆಯೊಳಗೆ ಕನಿಷ್ಠ ಪಕ್ಷ ಎರಡುವರೆ ಸಾವಿರ ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಲೇಬೇಕೆಂದು ತಾಕೀತು ಮಾಡಿದರು. ಒಂದು ಹಂತದಲ್ಲಿ ಖಾಸಗಿ ಆಸ್ಪತ್ರೆ ಇಷ್ಟು ಪ್ರಮಾಣದ ಹಾಸಿಗೆಗಳನ್ನು ನೀಡಲುಸಾಧ್ಯವಿಲ್ಲ ಎಂದು …

Read More »

ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆಮುಂದಿನ ಆರು ತಿಂಗಳು ಮಾನಸಿಕವಾಗಿ ಸಿದ್ಧರಾಗಿ ಎಂದು ಮನವಿ

ಬೆಂಗಳೂರು : ಪ್ರಸಕ್ತ ಸಾಲಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂಬ ತಜ್ಞರ ಅಭಿಪ್ರಾಯವನ್ನು ಆಧರಿಸಿ ಕೊರೊನಾ ಮಹಾಮಾರಿಯನ್ನು ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ ಎಂದು ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಕಂದಾಯ ಸಚಿವ ಆರ್ ಅಶೋಕ್ ಅವರು ಭಾನುವಾರ ತಾವು ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಹಾಗೂ ಶುಶ್ರೂಷೆ ನೀಡಲು ಮುಂದಿನ ಆರು ತಿಂಗಳು ಮಾನಸಿಕವಾಗಿ …

Read More »