ಬೆಂಗಳೂರು,ಜು.1- ನಗರದ ಪಶ್ಚಿಮ ವಿಭಾಗದ ಒಬ್ಬರು ಎಸಿಪಿ ಮತ್ತು ಇನ್‍ಸ್ಪೆಕ್ಟರ್ ಒಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಎಸಿಪಿ ಮತ್ತು ಇನ್‍ಸ್ಪೆಕ್ಟರ್ ಅವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್.ಬಿ ಈ ಸಂಜೆಗೆ ತಿಳಿಸಿದ್ದಾರೆ. ಇದುವರೆಗೂ ಪಶ್ಚಿಮ ವಿಭಾಗದಲ್ಲಿ 43 ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರಲ್ಲಿ ಕೆಲವರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ.ಈಗಾಗಲೇ ಕಾನ್‍ಸ್ಟೆಬಲ್, ಹೆಡ್‍ಕಾನ್‍ಸ್ಟೆಬಲ್, ಎಎಸ್‍ಐಗಳಲ್ಲಿ ಕಾಣಿಸಿಕೊಂಡಿದ್ದ ಮಹಾಮಾರಿ ಕೊರೊನಾ ಇದೀಗ …
Read More »ಬೆಂಗಳೂರಲ್ಲಿ ಕೊರೊನಾ ನಿಯಂತ್ರಿಸಲು ಮತ್ತೊಂದು ತಿಂಗಳು ನಿಷೇಧಾಜ್ಞೆ…….
ಬೆಂಗಳೂರು,ಜು.1-ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಿಷೇಧಾಜ್ಞೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದುವರೆಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಜೂ.26ರ ಮಧ್ಯರಾತ್ರಿ 12 ಗಂಟೆಗೆ ಅಂತ್ಯವಾಗಿರುವ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144/1 ನಿಷೇಧಾಜ್ಞೆಯನ್ನು ಜು.26ರ ಮಧ್ಯರಾತ್ರಿವರೆಗೂ 30 ದಿನಗಳ ಕಾಲ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ.ನಿಷೇಧಾಜ್ಞೆ ವೇಳೆ ಒಳಾಂಗಣ ಕಾರ್ಯಕ್ರಮದಲ್ಲಿ 20 ಜನಕ್ಕೂ ಹೆಚ್ಚು ಜನ ಸೇರುವಂತಿಲ್ಲ. ಸಾರ್ವಜನಿಕ …
Read More »ಲೋಕಾಯುಕ್ತ ಕಚೇರಿಗೂ ಕೊರೊನಾ ಎಂಟ್ರಿ …………
ಬೆಂಗಳೂರು,ಜು.1- ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತ ಕಚೇರಿಗೂ ಕೊರೊನಾ ಎಂಟ್ರಿ ಕೊಟ್ಟಿದೆ. ವಿಕಾಸಸೌಧದ ಭದ್ರತೆಗೆ ನಿಯೋಜಿಸಿದ್ದ ಪೆÇಲೀಸ್ ಕಾನ್‍ಸ್ಟೆಬಲ್‍ಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಸೋಂಕಿತ ಕಾನ್‍ಸ್ಟೆಬಲ್ ಲೋಕಾಯುಕ್ತ ಕಚೇರಿಗೂ ಎಂಟ್ರಿ ಕೊಟ್ಟಿದ್ದ. ಹೀಗಾಗಿ ಇಡೀ ಲೋಕಾಯುಕ್ತ ಕಚೇರಿಯನ್ನು ಸ್ಯಾನಿಟೈಸರ್ ಮಾಡಲಾಗುತ್ತಿದೆ.ಕಚೇರಿ ಸಿಬ್ಬಂದಿಗೆ ಒಂದು ದಿನ ರಜೆ ಕೊಟ್ಟು ಕಳುಹಿಸಲಾಗಿದೆ. ಸೋಂಕಿತ ಕಾನ್‍ಸ್ಟೆಬಲ್ ಜೊತೆ ಸಂಪರ್ಕವಿರಿಸಿಕೊಂಡಿದ್ದ ಲೋಕಾಯುಕ್ತ ಸಿಬ್ಬಂದಿಯಲ್ಲಿ ಆತಂಕ ಎದುರಾಗಿದೆ.
Read More »ಬೆಚ್ಚಿಬಿದ್ದ ಬೆಂಗಳೂರಿಗರು, 4197 ಮಂದಿಗೆ ಕೊರೊನಾ ಪಾಸಿಟಿವ್….!
ಬೆಂಗಳೂರು, ಜು.1- ಸಿಲಿಕಾನ್ ಸಿಟಿ ಜನರೇ ಎಚ್ಚರ..! ಮನೆ ಬಿಡುವ ಮುನ್ನ ಸ್ವಲ್ಪ ಯೋಚಿಸಿ. ಇಲ್ಲದಿದ್ದರೆ ಮಾರಿಯನ್ನು ನೀವೇ ಮನೆಗೆ ಆಹ್ವಾನಿಸಿದಂತಾಗುತ್ತದೆ. ಏಕೆಂದರೆ ಕಳೆದ ಒಂದು ತಿಂಗಳಿನಲ್ಲಿ ಬರೋಬ್ಬರಿ 4197 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜುಲೈನಲ್ಲಿ ಸೋಂಕಿತರ ಸಂಖ್ಯೆ 15 ಸಾವಿರ ದಾಟುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ನೀವು ಉದಾಸೀನವಾಗಿ ಓಡಾಡುವುದು, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಕಾದಿದೆ ಗ್ರಹಚಾರ… ಕಳೆದ ಮಾರ್ಚ್‍ನಿಂದ …
Read More »ಅಟ್ಟಾಡಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ………..
ಬೆಂಗಳೂರು: ವ್ಯಕ್ತಿಯೊಬ್ಬ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಜಗೋಪಾಲನಗರದ ಲವಕುಶನಗರದಲ್ಲಿ ನಡೆದಿದೆ. ಹೇಮಾ ಕೊಲೆಯಾದ ದುರ್ದೈವಿ. ಆರೋಪಿ ಪತಿ ಮಂಜುನಾಥ್ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಕುಣಿಗಲ್ ಮೂಲದ ಹೇಮಾಗೆ ಆರೋಪಿ ಮಂಜುನಾಥ್ ಜೊತೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ಮೃತ ಹೇಮಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಂಗಳವಾರ ಸಂಜೆ ಹೇಮಾ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಳು. ಅದೇ ವಿಚಾರವಾಗಿ …
Read More »ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ
ಬೆಂಗಳೂರು: ಕೊರೊನಾ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಅಂತ ಬೆಂಗಳೂರಿನ ಕಮರ್ಷಿಯಲ್ ಏರಿಯಾದ ಜನ ಮುಂದಾಗಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ದಿನಕ್ಕೆ ನಾಲ್ಕೈದು ಪ್ರಕರಣಗಳು ಬರುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಸಡಿಲಿಕೆ ಬಳಿಕ ಸೆಂಚುರಿ ಮೇಲೆ ಸೆಂಚುರಿ ಬಾರಿಸಿದ್ದ ಕೊರೊನಾ ಈಗ ದಿನಕ್ಕೆ 800ರ ಬಳಿ ಬಂದಿದೆ. ಹೀಗೆ ಹೋದರೆ ಬೆಂಗಳೂರು ಮತ್ತೊಂದು ಮುಂಬೈ ನಗರ ಆಗುವುದರಲ್ಲಿ ಅನುಮಾನವೇ ಇಲ್ಲ. …
Read More »ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ
ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೊರೊನಾ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬೇಸರದಿಂದಲೇ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಅಂತ್ಯ …
Read More »ಬಳಕೆದಾರರ ಗೌಪ್ಯತೆ, ಭಾರತದ ಸಮಗ್ರತೆಗೆ ದಕ್ಕೆ ಉಂಟುಮಾಡಿಲ್ಲ – ಬ್ಯಾನ್ ಬಳಿಕ ಟಿಕ್‍ಟಾಕ್ ಪ್ರತಿಕ್ರಿಯೆ
ನವದೆಹಲಿ: ಭಾರತದಲ್ಲಿನ ಕಾನೂನುಗಳನ್ನು ಪಾಲಿಸುತ್ತಿದ್ದೇವೆ. ಬಳಕೆದಾರರ ವೈಯಕ್ತಿಕ ಮಾಹಿತಿ ಮತ್ತು ಭಾರತದ ಭದ್ರತೆ, ಸಮಗ್ರತೆಗೆ ದಕ್ಕೆ ಉಂಟು ಮಾಡುವುದಿಲ್ಲ ಎಂದು ಟಿಕ್ ಟಾಕ್ ಸ್ಪಷ್ಟನೆ ನೀಡಿದೆ. ಸೋಮವಾರ ಭಾರತದಲ್ಲಿ ಟಿಕ್‍ಟಾಕ್ ಸೇರಿ 59 ಚೀನಾ ಆ್ಯಪ್‍ಗಳನ್ನು ಬ್ಯಾನ್ ಮಾಡಿದ ಬಳಿಕ ಇಂದು ಟಿಕ್‍ಟಾಕ್ ಮೊದಲ ಪ್ರತಿಕ್ರಿಯೆ ಪ್ರಕಟಿಸಿದೆ. ಕೇಂದ್ರ ಸರ್ಕಾರದ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಲಿದ್ದೇವೆ ಎಂದು ಹೇಳಿದೆ. ಸರ್ಕಾರ ಅವಕಾಶ ನೀಡಿದರೆ ನಾವು ಸ್ಪಷ್ಟೀಕರಣ ನೀಡಲಿದ್ದೇವೆ …
Read More »ಕೊರೊನಾ ಮಹಾಮಾರಿಗೆ ವಿಧಾನಸೌಧದ ನೌಕರನೊಬ್ಬ ಕಳೆದ ರಾತ್ರಿ ಬಲಿಯಾಗಿದ್ದಾನೆ
ಬೆಂಗಳೂರು,ಜೂ.30- ಕೊರೊನಾ ಮಹಾಮಾರಿಗೆ ವಿಧಾನಸೌಧದ ನೌಕರನೊಬ್ಬ ಕಳೆದ ರಾತ್ರಿ ಬಲಿಯಾಗಿದ್ದಾನೆ. ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ(ಡಿಪಿಎಆರ್) ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 36 ವರ್ಷ ನೌಕರನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ನೌಕರನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಜೆ ತೆಗೆದುಕೊಳ್ಳಲು ಸೂಚನೆ ಕೊಡಲಾಗಿತ್ತು. ಅದರಂತೆ ಆತ ಮೈಸೂರಿಗೆ ತೆರಳಿ ಕೋವಿಡ್-19 ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಸೋಂಕಿತ ವ್ಯಕ್ತಿ ಸಾವನ್ನಪ್ಪಿರುವುದರಿಂದ ಆತನ …
Read More »ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಕೊರೊನಾ ಸೋಂಕಿತ ಸಾವು………..
ಬೆಂಗಳೂರು,ಜೂ.30- ಖಾಸಗಿ ಆಸ್ಪತ್ರೆಗಳ ನಿರ್ಲಕ್ಷದಿಂದ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ನಗರ್ತಪೇಟೆಯ ನಿವಾಸಿಯೊಬ್ಬರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ತಕ್ಷಣ ಅವರು ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಖಾಸಗಿ ಆಸ್ಪತ್ರೆಗಳನ್ನು ಎಡತಾಕಿದರೂ ಯಾರೂ ಅಡ್ಮಿಟ್ ಮಾಡಿಕೊಳ್ಳದ ಪರಿಣಾಮ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ ಈ ಮಧ್ಯೆ ಗುಟ್ಟಿಗೆರೆ ಮೂಲದ ವ್ಯಕ್ತಿಯೊಬ್ಬರಿಗೂ ಸೋಂಕು ಕಾಣಿಸಿಕೊಂಡಿದ್ದು ಅವರು 7 ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಅಡ್ಮಿಟ್ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ. ಆದರೆ ಮತ್ತೊಂದು …
Read More »