ಬೆಂಗಳೂರು: ಉದ್ಯಾನ ನಗರಿಯ ಹಲವೆಡೆ ವರುಣನ ಸಿಂಚನವಾಗಿದ್ದು, ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ನಗರದ ಯಶವಂತಪುರ, ಪೀಣ್ಯ, ಮಲ್ಲೇಶ್ವರ ಸೇರಿದಂತೆ ಹಲವೆಡೆ ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ಮಳೆಯಿಂದಾಗಿ ಟ್ರಾಫಿಕ್ ಜಾಮ್ ಸಂಭವಿಸಿದ್ದು ವಾಹನ ಸವಾರರು ಪರದಾಡುವಂತಾಯಿತು. ಬೆಳಗಿನಿಂದಲೂ ಶೆಖೆ ವಾತಾವರಣವಿತ್ತು. ಅಲ್ಲದೆ ಮಧ್ಯಾಹ್ನ ಸಹ ಸ್ವಲ್ಪ ಪ್ರಮಾಣದಲ್ಲಿ ಬಿಸಿಲು ಇತ್ತು. ಆದರೆ ಸಂಹೆ ನಾಲ್ಕು ಗಂಟೆ ಸುಮಾರಿಗೆ ವರಣ ಸಿಂಚನವಾಗಿದೆ. ಮಳೆಯಿಂದಾಗಿ ತುಮಕೂರು ರಸ್ತೆ, ಯಶವಂತಪುರ, …
Read More »ಸಚಿವ ಡಾ.ಸುಧಾಕರ್ ತಂದೆ ನಂತರ ಮನೆಗೆಲಸದವನಿಗೂ ಕೊರೊನಾ ಸೋಂಕು ದೃಢ……..
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಂದೆಯ ಬಳಿಕ ಮನೆಗೆಲಸದವನಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಡಾ.ಸುಧಾಕರ್ ತಂದೆ ಹಾಗೂ ಮನೆಗೆಲಸದವನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಅವರ ಇಡೀ ಕುಟುಂಬವನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಸಚಿವ ಡಾ.ಸುಧಾಕರ್, ಡಾ.ಸುಧಾಕರ್ ಪತ್ನಿ, ಇಬ್ಬರು ಮಕ್ಕಳು, 10ಕ್ಕೂ ಹೆಚ್ಚು ಮನೆಗೆಲಸದವರನ್ನು ಸದ್ಯ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಕಟ್ಟುನಿಟ್ಟಿನ ಹೋಮ್ ಕ್ವಾರಂಟೈನ್ ಮಾಡಿದ್ದಾರೆ. ಕೊರೊನಾ ಆತಂಕದ ಹಿನ್ನೆಲೆ ಸಚಿವರ …
Read More »ವಿಧಾನಪರಿಷತ್ಗೆ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ
ಬೆಂಗಳೂರು: ವಿಧಾನಪರಿಷತ್ಗೆ ಸ್ಪರ್ಧಿಸಿದ್ದ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಎಂಟಿಬಿ ನಾಗರಾಜ್, ಆರ್ ಶಂಕರ್, ಸುನಿಲ್ ವಲ್ಯಾಪುರೆ, ಪ್ರತಾಪ್ ಸಿಂಹ ನಾಯಕ್, ಕಾಂಗ್ರೆಸ್ನ ಹರಿಪ್ರಸಾದ್, ನಸೀರ್ ಅಹ್ಮದ್ ಮತ್ತು ಜೆಡಿಎಸ್ನ ಗೋವಿಂದರಾಜು ಅವಿರೋಧ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಹೆಚ್.ವಿಶ್ವನಾಥ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಟಿಕೆಟ್ ತಪ್ಪಿತ್ತು. ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಏಳು ಮಂದಿಯಷ್ಟೇ ಕಣದಲ್ಲಿ ಇದ್ದ ಕಾರಣ ಎಲ್ಲರೂ ಅವಿರೋಧ ಆಯ್ಕೆ ಆಗಿದ್ದಾರೆ.
Read More »……..ಮೇಲ್ಮನೆಗೆ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ, ಅಧಿಕೃತ ಘೋಷಣೆ
ಬೆಂಗಳೂರು, ಜೂ.22-ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸದಸ್ಯ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಕಣದಲ್ಲಿ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳಾದ ಆರ್.ಶಂಕರ್, ಎಂಟಿಬಿ ನಾಗರಾಜು, ಕೆ.ಪ್ರತಾಪಸಿಂಹ ನಾಯಕ್, ಸುನೀಲ್ ವಲ್ಯಾಪುರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ನಸೀರ್ ಅಹ್ಮದ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರ ವಿಧಾನ ಪರಿಷತ್ ಚುನಾವಣೆಗೆ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಇಂದು ಮಧ್ಯಾಹ್ನದವರೆಗೂ ಕಾಲಾವಕಾಶ ವಿತ್ತು. ಅಂತಿಮವಾಗಿ …
Read More »ಮತ್ತೆ ಸಂಪುಟ ವಿಸ್ತರಣೆ ಆಗತ್ತಾ?…
ಬೆಂಗಳೂರು,ಜೂ.22- ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯಾಗಬೇಕೆಂಬ ಕೂಗು ಮತ್ತೆ ಬಿಜೆಪಿಯಲ್ಲಿ ಕೇಳಿಬಂದಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇವರಲ್ಲಿ ನಾಲ್ವರು ಬಿಜೆಪಿಯವರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಲಿವರುವ ಎಂಟಿಬಿ ನಾಗರಾಜ್, ಆರ್. ಶಂಕರ್ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆಯೇ? ಎಂಬುದು ಯಕ್ಷಪ್ರಶ್ನೆಯಾಗಿದೆ. ಸಂಪುಟದಲ್ಲಿ ಸದ್ಯ 5 ಸಚಿವ ಸ್ಥಾನಗಳು ಖಾಲಿ ಇವೆ. ಬಿಜೆಪಿಯ ಕೆಲವು ಶಾಸಕರು ಆಕಾಂಕ್ಷಿಗಳು ಎಂಬುದು ಗುಟ್ಟಾಗಿ ಉಳಿದಿಲ್ಲ. ಈಗ …
Read More »ದಸರಾ ವರೆಗೂ ಶಾಲಾ ಕಾಲೇಜಿಗೆ ರಜೆ..
ಬೆಂಗಳೂರು,ಜೂ.22- ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹಾಗೂ ಸಾವಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ದಸರಾವರೆಗೂ ಶಾಲಾಕಾಲೇಜುಗಳನ್ನು ತೆರೆಯದಿರಲು ಸರ್ಕಾರ ತೀರ್ಮಾನಿಸಿದೆ. ದಸರಾ ಹಬ್ಬ ಮುಗಿದ ನಂತರವೇ ಪದವಿ,ಪದವಿಪೂರ್ವ, ಪ್ರೌಢಶಾಲೆ, ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳನ್ನು ಪರಿಸ್ಥಿತಿಗನುಗುಣವಾಗಿ ಆರಂಭಿಸುವುದು ಹಾಗೂ ನರ್ಸರಿ ಶಾಲೆಗಳನ್ನು ಜನವರಿವರೆಗೂ ತೆರೆಯದಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಿದೆ ಸರ್ಕಾರಿ, ಅನುದಾನ ಹಾಗೂ ಅನುದಾನರಹಿತ ಶಾಲೆಗಳು 2020-21ನೇ ಸಾಲಿನ ಮೊದಲಾರ್ಧದ ಶೈಕ್ಷಣಿಕ ಅವಧಿಯನ್ನು …
Read More »ಸಿಲಿಕಾನ್ ಸಿಟಿಯಲ್ಲಿಗಲ್ಲಿ ಗಲ್ಲಿಗೂ ಸದ್ದಿಲ್ಲದೇ ಎಂಟ್ರಿಯಾಗ್ತಿದೆ,ಕಿಲ್ಲರ್ ಕೊರೊನಾ……..
ನಿಮ್ಹಾನ್ಸ್ ಬಾಗಿಲು ತಟ್ಟಿದ ಕೊರೊನಾ- ಆಸ್ಪತ್ರೆಯ ಐಸಿಯು ಕಂಪ್ಲೀಟ್ ಕ್ಲೋಸ್ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಕೊರೊನಾ ಅಟ್ಟಾಡಿಸ್ತಿದೆ. ಪರಿಸ್ಥಿತಿ ಬಿಗಡಾಯಿಸ್ತಿದ್ದು, ಗಲ್ಲಿ ಗಲ್ಲಿಗೂ ಈ ಹೆಮ್ಮಾರಿ ಸದ್ದಿಲ್ಲದೇ ಎಂಟ್ರಿಯಾಗ್ತಿದೆ. ನಿಮ್ಹಾನ್ಸ್ ಆಸ್ಪತ್ರೆಗೂ ಈ ಹೆಮ್ಮಾರಿ ಲಗ್ಗೆ ಇಟ್ಟಿದ್ದು, ಈ ವೈರಸ್ ನ ಆರ್ಭಟಕ್ಕೆ ಆಸ್ಪತ್ರೆಯ ಐಸಿಯು ವಾರ್ಡ್ ಕಂಪ್ಲೀಟ್ ಕ್ಲೋಸ್ ಆಗಿದೆ. ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಕೈ ಮೀರಿ ಹೋಗ್ತಿದೆ. ತಜ್ಞರು …
Read More »ಕೊರೊನಾ ಸಮಯದಲ್ಲಿ ಕೆಎಸ್ಆರ್ ಟಿಸಿ ಹೊಸ ಆದೇಶ……!
ಬೆಂಗಳೂರು: ಕೊರೊನಾ ಸಮಯದಲ್ಲಿ ಕೆಎಸ್ಆರ್ ಟಿಸಿ ಹೊಸ ಆದೇಶವನ್ನು ಹೊರಡಿಸಿ ಸಿಬ್ಬಂದಿಯ ಆಕ್ರೋಶಕ್ಕೆ ಗುರಿಯಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ಡಿಪೋ ನಿಗದಿತ ಆದಾಯ ತರುವಂತೆ ಆದೇಶ ಹೊರಡಿಸಿದೆ. ಕೊರೊನಾ ಆತಂಕದ ನಡುವೆಯೇ ಸಿಬ್ಬಂದಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಈಗಾಗಲೇ ಬಿಎಂಟಿಸಿ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ಸಿಬ್ಬಂದಿ ತಮ್ಮ ಒಂದು ಶಿಫ್ಟ್ ನಲ್ಲಿ ನಿಗದಿತ ಆದಾಯ ತರಬೇಕು. ಇಲ್ಲವಾದಲ್ಲಿ ಸಿಬ್ಬಂದಿಗೆ ಹಾಜರಾತಿ ನೀಡಲ್ಲ. ಡೀಸೆಲ್ ದರ ಏರಿಕೆಯ ನಷ್ಟ ತಪ್ಪಿಸಲು …
Read More »ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತ ಕೊರೊನಾ ವಾರಿಯರ್ಸ್ ಪೊಲೀಸರಿಗೂ ಸೋಂಕು ತಗುಲುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ. ಈ ಮೂಲಕ ಕೊರೊನಾ ವೈರಸ್ಗೆ ಇಲಾಖೆ ಮತ್ತಷ್ಟು ಸಿಬ್ಬಂದಿ ಒಳಗಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಏನು ಸೂಚನೆ?: 1. ಏನೇ ಸಮಸ್ಯೆ ಬಂದರೂ ಧೈರ್ಯವಾಗಿ ಎದುರಿಸಬೇಕು. ಗಾಬರಿಯಾಗಬೇಡಿ, …
Read More »ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಜತೆ ನಾನು ಯಾವುದೇ ಪೈಪೋಟಿ ನಡೆಸುವುದಿಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು, ಜೂ.21- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಜತೆ ನಾನು ಯಾವುದೇ ಪೈಪೋಟಿ ನಡೆಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷವೇ ಒಂದು ಶಕ್ತಿ. ನಾನು ಅಧ್ಯಕ್ಷ ಹುದ್ದೆಯಲ್ಲಿದ್ದರೆ ಸಿದ್ದರಾಮಯ್ಯನವರು ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿದ್ದಾರೆ. ಅವರ ಹಿರಿತನ ಹಾಗೂ ಅನುಭವವನ್ನು ನಾನು ಸಂಪೂರ್ಣವಾಗಿ ಗೌರವಿಸುತ್ತೇನೆ. ಅವರ ಜತೆ ನಾನು ಪೈಪೋಟಿಗಿಳಿಯುವುದಿಲ್ಲ ಎಂದು ಹೇಳಿದ್ದಾರೆ ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಅವರ ಈ …
Read More »