Breaking News

ಬೆಂಗಳೂರು

ಪರಿಷತ್ ಚುನಾವಣೆ ನಾಮಪತ್ರ ಸಲ್ಲಿಸಿದ , ಅಭ್ಯರ್ಥಿಗಳು………

ಬೆಂಗಳೂರು: ವಿಧಾನ ಪರಿಷತ್​ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪಸಿಂಹ ನಾಯಕ್, ಸುನಿಲ್ ವಲ್ಯಾಪುರೆ, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್​​ ಹಾಗೂ ಕಾಂಗ್ರೆಸ್​​ ಅಭ್ಯರ್ಥಿಗಳಾದ ಬಿ.ಕೆ ಹರಿಪ್ರಸಾದ್​ ಮತ್ತು ನಸೀರ್ ಅಹ್ಮದ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ನಾಲ್ವರು ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದರು. ಬಳಿಕ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಲ್ವರೂ ನಾಮಪತ್ರ …

Read More »

ಸಿ ಎಂ ಇಂದ ಮಾಸ್ಕ್ ದಿನ ಆಚರಣೆ…

; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ ಇಂದು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಮಾಸ್ಕ್ ಡೇ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಿಎಸ್​ ಯಡಿಯೂರಪ್ಪ, ಕೋವಿಡ್ ತಡೆಯಲು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಬೇಕು. ಇದನ್ನು ಪ್ರತಿ ಜಿಲ್ಲೆ, ತಾಲ್ಲೂಕಿನ ಕೇಂದ್ರಗಳಲ್ಲೂ ಆಚರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು. ಕೊರೋನಾ …

Read More »

Complete unlock – ರಾಜ್ಯದಲ್ಲಿ ಚಿತ್ರಮಂದಿರ, ಜಿಮ್, ಮೆಟ್ರೋ, ಈಜು ಇತ್ಯಾದಿ ಕ್ಷೇತ್ರಗಳಿಗೂ ಸಡಿಲಿಕೆ ಸಾಧ್ಯತೆ

ಬೆಂಗಳೂರು(ಜೂನ್ 17): ಸಿನಿಮಾ ಥಿಯೇಟರ್, ಪಬ್, ರೆಸ್ಟೋರೆಂಟ್, ಮೆಟ್ರೋ ಸಂಚಾರ, ವಿದೇಶಿ ರಫ್ತು, ಸ್ವಿಮ್ಮಿಂಗ್ ಫುಲ್ ಹಾಗೂ ಜಿಮ್…. ಹೀಗೆ  ಕೊರೋನಾ ಲಾಕ್ ಡೌನ್​ನಿಂದ ಅನ್ ಲಾಕ್​ಗೆ ಎದುರು ನೋಡ್ತಿರುವ ಈ ಕ್ಷೇತ್ರಗಳಿಗೆ ವಿನಾಯಿತಿ ಸಿಗಬಹುದು ಎಂಬ ನಿರೀಕ್ಷೆ ಈ ಬಾರಿ ಹುಸಿಯಾಗುವ ಸಾಧ್ಯತೆ ಇಲ್ಲ. ಈ ಕ್ಷೇತ್ರಗಳಿಗೆ ವಿನಾಯಿತಿ ಕೊಡಲು ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ ಎನ್ನಲಾಗಿದೆ.. ಇಂದು ವಿವಿಧ ರಾಜ್ಯಗಳ ಸಿಎಂ ಗಳ ಜೊತೆ ನಡೆದ …

Read More »

ಖಾಲಿ ಕಪ್‍ನಿಂದ ಏನೂ ಆಗಲ್ಲ, ಮೊದ್ಲು ನೀವ್ ಚೆನ್ನಾಗಿರಿ- ನಿತ್ಯಾ ಮೆನನ್

ಬೆಂಗಳೂರು: ಬಹುಭಾಷಾ ನಟಿ ನಿತ್ಯಾ ಮೆನನ್ ಲಾಕ್‍ಡೌನ್ ದಿನಗಳನ್ನು ಫೋಟೋ ಶೂಟ್ ಮೂಲಕ ಕಳೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಫೋಟೋ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಅಪ್‍ಡೇಟ್ ನೀಡುತ್ತಿದ್ದಾರೆ. ಇದೀಗ ಅವರ ಇನ್‍ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದೆ. ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್‍ವುಡ್‍ನಲ್ಲಿ ನಟಿಸಿದ್ದು ಕೆಲವೇ ಚಿತ್ರಗಳಾದರೂ ಕನ್ನಡವನ್ನು ಲೀಲಾಜಾಲವಾಗಿ ಮಾತನಾಡುತ್ತಾರೆ. ಕೇರಳ ಮೂಲದವರಾದರೂ ಕನ್ನಡದ ನಟಿಯರನ್ನೇ ನಾಚಿಸುವಂತೆ ಮಾತನಾಡುತ್ತಾರೆ, ಹಾಡು ಹೇಳುತ್ತಾರೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿರುವ ನಿತ್ಯಾ …

Read More »

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಕಲ ಸಿದ್ಧತೆ …………..

ಬೆಂಗಳೂರು, ಜೂ.18- ಕೊರೊನಾ ಸೋಂಕಿನ ಆತಂಕದ ನಡುವೆ ನಾಳೆ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಪಿಯು ಮಂಡಳಿ ಸಜ್ಜಾಗಿದೆ. ಮಾರ್ಚ್‍ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಕೋವಿಡ್-19 ನಿಂದಾಗಿ ಮುಂದೂಡಲ್ಪಟ್ಟಿತ್ತು. ಪರೀಕ್ಷೆ ನಡೆಸುವ ಬಗ್ಗೆ ಬೇಕು-ಬೇಡಗಳ ಚರ್ಚೆ ನಡೆಯುತ್ತಲೇ ಇದೆ. ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1116ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು , ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಸ್ಕ್‍ಕಡ್ಡಾಯವಾಗಿದ್ದು , ಪರೀಕ್ಷಾ …

Read More »

ವಿಧಾನಪರಿಷತ್‍ ಚುನಾವಣೆ ,ನಾಮಪತ್ರ ಸಲ್ಲಿಕೆ ಭರಾಟೆ ,,,,,,,,,,,,

ಬೆಂಗಳೂರು, ಜೂ.- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು  ನಾಮಪತ್ರ ಸಲ್ಲಿಸಲಿದ್ದಾರೆ. ವಿರೋಧ ಪಕ್ಷಗಳಾದ ಕಾಂಗ್ರೆಸ್‍ನ ಇಬ್ಬರು, ಜೆಡಿಎಸ್‍ನ ಒಬ್ಬ ಹಾಗೂ ಆಡಳಿತಾರೂಢ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು  ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂರು ಪಕ್ಷಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇದುವರೆಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ …

Read More »

ವೆಂಟಿಲೇಟರ್ ಕೊರತೆ, ಬೆಂಗಳೂರಿನ ಜನತೆಗೆ ಹೆಚ್ಚಿದ ಆತಂಕ..!

ಬೆಂಗಳೂರು, ಜೂ.17- ಬೆಂಗಳೂರು ಮಹಾನಗರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಸಾವಿನ ಸಂಖ್ಯೆಏರಿಕೆಯಾಗಿ, ಸೋಂಕಿತರ ಸಂಖ್ಯೆ ಕೂಡ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ತುರ್ತು ನಿಗಾಘಟಕಗಳ ಕೊರತೆ ಎದುರಾಗಿರುವುದರಿಂದ ಆತಂಕದ ಕಾರ್ಮೋಡ ಕವಿದಿದೆ. ಕೊರೊನಾಗೆ ಮತ್ತೆ ಮೂರು ಮಂದಿ ಬಲಿಯಾಗಿದ್ದಾರೆ. ಮಂಗಮ್ಮನಪಾಳ್ಯದ 65 ವರ್ಷದ ವ್ಯಕ್ತಿ ಮತ್ತು ಬೆಂಗಳೂರಿನಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಕಳೆದ 12ರಂದು ದಾಖಲಿಸಲಾಗಿತ್ತು. ನಿನ್ನೆ ರಾತ್ರಿ …

Read More »

ಸಹೋದರರನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ತಮ್ಮ ಅಂದರ್………….

ಬೆಂಗಳೂರು, ಜೂ.17- ಒಡಹುಟ್ಟಿದ ಇಬ್ಬರು ಸಹೋದರರನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ತಮ್ಮನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಬಂಧಿತ ಕೊಲೆ ಪ್ರಕರಣದ ಆರೋಪಿ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಎಸ್. ಅವರು ಈ ಸಂಜೆಗೆ ತಿಳಿಸಿದ್ದಾರೆ. ಈತ ತನ್ನ ಅಣ್ಣಂದಿರಾದ ಸಹದೇವ ಮತ್ತು ದಂಡಪಾಣಿ ಎಂಬುವರ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದನು. ಈ ಬಗ್ಗೆ ಪ್ರಕರಣ …

Read More »

ಬ್ರೇಕಿಂಗ್ : ಹರಿಪ್ರಸಾದ್ ಮತ್ತು ನಜೀರ ಅಹಮದ್ ಗೆ ಕಾಂಗ್ರೆಸ್ ಪರಿಷತ್ ಟಿಕೆಟ್ ಘೋಷಣೆ

ಬೆಂಗಳೂರು, ಜೂ.17- ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ವಿಧಾನ ಪರಿಷತ್‍ನ ಮಾಜಿ ಸದಸ್ಯ ನಜೀರ ಅಹಮದ್, ರಾಜ್ಯಸಭೆ ಮಾಜಿ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿ ಮಾದರಿಯಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೂಡ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೂಚಿಸಿದ ಹೆಸರಗಳನ್ನು ಹೊರತು ಪಡಿಸಿ ಬಿ.ಕೆ.ಹರಿಪ್ರಸಾದ್ ಅವರಿಗೆ ಹೈಕಮಾಂಡ್‍ಗೆ ಮಣೆ …

Read More »

507  ವೈದ್ಯರು ಬುಧವಾರ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.

ಬೆಂಗಳೂರು: ಹಲವು ಬಾರಿಯ ಮನವಿ ನಂತರವೂ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ 507  ವೈದ್ಯರು ಬುಧವಾರ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಕೋರಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಹಲವು ಬಾರಿ ಮನವಿ ಸಲ್ಲಿಸಿ, ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದರು. ಆದರೆ ಇದಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ರಾಜೀನಾಮೆ ನೀಡಲು ವೈದ್ಯರು ನಿರ್ಧರಿಸಿದ್ದಾರೆ. …

Read More »