ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶಹಬ್ಬಾಸ್ ಗಿರಿ ನೀಡಿದ್ದಾರೆ. ಪಿಎಸ್‌ಐ ತನಿಖೆ ಗಂಭೀರತೆ ಪಡೆದುಕೊಂಡಿದೆ. ಈ ಹಿಂದೆ ಇಂತಹ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬರುತ್ತಿದ್ದರು. ಈ ಕೇಸ್ ನಲ್ಲಿ ಆ ರೀತಿ ಆಗಿಲ್ಲ. ಸರ್ಕಾರ ಬಿಗುವಾಗಿ ತನಿಖೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಮತ್ತೆ ದಾರಿ ತಪ್ಪುವುದು ಬೇಡ. ಈ …
Read More »ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು
ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ದೇವೇಗೌಡರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ದೇವೇಗೌಡರ ಕಾಲುಮಟ್ಟಿ ನಮಸ್ಕರಿಸಲು ಮುಂದಾಗಿದ್ದು, ಈ ವೇಳೆ ದೇವೇಗೌಡರು ತಕ್ಷಣ ಯಡಿಯೂರಪ್ಪನವರ ಕೈ ಹಿಡಿದುಕೊಂಡಿದ್ದಾರೆ. ದೇವೇಗೌಡರಿಗೆ ಮಂಡಿ ನೋವು ಇದೆ. ನೆನಪಿನ ಶಕ್ತಿ ಚೆನ್ನಾಗಿದೆ. ಒಂದು ತಿಂಗಳ ಹಿಂದೆಯೇ ಅವರನ್ನು …
Read More »ಪಂಚಮಸಾಲಿ ಮೀಸಲಾತಿ ಬಗ್ಗೆ ಸದನದಲ್ಲಿ ಮತ್ತೆ ಪ್ರಸ್ತಾಪ ಮಾಡಿದ ಯತ್ನಾಳ್
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ಕುರಿತು ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದ ನಂತರ ಕಾನೂನು ಬದ್ದವಾಗಿ ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪಂಚಮಸಾಲಿ ಸಮುದಾಯ, ವಾಲ್ಮೀಕಿ ಸಮುದಾಯ, ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಅನೇಕ ಸಮುದಾಯಗಳು ಮೀಸಲಾತಿ ಹೆಚ್ಚಳದ ಬಗ್ಗೆ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಏನೇ ಕ್ರಮ ಕೈಗೊಂಡರೂ ಅದು ಕಾನೂನು ಬದ್ದವಾಗಿರಬೇಕು. ಹಾಗಾಗಿ ಯಾರಿಗೂ ಕೂಡ ಅನ್ಯಾಯವಾಗದಂತೆ ಕ್ರಮ …
Read More »ಸಂಚಾರಿ ಪೊಲೀಸ್ ಎಂದು ಹೇಳಿಕೊಂಡು ದಂಡ ವಸೂಲಿ ಮಾಡುತ್ತಿದ್ದ ಅರಣ್ಯ ಅಧಿಕಾರಿಗೆ ಸಾರ್ವಜನಿಕರಿಂದ ಥಳಿತ
ಬಳ್ಳಾರಿ: ಬಳ್ಳಾರಿ ವಿಭಾಗದ ಅರಣ್ಯ ಅಧಿಕಾರಿಯೊಬ್ಬರು ರಾಜ್ಯ ಅರಣ್ಯ ಇಲಾಖೆಗೆ ಮುಜುಗರ ಉಂಟು ಮಾಡುವಂತೆ ಮಾಡಿದ್ದು, ತಾನು ಬಳ್ಳಾರಿ ಸಂಚಾರಿ ಪೋಲೀಸರಂತೆ ಪೋಸು ಕೊಟ್ಟು, ವಾಹನ ಸವಾರರಿಂದ ಹಣ ವಸೂಲಿ ಮಾಡಿದ್ದಕ್ಕೆ ಸಾರ್ವಜನಿಕರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸ್ ಅಧಿಕಾರಿಯ ಬಗ್ಗೆ ಅನುಮಾನಗೊಂಡ ಸಾರ್ವಜನಿಕರು, ಆರೋಪಿ ಉಪ ವಲಯ ಅರಣ್ಯಾಧಿಕಾರಿಯನ್ನು ಹಿಡಿದ ಥಳಿಸಿದ ಘಟನೆ ಸೋಮವಾರ ಬಳ್ಳಾರಿ ನಗರದಲ್ಲಿ ವರದಿಯಾಗಿದೆ. ಆರೋಪಿ ಅಧಿಕಾರಿ ಭಾನುವಾರ ‘ಡ್ಯೂಟಿ’ಯಲ್ಲಿದ್ದು, ಹಲವು ವಾಹನ …
Read More »ಹಾಫ್ ಹೆಲ್ಮೆಟ್ ಧರಿಸುವ ಪೊಲೀಸರಿಗೆ ದಂಡ: ಮುಂದಿನ ದಿನಗಳಲ್ಲಿ ವಾಹನ ಸವಾರರಿಗೂ ಬಿಸಿ
ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸದಂತೆ ನಗರದ ಗಲ್ಲಿ-ಗಲ್ಲಿಗಳಲ್ಲಿಯೂ ಸಂಚಾರಿ ಪೊಲೀಸರು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಸಿಗ್ನಲ್, ಜಂಕ್ಷನ್, ಇನ್ನಿತರ ಆಯಕಟ್ಟಿನ ಸ್ಥಳಗಳಲ್ಲಿ ಐಎಸ್‌ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸುವಂತೆ ಬೈಕ್ ಸವಾರರಿಗೆ ತಿಳಿ ಹೇಳುತ್ತಿದ್ದಾರೆ. ಆದರೆ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವಂತೆ ಹೇಳುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನಿಯಮ ಉಲ್ಲಂಘಿಸುತ್ತಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿರೋಧ ಅಳಿಸಿ ಹಾಕಲು ಪೊಲೀಸ್ ಇಲಾಖೆ ಲಾ ಅಂಡ್ …
Read More »ಕರ್ನಾಟಕ ಕೈಗಾರಿಕಾ ವಿವಾದ ಮಸೂದೆ 2020 ಹಿಂಪಡೆದ ಸರ್ಕಾರ
ಬೆಂಗಳೂರು: ಕರ್ನಾಟಕ ಕೈಗಾರಿಕಾ ವಿವಾದ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ 2020ನ್ನು ಸರ್ಕಾರ ವಾಪಸ್ ಪಡೆದಿದೆ. ನಿನ್ನೆ(ಸೋಮವಾರ) ವಿಧಾನಸಭೆಯಲ್ಲಿ ಈ ಮಸೂದೆಯನ್ನು ಹಿಂಪಡೆಯಲಾಯಿತು. ಕೈಗಾರಿಕಾ ವಿವಾದ ಮಸೂದೆ ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿತ್ತು. ಆದರೆ ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ ಬಿದ್ದು ಹೋಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಈ ಮಸೂದೆಯನ್ನು ಪರಿಷತ್ನಲ್ಲಿ ವಿರೋಧಿಸಿದ್ದರು. ರಾಜ್ಯದಲ್ಲಿ ವಹಿವಾಟನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕವನ್ನು ತಂದಿತ್ತು. ತಿದ್ದುಪಡಿ ವಿಧೇಯಕ …
Read More »ಭ್ರಷ್ಟಾಚಾರ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್ವೈ
ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠ ಸೋಮವಾರ ಪ್ರಕರಣದ ವಿಚಾರಣೆ ನಡೆಸಿದೆ. ಪ್ರಕರಣದ ಹಿನ್ನೆಲೆ: ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ …
Read More »ನಾನು, ಅಧ್ಯಕ್ಷರು ಬಹಳ ಪ್ರೀತಿ ವಿಶ್ವಾಸದಿಂದಿದ್ದೇವೆ: ದೇಶಪಾಂಡೆ
ಬೆಂಗಳೂರು : ನಾನು ಅಧ್ಯಕ್ಷರು ಬಹಳ, ಪ್ರೀತಿ ವಿಶ್ವಾಸದಿಂದಿದ್ದೇವೆ. ಎಲ್ಲರ ಸಹಕಾರದಿಂದ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇಂತಹ ಯಾವುದೇ ಊಹಾಪೋಹಗಳಿಲ್ಲ. ಅವರ ಉದ್ದೇಶ ಭಾರತ್ ಜೋಡೋ ಕಾರ್ಯಕ್ರಮ ಯಶಸ್ವಿಯಾಗಬೇಕೆಂಬುದಾಗಿದೆ. ಎಲ್ಲ ಕಡೆಯಿಂದ ನಮ್ಮ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮಕ್ಕೆ ಬರಬೇಕು. ಇದನ್ನು ಯಶಸ್ವಿಗೊಳಿಸಬೇಕೆಂದು ಹೇಳಿದ್ದಾರೆ ಎಂದರು. ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗಳಿಗೆ ಬೇರೆ ಅರ್ಥ …
Read More »ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ
*ಬೆಂಗಳೂರು*: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್‍ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್‍ಎಫ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್‍ಎಸ್‍ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ ಆರಂಭಗೊಂಡು ಹಂತ-ಹಂತವಾಗಿ 13 ಜಿಲ್ಲೆಗಳನ್ನು ಒಳಗೊಂಡ 55,600 ಅಂಗನವಾಡಿ ಕೇಂದ್ರಗಳಿಂದ …
Read More »ವಿಮ್ಸ್ ಅವಘಡ; ಸಾವಿನ ಹೊಣೆ ಸರ್ಕಾರವೇ ಹೊರಲಿ, ಕಾಂಗ್ರೆಸ್ ಆಗ್ರಹ
ಬೆಂಗಳೂರು: ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ವಿಮ್ಸ್) ಚಿಕಿತ್ಸೆಗೆ ದಾಖಲಾಗಿದ್ದ ಮೂವರು ರೋಗಿಗಳು ವಿದ್ಯುತ್ ಪೂರೈಕೆಯಲ್ಲಿನ ವ್ಯತ್ಯಯದಿಂದ ವೆಂಟಿಲೇಟರ್ ಸ್ಥಗಿತಗೊಂಡು ಮೃತ ಪಟ್ಟಿರುವ ಪ್ರಕರಣ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿತು. ರೋಗಿಗಳ ಸಾವಿನ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತು. ವಿಧಾನಸಭೆಯಲ್ಲಿ ಗುರುವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ವಿಮ್ಸ್‌ನಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದ ಅವಧಿಯಲ್ಲಿ ಜನರೇಟರ್ ಕೂಡ ಕಾರ್ಯನಿರ್ವಹಿಸಿಲ್ಲ. ಈ ಅವಧಿಯಲ್ಲಿ ಮೌಲಾ ಹುಸೇನ್ …
Read More »