Breaking News

ಬೆಂಗಳೂರು

ಕೊರೊನಾ ಸಮಯದಲ್ಲಿ ಕೆಎಸ್‍ಆರ್ ಟಿಸಿ ಹೊಸ ಆದೇಶ……!

ಬೆಂಗಳೂರು: ಕೊರೊನಾ ಸಮಯದಲ್ಲಿ ಕೆಎಸ್‍ಆರ್ ಟಿಸಿ ಹೊಸ ಆದೇಶವನ್ನು ಹೊರಡಿಸಿ ಸಿಬ್ಬಂದಿಯ ಆಕ್ರೋಶಕ್ಕೆ ಗುರಿಯಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ಡಿಪೋ ನಿಗದಿತ ಆದಾಯ ತರುವಂತೆ ಆದೇಶ ಹೊರಡಿಸಿದೆ. ಕೊರೊನಾ ಆತಂಕದ ನಡುವೆಯೇ ಸಿಬ್ಬಂದಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಈಗಾಗಲೇ ಬಿಎಂಟಿಸಿ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ಸಿಬ್ಬಂದಿ ತಮ್ಮ ಒಂದು ಶಿಫ್ಟ್ ನಲ್ಲಿ ನಿಗದಿತ ಆದಾಯ ತರಬೇಕು. ಇಲ್ಲವಾದಲ್ಲಿ ಸಿಬ್ಬಂದಿಗೆ ಹಾಜರಾತಿ ನೀಡಲ್ಲ. ಡೀಸೆಲ್ ದರ ಏರಿಕೆಯ ನಷ್ಟ ತಪ್ಪಿಸಲು …

Read More »

ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತ ಕೊರೊನಾ ವಾರಿಯರ್ಸ್ ಪೊಲೀಸರಿಗೂ ಸೋಂಕು ತಗುಲುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ. ಈ ಮೂಲಕ ಕೊರೊನಾ ವೈರಸ್‍ಗೆ ಇಲಾಖೆ ಮತ್ತಷ್ಟು ಸಿಬ್ಬಂದಿ ಒಳಗಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಏನು ಸೂಚನೆ?: 1. ಏನೇ ಸಮಸ್ಯೆ ಬಂದರೂ ಧೈರ್ಯವಾಗಿ ಎದುರಿಸಬೇಕು. ಗಾಬರಿಯಾಗಬೇಡಿ, …

Read More »

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಜತೆ ನಾನು ಯಾವುದೇ ಪೈಪೋಟಿ ನಡೆಸುವುದಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.21- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಜತೆ ನಾನು ಯಾವುದೇ ಪೈಪೋಟಿ ನಡೆಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷವೇ ಒಂದು ಶಕ್ತಿ. ನಾನು ಅಧ್ಯಕ್ಷ ಹುದ್ದೆಯಲ್ಲಿದ್ದರೆ ಸಿದ್ದರಾಮಯ್ಯನವರು ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿದ್ದಾರೆ. ಅವರ ಹಿರಿತನ ಹಾಗೂ ಅನುಭವವನ್ನು ನಾನು ಸಂಪೂರ್ಣವಾಗಿ ಗೌರವಿಸುತ್ತೇನೆ. ಅವರ ಜತೆ ನಾನು ಪೈಪೋಟಿಗಿಳಿಯುವುದಿಲ್ಲ ಎಂದು ಹೇಳಿದ್ದಾರೆ   ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಅವರ ಈ …

Read More »

ಯಡಿಯೂರಿನಲ್ಲಿ ಸಿಎಂ ಕುಟುಂಬದವರಿಂದ ವಿಶೇಷ ಪೂಜೆ …………

ಕುಣಿಗಲ್,ಜೂ.21-ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮನೆದೇವರಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಜಾನೆಯಿಂದಲೇ ವಿಶೇಷ ಪೂಜೆಯಲ್ಲಿ ತೊಡಗಿದರು. ನಿನ್ನೆಯೇ ಯಡಿಯೂರಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ತಂಗಿದ್ದ ಕುಟುಂಬ ಸದಸ್ಯರು ಹಲವು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೃಶ್ಚಿಕ ರಾಶಿಗೆ ಅಶುಭ ಫಲವೆಂದು ಶಾಂತಿಗಾಗಿ ಜೋತಿಷ್ಯರ ಸಲಹೆಯಂತೆ ಸಿಎಂ ಕಿರಿಯ ಪುತ್ರ ವಿಜಯೇಂದ್ರ ದಂಪತಿ ಹೋಮ ಹನವನದಂತಹ ವಿಶೇಷ ಪೂಜೆಗಳನ್ನು ನಡೆಸಿದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರಿನಲ್ಲೇ ಇದ್ದು, …

Read More »

ಅಮಾವಾಸ್ಯೆ ದಿನ ಭೀಕರ ಅಪಘಾತದಲ್ಲಿ ಮೂವರು ಸಾವು- ವ್ಹೀಲಿಂಗ್ ವೇಳೆ ಡಿಕ್ಕಿ ಶಂಕೆ….

ಬೆಂಗಳೂರು: ಅಮಾವಾಸ್ಯೆ ದಿನ ಭೀಕರ ಸಂಭವಿಸಿ ಮೂವರು ಯುವಕರು ಧಾರುಣ ಸಾವು ಕಂಡ ಘಟನೆ ಯಲಹಂಕದ ಜೆಕೆವಿಕೆ ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ಮಹಮ್ಮದ್ ಆದಿ ಆಯಾನ್ (16), ಮಾಜ್ ಅಹಮ್ಮದ್ ಖಾನ್(17) ಹಾಗೂ ಸಯ್ಯದ್ ರಿಯಾಜ್ (22) ಮೃತ ದುರ್ದೈವಿಗಳು. ವ್ಹೀಲಿಂಗ್ ಮಾಡುವ ವೇಳೆ ಬೈಕ್ ಮುಖಾ ಮುಖಿ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಯುವಕರು ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದರು. ಈ ವೇಳೆ ವೇಗವಾಗಿದ್ದ …

Read More »

ಜೂನ್ 21 ರಿಂದ 25ರವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಬೆಂಗಳೂರು: ಈಗಾಗಲೇ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದೆ. ಹೀಗಾಗಿಯೇ ಕಳೆದ ಮೂರು ವಾರಗಳಿಂದ ಜೋರು ಮಳೆಯಾಗುತ್ತಿದೆ. ಇತ್ತೀಚೆಗಂತೂ ಸುರಿದ ಭಾರೀ ಮಳೆಗೆ ಶಿವಮೊಗ್ಗದ ಗಾಜನೂರು ಸೇರಿದಂತೆ ಇತರ ಜಲಾಶಯಗಳು ಭರ್ತಿಯಾಗಿವೆ. ಇದರ ಪರಿಣಾಮ ನೀರಿನ ಪ್ರಮಾಣವೂ ಹೆಚ್ಚಾಗಿದೆ. ಹೀಗಿರುವಾಗಲೇ ರಾಜ್ಯ ಹವಾಮಾನ ಇಲಾಖೆ ಮಳೆ ಕುರಿತಾದ ಮತ್ತೊಂದು ಮಹತ್ತರ ಮಾಹಿತಿ ನೀಡಿದೆ.ಹೌದು, ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 21 ರಿಂದ 25ರವರೆಗೆ …

Read More »

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ರವಿಶಂಕರ್ ಆಶ್ರಮ, ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲ ಒಳಾಂಗಣ ಕ್ರೀಡಾಂಗಣಗಳನ್ನು ರೋಗ ಲಕ್ಷಣವಿಲ್ಲದ ಕೊರೊನಾ ಸೋಂಕಿತರ ಚಿಕಿತ್ಸಾ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿವೆ. ಖಾಸಗಿ ಆಸ್ಪತ್ರೆಯಲ್ಲೂ ಕೊರೊನಾ ಚಿಕಿತ್ಸೆ ನೀಡಲು ನಿರ್ಧಾರ ಮಾಡಲಾಗಿದೆ. ಖಾಸಗಿ …

Read More »

ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಇಲ್ಲ- ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ಕ್ವಾರಂಟೈನ್ ಮೊಹರು ಅಳಿಸಿ ಪರೀಕ್ಷೆಗೆ ಹಾಜರಾಗಿದ್ದಾಳೆಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇದು ಸತ್ಯಕ್ಕೆ ದೂರವಾಗಿದೆ. ಈಗಾಗಲೇ ವಿದ್ಯಾರ್ಥಿನಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. ಹಾಗಾಗಿ ಆಕೆ ಪರೀಕ್ಷೆ ಬರೆದ ಕೊಠಡಿಯಲ್ಲಿ ಹಾಜರಿದ್ದ …

Read More »

ಸೂರ್ಯ ಗ್ರಹಣ: ರಾಜ್ಯದ ವಿವಿಧ ದೇವಸ್ಥಾನದಲ್ಲಿ ಪೂಜಾ ಆಚರಣೆಗಳು ಹೀಗಿರಲಿವೆ

ಬೆಂಗಳೂರು : ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣಕ್ಕೆ ಸಾಕ್ಷಿಯಾಗಲಿದೆ ನಭೋಮಂಡಲ. 18 ವರ್ಷದ ಬಳಿಕ ಈ ಗ್ರಹಣ ಸಂಭವಿಸುತ್ತಿದ್ದು, ಚೂಡಾಮಣಿ ಸೂರ್ಯ ಗ್ರಹಣ ಎಂದು ಕರೆಯುತ್ತಾರೆ. ಗ್ರಹಣಕ್ಕೆ ರಾಜ್ಯದ ಬೇರೆ ಬೇರೆ ದೇವಸ್ಥಾನಗಳು ಹೇಗೆ ತಯಾರಿ ನಡೆಸಿವೆ ಎಂಬುದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..! ಮಣ್ಣೆತ್ತಿನ ಅಮಾವಾಸ್ಯೆ ದಿನ ರಾಹುಗ್ರಸ್ಥ ಸೂರ್ಯ ಗ್ರಹಣ ಸಂಭವಿಸಲಿದೆ. ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗ್ರಹಣ ಸಂಬಂಧ ವಿಶೇಷ ಪೂಜೆಗಳನ್ನು …

Read More »

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳಿಗೆ ಸೂಚಿಸಿರುವ ಸರ್ಕಾರ, ಆಡಳಿತಾಧಿಕಾರಿಗಳ ಅಧಿಕಾರಗಳು ಮತ್ತು ಕರ್ತವ್ಯಗಳ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಬೆಂಗಳೂರು, ಜೂ.20-ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ಯನ್ನು ನೇಮಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳಿಗೆ ಸೂಚಿಸಿರುವ ಸರ್ಕಾರ, ಆಡಳಿತಾಧಿಕಾರಿಗಳ ಅಧಿಕಾರಗಳು ಮತ್ತು ಕರ್ತವ್ಯಗಳ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗ್ರಾಮ ಪಂಚಾಯ್ತಿಗಳಿಗೆ ಗ್ರೂಪ್-ಎ ಕಿರಿಯ ಶ್ರೇಣಿ ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸೂಚಿಸಿದೆ. ನೇಮಕಗೊಳ್ಳುವ ಆಡಳಿತಾಧಿಕಾರಿಯು ಗ್ರಾಮ ಪಂಚಾಯಿತಿಯ ಎಲ್ಲಾ ಅಧಿಕಾರಗಳು …

Read More »