ಬೆಂಗಳೂರು: ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡ ಹಾಗೂ ಕಾಂಗ್ರೆಸ್ಸಿನಿಂದ ಹಿರಿಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರು ಹಿರಿಯ ನಾಯಕರ ಕಾಲೆಳೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ, ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ. ಆದರೆ ಈ ಮುತ್ಸದ್ದಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. …
Read More »ಮಾಲೀಕರ ಕಿರುಕುಳ- ಬೀದಿಗೆ ಬಿದ್ದ ಪಿಜಿ ನಿವಾಸಿಗಳು
ಬೆಂಗಳೂರು: ಕೊರೊನಾ ಹೆಮ್ಮಾರಿಗೆ ಇಡೀ ರಾಜ್ಯವೇ ತತ್ತರಿಸಿದೆ. ರಾಜ್ಯಕ್ಕೆ ರಾಜ್ಯವೇ ಲಾಕ್ ಡೌನ್ ನಿಂದ ಸ್ಥಬ್ಧಗೊಂಡಿತ್ತು. ಲಾಕ್ ಡೌನ್ ಸಡಿಲಿಕೆಯ ನಂತರ ಬೆಂಗಳೂರಿನಲ್ಲಿ ಪಿಜಿ ಮಾಲೀಕರು ಘರ್ಜಿಸ್ತಿದ್ದಾರೆ. ಪಿಜಿ ನಿವಾಸಿಗಳಿಗೆ ಹಣ ಪಾವತಿ ಮಾಡುವಂತೆ ಕಿರುಕುಳ ನೀಡ್ತಿದ್ದಾರೆ. ಪಿಜಿ ಮಾಲೀಕರ ಕಿರುಕುಳ ವಿರುದ್ಧ ಪಬ್ಲಿಕ್ ಟಿವಿ ಮೆಗಾ ಅಭಿಯಾನ ಶುರು ಮಾಡಿದೆ. ಹೌದು. ಕೊರೊನಾ ತಂದ ಅವಾಂತರ ಅಷ್ಟಿಷ್ಟಲ್ಲ. ಬೆಂಗಳೂರಿನ ಪಿಜಿಗಳಲ್ಲಿ ನೆಲೆಸಿದ್ದ ಯುವಕ-ಯುವತಿಯರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಪಿಜಿ …
Read More »ಮಹಿಳಾ ಸಂಘದಲ್ಲಿ ಎರಡು ಗುಂಪುಗಳ ನಡುವೆ ಜಡೆ ಜಗಳ……
ಬೆಂಗಳೂರು: ಕೊರೊನಾ ವೈರಸ್ ನಡುವೆ ಯಾವುದೇ ಮಾಸ್ಕ್ ಇಲ್ಲದೆ, ಮಹಿಳಾ ಸಂಘದಲ್ಲಿನ ಎರಡು ಗುಂಪುಗಳ ನಡುವೆ ಜಡೆ ಜಗಳ ನಡೆದಿದ್ದು, ಮಹಿಳೆಯರು ಬೀದಿಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಘದ ಅಧ್ಯಕ್ಷೆಯಿಂದ ಸದಸ್ಯ ಮಹಿಳೆ ಮೇಲೆ ಹಲ್ಲೆ ನಡೆದಿದೆ. ಸಂಘದ ಸಭೆ ಮಾಡುವ ವಿಚಾರದಲ್ಲಿ ಇಬ್ಬರೂ ಜಗಳಾಡಿಕೊಂಡಿದ್ದು, ಬೀದಿ ರಂಪಾಟ ಮಾಡಿದ್ದಾರೆ. ಗಲಾಟೆಯಲ್ಲಿ ಬೈರಮ್ಮ ಗಾಯಗೊಂಡಿದ್ದು, ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ …
Read More »ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ, ಶಾಸಕರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ, ಶಾಸಕರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಜೂನ್ 7ರ ಮಧ್ಯರಾತ್ರಿ ಕರೆ ಮಾಡಿದ ಅಪರಿಚಿತ, ಜೀವ ಬೆದರಿಕೆ ಹಾಗೂ ಅವಾಚ್ಯ ಪದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪೊಲೀಸ್ ಮಹಾ ನಿರ್ದೆಶಕ ಪ್ರವೀಣ್ ಸೂದ್ ಅವರಿಗೆ ದೂರು ಸಲ್ಲಿಸಿದ್ದಾರೆ. ಅಪರಿಚಿತ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತನಾಡಿ …
Read More »ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಸರ್ಕಾರದಿಂದ ಅನುಮತಿ ನಿರಾಕರಣೆ……….
ಬೆಂಗಳೂರು: ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೊರೊನಾ ಲಾಕ್‍ಡೌನ್ ಕಾರಣ ನೀಡಿ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ. ಜೂನ್ 14ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ 150 ನಾಯಕರ ಸಮ್ಮುಖದಲ್ಲಿ ರಾಜ್ಯ ಘಟಕದ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲು ಡಿಕೆ ಶಿವಕುಮಾರ್ ಮುಂದಾಗಿದ್ದರು. ಈ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರದ ಅನುಮತಿ ಕೇಳಿತ್ತು. ಡಿಕೆ ಶಿವಕುಮಾರ್ ಅವರೇ ಸಿಎಂ ಯಡಿಯೂರಪ್ಪನವರ ಬಳಿ ಅನುಮತಿ ಕೇಳಿದ್ದರು. ಜೂನ್ …
Read More »ಕರ್ನಾಟಕದಲ್ಲಷ್ಟೇ ಅಲ್ಲ ದೇಶಾದ್ಯಂತ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ:B.S.Y.
ಬೆಂಗಳೂರು,ಜೂ.9- ಕರ್ನಾಟಕದಲ್ಲಷ್ಟೇ ಅಲ್ಲ ದೇಶಾದ್ಯಂತ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಕೆಲವು ಶಿಫಾರಸ್ಸುಗಳನ್ನು ಮಾಡಲಾಗಿತ್ತು. ಬಿಜೆಪಿ ರಾಷ್ಟ್ರೀಯ ವರಿಷ್ಠರು ನನ್ನ ಜೊತೆ ಮಾತನಾಡಿ ಈ ಬಾರಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕೊಡಬೇಕಿದೆ ಎಂದು ಹೇಳಿದರು. ಅದರಂತೆ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ …
Read More »ರಂಗೇರಿದ ರಾಜ್ಯಸಭೆ ಚುನಾವಣೆ : ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಬೆಂಗಳೂರು, ಜೂ.9- ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸುವುದರೊಂದಿಗೆ ಚುನಾವಣಾ ಕಾವು ರಂಗೇರಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಬಿಜೆಪಿ ಅಭ್ಯರ್ಥಿಯಾಗಿ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರು ರಾಜ್ಯಸಭೆ ಚುನಾವಣಾ ಅಧಿಕಾರಿಯೂ ಆಗಿರುವ ಎಂ.ಕೆ.ವಿಶಾಲಾಕ್ಷಿ ಅವರಿಗೆ ತಮ್ಮ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿರುವ ಇಂದು ಯಾವುದೇ ಇತರೆ ಅಭ್ಯರ್ಥಿ …
Read More »ರಾಜ್ಯಸಭಾ ಟಿಕೇಟ್ ಕೊಟ್ಟಿದ್ದು ಪ್ರಭಾಕರ ಕೋರೆ, ರಮೇಶ ಕತ್ತಿ ಅವರಿಗೂ ಖುಷಿಯಾಗಿದೆ ಬೇಸರಗೊಂಡಿಲ್ಲ: ರಮೇಶ ಜಾರಕಿಹೊಳಿ
ಬೆಂಗಳೂರು: ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೇಟ್ ಕೊಟ್ಟಿದ್ದು ಪ್ರಭಾಕರ ಕೋರೆ, ರಮೇಶ ಕತ್ತಿ ಅವರಿಗೂ ಖುಷಿಯಾಗಿದೆ ಬೇಸರಗೊಂಡಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಬಿಜೆಪಿಯಿಂದ ರಾಜ್ಯಸಭಾ ಟಿಕೇಟ್ ಪ್ರಬಲ ಆಕಾಂಕ್ಷಿಗಳಾಗಿದ್ದ ರಮೇಶ್ ಕತ್ತಿ, ಉಮೇಶ್ ಕತ್ತಿ, ಪ್ರಭಾಕರ್ ಕೋರೆಗೆ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾರಿಗೂ ಅಸಮಾಧಾನ ಆಗಿಲ್ಲ, ಉಮೇಶ್ ಕತ್ತಿಗೆ ನಾಮಪತ್ರ ಬಳಿಕ ಭೇಟಿ ಮಾಡುತ್ತೇನೆ ಎಂದರು. ಸದ್ಯ ರಮೇಶ್ ಕತ್ತಿ, …
Read More »ಜೂ. 29 ರಂದು ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.
ಬೆಂಗಳೂರು: ಜೂ. 29 ರಂದು ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ನಸೀರ್ ಅಹ್ಮದ್, ಜಯಮ್ಮ, ಎಚ್.ಎಂ. ರೇವಣ್ಣ, ಶರವಣ, ವೇಣುಗೋಪಾಲ, ಡಿ.ಯು. ಮಲ್ಲಿಕಾರ್ಜುನ್, ಎನ್.ಎಸ್. ಬೋಸರಾಜು ಅವರಿಂದ ತೆರವಾಗುವ ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೂ. 11 ರಂದು ಅಧಿಸೂಸಚನೆ ಹೊರಡಿಸಲಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಜೂ.22 ರಂದು ನಾಮಪತ್ರ ಹಿಂಪಡೆಯಲು ಅವಕಾಶಕ್ಕೆ ದಿನಾಂಕ ನಿಗದಿಯಾಗಿದೆ. ಈ ಏಳು ಸ್ಥಾನಗಳ ಪೈಕಿ ಸದ್ಯದ ವಿಧಾನಸಭೆ ಬಲಾಬಲದ …
Read More »ಪ್ರವಾಸಿಗರೇ ಗಮನಿಸಿ- ಹೊಗೆನಕಲ್ ಜಲಪಾತಕ್ಕಿಲ್ಲ ಪ್ರವೇಶ
ಚಾಮರಾಜನಗರ: ಹೊಗೆನಕಲ್ ಜಲಪಾತವನ್ನ ಪ್ರವಾಸಿಗರಿಗೆ ಮುಕ್ತ ಮಾಡಲು ಯಾವುದೇ ಆದೇಶ ಇದುವರೆಗೂ ಬಂದಿಲ್ಲ. ಆದ್ದರಿಂದ ಜಲಪಾತ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರಿಸಲಾಗಿದೆ. ಭಾರತದ ನಯಾಗರ ಎಂದೇ ಕರೆಯುವ ಹೊಗೆನಕಲ್ ಜಲಪಾತಕ್ಕೆ ಪ್ರವಾಸಿಗರ ನಿರ್ಬಂಧ ಮುಂದುವರಿಸಲಾಗಿದೆ. ಈ ಬಗ್ಗೆ ಕಾವೇರಿ ವನ್ಯಜೀವಿ ಧಾಮದ ಡಿಎಫ್‍ಒ ಡಾ.ರಮೇಶ್ ಮಾತನಾಡಿ, ಹೊಗೆನಕಲ್ ಜಲಪಾತವನ್ನ ಪ್ರವಾಸಿಗರಿಗೆ ಮುಕ್ತ ಮಾಡಲು ಯಾವುದೇ ಆದೇಶ ಇದುವರೆಗೂ ಬಂದಿಲ್ಲ. ಹೀಗಾಗಿ ಸದ್ಯಕ್ಕೆ ಜಲಪಾತ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರಿಸಲಾಗಿದೆ ಎಂದು …
Read More »