Breaking News

ಬೆಂಗಳೂರು

ಪರೀಕ್ಷೆ ನಡೆಸದೆ ಎಲ್ಲರನ್ನೂ ಪಾಸ್ ಮಾಡುವಂತೆ ವಾಟಾಳ್ ಪ್ರತಿಭಟನೆ …………

ಬೆಂಗಳೂರು, ಜೂ.11- ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಆನ್‍ಲೈನ್ ತರಗತಿಗಳು ಬೇಡ ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ವಿಧಾನಸೌಧದ ಎದುರು ಇಂದು ವಿನೂತನ ಚಳವಳಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಂಧ್ರ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಮಾಡಲಾಗಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಮಾಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಫಾರ್ಮಸಿ, ಎಂಜಿನಿಯರಿಂಗ್, …

Read More »

ಅಧಿಕ ಶುಲ್ಕ ವಸೂಲಿ ಮಾಡುವ ಶಾಲೆಗಳಿಗೆ ಸುರೇಶ ಕುಮಾರ್ ವಾರ್ನಿಂಗ್………..

ಬೆಂಗಳೂರು, ಜೂ.11- ಯಾವುದೇ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವ ದೂರುಗಳು ಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಶುಲ್ಕ ಸಂಗ್ರಹ ಮಾಡಬಾರದು ಎಂದು ಶಿಕ್ಷಣ ಇಲಾಖೆ ಒಂದೂವರೆ ತಿಂಗಳ ಹಿಂದೆಯೇ ಆದೇಶ ಹೊರಡಿಸಿದೆ. ಈವರೆಗೂ ಯಾವ ಶಾಲೆಯ ವಿರುದ್ಧವೂ ಪೋಷಕರು ದೂರು ನೀಡಿಲ್ಲ. ಒಂದು ವೇಳೆ ದೂರು ಕೇಳಿ ಬಂದಿದ್ದೇಯಾದರೆ ಸರ್ಕಾರ …

Read More »

ಬಿಎಂಟಿಸಿ ಉದ್ಯೋಗಿಗೆ ಕೊರೊನಾಸೋಂಕುದೃಢ……

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ಬಿಎಂಟಿಸಿ ಉದ್ಯೋಗಿಯೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್-19 ಪರೀಕ್ಷೆಯ ರಿಪೋರ್ಟ್ ಪಾಸಿಟಿವ್ ಬರುತ್ತಿದ್ದಂತೆ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದರವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಲು ಆರಂಭಿಸಿದ್ದಾರೆ.   ಸೋಂಕಿತ ಬಿಎಂಟಿಸಿ ಉದ್ಯೋಗಿ ಮೂರು ದಿನಗಳ ರಜೆಯಲ್ಲಿದ್ದು, ಸ್ವಯಂ ಪ್ರೇರಿತವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದರು. ಜೂನ್ 10ರಂದು ಬಂದ ರಿಪೋರ್ಟ್ …

Read More »

ಚಿತ್ರೀಕರಣದಲ್ಲಿ ಭಾಗಿಯಾಗಲು ಅವಕಾಶ ಕೊಡಿ – ಹಿರಿಯ ಕಲಾವಿದರಿಂದ ಡಿಸಿಎಂಗೆ ಮನವಿ

ಬೆಂಗಳೂರು: ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಸಕ್ರಿಯರಾಗಿರುವ ಹಿರಿಯ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದಕ್ಕೆ ಅವಕಾಶ ಕೊಡಿಸಿ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. ಕಿರುತೆರೆಯ ಒಳಾಂಗಣ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ಕೊಟ್ಟಿದೆ. ಆದರೆ 60 ವರ್ಷ ಮೇಲ್ಪಟ್ಟ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಳ್ಳದಂತೆ ಷರತ್ತು ವಿಧಿಸಿದೆ. ಹೀಗಾಗಿ ಸೀರಿಯಲ್ ತಂಡ ಹಿರಿಯ ಕಲಾವಿದರನ್ನು ಬಿಟ್ಟು ಶೂಟಿಂಗ್ ಮಾಡುವುದರಲ್ಲಿ ನಿರತರಾಗಿದ್ದಾರೆ. ಹಿರಿಯ ಕಲಾವಿದರು ಶೂಟಿಂಗ್ ಇಲ್ಲದೇ, ಸಂಪಾದನೆಗೆ ಬೇರೆ ದಾರಿಯಿಲ್ಲದೇ …

Read More »

ಬೆಂಗ್ಳೂರಿನಲ್ಲಿ ಭಿಕ್ಷುಕನಿಗೆ ಕೊರೊನಾ- ಶವ ಪರೀಕ್ಷೆಯಲ್ಲಿ ಸೋಂಕು ಪತ್ತೆ………

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಮಾರಿ ತಾಂಡವಾಡುತ್ತಿದೆ. ಅಂತೆಯೇ ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಗೂ ಕೊರೊನಾ ಸೋಂಕು ಹರಡಿದೆ. ಇಂದು ಬೆಂಗಳೂರಿನಲ್ಲಿ ಕೊರೊನಾಗೆ ನಾಲ್ವರು ಬಲಿಯಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಮಂದಿ ಇಂದು ಮೃತಪಟ್ಟಿದ್ದಾರೆ. ಆದರೆ ಸೋಮವಾರ ಮೃತಪಟ್ಟಿದ್ದ ಅಪರಿಚಿತ ವ್ಯಕ್ತಿಯ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಆಂತಕಕ್ಕೆ ಎಡೆಮಾಡಿಕೊಟ್ಟಿದೆ. ಸೋಮವಾರ ನಾಗರಬಾವಿ ಬ್ರಿಡ್ಜ್ ನಿಂದ ಬಿದ್ದು ಅಪರಿಚಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. …

Read More »

ಬೆಂಗ್ಳೂರಲ್ಲಿ ಕೊರೊನಾಗೆ ನಾಲ್ವರು ಬಲಿ?…………..

ಬೆಂಗಳೂರು: ಸಿಲಿಕಾನ್ ಸಿಟಿಗೆ ಬೆಳ್ಳಂಬೆಳಗ್ಗೆ ಕೊರೊನಾ ಶಾಕ್ ನೀಡಿದ್ದು, ಮಾಹಾಮಾರಿಗೆ ಬೆಂಗಳೂರಿನಲ್ಲಿ ನಾಲ್ವರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಅಧಿಕೃತವಾಗಿ ಘೋಷಣೆ ಮಾಡಬೇಕಿದೆ. ಈ ಮೂಲಕ ನಗರದಲ್ಲಿ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ರೋಗಿ 4079 ಗದಗ ಮೂಲದ 54 ವರ್ಷ ವ್ಯಕ್ತಿ ಬೆಂಗಳೂರಿಗೆ ಪ್ರಯಾಣ ಬೆಳೆಸಿರುವ ಟ್ರಾವೆಲ್ ಹಿಸ್ಟರಿಯಿದೆ. ರೋಗಿ 4845- 61 ವರ್ಷದ ವ್ಯಕ್ತಿ, ರೋಗಿ 5340 ಬಳ್ಳಾರಿ ಮೂಲದ 58 ವರ್ಷದ ವ್ಯಕ್ತಿ ಅಂತರ್ ಜಿಲ್ಲೆ …

Read More »

ವೇಗವಾಗಿ ಬಂದು ಆಟೋ, ಕಾರುಗಳಿಗೆ ಕ್ರೇನ್ ಡಿಕ್ಕಿ- ಪಾದಚಾರಿ ಸಾವು…………..

ಬೆಂಗಳೂರು: ವೇಗವಾಗಿ ಬಂದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಆಟೋ, ಓಮಿನಿ ಹಾಗೂ ಕಾರಿಗೆ ಡಿಕ್ಕಿಯಾಗಿ ಓರ್ವ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಸುಂಕದಕಟ್ಟೆಯಲ್ಲಿ ನಡೆದಿದೆ. ಮುನಿಯಪ್ಪ ಸಾವನ್ನಪ್ಪಿದ್ದ ವ್ಯಕ್ತಿ. ಬ್ರೇಕ್ ಫೇಲ್ ಆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಭಯಾನಕ ಅಪಘಾತದ ದೃಶ್ಯ ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬ್ರೇಕ್ ಫೇಲ್  ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕ್ರೇನ್ ರಸ್ತೆ ಪಕ್ಕದಲ್ಲೇ …

Read More »

ಬೆಂಗ್ಳೂರಿನಲ್ಲಿ ಪೊಲೀಸರಿಗೆ ಕೊರೊನಾ ಕಂಟಕ- ನಗರದ 7 ಠಾಣೆಯ ಪೇದೆಗಳಿಗೆ ಸೋಂಕು……….

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾನೆ ಇದೆ. ಇದರ ಬೆನ್ನಲ್ಲೇ ಜನರನ್ನು ರಕ್ಷಣೆ ಮಾಡಬೇಕಾದ ಆರಕ್ಷಕರಿಗೆ ಕೊರೊನಾ ಪಾಸಿಟಿವ್ ಬರುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ನಗರದಲ್ಲಿ ಇಲ್ಲಿವರೆಗೂ ಏಳು ಪೊಲೀಸ್ ಠಾಣೆಯ ಪೊಲೀಸ್ ಪೇದೆಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಮತ್ತಷ್ಟು ಆತಂಕಕ್ಕೆ ದೂಡಿದೆ. ನಗರದ ಬಂಡೇಪಾಳ್ಯ ಪೊಲೀಸ್ ಠಾಣೆ, ಜೆಜೆ ನಗರ ಪೊಲೀಸ್ ಠಾಣೆ, ಜೆಬಿ ನಗರ ಪೊಲೀಸ್ ಠಾಣೆ, ಡಿಜಿ …

Read More »

ಅಮ್ಮ ನನ್ನ ಬಿಟ್ಟು ಹೋಗಿ ಇಂದಿಗೆ 26 ವರ್ಷ: ಜಗ್ಗೇಶ್………….

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ತನ್ನ ಬಾಲ್ಯ, ಕಷ್ಟದ ದಿನ, ಸಂತಸ, ನೋವು ಎಲ್ಲವನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಇದೀಗ ತಮ್ಮ ತಾಯಿಯ ಬಗ್ಗೆ ಬರೆದುಕೊಂಡಿದ್ದಾರೆ. ನಟ ಜಗ್ಗೇಶ್ ಅವರಿಗೆ ತಾಯಿ ನಂಜಮ್ಮ ಎಂದರೆ ತುಂಬಾ ಪ್ರೀತಿ. ನಂಜಮ್ಮ 1993ರಲ್ಲಿ ನಿಧನರಾಗಿದ್ದರು. ಜಗ್ಗೇಶ್ ಅವರ ತಾಯಿ ನಿಧನರಾಗಿ ಇಂದಿಗೆ 26 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಈ ಬಗ್ಗೆ ಟ್ವೀಟ್ ಮಾಡಿ …

Read More »

ಮಹೇಶ್ ಬಾಬುಗೆ ಟಕ್ಕರ್ ಕೊಡಲು ಟಾಲಿವುಡ್‍ಗೆ ಹೋಗ್ತಾರಾ ಕಿಚ್ಚ?

ಬೆಂಗಳೂರು: ಮಹೇಶ್ ಬಾಬು ಅಭಿನಯದ ಹೊಸ ಚಿತ್ರಕ್ಕೆ ವಿಲನ್ ಆಗಿ ಕಿಚ್ಚ ಸುದೀಪ್ ಅವರನ್ನು ಕರೆತರಲು ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ ಎಂಬ ಸುದ್ದಿಯೊಂದು ಟಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಹೌದು ಮಹೇಶ್ ಬಾಬು ಅಭಿನಯದ ಮುಂದಿನ ಚಿತ್ರ ಸರ್ಕಾರು ವಾರಿ ಪಾಟದಲ್ಲಿ ಕಿಚ್ಚನನ್ನು ವಿಲನ್ ಆಗಿ ನೋಡಲು ಚಿತ್ರತಂಡ ಬಯಸಿದೆ. ಚಿತ್ರದ ನಿರ್ದೇಶಕ ಪರುಶುರಾಮ್ ಅವರು ಮಹೇಶ್ ಬಾಬುಗೆ ಟಕ್ಕರ್ ಕೊಡಲು ಮತ್ತು ಆ ವಿಲನ್ ಪಾತ್ರಕ್ಕೆ ಜೀವ ತುಂಬಲು ಸುದೀಪ್ …

Read More »