ಬೆಳಗಾವಿ :ಕೊರೋನಾ ವೈರಸ್ ಮಾಹಾಮಾರಿಯಿಂದ ಇಡೀ ದೇಶವನ್ನು ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಲಾಕ್ ಡೌನ್ ನಿಂದ ಬಹುತೇಕ ಎಲ್ಲಾ ಉದ್ಯಮಗಳ ಮೇಲೆ ಎಫೆಕ್ಟ್ ತಟ್ಟಿದೆ. ಅತಿ ಹೆಚ್ಚು ಬೆಳಗಾವಿಯ ನೇಕಾರರಿಗೆ ಇದರಿಂದ ತೊಂದರೆಯಾಗಿದ್ದು, ಇನ್ನಿಲ್ಲದ ಸಂಕಷ್ಟ ಎದುರಾಗಿದೆ. ಕಷ್ಟದಲ್ಲಿ ಇರುವ ನೇಕಾರರಿಗೆ ನೆರವಾಗಲು ಎಲ್ಲಾ ಶಾಸಕರಿಗೆ ಬೆಳಗಾವಿ ದಕ್ಷಿಣ ಕ್ಷೇತ್ರ ಶಾಸಕ ಅಭಯ ಪಾಟೀಲ್ ಪತ್ರ ಬರೆದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 50 ಸಾವಿರಕ್ಕೂ ಹೆಚ್ಚು ಕುಟುಂಬಗಳು ನೇಕಾರಿಕೆ ನಂಬಿಕೊಂಡು …
Read More »ಕೋವಿಡ್-19 ವಿರುದ್ದ ಹೋರಾಟ: ಸಿಎಂ ಪರಿಹಾರ ನಿಧಿಗೆ ಹರಿದು ಬಂದ ಒಟ್ಟು ಹಣವೆಷ್ಟು ಗೊತ್ತೇ?
ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಇದರ ವಿರುದ್ಧ ಹೋರಾಡಲು ಇಡೀ ರಾಜ್ಯ ಹೆಣಗುತ್ತಿದೆ. ವೈದ್ಯರು, ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಹಲವರು ಹಗಲು ರಾತ್ರಿಯೆನ್ನದೇ ಕೊರೋನಾ ವೈರಸ್ ತಡೆಗೆ ಹೋರಾಡುತ್ತಿದ್ದಾರೆ. ಹೀಗೆಯೇ ಕೋವಿಡ್-19 ನಿಯಂತ್ರಣಕ್ಕೆ ತರಲು ಉದ್ಯಮಿಗಳು, ಸಿನಿಮಾ ನಟರು ತಮ್ಮ ಕೈಲಾದ ಆರ್ಥಿಕ ನೆರವು ನೀಡುತ್ತಿದ್ದಾರೆ. ಹೀಗೆ ಇದುವರೆಗೂ ರಾಜ್ಯದ ಸಿಎಂ ಪರಿಹಾರ ನಿಧಿಗೆ 267 ಕೋಟಿ ರೂ. ಹರಿದು ಬಂದಿದೆ. ಸಿಎಂ ಪರಿಹಾರ …
Read More »ಮನುಷ್ಯನ ಹುಟ್ಟು ಆಕಸ್ಮಿಕವಾದದ್ದು, ಸಾವು ಅನಿವಾರ್ಯ.: ಡಿಕೆ ಶಿವಕುಮಾರ್ ಕಂಬನಿ
ಬೆಂಗಳೂರು: ಮನುಷ್ಯನ ಹುಟ್ಟು ಆಕಸ್ಮಿಕವಾದದ್ದು, ಸಾವು ಅನಿವಾರ್ಯ. ಈ ಮರಣ ಎಂಬುದು ಯಾರ ಕೈಯಲ್ಲೂ ಇಲ್ಲ. ಯಮ ನಮಗೆ ಯಾವ ಕಾರಣಕ್ಕೂ ಕರುಣೆ ತೋರಿಸಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಕಾಲಿಕ ಮರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ಭಾನುವಾರ ರಾತ್ರಿಯೇ ಚಿರು ಅಂತಿಮ ದರ್ಶನ ಪಡೆದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರೋಗ್ಯವಾಗಿರುವಂತಹ ಒಬ್ಬ ಯುವಕ ಇಂದು ನಮ್ಮೊಂದಿಗಿಲ್ಲ …
Read More »‘ಅಣ್ಣ ಸದಾ ನನ್ನ ಜೊತೆಗಿರಬೇಕು, `ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗ್ಲಿ’”ದೃವ ಸರ್ಜಾ
ಬೆಂಗಳೂರು: ಹೃದಯಾಘಾತದಿಂದ ಮೃತಪಟ್ಟ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 1 ಗಂಟೆಗೆ ಕನಕಪುರ ರಸ್ತೆ ಬಳಿಯಿರೋ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ‘ಅಣ್ಣ ಸದಾ ನನ್ನ ಜೊತೆಗಿರಬೇಕು, `ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗ್ಲಿ’ ಎಂದು ಸಹೋದರ ದೃವ ಸರ್ಜಾ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕನಕಪುರ ರಸ್ತೆ ಬಳಿಯಿ ನೆಲಗೂಳಿ ಗ್ರಾಮದಲ್ಲಿ ತಮ್ಮ ಧ್ರುವ ಸರ್ಜಾರ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ರಿಯೆ …
Read More »ಚಿರು ಕೊರೊನಾ ಟೆಸ್ಟ್ ನೆಗೆಟಿವ್ – ಅಪೋಲೋ ವೈದ್ಯರಿಂದ ಮಾಹಿತಿ
ಬೆಂಗಳೂರು: ಇಂದು ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅವರಿಗೆ ಕೊರೊನಾ ಸೋಂಕು ನೆಗಟಿವ್ ಬಂದಿದೆ ಎಂದು ಜಯನಗರದ ಸಾಗರ್ ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇಂದು ಮಧ್ಯಾಹ್ನ 3.48ರ ಸುಮಾರಿಗೆ ಚಿರಂಜೀವಿ ಸರ್ಜಾ ಅವರು ಬೆಂಗಳುರಿನ ಅಪೊಲೋ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಈಗ ಈ ವಿಚಾರವಾಗಿ ಅಪೊಲೋ ಆಸ್ಪತ್ರೆ ವೈದ್ಯರು ಮೆಡಿಕಲ್ ವರದಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಮೂರು ಬಾರಿ ಸಿಪಿಆರ್ ಚಿಕಿತ್ಸೆಯಲ್ಲಿ ಯಶಸ್ವಿಯಾದರೂ ಚಿರು ಅವರಿಂದ ಸ್ಪಂದನೆ ಸಿಗಲಿಲ್ಲ …
Read More »ರಾಜ್ಯ ಪೊಲೀಸ್ ಮಹಾನಿರ್ದೇಶಕ(DGP) ಪ್ರವೀಣ್ ಸೂದ್‍ಗೆ ಇದೀಗ ಕೊರೊನಾ ಭೀತಿ ಎದುರಾಗಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ(DGP) ಪ್ರವೀಣ್ ಸೂದ್‍ಗೆ ಇದೀಗ ಕೊರೊನಾ ಭೀತಿ ಎದುರಾಗಿದೆ. ಬಳ್ಳಾರಿಯ ಪೊಲೀಸ್ ಸಿಬ್ಬಂದಿಗೆ ಶನಿವಾರ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇದರಿಂದಾಗಿ ಪ್ರವೀಣ್ ಸೂದ್ ಅವರಿಗೂ ಕೊರೊನಾ ಭೀತಿ ಎದುರಾಗಿದೆ. ಜಿಲ್ಲೆಯ ಹೊಸಪೇಟೆಯ ಮೂವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಪ್ರವೀಣ್ ಸೂದ್ ಬಳ್ಳಾರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. 40ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇವರ …
Read More »ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣಕ್ಕೆ ನಿಧನಕ್ಕೆ ನಟಿ ರಮ್ಯಾ ಸಂತಾಪ….
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣಕ್ಕೆ ನಿಧನಕ್ಕೆ ನಟಿ ರಮ್ಯಾ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಅವರು ಇಂದು ಹೃದಯಾಘತದಿಂದ ಸಾವನ್ನಪ್ಪಿದ್ದಾರೆ. ಈ ಸುದ್ದಿಯಿಂದ ಇಡೀ ಚಂದನವನಕ್ಕೆ ಸಿಡಿಲು ಬಡಿದಂತೆ ಆಗಿದೆ. 25ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿ ಮುಂದೆ ಒಳ್ಳೆಯ ಸಿನಿಮಾ ಮಾಡಬೇಕು ಎಂದು ಕನಸು ಕಂಡಿದ್ದ ಚಿರು ಸಾವಿಗೆ ಹಲವಾರು ನಟರು ಸಂತಾಪ ಸೂಚಿಸಿದ್ದಾರೆ. ಚಿರಂಜೀವಿ ಸರ್ಜಾ ಅವರೊಂದಿಗಿನ ಫೋಟೋವನ್ನು …
Read More »ಕೆಎಸ್ಆರ್‌ಟಿಸಿ ನೌಕರರ ವರ್ಗಾವಣೆಗೆ ಆನ್‍ಲೈನ್ ವ್ಯವಸ್ಥೆ…………….
ಬೆಂಗಳೂರು, ಜೂ.7- ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಸೋದರ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಆನ್‍ಲೈನ್ ವರ್ಗಾವಣೆಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಸಂಚಾರ ಮತ್ತು ತಾಂತ್ರಿಕ ಇಲಾಖೆಯ ಅಂತರ ವಿಭಾಗ, ವಿಭಾಗ ಮಟ್ಟದ ದರ್ಜೆ-3, ಮೇಲ್ವಿಚಾರಕೇತರ ನೌಕರರ ವರ್ಗಾವಣೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನೌಕರರ ವರ್ಗಾವಣೆಯನ್ನು ಖಾಲಿ ಸ್ಥಾನಗಳ ಲಭ್ಯತೆ ಹಾಗೂ ನಿಗಮದ ಆವಶ್ಯಕತೆಗೆ ಅನುಗುಣವಾಗಿ ಸರಳಗೊಳಿಸುವ ಉದ್ದೇಶದಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿ ನೌಕರರ ವರ್ಗಾವಣೆ ಮಾರ್ಗ …
Read More »ರಾಜ್ಯಸಭೆ ಚುನಾವಣೆಗೆ ನಾಳೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ..?
ಬೆಂಗಳೂರು, ಜೂ.7- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಈತನಕ ಯಾವುದೇ ಅಭ್ಯರ್ಥಿ ತನ್ನ ಉಮೇದುವಾರಿಕೆಯನ್ನು ಸಲ್ಲಿಸಿಲ್ಲ. ನಾಮಪತ್ರ ಸಲ್ಲಿಸಲು ಜೂ.9 ಕೊನೆಯ ದಿನವಾಗಿದ್ದು, ಬಹುತೇಕ ನಾಳೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ. ರಾಜ್ಯಸಭೆಯ ನಾಲ್ಕೂ ಸ್ಥಾನಗಳಿಗೆ ಜೂ.19ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಹೊರತುಪಡಿಸಿ ಇತರೆ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಇದುವರೆಗೆ ಅಧಿಕೃತವಾಗಿ ಪ್ರಕಟಿಸಿಲ್ಲ. ನಾಮಪತ್ರ ಸಲ್ಲಿಸಲು ಮಂಗಳವಾರ ಕಡೆಯ ದಿನವಾಗಿರುವುದರಿಂದ ನಾಳೆ ಬಹುತೇಕ ಅಭ್ಯರ್ಥಿಗಳು …
Read More »ಚಿಕಿತ್ಸೆ ಪಡೆದು ಬಿಲ್ ಕಟ್ಟಡ ವೃದ್ಧನನ್ನು ಕಟ್ಟಿ ಹಾಕಿದ ಆಸ್ಪತ್ರೆ ಸಿಬ್ಬಂದಿ..!
ಭೂಪಾಲ್, ಜೂ.7- ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಹಣ ಪಾವತಿಸಲು ವಿಳಂಬ ಮಾಡಿದ ಬಡ ವೃದ್ಧರೊಬ್ಬರನ್ನು ಆಸ್ಪತ್ರೆಯ ಬೆಡ್‍ಗೆ ಕಟ್ಟಿ ಹಾಕಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಭೂಪಾಲ್‍ನಲ್ಲಿ ನಡೆದಿದೆ. ಘಟನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಶಿವರಾಜ್‍ಸಿಂಗ್ ಚೌಹಾಣ್ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅನಾರೋಗ್ಯದಿಂದ ಚಿಕಿತ್ಸೆ ಪಡೆದ ವೃದ್ಧರೊಬ್ಬರು 11 ಸಾವಿರ ರೂ.ಗಳನ್ನು ಶಾಜಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ಪಾವತಿಸಬೇಕಿತ್ತು. ಹಣವಿಲ್ಲದ ಕಾರಣ ಪಾವತಿ ವಿಳಂಬವಾಯಿತು. ಆದರೆ, ಆಸ್ಪತ್ರೆ …
Read More »