Breaking News

ಬೆಂಗಳೂರು

ಮುಂಬೈನಿಂದ ಆಗಮಿಸಿದ ಪ್ರಯಾಣಿಕರು ಕ್ವಾರಂಟೈನ್ ಗೆ ಒಳಗಾಗದೇಪೊಲೀಸರ ಮುಂದೆಯೇ ಆಟೋ ಹತ್ತಿ ಎಸ್ಕೇಪ್

ಬೆಂಗಳೂರು: ಮುಂಬೈನಿಂದ ಆಗಮಿಸಿದ ಪ್ರಯಾಣಿಕರು ಕ್ವಾರಂಟೈನ್ ಗೆ ಒಳಗಾಗದೇ ಆಟೋ ಹತ್ತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುಂಬೈನಿಂದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಇಂದು 1700ಕ್ಕೂ ಹೆಚ್ಚು ಪ್ರಯಾಣಿಕರು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದು ಇಳಿದಿದ್ದು, ಅದರಲ್ಲಿ ಇಬ್ಬರು ಪ್ರಯಾಣಿಕರು ಪೊಲೀಸರ ಮುಂದೆಯೇ ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ. ರೈಲಿನಲ್ಲಿ ರಾಜ್ಯದ ಕಾರ್ಮಿಕರು ಆಗಮಿಸಿರಬಹುದು ಎಂಬ ಗೊಂದಲಕ್ಕೀಡಾದ ಪೊಲೀಸರು ಹಾಗೂ ಅಧಿಕಾರಿಗಳು ಇಬ್ಬರು ಪ್ರಯಾಣಿಕರ ತಪಾಸಣೆ ಕೂಡ …

Read More »

ಜಿಲ್ಲಾಧಿಕಾರಿ, ಜಿಪಂ ಇಸಿಒ, ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಬಿ.ಎಸ್. ಯಡಿಯೂರಪ್

ಬೆಂಗಳೂರು:  ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು  ತಾಲೂಕು ಕೇಂದ್ರಗಳಲ್ಲಿ  ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದ್ರು.  ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ,  ರಾಯಚೂರು ಮತ್ತು ಉಡುಪಿ   ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಪಂ ಇಸಿಒ, ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಮಾತನಾಡಿದರು. ಅಧಿಕಾರಿಗಳು  ತಾಲೂಕುಗಳನ್ನು ವಿಭಾಗಿಸಿಕೊಂಡು ತಾಲೂಕು  ಕೇಂದ್ರದಲ್ಲಿ  ಮೊಕ್ಕಾಂ …

Read More »

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಬದಲಾಗಿ,ರಮೇಶ್ ಜಾರಕಿಹೊಳಿ…..

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಬದಲಾಗಿ,ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ಅವರು ಈಗ ಬೆಳಗಾವಿ ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುತ್ತಾರೆ.ಕೋರೆ,ಕತ್ತಿ ಸಹೋದರರ ಕಿತ್ತಾಟದ ಬಳಿಕ ಜಾರಕಿಹೊಳಿ ಸಾಹುಕಾರ್ ಗೆ ಅದೃಷ್ಠ ಒಲಿದಿದೆ. ಮೈತ್ರಿ ಸರ್ಕಾರದ ಪತನದ ರೂವಾರಿ ರಮೇಶ್ ಜಾರಕಿಹೊಳಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅಲ್ಲದೇ ಬಿಜೆಪಿ ಸರ್ಕಾರದಲ್ಲಿ …

Read More »

ರಾಜ್ಯಕ್ಕೆ ಮುಂಬೈ, ದೆಹಲಿಯಿಂದ ಬಂದ ರೈಲುಗಳು……….

ಬೆಂಗಳೂರು: ರಾಜ್ಯಕ್ಕೆ ಇಂದು ಮುಂಬೈ ಮತ್ತು ದೆಹಲಿಯಿಂದ ರೈಲುಗಳು ಆಗಮಿಸಿದ್ದು, ಕರುನಾಡಿನಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಾ ಆತಂಕ ಮನೆ ಮಾಡಿದೆ. ಮುಂಬೈ ರೈಲಿನಲ್ಲಿ ಬಂದವರಿಗೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದು, ಆ ಬಳಿಕ ಮನೆಯಲ್ಲಿ ಏಳು ದಿನ ಹೋಮ್ ಕ್ವಾರಂಟೈನ್ ನಲ್ಲಿರಬೇಕು. ಗರ್ಭಿಣಿಯರು, 10 ವರ್ಷದೊಳಗಿನ ಮಕ್ಕಳು, ವೃದ್ಧರಿಗೆ ಸಾಂಸ್ಥಿಕ ಕ್ವಾರಂಟೈನ್‍ನಿಂದ ವಿನಾಯ್ತಿ ಸಿಗಲಿದೆ. ಕ್ವಾರಂಟೈನ್ ಅವಧಿಯಲ್ಲಿ ಎಲ್ಲರೂ ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕು. ಮುಂಬೈನಿಂದ …

Read More »

ಸರ್ಕಾರಿ ಶಾಲಾ ಮಕ್ಕಳ ಗೋಳು ಕೇಳೋವರು ಯಾರು?……..

ಬೆಂಗಳೂರು: ಕೊರೊನಾ ಲಾಕ್‍ಡೌನ್ ಎಫೆಕ್ಟ್ ಸರ್ಕಾರಿ ಶಾಲಾ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ. ಪಾಠ ಕೇಳುವ ಸಮಯದಲ್ಲಿ ಪಾಠದಿಂದ ವಂಚನೆಗೆ ಒಳಗಾಗ್ತಿವೆ. ಖಾಸಗಿ ಶಾಲೆಗಳಿಗೆ ಪ್ರೀತಿ ತೋರಿರುವ ಸರ್ಕಾರ, ಸರ್ಕಾರಿ ಶಾಲೆಗಳನ್ನೆ ಮರೆತಿದೆ. ಮಹಾ ಮಾರಿ ಕೊರೊನಾ ಹೊಡೆತ ಸರ್ಕಾರಿ ಶಾಲಾ ಮಕ್ಕಳಿಗೆ ಎಫೆಕ್ಟ್ ಜೋರಾಗಿಯೇ ಬಿದ್ದಿದೆ. ಮಕ್ಕಳ ಭವಿಷ್ಯದ ಮೇಲೆ ಕರಿನೆರಳು ಮೂಡುವಂತೆ ಮಾಡಿದೆ. ಶೈಕ್ಷಣಿಕ ವರ್ಷ ಪ್ರಾರಂಭ ಮಾಡಿ ಪಾಠ ಕೇಳಬೇಕಿದ್ದ ಮಕ್ಕಳು, ಮನೆಯಲ್ಲಿ ಕುಳಿತುಕೊಳ್ಳುವ ಸ್ಥಿತಿ …

Read More »

ದೈಹಿಕವಾಗಿ ಬಳಸಿಕೊಂಡು ಪ್ರಿಯಕರ ಮೋಸ – ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ

ಬೆಂಗಳೂರು: ಪ್ರಿಯಕರನಿಂದ ಮೋಸ ಹೋದ ಸ್ಯಾಂಡಲ್‍ವುಡ್‍ನ ಕಿರುತೆರೆ ನಟಿಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‍ನಲ್ಲಿ ನಡೆದಿದೆ. ಚಂದನಾ (29) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇದೇ ಮೇ 28 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವಕನ ಮೋಸಕ್ಕೆ ಬಲಿಯಾದ ನಟಿ ಸೆಲ್ಫಿ ವಿಡಿಯೋದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://youtu.be/OYEMtBeW6b0 ಮೃತ ಚಂದನಾ ಮತ್ತು ಪ್ರಿಯಕರ …

Read More »

ಒಂದ್ಕಡೆ ಸೈಕ್ಲೋನ್, ಮತ್ತೊಂದು ಕಡೆ ಮುಂಗಾರು- ವರುಣನ ಆರ್ಭಟ……….

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತ ಮತ್ತಷ್ಟು ಆತಂಕ ಸೃಷ್ಟಿಸುತ್ತಾ ಅನ್ನೋ ಆತಂಕ ಮನೆ ಮಾಡಿದೆ. ದಾವಣಗೆರೆಯ ಹರಿಹರ ಸೇರಿ ಹಲವೆಡೆ ವರುಣನ ಆರ್ಭಟ ಜೋರಾಗಿತ್ತು. ದಾವಣಗೆರೆಯ ಹೆಮ್ಮನಬೇತೂರು ಗ್ರಾಮದ ರಸ್ತೆಗಳಲ್ಲಿ ನದಿಯಂತೆ ನೀರು …

Read More »

ಭಾನುವಾರ ದಾಖಲೆ ಬರೆದಿದ್ದ ಕೊರೊನಾ ವೈರಸ್ ಇಂದು ಸೆಂಚುರಿ ಬಾರಿಸಿದೆ.

ಬೆಂಗಳೂರು: ಭಾನುವಾರ ದಾಖಲೆ ಬರೆದಿದ್ದ ಕೊರೊನಾ ವೈರಸ್ ಇಂದು ಸೆಂಚುರಿ ಬಾರಿಸಿದೆ. ಇವತ್ತು 187 ಮಂದಿಗೆ ಕೊರೊನಾ ತಗುಲಿದ್ದು, ಸೋಂಕಿತರ ಸಂಖ್ಯೆ 3408ಕ್ಕೇರಿಕೆಯಾಗಿದೆ. ಇಂದು ಪತ್ತೆಯಾದ ಬಹುತೇಕ ಸೋಂಕಿತರು ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.   ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಬೆಂಗಳೂರು 28, ಕಲಬುರಗಿ 24, ಮಂಡ್ಯ 15, ಉಡುಪಿ 73, ಹಾಸನ 16, ಬೀದರ್ 2, ಚಿಕ್ಕಬಳ್ಳಾಪುರ 5, ದಕ್ಷಿಣ ಕನ್ನಡ 4, ವಿಜಯಪುರ …

Read More »

ಬಿಬಿಎಂಪಿ ಸಹಾಯಕ ಆಯುಕ್ತರೂ ಮೂವರು ಅಧಿಕಾರಿಗಳಿಗೆ ಕೊರೊನಾ ಸಾಧ್ಯತೆ..!

ಬೆಂಗಳೂರು, ಜೂ.1- ಕೊರೊನಾ ಸೋಂಕಿತ ಬಿಬಿಎಂಪಿ ಸದಸ್ಯನೊಂದಿಗೆ ಸಂಪರ್ಕವಿರಿಸಿಕೊಂಡಿದ್ದ ಪಾಲಿಕೆಯ ಸಹಾಯಕ ಆಯುಕ್ತರೊಬ್ಬರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಲಿಕೆ ಸದಸ್ಯನ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಹಾಯಕ ಆಯುಕ್ತರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು. ಅವರ ಗಂಟಲ ದ್ರವ ಪರೀಕ್ಷೆಗೊಳಪಡಿಸಿದಾಗ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಬಿಬಿಎಂಪಿ ಸದಸ್ಯನಿಂದ ಸೋಂಕು ತಗುಲಿರುವ ಅಧಿಕಾರಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಓಡಾಡಿದ್ದರು ಹಾಗೂ ವಾರ್‍ರೂಮ್‍ನಲ್ಲೂ ಕೆಲಸ ಮಾಡಿದ್ದರು. ಅಧಿಕಾರಿಯೊಂದಿಗೆ ಪ್ರಾಥಮಿಕ …

Read More »

ದಿನೇ ದಿನೇ ಬೆಂಗ್ಳೂರಲ್ಲಿ ಏರಿಕೆ ಆಗ್ತಿದೆ ಸೋಂಕು …………

ಬೆಂಗಳೂರು: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಆರೋಗ್ಯಾಧಿಕಾರಿಗಳಿಗೆ ಮತ್ತು ಜನರಿಗೆ ಡೇಂಜರ್ ಅಲಾರಂ ಬಂದಿದೆ. ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂತು ಎಂಬ ಹೊತ್ತಲ್ಲೇ ಆಘಾತಕಾರಿ ಬೆಳವಣಿಗೆಯೊಂದು ಕಾಣಿತ್ತಿದೆ. ಬೆಂಗಳೂರಿನಲ್ಲಿ 8-10 ಬರುತ್ತಿದ್ದ ಪ್ರಕರಣಗಳು ಈಗ ದಿನಕ್ಕೆ 25-30 ಪ್ರಕರಣಗಳು ಬರಲು ಆರಂಭವಾಗುತ್ತಿವೆ. ಅದರಲ್ಲೂ ಹೊಸ ಏರಿಯಾಗಳಲ್ಲಿ ಕೊರೊನಾ ಪಾಸಿಟಿವ್ ಬರುತ್ತಿದೆ. ಈ ಮೂಲಕ ಕೊರೊನಾ ಪ್ರಕರಣಗಳು ಡೇಂಜರ್ ಅಲಾರಂ ಆಗಿವೆ. ಈ ಬೆಳವಣಿಗೆಯಿಂದ …

Read More »