Breaking News

ಬೆಂಗಳೂರು

ಬಿ.ಎಸ್.ಯಡಿಯೂರಪ್ಪ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾಗಿದ್ದಾರೆ………

ಬೆಂಗಳೂರು, ಜೂ.1- ತಮ್ಮ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಪ್ರತ್ಯೇಕ ಸಭೆ ನಡೆಸಿರುವ ಭಿನ್ನಮತೀಯರ ನಡೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾಗಿದ್ದಾರೆ. ಒಂದೆರಡು ದಿನಗಳಲ್ಲಿ ಶಾಸಕರು ಮತ್ತೆ ಸಭೆ ನಡೆಸಬಹುದೆಂಬ ಸುಳಿವು ದೊರೆತಿರುವ ಹಿನ್ನೆಲೆಯಲ್ಲಿ ಅಸಮಾಧಾನಿತ ಶಾಸಕರ ಜೊತೆ ಸಭೆ ನಡೆಸಿ ಅವರ ಬೇಕುಬೇಡುಗಳನ್ನು ಆಲಿಸಲಿದ್ದಾರೆ. ಮೂರ್ನಾಲ್ಕು ದಿನಗಳೊಳಗೆ ಯಡಿಯೂರಪ್ಪನವರು ತಮ್ಮ ನಿವಾಸ ಕಾವೇರಿಯಲ್ಲಿ ಶಾಸಕರ ಸಭೆ ನಡೆಸಲಿದ್ದು, ಕ್ಷೇತ್ರಗಳಿಗೆ ಬೇಕಾದ ಅನುದಾನ, ಅಧಿಕಾರಿಗಳ ವರ್ಗಾವಣೆ, ಮಂಜೂರಾಗಬೇಕಾದ …

Read More »

ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರೋರು ಪಾಲಿಸಬೇಕಾದ ನಿಯಮಗಳು

ಬೆಂಗಳೂರು: ಲಾಕ್‍ಡೌನ್ 5.Oನಲ್ಲಿ ಅಂತಾರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶವನ್ನು ನೀಡಿದೆ. ಒಂದು ವೇಳೆ ಅಗತ್ಯವಿದ್ದಲ್ಲಿ ರಾಜ್ಯಗಳು ಅಂತಾರಾಜ್ಯ ಪ್ರಯಾಣಿಕರ ಮೇಲೆ ನಿರ್ಬಂಧ ಹೇರುವ ಅವಕಾಶವನ್ನು ಕೇಂದ್ರ ನೀಡಿತ್ತು. ಇದೀಗ ಕರ್ನಾಟಕ ಹೊರ ರಾಜ್ಯದಿಂದ ಬರೋರು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳನ್ನು ಹೊರಡಿಸಿದೆ. 1. ಸೇವಾ ಸಿಂಧುವಿನಲ್ಲಿ ನೋಂದಣಿ: * ಕರ್ನಾಟಕ ಪ್ರವೆಶಿಸುವ ಮುನ್ನ ಪ್ರಯಾಣಿಯಕರು ಸೇವಾ ಸಿಂಧು ಪೋಟರ್ಲ್ ನಲ್ಲಿ ತಮ್ಮ ಪ್ರಾಥಮಿಕ ಮಾಹಿತಿಯನ್ನು ದಾಖಲಿಸಿರಬೇಕು. ಈ ಹಿಂದೆ ಇದ್ದಂತೆ ಸೇವಾ …

Read More »

ಕೊರೊನಾ ಬಾಧಿತ ಮುಂಬೈನಿಂದ ಇವತ್ತು ಬೆಂಗಳೂರಿಗೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಪ್ರಯಾಣ…….

ಬೆಂಗಳೂರು: ಕೊರೊನಾ ಸೋಂಕಿನ ಸರಣಿ ಸ್ಫೋಟ ಆಗುತ್ತಿರುವ ಬೆನ್ನಲ್ಲೇ ರಾಜ್ಯಕ್ಕೆ ಜೂನ್ ಆತಂಕ ಶುರುವಾಗಿದೆ. ಇವತ್ತಿನಿಂದ ಸೋಂಕು ಸುನಾಮಿ ನಗರಿ ಮುಂಬೈನಿಂದ ಕರ್ನಾಟಕಕ್ಕೆ ಎರಡು ರೈಲುಗಳು ಸಂಚರಿಸಲಿವೆ. ಕೊರೊನಾ ಬಾಧಿತ ಮುಂಬೈನಿಂದ ಇವತ್ತು ಬೆಂಗಳೂರಿಗೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಪ್ರಯಾಣ ಬೆಳೆಸುತ್ತಿದೆ. ಇವತ್ತು ಬೆಳಗ್ಗೆ 8.5ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್‍ನಿಂದ ಉದ್ಯಾನ್ ಎಕ್ಸ್‌ಪ್ರೆಸ್ ಹೊರಡಲಿದೆ. ಇದು ಕರ್ನಾಟಕದ ಪಾಲಿಗೆ ಅಕ್ಷರಶಃ ಕೊರೊನಾ ಎಕ್ಸ್‍ಪ್ರೆಸ್ ಆಗಿದೆ. ಯಾಕಂದರೆ ಈ ಉದ್ಯಾನ್ …

Read More »

ಜೂನ್ 8 ರಿಂದ ತೆರೆಯಲಿದೆ. ಮಾಲ್ ತೆರೆದರೂ ಸಿನಿಮಾ ಪ್ರದರ್ಶನ ನಡೆಯುವುದಿಲ್ಲ.

ಬೆಂಗಳೂರು: ಮಾರ್ಚ್ ತಿಂಗಳನಿಂದ ಬಂದ್ ಆಗಿದ್ದ ಶಾಪಿಂಗ್ ಮಾಲ್‍ಗಳು ಜೂನ್ 8 ರಿಂದ ತೆರೆಯಲಿದೆ. ಮಾಲ್ ತೆರೆದರೂ ಸಿನಿಮಾ ಪ್ರದರ್ಶನ ನಡೆಯುವುದಿಲ್ಲ. 2 ಹಂತಗಳಲ್ಲಿ ಮಾಲ್ ಓಪನ್‍ಗೆ ಸಮ್ಮತಿ ಸಿಗಲಿದ್ದು, ಮೊದಲ ಹಂತದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ ಷರತ್ತು ಏನಿರಬಹುದು? – ಒಂದು ಪಾಳಿಯಲ್ಲಿ ಶೇ.50ರಷ್ಟು ಸಿಬ್ಬಂದಿಗಷ್ಟೇ ಕೆಲಸಕ್ಕೆ ಅವಕಾಶ – ಶಾಪಿಂಗ್ ಮಾಲ್‍ಗಳಲ್ಲಿರುವ ಸೂಪರ್ ಮಾರ್ಕೆಟ್, ಎಲೆಕ್ಟ್ರಾನಿಕ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ – ಉಡುಪುಗಳು, …

Read More »

ಸ್ಯಾಂಡಲ್ ವುಡ್ ನ ಕನಸುಗಾರ , ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು 59ನೆ ಹುಟ್ಟುಹಬ್ಬ…..

ಬೆಂಗಳೂರು, ಮೇ 30- ಸ್ಯಾಂಡಲ್ ವುಡ್ ನ ಕನಸುಗಾರ , ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು 59ನೆ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ನನ್ನ ಅಭಿಮಾನಿಗಳು ಮನೆಯ ಬಳಿ ಬರುವುದು ಬೇಡ, ಎಲ್ಲರೂ ಮನೆಯಲ್ಲೇ ಇರಿ… ಸೇಫ್ ಆಗಿ ಇರಿ… ನಿಮ್ಮ ಆರೋಗ್ಯವೂ ಮುಖ್ಯ ನಿಮ್ಮ ಪ್ರೀತಿ, ವಿಶ್ವಾಸ , ಅಭಿಮಾನ ಸದಾ ನನ್ನ ಮೇಲೆ ಹೀಗೆ ಇರಲಿ ಮುಂದಿನ ವರ್ಷ 60ನೆ ವಸಂತಕ್ಕೆ ಕಾಲಿಡುತ್ತಿದ್ದೇನೆ ಅದ್ಧೂರಿಯಾಗಿ ಆಚರಿಸೋಣ ಎಂದು …

Read More »

BREAKING : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಮೇ 30- ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ 30 ಜಿಲ್ಲೆಗಳಲ್ಲಿ ಜಗಿಯುವ ತಂಬಾಕು ಪಾನ್ ಮಸಾಲ ಉತ್ಪನ್ನಗಳನ್ನು ರಾಜ್ಯ ಸರ್ಕಾರ ನಿಷೇಧ ಮಾಡಿದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಮಾತನಾಡಿ, ಇಂದು ವಿಶ್ವ ತಂಬಾಕು ದಿನವಾಗಿದ್ದು, ಇದರ ಅಂಗವಾಗಿ ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ ತಂಬಾಕು ಜಗಿದು ಉಗಿಯುವುದರಿಂದ ಸೋಂಕು ಹರಡುವ ಸಂಭವ ಹೆಚ್ಚಿದೆ. ಹೀಗಾಗಿ ತಂಬಾಕಿನ ಸಂಬಂಧಪಟ್ಟಂತೆ ಎಲ್ಲಾ ಉತ್ಪನ್ನಗಳನ್ನು ನಿಷೇಸಲಾಗಿದೆ ಎಂದರು. …

Read More »

“ಯಡಿಯೂರಪ್ಪ ಒಪ್ಪಿದರೆ ವಿಪಕ್ಷಗಳ 22 ಶಾಸಕರ ರಾಜೀನಾಮೆ ಕೊಡಿಸುತ್ತೇನೆ”

ಬೆಂಗಳೂರು, ಮೇ 30- ಸದ್ಯಕ್ಕೆ ನಮಗೆ ಬಹುಮತವಿದೆ. ನಾವು ವಿಪಕ್ಷಗಳ ಶಾಸಕರ ರಾಜೀನಾಮೆ ಕೆಲಸಕ್ಕೆ ಕೈ ಹಾಕುವುದಿಲ್ಲ. ನಮ್ಮ ಜತೆ ಬರಲು ಸಾಕಷ್ಟು ಶಾಸಕರು ತಯಾರಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಗೆ ನೀಡಿದರೆ 20 ರಿಂದ 22 ಜನ ಶಾಸಕರನ್ನು ರಾಜೀನಾಮೆ ಕೊಡಿಸುತ್ತೇನೆ. ಸದ್ಯಕ್ಕೆ ಬಹುಮತವಿರುವುದರಿಂದ ಆ ಕೆಲಸಕ್ಕೆ ಕೈ ಹಾಕುವುದಿಲ್ಲ ಬೆಳಗಾವಿ 3, ಬಿಜಾಪುರ …

Read More »

ಜನರ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಹಿಂಪಡೆದಿದೆ:B.S.Y.

ಬೆಂಗಳೂರು: ರಾಜ್ಯದ ಜನತೆಯ ಬೇಡಿಕೆ ಹಿನ್ನೆಲೆಯಲ್ಲಿ ಭಾನುವಾರ (ಮೇ 31 2020) ರಂದು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ವೈರಸ್‌ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್‌ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರ್ಕಾರ …

Read More »

ಕೊರೊನಾ ಇದ್ರೂ ಮನೆಯಿಂದ ಹೊರ ಬಾರದ ಪಾಷಾ-

ಬೆಂಗಳೂರು: ವಾರ್ಡ್ ನಂಬರ್ 135 ಪಾದರಾಯನಪುರದ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆದರೂ ಇಮ್ರಾನ್ ಪಾಷಾ ಮನೆಯಿಂದ ಹೊರಬರುತ್ತಿಲ್ಲ. ಇಮ್ರಾನ್ ಪಾಷಾಗೆ 158 ಜನ ಕಾಂಟ್ಯಾಕ್ಟ್ ಇದ್ದು, ಅದರಲ್ಲೂ 75 ಜನ ಪ್ರೈಮರಿ ಕಾಂಟ್ಯಾಕ್ಟ್ ಇದ್ದಾರೆ. ಉಳಿದವರೆಲ್ಲ ಸೆಕೆಂಡರಿ ಕಾಂಟ್ಯಾಕ್ಟ್ ಎಂದು ತಿಳಿದುಬಂದಿದೆ. ಹೀಗಾಗಿ ಶಾಸಕರು, ಅಧಿಕಾರಿಗಳು ಆಪ್ತರೆಲ್ಲ ಕ್ವಾರಂಟೈನ್ ಆಗುವ ಸಾಧ್ಯತೆ ಇದೆ. ಇಮ್ರಾನ್ ಪಾಷಾ ಕೊರೊನಾ ಪಾಸಿಟಿವ್ ಬಂದರೂ ಇನ್ನೂ ವಿಕ್ಟೋರಿಯಾ …

Read More »

ಶಾಪಿಂಗ್ ಮಾಡಲು ಭಾನುವಾರ ಒಂದೇ ದಿನ ಅವಕಾಶಭಾನುವಾರ ಕರ್ಫ್ಯೂ ತೆಗೆಯಲಾಗಿದೆ

ಬೆಂಗಳೂರು: ಶಾಪಿಂಗ್ ಮಾಡಲು ಭಾನುವಾರ ಒಂದೇ ದಿನ ಅವಕಾಶ ಇರುವುದು. ಹೀಗಾಗಿ ಖರೀದಿಗೆ ಹಾಗೂ ಸ್ನೇಹಿತರನ್ನ ಭೇಟಿಯಾಗಲು ಅವಕಾಶ ಬೇಕಿತ್ತು. ಅದಕ್ಕೆ ಭಾನುವಾರ ಕರ್ಫ್ಯೂ ತೆಗೆಯಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾನುವಾರ ಲಾಕ್ ಡೌನ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಸಿಎಂ ನಿರ್ಧಾರ ಸ್ವಾಗತಾರ್ಹ ಎಂದರು. ದುಡಿಯುವ ವರ್ಗಕ್ಕೆ ರಿಲ್ಯಾಕ್ಸ್ ಮಾಡಿಕೊಡಲು ಅನುಕೂಲವಾಗಿದೆ. ವಾರವೆಲ್ಲ ನೌಕರರು, ಉದ್ದಿಮೆದಾರರು ಕೆಲಸ ಮಾಡಿರುತ್ತಾರೆ. …

Read More »