ಬೆಂಗಳೂರು: ಶಾಪಿಂಗ್ ಮಾಡಲು ಭಾನುವಾರ ಒಂದೇ ದಿನ ಅವಕಾಶ ಇರುವುದು. ಹೀಗಾಗಿ ಖರೀದಿಗೆ ಹಾಗೂ ಸ್ನೇಹಿತರನ್ನ ಭೇಟಿಯಾಗಲು ಅವಕಾಶ ಬೇಕಿತ್ತು. ಅದಕ್ಕೆ ಭಾನುವಾರ ಕರ್ಫ್ಯೂ ತೆಗೆಯಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾನುವಾರ ಲಾಕ್ ಡೌನ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಸಿಎಂ ನಿರ್ಧಾರ ಸ್ವಾಗತಾರ್ಹ ಎಂದರು. ದುಡಿಯುವ ವರ್ಗಕ್ಕೆ ರಿಲ್ಯಾಕ್ಸ್ ಮಾಡಿಕೊಡಲು ಅನುಕೂಲವಾಗಿದೆ. ವಾರವೆಲ್ಲ ನೌಕರರು, ಉದ್ದಿಮೆದಾರರು ಕೆಲಸ ಮಾಡಿರುತ್ತಾರೆ. …
Read More »ಮಳೆಯ ಅವಾಂತರ – ಮನೆಗಳಿಗೆ ನುಗ್ಗಿದ ನೀರು, ಹತ್ತಾರು ಎಕರೆ ಬಾಳೆ ನಾಶ
ರಾಯಚೂರು/ಕೋಲಾರ: ಅನೇಕ ದಿನಗಳಿಂದ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಇದರಿಂದ ಜನರ ಜೀವನ ಅಸ್ತವ್ಯಸ್ತವಾಗುತ್ತಿದೆ. ರಾಯಚೂರಿನಲ್ಲಿ ಇಡೀ ರಾತ್ರಿ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ಮಳೆಗೆ ಚರಂಡಿ ನೀರು ಮನೆಯೊಳಗೆ ನುಗ್ಗಿದೆ. ನಗರದ ಮಡ್ಡಿಪೇಟೆ, ಬಂದರಗಲ್ಲಿ ಸೇರಿ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ಮನೆಗಳಿಗೆ ಮಳೆಯ ನೀರಿನೊಂದಿಗೆ ಕೊಳಚೆ ನೀರು ನುಗ್ಗಿದೆ. ಇದರಿಂದ ಜನರು ರಾತ್ರಿಯೆಲ್ಲಾ ಮನೆಯೊಳಗೆ ನುಗ್ಗಿದ ನೀರನ್ನು ಹೊರಹಾಕಿದ್ದಾರೆ. …
Read More »ಶಾಸಕರ ಸಂಬಳ ಕಡಿತ, ಅಧಿಕೃತ ಘೋಷಣೆ – ವೇತನ, ಭತ್ಯೆ ಎಷ್ಟಿದೆ?
ಬೆಂಗಳೂರು: ಕೋವಿಡ್ 19 ನಿಂದಾಗಿ ಶಾಸಕರ ಸಂಬಳಕ್ಕೂ ಈಗ ಸರ್ಕಾರ ಕತ್ತರಿ ಹಾಕಿದೆ. ಸಂಬಳ ಕಡಿತದ ಬಗ್ಗೆ ಅಧಿಕೃತವಾಗಿ ಇಂದು ಸ್ಪಷ್ಟೀಕರಣ ನೀಡಿದೆ. ಏಪ್ರಿಲ್ 1 ರಿಂದ ಒಂದು ವರ್ಷ ಅವಧಿಗೆ ಶೇ.30ರಷ್ಟು ಶಾಸಕರ ಸಂಬಳ ಕಡಿತವಾಗಲಿದೆ. ಶಾಸಕರ ವೇತನ, ಪಿಂಚಣಿ, ಇತರೆ ಭತ್ಯೆ, ದೂರವಾಣಿ ವೆಚ್ಚ, ಚುನಾವಣೆ ಕ್ಷೇತ್ರ ಭತ್ಯೆ, ಅಂಚೆ ವೆಚ್ಚ, ಕೊಠಡಿ ಸೇವಕರ ಭತ್ಯೆ, ಚುನಾವಣಾ ಕ್ಷೇತ್ರ ಪ್ರಯಾಣ ಭತ್ಯೆ, ನಿಗಧಿತ ವಿಮಾನ, ರೈಲ್ವೆ ಪ್ರಯಾಣ …
Read More »ಕುಡಿಯಲು ನೀರಿಲ್ಲದೇ ಗ್ರಾಮಸ್ಥರು ಪರದಾಟ……….
ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಕೊರೊನಾ ಅಟ್ಟಹಾಸ, ಮತ್ತೊಂದು ಕಡೆ ನೀರಿಗೆ ಹಾಹಾಕಾರ ಉಂಟಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಾಸಿನಕಲ್ಲು ಗ್ರಾಮದಲ್ಲಿ ಮೂಲಭೂತ ಸೌಕರ್ಯದ ಕೊರತೆ ಉಂಟಾಗಿದೆ. ಗ್ರಾಮಕ್ಕೆ ತೆರಳಲು ರಸ್ತೆ ಇಲ್ಲ, ಕುಡಿಯಲು ನೀರಿಲ್ಲದೆ ಗ್ರಾಮಸ್ಥರು ಪರದಾಟ ನಡೆಸುತ್ತಿದ್ದಾರೆ. ಅಲ್ಲದೇ ಮಳೆಯ ನೀರಿನ ಆಶ್ರಯದಲ್ಲೇ ದಿನದ ಬದುಕು ಸಾಗಿಸುತ್ತಿದ್ದಾರೆ. ಸಣ್ಣ ಕೆರೆಯ ನೀರನ್ನು ನಂಬಿ ಜೀವನ ನಡೆಸುತ್ತಿರುವ ಗ್ರಾಮದ ಜನರು ದಿನನಿತ್ಯದ ಬಳಕೆಗೆ ಕೊಳಕು ನೀರು ಆಧಾರವಾಗಿದೆ …
Read More »ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಿನ್ನೆ ಉಮೇಶ ಕತ್ತಿ ನಿವಾಸದಲ್ಲಿ ನಡೆದಿದೆ ಎನ್ನಲಾದ ಅತೃಪ್ತ ಶಾಸಕರ ಸಭೆಯಲ್ಲಿ ಭಾಗವಹಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ
ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಿನ್ನೆ ಉಮೇಶ ಕತ್ತಿ ನಿವಾಸದಲ್ಲಿ ನಡೆದಿದೆ ಎನ್ನಲಾದ ಅತೃಪ್ತ ಶಾಸಕರ ಸಭೆಯಲ್ಲಿ ಭಾಗವಹಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ಉಮೇಶ್ ಕತ್ತಿ ನಿವಾಸದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಶಾಸಕರು ಸಭೆ ನಡೆಸಿದ್ದಾರೆ. ಶಿವರಾಜ್ ಪಾಟೀಲ್, ರಾಜುಗೌಡ ನಾಯಕ್, ದತ್ತಾತ್ರೇಯ ಪಾಟೀಲ್ ರೇವೂರ್, ರಾಜಕುಮಾರ್ ಪಾಟೀಲ್ ಸೇಡಂ, ಸುಭಾಷ್ ಗುತ್ತೇದಾರ್, ಬಸವರಾಜ ಮತ್ತಿಮೊಡ್, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ಸೋಮಲಿಂಗಪ್ಪ, …
Read More »ರೆಬೆಲ್‍ಸ್ಟಾರ್ ಬರ್ತ್‍ಡೇಗೆ ಡಿಫರೆಂಟಾಗಿ ವಿಶ್ ಮಾಡಿದ್ರು ನೀನಾಸಂ ಸತೀಶ್!
ಭೌತಿಕವಾಗಿ ಮರೆಯಾದರೂ ಪ್ರತಿಯೊಬ್ಬರ ಮನಸ್ಸುಗಳಲ್ಲಿಯೂ ಅಜರಾಮರವಾಗಿರುವವರು ರೆಬೆಲ್ ಸ್ಟಾರ್ ಅಂಬರೀಶ್. ಹುಸಿಮುನಿಸು, ಒಂದಷ್ಟು ಬೈಗುಳಗಳ ಮೂಲಕವೇ ಪ್ರಾಂಜಲ ಪ್ರೀತಿಯನ್ನು ಎಲ್ಲರತ್ತಲೂ ದಾಟಿಸುತ್ತಿದ್ದ, ಎದುರು ಯಾರೇ ನಿಂತರೂ ಬೆಚ್ಚಗಿನ ಸ್ನೇಹವನ್ನು ಮನಸಾರೆ ಪ್ರವಹಿಸುತ್ತಿದ್ದ ಅಂಬರೀಶ್‍ರ ಬಗ್ಗೆ ಒಂದೇ ಗುಕ್ಕಿನಲ್ಲಿ ವಿವರಿಸೋದು ಕಷ್ಟ. ಎಷ್ಟೇ ಮಾತಾಡಿದರೂ, ಬರೆದರೂ ಅದರ ನಿಲುಕಿಗೆ ಸಿಗದ ಅಸಂಗತ ವ್ಯಕ್ತಿತ್ವ ಹೊಂದಿದ್ದ ಅಂಬರೀಶ್ ಹುಟ್ಟಿದ ದಿನವಿಂದು. ಈ ಸಂದರ್ಭದಲ್ಲಿ ಬಹುತೇಕರು ತಂತಮ್ಮದ್ದೇ ಆದ ರೀತಿಯಲ್ಲಿ ವಿಶ್ ಮಾಡುತ್ತಿದ್ದಾರೆ. ಅಂಬರೀಶ್‍ರನ್ನು …
Read More »ಕರ್ನಾಟಕದಲ್ಲಿ ಇಂದು ಒಟ್ಟೂ 178 ಜನರಲ್ಲಿ ಕೊರೋನಾ ಸೋಂಕು ಪತ್ತೆ………
ಬೆಂಗಳೂರು : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 7,466 ಜನರು ಹೊಸದಾಗಿ ಕೊರೋನಾ ಪೀಡಿತರಾಗಿದ್ದಾರೆ. ಇದರಿಂದ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ 1,65,799ಕ್ಕೆ ಏರಿಕೆಯಾಗಿದೆ. ಅಲ್ಲದೇ ಭಾರತ ಜಾಗತಿಕವಾಗಿ ಅತಿಹೆಚ್ಚು ಕೊರೋನಾ ಪೀಡಿತರಿರುವ ದೇಶಗಳ ಟಾಪ್ 10 ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಏರಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಪೀಡಿತರ ಸಂಖ್ಯೆಯಲ್ಲಿ ಅಮೇರಿಕಾ ಮೊದಲ ಸ್ಥಾನದಲ್ಲಿದೆ. ಬ್ರಿಜಿಲ್ ಮತ್ತು ರಷ್ಯಾ …
Read More »ಬಿಜೆಪಿಯಲ್ಲಿನ ಗೊಂದಲಕ್ಕೆ ಶಾಸಕ ಉಮೇಶ್ ಕತ್ತಿ ಸ್ಪಷ್ಟನೆ……..
ಬೆಂಗಳೂರು: ಉತ್ತರ ಕರ್ನಾಟಕದ ಶಾಸಕರು ನಮ್ಮ ಮನೆಯಲ್ಲಿ ಊಟ ಮಾಡಿದ್ದರು. ಆದರೆ ಈ ವೇಳೆ ಯಾವುದೇ ಬಂಡಾಯದ ಚರ್ಚೆಯಾಗಿಲ್ಲ, ಅಸಮಾಧಾನ ಇಲ್ಲ ಎಂದು ಶಾಸಕ ಉಮೇಶ್ ಕತ್ತಿ ಸ್ಪಷ್ಟಪಡಿಸಿದರು. ಶಾಸಕ ಉಮೇಶ್ ಕತ್ತಿ, ಕೊರೊನಾದಿಂದ ಬೆಂಗಳೂರಿನಿಂದ ಬಂದಂತಹ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಶಾಸಕರಿಗೆ ತೊಂದರೆಯಾಗಿದೆ. ಏಳು ದಿನಗಳ ಹಿಂದೆ ನಮ್ಮ ಮನೆಯಲ್ಲಿ ಊಟ ಮಾಡಿದ್ವಿ. ಇದೇ ಗುರುವಾರ ಮತ್ತೆ ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ವಿ. ಇದು ಮುಖ್ಯಮಂತ್ರಿ ಅವರ …
Read More »ಬಿಎಸ್ ಯಡಿಯೂರಪ್ಪ ನಮ್ಮ ಸಿಎಂ ಅಷ್ಟೇ. ಆದರೆ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ನಮ್ಮ ನಾಯಕರು:ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಬಿಎಸ್ ಯಡಿಯೂರಪ್ಪ ನಮ್ಮ ಸಿಎಂ ಅಷ್ಟೇ. ಆದರೆ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ನಮ್ಮ ನಾಯಕರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಇಂದು ಬಂಡಾಯದ ವಿಚಾರವಾಗಿ ಮಾಧ್ಯಮಗಳ ಜೊತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ನನ್ನನ್ನು ಕರೆದಿದ್ದು ನಿಜ. ನಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ಹೇಳಿದ್ದೇನೆ. ಜೊತೆಗೆ ಹಣ ಬಿಡುಗಡೆ ಆಗಿಲ್ಲ ಎಂದು ಬೇಜಾರ್ ಆಗಿದೆ ಎಂದು ಸಿಎಂ …
Read More »ಜೂ.1ರಿಂದ ವಿಶೇಷ ರೈಲುಗಳು ಸಂಚಾರ ಆರಂಭ……….
ಬೆಂಗಳೂರು, ಮೇ 29- ವಲಸೆ ಕಾರ್ಮಿಕರು ತಮ್ಮ ಸ್ವಸ್ಥಾನಗಳಿಗೆ ಮರಳಲು ಅನುಕೂಲವಾಗುವಂತೆ ಭಾರತೀಯ ರೈಲ್ವೆ ದೇಶಾದ್ಯಂತ ಆರಂಭಿಸಿರುವ ಶ್ರಮಿಕ್ ವಿಶೇಷ ರೈಲು ಸೇವೆಯನ್ನು ಅತಿ ಜರೂರು ಇದ್ದ ಸಂದರ್ಭದಲ್ಲಿ ಮಾತ್ರ ವಯೋ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರು ಬಳಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ. ರಕ್ತದೊತ್ತಡ, ಮಧುಮಹ, ಹೃದಯ ರೋಗ, ಕ್ಯಾನ್ಸರ್ ಮತ್ತಿತರ ರೋಗದಿಂದ ನರಳುತ್ತಿರುವವರು, 65 ವರ್ಷ ಮೇಲ್ಪಟ್ಟವರು 10 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರು ಅಗತ್ಯವಿದ್ದರೆ ಮಾತ್ರ ಈ …
Read More »