ಬೆಂಗಳೂರು: ಬಿಎಂಟಿಸಿ ಟಿಕೆಟ್ ವ್ಯವಸ್ಥೆ ಮಾಡಬೇಕು ಎಂದು ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದು, ಬಿಎಂಟಿಸಿ ಇಂದಿನಿಂದ ಪ್ರಯಾಣಿಕರಿಗೆ ಟಿಕೆಟ್ ನೀಡಲು ಶುರು ಮಾಡಿದೆ. ಹೀಗಾಗಿ ಇವತ್ತಿನಿಂದ ಪ್ರಯಾಣಿಕರು ಬಿಎಂಟಿಸಿಯಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬಹುದು. ಈಗಾಗಲೇ ಬಿಎಂಟಿಸಿ ಬಸ್‍ಗಳ ಓಡಾಟ ಶುರುವಾಗಿದ್ದು, ಪಾಸ್ ಇದ್ದವರಿಗಷ್ಟೇ ಅಲ್ಲ, ಟಿಕೆಟ್ ಪಡೆದೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅಷ್ಟೇ ಅಲ್ಲದೇ ಇವತ್ತಿನಿಂದ ಹೆಚ್ಚುವರಿಯಾಗಿ 4 ಸಾವಿರ ಬಿಎಂಟಿಸಿ ಬಸ್‍ಗಳ ಸಂಚಾರ ಆರಂಭ ಮಾಡುತ್ತಿವೆ. ಲಾಕ್‍ಡೌನ್ ಬಳಿಕ ಪ್ರಯಾಣಿಕರಿಗೆ …
Read More »ಜುಲೈನಿಂದ ದೇಶಾದ್ಯಂತ ಶಾಲೆಗಳು ಆರಂಭವಾಗೋ ಸಾಧ್ಯತೆ………….
ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇತ್ತ ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಚ್ಚಿದ್ದ ಶಾಲೆಗಳು ಜುಲೈನಿಂದ ದೇಶಾದ್ಯಂತ ಆರಂಭವಾಗುವ ಸಾಧ್ಯತೆ ಇದೆ. ಶೇಕಡಾ 30ರಷ್ಟು ಹಾಜರಾತಿಯೊಂದಿಗೆ ಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಚಿಂತನೆ ಮಾಡಿದೆ. ಜೊತೆಗೆ ಗ್ರೀನ್, ಆರೆಂಜ್‍ಝೋನ್‍ಗಳಲ್ಲಿರುವ ಶಾಲೆಗಳ ಆರಂಭ ಮಾಡುವ ಸಾಧ್ಯತೆ ಇದೆ. ಆರಂಭದಲ್ಲಿ ಹೈಸ್ಕೂಲ್ ತರಗತಿಗಳಷ್ಟೇ ಶುರುವಾಗಲಿದ್ದು, ಉಳಿದ ವಿದ್ಯಾರ್ಥಿಗಳಿಗೆ ಆನ್‍ಲೈನ್ ಶಿಕ್ಷಣ ಮುಂದುವರಿಕೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ …
Read More »ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆತಂಕಕಾರಿ ಸಂಗತಿ ಅಂದರೆ ಬೆಂಗಳೂರಿನಲ್ಲಿ ಹೊಸ ಹೊಸ ಏರಿಯಾಗಳಿಗೆ ಸೋಂಕು ಹಬ್ಬಲು ಶುರುವಾಗಿದೆ. ಈ ಮೂಲಕ ಗ್ರೀನ್‍ಝೋನ್, ಸೇಫ್ ಏರಿಯಾಗಳೆಂದು ಅನ್ನಿಸಿಕೊಂಡಿರುವ ಏರಿಯಾಗಳು ಕೊರೊನಾ ಅಡ್ಡಾಗಳಾಗಿ ಬದಲಾಗ್ತಾವಾ ಅನ್ನೋ ಆತಂಕ ಎದುರಾಗಿದೆ. ಇದುವರೆಗೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಒಂದು ಎರಡು ದಾಖಲಾಗುತ್ತಿದ್ದವು. ಆದರೆ ಸೋಮವಾರ ಬರೋಬ್ಬರಿ 8 ಪ್ರಕರಣಗಳು ದಾಖಲಾಗಿವೆ. ಅಂತರಾಜ್ಯ ಪ್ರಯಾಣ ಮಾಡಿದವರಲ್ಲಿ, ಅಂತರರಾಷ್ಟ್ರೀಯ …
Read More »ಸಂಜೆ ಆರೋಗ್ಯ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 24 ಕೊರೊನಾ ಪಾಸಿಟಿವ್ ಕೇಸ್
ಬೆಂಗಳೂರು: ಸಂಜೆ ಆರೋಗ್ಯ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 24 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಸೋಮವಾರ ಒಟ್ಟಾರೆ 93 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಂಜೆಯ ಜಿಲ್ಲಾವಾರು ವಿವರ ಬೆಂಗಳೂರು-2 ಹಾಸನ -1 ಉಡುಪಿ – 16 ಧಾರವಾಡ -1 ಕಲಬುರಗಿ- 2 ದಕ್ಷಿಣ ಕನ್ನಡ -1 ಉತ್ತರ ಕನ್ನಡ -1 https://youtu.be/PoGz3zwQdd8 ಮಧ್ಯಾಹ್ನ ರಾಜ್ಯದಲ್ಲಿ 69 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು, ಸಂಜೆ 24 ಒಟ್ಟು 93 ಕೊರೊನಾ …
Read More »ಬ್ರೇಕಿಂಗ್ : ರಾಜ್ಯದಲ್ಲಿ ಇಂದು 69 ಮಂದಿಗೆ ಕೊರೋನಾ ಪಾಸಿಟಿವ್, 2158 ಕ್ಕೇರಿದ ಸೋಂಕಿತರ ಸಂಖ್ಯೆ..!
ಬೆಂಗಳೂರು, ಮೇ 25- ನಿನ್ನೆ ಭಾನುವಾರ ಸಂಪೂರ್ಣ ಲಾಕ್‍ಡೌನ್ ಮಾಡಿದ ಪರಿಣಾಮ ಕೊರೊನಾ ಸೋಂಕಿತರ ಪ್ರಮಾಣ ತಗ್ಗಿದೆ. ಆದರೆ, ಇದುವರೆಗೂ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ರಾಮನಗರಕ್ಕೆ ತಮಿಳುನಾಡು ನಂಜು ತಗುಲಿದ್ದು, 2 ವರ್ಷದ ಮಗುವಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಕೋವಿಡ್-19ನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಂದು 69 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ.ಇಂದು ಒಂದೇ ದಿನ 26 ಮಂದಿ ರೋಗದಿಂದ ಗುಣಮುಖವಾಗುವುದರ …
Read More »ಕರ್ನಾಟಕದಿಂದ ತಮ್ಮ ರಾಜ್ಯಗಳಿಗೆ ತೆರಳಿದ 1.50 ಲಕ್ಷಕ್ಕೂ ಹೆಚ್ಚು ವಲಸಿಗರು..!
ಬೆಂಗಳೂರು, ಮೇ 25- ರಾಜ್ಯದ ನಾನಾ ಭಾಗಗಳಿಂದ ಶ್ರಮಿಕ್ ರೈಲಿನ ಮೂಲಕ ಸುಮಾರು 1.50 ಲಕ್ಷ ವಲಸಿಗರು ತಮ್ಮೂರಿಗೆ ಸಂತಸದಿಂದ ತೆರಳಿದ್ದಾರೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಹಲವು ದಿನಗಳಿಂದ ಸುಮಾರು 150 ರೈಲುಗಳು ಬಿಹಾರ, ಜಾರ್ಖಂಡ್, ಒಡಿಸ್ಸಾ, ನವದೆಹಲಿ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಲವು ಭಾಗಗಳಿಗೆ ವಲಸಿಗರನ್ನು ಸುರಕ್ಷಿತವಾಗಿ ತಲುಪಿಸಿದೆ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಅವರಿಗೆ ಕುಡಿಯುವ ನೀರಿನ ಬಾಟಲ್, ಹಣ್ಣು, …
Read More »ಒತ್ತಡಕ್ಕೆ ಮಣಿದ ಬಿಎಂಟಿಸಿ, ಪಾಸ್ ದರ ಪರಿಷ್ಕರಣೆ : ಇಲ್ಲಿದೆ ಹೊಸ ದರಗಳ ಪಟ್ಟಿ…
ಬೆಂಗಳೂರು, ಮೇ 25- ಸಾರ್ವಜನಿಕರ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೈನಂದಿನ ಪಾಸ್ ದರವನ್ನು ಪರಿಷ್ಕರಣೆ ಮಾಡಿದೆ. 70ರೂ.ಗಳ ದಿನದ ಪಾಸ್ ದರವನ್ನು 50ರೂ.ಗೆ ಇಳಿಕೆ ಮಾಡಿದೆ. ಅದೇ ರೀತಿ ಹೊಸದಾಗಿ 30ರೂ., 20ರೂ., 15ರೂ., 10ರೂ., 5ರೂ.ಗಳ ಹೊಸ ಪಾಸ್‍ಗಳನ್ನು ಬಿಡುಗಡೆ ಮಾಡಿದ್ದು, ಟಿಕೆಟ್ ಬದಲಾಗಿ ಇವುಗಳನ್ನು ನೀಡಲು ನಿರ್ಧರಿಸಿದೆ. ಈವರೆಗೆ ದಿನದ ಪಾಸ್‍ಅನ್ನು 70ರೂ.ಗೆ ನೀಡಲಾಗಿತ್ತು. ಕೊರೊನಾ ಸಾಂಕ್ರಾಮಿಕ ಭೀತಿ ಹಿನ್ನೆಲೆಯಲ್ಲಿ …
Read More »ವೆಚ್ಚಕ್ಕೆ ಬ್ರೇಕ್ ಹಾಕ್ಳು ಕೆಲ ಇಲಾಖೆಗಳನ್ನು ವಿಲೀನನಕ್ಕೆ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು, ಮೇ 25- ಲಾಕ್‍ಡೌನ್ ಹಿನ್ನೆಲೆ ರಾಜ್ಯದ ಬೊಕ್ಕಸ ಖಾಲಿಯಾಗಿದ್ದು, ರಾಜ್ಯ ಸರ್ಕಾರ ವೆಚ್ಚ ಕಡಿತದ ಮೊರೆ ಹೋಗಿದೆ. ಸರ್ಕಾರ ಕೆಲ ಇಲಾಖೆಗಳನ್ನು ವಿಲೀನ ಮಾಡಲು ಚಿಂತನೆ ನಡೆಸಿದೆ. ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮತ್ತು ಸಮಾಜ ಕಲ್ಯಾಣ ಇಲಾಖೆ, ಸಹಕಾರ ಮತ್ತು ಕೃಷಿ ಮಾರುಕಟ್ಟೆ ಇಲಾಖೆ, ಸಹಕಾರಿ ಲೆಕ್ಕ ಪರಿಶೀಲನಾ ಇಲಾಖೆ ಮತ್ತು ಲೆಕ್ಕ ಪತ್ರ ಇಲಾಖೆ ಸೇರಿದಂತೆ ಇಲಾಖೆಗಳನ್ನು ವಿಲೀನ ಮಾಡಲು …
Read More »ದೆಹಲಿಯಿಂದ ಬೆಂಗಳೂರಿಗೆ ಇಂದು ಬಂದ ಮೊದಲ ವಿಮಾನದಲ್ಲಿ ಐದು ವರ್ಷದ ಬಾಲಕ ಏಕಾಂಗಿಯಾಗಿ ಪ್ರಯಾಣ
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಇಂದು ಬಂದ ಮೊದಲ ವಿಮಾನದಲ್ಲಿ ಐದು ವರ್ಷದ ಬಾಲಕ ಏಕಾಂಗಿಯಾಗಿ ಪ್ರಯಾಣ ಮಾಡಿದ್ದಾನೆ. ಐದು ವರ್ಷದ ವಿವಾಂತ್ ಶರ್ಮಾ ಏಕಾಂಗಿಯಾಗಿ ಪ್ರಯಾಣ ಮಾಡಿದ್ದಾನೆ. ಲಾಕ್‍ಡೌನ್ ನಂತರ ಇಂದು ರಾಷ್ಟ್ರ ರಾಜಧಾನಿಯಿಂದ ಬೆಂಗಳೂರಿಗೆ ಬಂದ ಮೊದಲ ವಿಮಾನದಲ್ಲಿ ಈ ಬಾಲಕ ಬಂದು ಬೆಂಗಳೂರಿನಲ್ಲಿರುವ ತನ್ನ ಪೋಷಕರನ್ನು ಸೇರಿದ್ದಾನೆ. ಮಗನ ಬರುವಿಕೆಗಾಗಿ ವಿಮಾನ ನಿಲ್ದಾಣದಲ್ಲೇ ಕಾದುಕುಳಿತಿದ್ದ ಆತನ ತಾಯಿ ಮಂಜೀತ್ ಶರ್ಮಾ ಮಗನನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ವಿವಾಂತ್ …
Read More »ಏರ್‌ಪೋರ್ಟಿನಲ್ಲಿ ಮಹಿಳೆ ರಂಪಾಟ – ಹೋಂ ಕ್ವಾರಂಟೈನ್‍ಗೆ ತೆರಳಿದ ಸದಾನಂದ ಗೌಡ
ಬೆಂಗಳೂರು: ಇಂದಿನಿಂದ ದೇಶಿಯ ವಿಮಾನಗಳ ಹಾರಾಟ ಆರಂಭವಾಗಿದ್ದು, ಚೆನ್ನೈ ಹಾಗೂ ದೆಹಲಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನಗಳು ಆಗಮಿಸಿವೆ. ಎರಡು ತಿಂಗಳ ಬಳಿಕ ಮೊದಲ ಬಾರಿಗೆ ದೇಶಿಯ ವಿಮಾನ ಹಾರಾಟ ನಡೆಸಿದ್ದು, ಇಂದು 120 ಜನ ಪ್ರಯಾಣಿಕರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬಂದವರನ್ನೆಲ್ಲ ಹೋಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದರೆ ಇದಕ್ಕೆ ಒಪ್ಪದ ಕೆಲ ಪ್ರಯಾಣಿಕರು ದೆಹಲಿಗೆ ವಾಪಸ್ಸಾಗಿದ್ದಾರೆ. ಎಲ್ಲಾ ಪ್ರಯಾಣಿಕರಿಗೆ ಏಳು ದಿನ ಹೋಟೆಲ್ ಕ್ವಾರಂಟೈನ್ ಇನ್ನೂ ಏಳು ದಿನ …
Read More »