ಬೆಂಗಳೂರು: ಕೋರ್ಟ್‍ನಲ್ಲಿ ಕೆಲಸ ಕೊಡಿಸೋದಾಗಿ ಸುಮಾರು 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಈ ಜೋಡಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸೋದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಹಣ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು …
Read More »ಉಪ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ: ಡಿಕೆಶಿ
ಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ?ತಿಳಿಸಿದರು. ಕಾಂಗ್ರೆಸ್ ನಿಂದ ಅಭ್ಯರ್ಥಿ ಘೋಷಣೆ ಆದ ಬಳಿಕ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿ ಪ್ರತಿಕ್ರಿಯೆ ನೀಡಿದ ಅವರು, ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಹೆಚ್.ವೈ ಮೇಟಿ ಅವರ 2ನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ …
Read More »ರಂಜಾನ್ ಹಬ್ಬದ ಶುಭಕೋರಿದ ಸಿಎಂ: ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ(Happy Ramzan) ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು. ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ ಎಂದರು. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. …
Read More »ಕಾಂಗ್ರೆಸ್‌ಗೆ ಯಾರೂ ಬ್ಲ್ಯಾಕ್‌ಮೇಲ್ ಮಾಡಲು ಆಗುವುದಿಲ್ಲ: ಎಂ.ಬಿ.ಪಾಟೀಲ್
ಬೆಂಗಳೂರು: ಕಾಂಗ್ರೆಸ್‌ಗೆ ಯಾರೂ ಒತ್ತಡ ಹೇರಲು ಆಗುವುದಿಲ್ಲ. ಬ್ಲ್ಯಾಕ್‌ಮೇಲ್ ಮಾಡಲಿಕ್ಕೂ ಆಗುವುದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಕುಟುಂಬವೂ ಕೇಳುತ್ತಿದೆ. ಹಾಗೆಯೇ ಅಲ್ಪಸಂಖ್ಯಾತ ಸಮುದಾಯವೂ ಬೇಡಿಕೆ ಇಟ್ಟಿದೆ. ಯಾರು ಬೇಕಾದರೂ ಟಿಕೆಟ್ ಕೇಳಬಹುದು. ಅದು ತಪ್ಪೇನಲ್ಲ. ಆದರೆ, ಯಾರೂ ಒತ್ತಡ ಹಾಕಲು ಬರುವುದಿಲ್ಲ. ಬ್ಲ್ಯಾಕ್‌ಮೇಲ್ ಮಾಡಲಿಕ್ಕೂ ಆಗದು ಎಂದು ಹೇಳಿದರು. ಈಗಾಗಲೇ ನಾಮಪತ್ರ ಕೂಡ ಸಲ್ಲಿಸಿದ್ದಾರಲ್ಲ ಎಂದು ಕೇಳಿದಾಗ, …
Read More »ರಾಜ್ಯದ 5000 ಅಂಗನವಾಡಿಗಳಲ್ಲಿ `LKG-UKG’ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ
ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ 5000 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ (LKG ಮತ್ತು UKG) ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗುಣಮಟ್ಟದ ಶಿಕ್ಷಣ: ಅಂಗನವಾಡಿಗಳಲ್ಲಿ ಕೇವಲ ಪೌಷ್ಟಿಕ ಆಹಾರ ನೀಡುವುದಷ್ಟೇ ಅಲ್ಲದೆ, …
Read More »ಮಾನವೀಯತೆಯನ್ನ ಮಾರಿಕೊಂಡ ವಿಕ್ಟೋರಿಯಾ ಆಸ್ಪತ್ರೆ..!?
ಫೆವಿಕಲ್ ಕುಡಿದು 2 ವರ್ಷದ ಮಗು ಮೃತಪಟ್ಟಿತ್ತು. ಪೋಸ್ಟ್ ಮಾರ್ಟಂ ಗೆ ವಿಕ್ಟೋರಿಯಾ ಆಸ್ಪತ್ರೆಗೆ ಶವ ತೆಗೆದುಕೊಂಡು ಹೋಗಿದ್ರು. ರಾಜಸ್ಥಾನ ರಾಜ್ಯದಿಂದ ಬಂದ ಕುಟುಂಬ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡ್ತಿತ್ತು. ಆಟ ಆಡುವಾಗ ಮಗು ಫೆವಿಕಲ್ ಕುಡಿದು ಜೀವ ಬಿಟ್ಟಿತ್ತು. ಪೋಸ್ಟ್ ಮಾರ್ಟಂ ಮಾಡಲು ಅಲ್ಲಿನ ಸಿಬ್ಬಂಧಿ, ಮಧ್ಯವರ್ತಿಗಳು ಸೇರಿ 10 ಸಾವಿರ ಹಣ ಪೀಕಿದ್ದಾರೆ. ಬೆಳಗ್ಗೆಯಿಂದ ಮಗುವಿನ ತಂದೆ ಆಸ್ಪತ್ರೆಯ ಆವರಣದಲ್ಲಿ ಕಂಡ ಕಂಡವ್ರ ಬಳಿ ಕೈ ಚಾಚಿ …
Read More »ಸಿದ್ದರಾಮಯ್ಯ ಸಂಧಾನ ಯಶಸ್ವಿ: ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಫೈನಲ್
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗು ತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ‘ಕುಟುಂಬ ರಾಜಕಾರಣ’ದ ಬಿಸಿ ತಟ್ಟಿದ್ದು, ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಹೌದು…ಮಾಜಿ ಶಾಸಕ ಎಚ್.ವೈ. ಮೇಟಿ ಅವರ ಕುಟುಂಬದಲ್ಲಿ ಟಿಕೆಟ್‌ಗಾಗಿ ಭಿನ್ನಮತ ಸ್ಪೋಟಗೊಂಡಿತ್ತು. ಇದರ ಬೆನ್ನಲ್ಲೇ ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ, ಮಹಾದೇವಿ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಇಂದು (ಮಾರ್ಚ್ 18) ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಮೇಟಿ …
Read More »ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್ ಹಂಚಿಕೆ ಸಂಬಂಧ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಸಿದೆ. ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನ ಸಿವಿಲ್ ಕೋರ್ಟ್‌ಗೆ ಎಸ್‌ಐಟಿ 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಅಶ್ಲೀಲ ವಿಡಿಯೋ ಹಂಚಲು ಆರೋಪಿಗಳು 70 ಪೆನ್‌ಡ್ರೈವ್ ಖರೀದಿಸಿದ್ದರು. ಹಾಸನದಲ್ಲೇ 70 ಪೆನ್‌ಡ್ರೈವ್ ಖರೀದಿ ಮಾಡಿರುವುದು ತನಿಖೆಯಿಂದ ಬಯಲಾಗಿದೆ. ಪ್ರಕರಣದಲ್ಲಿ 52 …
Read More »ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ
ಬೆಂಗಳೂರು: ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಿಗಳಿಗೆ ತಲಾ 5 ಸಾವಿರ ಸಹಾಯಧನ ಯೋಜನೆ ಜಾರಿ ಮಾಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ನ ಮಂಜೇಗೌಡ ಪ್ರಶ್ನೆಗೆ ಉತ್ತರ ನೀಡಿದ ಅವರು, ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಿಗಳಿಗೆ ತಲಾ 5 ಸಾವಿರ ಸಹಾಯಧನ ಯೋಜನೆ ಜಾರಿ ಮಾಡಲಾಗಿದೆ. ಇದಕ್ಕಾಗಿ ಸರ್ಕಾರ 5 ಕೋಟಿ ಹಣ ಮೀಸಲು ಇಡಲಾಗಿದೆ. …
Read More »ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ
ಬೆಂಗಳೂರು: ಒಂದು ವಾರ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್‌ಗಾಗಿ ಸಹಕಾರ ಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ಹೋಟೆಲ್ ಅಸೋಸಿಯೇಷನ್‌ಗೆ ಮನವಿ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಡೊಮೆಸ್ಟಿಕ್ ಸಿಲಿಂಡರ್ ಸಮಸ್ಯೆ ಇಲ್ಲ. ಎಷ್ಟು ಸಪ್ಲೈ ಆಗಬೇಕೋ ಅಷ್ಟು ಆಗಿದೆ. ಗೃಹ ಬಳಕೆ ನಿಲ್ಲಿಸೋದಿಲ್ಲ. 3 ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ. ಅದನ್ನ ಕೊಡುತ್ತಿದ್ದೇವೆ. ಕಮರ್ಷಿಯಲ್ ಗ್ಯಾಸ್ …
Read More »
Laxmi News 24×7