ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ತಾಲ್ಲೂಕು ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಜಿ.ಪಂ) ಸಿ ಮಂಜೂರ್, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ತಾಲೂಕು ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಕುರಿತು ಕರ್ನಾಟಕ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದ್ದು, ಮುಂದಿನ ಅಗತ್ಯ ಕ್ರಮಕ್ಕಾಗಿ ಕಳುಹಿಸಿ ಕೊಡಲಾಗಿದೆ ಎಂಬುದಾಗಿ ರಾಜ್ಯ ಹೊಸ ತಾಲೂಕುಗಳ ಜಿಲ್ಲಾ ಪಂಚಾಯ್ತಿಯ ಕಾರ್ಯನಿರ್ವಾಹಕ …
Read More »ಕಳ್ಳದಾರಿಯಲ್ಲಿ ಎಂಟ್ರಿ ಕೊಡುತ್ತಿರುವ ತಮಿಳಿಗರಿಂದಲೇ ಬೆಂಗಳೂರಿಗೆ ಕಂಟಕ…!
ಬೆಂಗಳೂರು, ಮೇ 22- ತಮಿಳುನಾಡಿನಿಂದ ತಲೆಮರೆಸಿಕೊಂಡು ಬರುತ್ತಿರುವವರೇ ನಗರಕ್ಕೆ ಕಂಟಕರಾಗುತ್ತಿದ್ದಾರೆ.ತಮಿಳುನಾಡಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ರಾಜ್ಯದ ಗಡಿ ಭಾಗದಿಂದ ಅತ್ತಿಬೆಲೆ ಸಮೀಪದ ಕಳ್ಳದಾರಿಯಲ್ಲಿ ನೂರಾರು ತಮಿಳಿಗರು ನಗರಕ್ಕೆ ಆಗಮಿಸುತ್ತಿದ್ದಾರೆ. ಆನೇಕಲ್ ಗಡಿಯ ಬಳ್ಳೂರು ಗ್ರಾಮದ ಸರ್ವೆ ತೋಪುಗಳ ಮೂಲಕ ನೂರಾರು ತಮಿಳಿಗರು ನಗರಕ್ಕೆ ಬರುತ್ತಿದ್ದರೂ ಅವರನ್ನು ಯಾರೂ ತಡೆಹಿಡಿಯುತ್ತಿಲ್ಲ. ಗಡಿ ಗ್ರಾಮಗಳಲ್ಲಿ ಅನಾಮದೇಯರು ಪ್ರವೇಶಿಸಬಾರದು ಎಂದು ತಡೆಗೋಡೆ ನಿರ್ಮಿಸಿದ್ದರೂ ಅವುಗಳನ್ನು ಕಿತ್ತು ಹಾಕಿ ಗುಂಪು ಗುಂಪಾಗಿ ತಮಿಳುನಾಡಿನ ನೂರಾರು ಮಂದಿ …
Read More »ಮಂಡ್ಯಕ್ಕೆ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರ ದೊಡ್ಡ ಸಂಕಷ್ಟ…..
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಯಾರೂ ಬರದಂತೆ ನಿರ್ಬಂಧ ಹೇರಲಾಗಿದೆ. ರಾಜ್ಯದಲ್ಲಿ ಮಹಾರಾಷ್ಟ್ರದಿಂದ ಮಹಾರಾಷ್ಟ್ರದಿಂದ ಪ್ರಯಾಣಿಸುವವರಿಗೆ ಅತಿಹೆಚ್ಚು ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ನಿಷೇಧ ಹೇರಲಾಗಿದೆ. ವಿಡಿಯೋ ಕಾನ್ಫರೆನ್ಸ್ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ನಿಯಂತ್ರಣದಲ್ಲಿತ್ತು. ಆದರೆ, ಮಹಾರಾರಾಷ್ಟ್ರದಿಂದ ಬರುವವರ ಸಂಖ್ಯೆ ಹೆಚ್ಚಳದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ …
Read More »ಗ್ರಾ.ಪಂ. ಸದಸ್ಯನ ಕೊಲೆ ಪ್ರಕರಣದಲ್ಲಿ ಟಿವಿ ಚಾನೆಲ್‍ನ ಸಿಇಒ ಅರೆಸ್ಟ್..!
ಬೆಂಗಳೂರು, ಮೇ 21-ನೆಲಮಂಗಲದ ಮಾಚೋಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಸಿಸಿಬಿಯ ಓಸಿಡಬ್ಲ್ಯು ತಂಡ ಬಂಧಿಸಿ ಮಾದನಾಯ್ಕನಹಳ್ಳಿ ಪೊಲೀಸರಿಗೆ ಒಪ್ಪಿಸಿದೆ. ಖಾಸಗಿ ಚಾನೆಲ್‍ನ ವ್ಯವಸ್ಥಾಪಕ ನಿರ್ದೇಶಕ ಮೋಹನ್‍ಕುಮಾರ್ (28) ಬಂಧಿತ ಆರೋಪಿ. ಮಾದನಾಯ್ಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ಏಪ್ರಿಲ್ 15 ರಂದು ಗ್ರಾ.ಪಂ. ಸದಸ್ಯ ಲಕ್ಷ್ಮೀನಾರಾಯಣನನ್ನು ನಾಲ್ಕೈದು ಮಂದಿಯ ಗುಂಪು ಭೀಕರವಾಗಿ ಕೊಲೆ ಮಾಡಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು …
Read More »ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚ : ಸುಧಾಕರ್…….
ಬೆಂಗಳೂರು : ನೊವೆಲ್ ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ, ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು – ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚವಾಗಿದೆ, ಪ್ರತಿಯೊಬ್ಬ ಸರ್ಕಾರಿ ಸಿಬ್ಬಂದಿಗಳೂ ಇದನ್ನು ಡೌನ್ ಲೋಡ್ ಮಾಡಿಕೊಳ್ಳುವದು ಕಡ್ಡಾಯವಾಗಿದ್ದು, ಇದನ್ನು ಬಳಸದೇ ಕಚೇರಿಗೆ ಬರುವ …
Read More »ತೆಲಂಗಾಣ, ಮುಂಬೈನಿಂದ ಧಾರವಾಡಕ್ಕೆ ಬಂದಿರೋ ಪಾಸಿಟಿವ್ ಪ್ರಕರಣಗಳ ಟ್ರಾವೆಲ್ ಹಿಸ್ಟರಿ
ಧಾರವಾಡ: ಹೊರ ರಾಜ್ಯಗಳಿಂದ ಧಾರವಾಡ ಜಿಲ್ಲೆಗೆ ಆಗಮಿಸಿದ ಐವರಲ್ಲಿ ಕೊರೊನಾ ಸೋಂಕು ಇರುವುದು ಇಂದು ದೃಢಪಟ್ಟಿದ್ದು, ಅವರನ್ನು ರೋಗಿ ಸಂಖ್ಯೆ-1505, ರೋಗಿ ಸಂಖ್ಯೆ-1506, ರೋಗಿ ಸಂಖ್ಯೆ-1507, ರೋಗಿ ಸಂಖ್ಯೆ-1508 ಹಾಗೂ ರೋಗಿ ಸಂಖ್ಯೆ-1509 ಎಂದು ಗುರುತಿಸಲಾಗಿದೆ. ಈ ಐದು ಜನರ ಪ್ರಯಾಣದ ವಿವರವನ್ನು ಜಿಲ್ಲಾಡಳಿತ ಪ್ರಕಟಿಸಿದೆ. ರೋಗಿ ಸಂಖ್ಯೆ-1505 ಹಾಗೂ ರೋಗಿ ಸಂಖ್ಯೆ-1506 ಸಂಖ್ಯೆ ರೋಗಿಗಳು ಹುಬ್ಬಳ್ಳಿ ಶಹರದ ಹಳೆ ಹುಬ್ಬಳ್ಳಿಯ ನಿವಾಸಿಗಳಾಗಿದ್ದಾರೆ. ಇವರು ಕಳೆದ ಮಾರ್ಚ್‍ನಲ್ಲಿ ಹುಬ್ಬಳ್ಳಿಯಿಂದ ವಿಜಯವಾಡ …
Read More »ಮಂಡ್ಯ, ಉಡುಪಿಯಲ್ಲಿ ಕೊರೊನಾ ಸ್ಫೋಟ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುವಂತೆ ಕಾಣುತ್ತಿಲ್ಲ. ಕಳೆದ 24 ಗಂಟೆಯಲ್ಲಿ 143 ಜನರಿಗೆ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ಇಂದು ಉಡುಪಿ 26, ಮಂಡ್ಯ 33, ಹಾಸನ 13, ಬಳ್ಳಾರಿ 11, ಬೆಂಗಳೂರು 6, ದಾವಣಗೆರೆ 3, ರಾಯಚೂರು ಹಾಗೂ ಧಾರವಾಡದಲ್ಲಿ ತಲಾ 5, ಉತ್ತರ ಕನ್ನಡ 7, ಶಿವಮೊಗ್ಗ …
Read More »ಭಾನುವಾರ ಮದ್ವೆ ಸಮಾರಂಭಕ್ಕೆ ಅವಕಾಶ – ಷರತ್ತುಗಳು ಅನ್ವಯ………….
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತೆಗಟ್ಟಲು ಕೈಗೊಂಡಿದ್ದ ಲಾಕ್ ಡೌನ್ 4ನೇ ಹಂತದ ನಿಯಮಗಳ ಬಗ್ಗೆ ಸರ್ಕಾರ ಸ್ಪಷ್ಠೀಕರಣ ನೀಡಿದೆ. ಮೇ 31 ರವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ. ಪ್ರತಿ ದಿನ ಬೆಳಗ್ಗೆ 7 ರಿಂದ ರಾತ್ರಿ 7 ಗಂಟೆವರೆಗೆ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರ ಕಟ್ಟು ನಿಟ್ಟಾಗಿ ನಿಷೇಧ ಮಾಡಲಾಗಿದೆ. ಭಾನುವಾರ ಹೆಚ್ಚುವರಿಯಾಗಿ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಪೂರ್ತಿ ದಿನ ಲಾಕ್ ಡೌನ್ ಆಗಿರಲಿದೆ. …
Read More »ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಅಂಗಡಿಗಳೂ ತೆರೆಯುವಂತಿಲ್ಲ.
ಬೆಂಗಳೂರು – ರಾಜ್ಯದಲ್ಲಿ ಮೇ 31ರ ವರೆಗೂ 4ನೇ ಹಂತದ ಲಾಕ್ ಡೌನ್ ಮುಂದುವರಿಯಲಿದೆ. ಆದರೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಟ್ಟುನಿಟ್ಟಾದ ಲಾಕ್ ಡೌನ್ ಇರುವುದಿಲ್ಲ. ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಮಾದರಿಯಲ್ಲಿ ಲಾಕ್ ಡೌನ್ ಇರಲಿದೆ. ಎಲ್ಲಾ ಅಂಗಡಿಗಳೂ 7 ಗಂಟೆಗೆ ಬಾಗಿಲು ಹಾಕಬೇಕು. ವಾಹನ ಸಂಚಾರವೂ ಸ್ಥಗಿತವಾಗಬೇಕು. ಜನರೂ ಅನಗತ್ಯವಾಗಿ ಸಂಚರಿಸಬಾರದು. ಇದರ ಜೊತೆಗೆ ಪ್ರತಿ ಭಾನುವಾರ ಸಂಪೂರ್ಣ …
Read More »ಮೇ 26ರಿಂದ ದೇವಾಲಯಗಳಲ್ಲಿ ಆನ್‍ಲೈನ್ ಸೇವೆ ಪ್ರಾರಂಭ:ಕೋಟಾ ಶ್ರೀನಿವಾಸ್ ಪೂಜಾರಿ
ಬೆಂಗಳೂರು: ಇಷ್ಟು ದಿನ ಕೊರೊನಾ ವೈರಸ್ ಭೀತಿಗೆ ಬಂದ್ ಆಗಿದ್ದ ದೇವಲಯಗಳಲ್ಲಿ ಈಗ ಭಕ್ತರಿಗೆ ಆನ್‍ಲೈನ್ ಮೂಲಕ ಹಣ ಪಾವತಿಸಿ ಪೂಜೆ ಮಾಡಿಸಲು ಅವಕಾಶ ನೀಡಲಾಗುತ್ತಿದೆ. ಮೇ 26, 27ರಿಂದ ದೇವಾಲಯಗಳಲ್ಲಿ ಆನ್‍ಲೈನ್ ಸೇವೆ ಪ್ರಾರಂಭ ಆಗಲಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಆನ್‍ಲೈನ್‍ನಲ್ಲಿ ಭಕ್ತರು ದೇವಸ್ಥಾನಗಳಿಗೆ ಹಣ ಪಾವತಿ ಮಾಡಿ ಪೂಜೆ ಮಾಡಿಸಲು ಅವಕಾಶ ನೀಡಲಾಗುತ್ತದೆ. 15ರಿಂದ 20 …
Read More »