ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಿಇಟಿ ಪರೀಕ್ಷೆಗಳು ಜುಲೈ 30, 31ರಂದು ನಡೆಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಅಶ್ವಥ್ ನಾರಾಯಣ್, ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಷೆ …
Read More »ಖಗೋಳ ಪ್ರಿಯರಿಗೆ ಗುಡ್‍ನ್ಯೂಸ್. ಇಂದಿನಿಂದ ಮೇ 25ರವರೆಗೆ ನೀವು ಬರಿಗಣ್ಣಿನಲ್ಲಿ ಬೆಳಗಿನ ಜಾವ ಧೂಮಕೇತುವನ್ನು ವೀಕ್ಷಿಸಬಹುದು
ಬೆಂಗಳೂರು: ಖಗೋಳ ಪ್ರಿಯರಿಗೆ ಗುಡ್‍ನ್ಯೂಸ್. ಇಂದಿನಿಂದ ಮೇ 25ರವರೆಗೆ ನೀವು ಬರಿಗಣ್ಣಿನಲ್ಲಿ ಬೆಳಗಿನ ಜಾವ ಧೂಮಕೇತುವನ್ನು ವೀಕ್ಷಿಸಬಹುದು. ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕುತ್ತಿರುವ ‘ಸ್ವಾನ್’ ಹೆಸರಿನ ಧೂಮಕೇತು ಭೂಮಿಯ ಸಮೀಪ ಬರುತ್ತಿದೆ. ಆರಂಭದ ದಿನದಲ್ಲಿ ಬೆಳಿಗ್ಗೆ 4.30ರ ವೇಳೆಗೆ `ಸ್ವಾನ್’ ಧೂಮಕೇತು ಕಾಣಿಸಿಕೊಳ್ಳಲಿದೆ ಎಂದು ನೆಹರೂ ತಾರಾಲಯದ ನಿರ್ದೇಶಕ ಪ್ರಮೋದ್ ಜಿ. ಗಲಗಲಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಆರಂಭದ ದಿನಗಳಲ್ಲಿ ಕತ್ತಲಿನಲ್ಲಿ ಇದು ಪ್ರಕಾಶಮಾನವಾಗಿ ಕಾಣುವುದರಿಂದ ಬರಿಗಣ್ಣಿನಲ್ಲಿ ವೀಕ್ಷಿಸಬಹುದು. ಸೂರ್ಯೋದಯದ ನಂತರ …
Read More »ರಾಜ್ಯದಲ್ಲಿ ಇಂದು 26 ಜನರಿಗೆ ಕೊರೊನಾ- 951ಕ್ಕೆ ಏರಿದ ಸೋಂಕಿತರ ಸಂಖ್ಯೆ
ಬೆಂಗಳೂರು: ಹಾಸನ, ದಾವಣಗೆರೆ, ಬೀದರ್, ಕಲಬುರಗಿಯ ಜಿಲ್ಲೆಯ ಜನರನ್ನು ಕೊರೊನಾ ವೈರಸ್ ಮತ್ತಷ್ಟು ಆತಂಕಕ್ಕೆ ನೂಕಿದೆ. ಈ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 26 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ. ಜೊತೆಗೆ ಕಲಬುರಗಿಯಲ್ಲಿ ಕೊರೊನಾ ಬಲಿಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಬೀದರ್ 11, ಹಾಸನ 4, ದಾವಣಗೆರೆ, ವಿಜಯಪುರ, ಕಲಬುರಗಿ, …
Read More »ಆನ್ಲೈನ್ ಶಿಕ್ಷಣದ ಹೆಸರಲ್ಲಿ ಶೋಷಣೆಯಾದರೆ ಕಠಿಣ ಕ್ರಮ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಎಚ್ಚರಿಕೆ
ಬೆಂಗಳೂರು: ಲಾಕ್ ಡೌನ್ ಆಗಿ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾದ ಬಳಿಕ ಆನ್ಲೈನ್ನಲ್ಲಿ ಪಾಠ ಮಾಡಲು ಅವಕಾಶ ಕೊಡಲಾಗಿದೆ. ಅದೇ ರೀತಿ ಹಲವು ಕಡೆ ಈಗಾಗಲೇ ಆನ್ಲೈನ್ನಲ್ಲೇ ತರಗತಿಗಳು ಪ್ರಾರಂಭವಾಗಿವೆ. ಕೆಲ ಶಿಕ್ಷಣ ಸಂಸ್ಥೆಗಳಂತೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ವಿಪರೀತ ಒತ್ತಡ ಹೇರುತ್ತಿವೆ. ದಿನವಿಡೀ ಆನ್ಲೈನ್ ಕ್ಲಾಸ್ ಎಂದು ಹೈರಾಣಗೊಳಿಸುತ್ತಿವೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು …
Read More »ಬೆಂಗಳೂರಿನಿಂದ ಇಂದು ಮೂರು ರಾಜ್ಯಗಳಿಗೆ ಶ್ರಮಿಕ್ ವಿಶೇಷ ರೈಲು; ಹತ್ತು ಸಾವಿರ ವಲಸಿಗರು ಪ್ರಯಾಣ
ಪ್ರತೀನಿತ್ಯ ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಗೆ ವಲಸೆ ಕಾರ್ಮಿಕರು ಭಾನುವಾರ ಒಂದೇ ದಿನ ಸಂಚಾರ ನಡೆಸುತ್ತಿದ್ದಾರೆ. ರಾಜ್ಯದಿಂದ ಪ್ರಯಾಣ ಮಾಡಿದವರ ಹತ್ತಾರು ಸಾವಿರಗಟ್ಟಲೇ ಇದೆ. ಬೆಂಗಳೂರು(ಮೇ.13): ಕೊರೋನಾ ಲಾಕ್ಡೌನ್ನಿಂದ ರಾಜ್ಯದಲ್ಲಿ ಸಿಲುಕಿರುವ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು ತವರಿಗೆ ವಾಪಸ್ಸಾಗುತ್ತಿದ್ದಾರೆ. ಇಂದು ಕೂಡ ಬೆಂಗಳೂರಿನಿಂದ ಉತ್ತರ ರಾಜ್ಯಗಳಿಗೆ ಕೇಂದ್ರ ರೈಲ್ವೆ ಇಲಾಖೆಯ ಮೂರು ವಿಶೇಷ ಶ್ರಮಿಕ್ ಟ್ರೈನ್ಗಳು ಹೊರಟಿವೆ. ಚಿಕ್ಕಬಾಣವಾರದಿಂದ ಗೋರಖ್‌ಪುರ …
Read More »ಶ್ರಮಿಕರಿಗಾಗಿ ಇಂದು ವಿಶೇಷ ಪ್ಯಾಕೇಜ್ ವಿಸ್ತರಣೆ ಮಾಡ್ತಾರಾ ಬಿಎಸ್‍ವೈ?
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ರಾತ್ರಿ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದು, ರಾಜ್ಯದಲ್ಲಿ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶ್ರಮಿಕರಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಹೌದು. ಇಂದು ಲಾಕ್ ಡೌನ್ ನ ಮತ್ತೊಂದು ಪ್ಯಾಕೇಜ್ ವಿಸ್ತರಣೆ ಘೋಷಣೆ ಮಾಡುವ ಸಾಧ್ಯತೆ ಇದ್ದು, ಕೆಲವು ಕಸುಬುದಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬಹುದು. ಅಕ್ಕಸಾಲಿಗರು, ಬಡಗಿಗಳು, ಕುಂಬಾರರು, ಅರ್ಚಕರು, ಟೈಲರ್ ಗಳು, ಅಡುಗೆ …
Read More »ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ- ಹೊರ ರಾಜ್ಯದಿಂದ ಬಂದವ್ರಲ್ಲಿಯೇ ಹೆಚ್ಚು ಪಾಸಿಟಿವ್
ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕಂಟಕವಾಗ್ತಾ ಇದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿನಕ್ಕೆ ಹೆಚ್ಚುತ್ತಲೇ ಇದೆ. ಸಾವಿರ ಗಡಿಯತ್ತ ಸೋಂಕಿತರ ಸಂಖ್ಯೆ ಏರುತ್ತಿದ್ದು 925ಕ್ಕೆ ತಲುಪಿದೆ. ಅರ್ಧದಷ್ಟು ವಿದೇಶದಿಂದ ಬಂದವರಾದರೆ ಇನ್ನರ್ಧ ತಬ್ಲಿಘಿಗಳಿಂದಲೇ ಪ್ರಕರಣಗಳು ಹೆಚ್ಚಾಗಿದೆ. ಬೆಂಗಳೂರು, ಬೆಳಗಾವಿ, ಬಾಗಲಕೋಟೆ ಮತ್ತು ಕಲಬುರಗಿ ಸೇರಿದಂತೆ …
Read More »ಪ್ರಧಾನಿ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ಬಗ್ಗೆ ಸಿಎಂ ಬಿಎಸ್ವೈ ಪ್ರತಿಕ್ರಿಯೆ ಏನು ಗೊತ್ತೇ..!
ಬೆಂಗಳೂರು: ಕೊರೊನಾ ಲಾಕ್ ಡೌನ್ 4.0 ಆರಂಭಕ್ಕೆ ಮುನ್ನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಕಟಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿದಾರರಿಗೆ ಹೊಸ ಭರವಸೆ ಮತ್ತು ಚೈತನ್ಯವನ್ನು ತುಂಬಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಪ್ರತಿಪಾದಿಸಿದ್ದಾರೆ. ಜತೆಗೆ, ಲೋಕಲ್ ಸೇ ಗ್ಲೋಬಲ್ ಎನ್ನುವ ಮೋದಿ ಅವರ ಘೋಷಣೆ ಐತಿಹಾಸಿಕ. ಲೋಕಲ್ ಉತ್ಪನ್ನಗಳಿಗೆ ವೋಕೋಲ್ (ಬಾಯಿ ಮಾತಿನ …
Read More »”ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ತರುವುದನ್ನು ರಾಜ್ಯ ಸರ್ಕಾರ ಕೈಬಿಡಬೇಕು” : ಹೆಚ್ಡಿಕೆ
ಬೆಂಗಳೂರು, ಮೇ 12- ರೈತರಿಗೆ ಮಾರಕವಾಗುವ ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕರಿಗೂ ಮಾರಕವಾಗಿರುವ ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ತರುವುದನ್ನು ರಾಜ್ಯ ಸರ್ಕಾರ ಕೈ ಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಕೃಷಿ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಖರೀದಿಸಲು ಅವಕಾಶ ನೀಡುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇದರಿಂದ ಎಪಿಎಂಸಿಗಳು ಮುಚ್ಚುವಂತಾಗುತ್ತದೆ ಎಂದು ಆರೋಪಿಸಿದರು. ರಾಜ್ಯ …
Read More »2 ಗಂಟೆಗೆ ಮೊದಲು ಚೆಕ್ ಇನ್, ಕ್ಯಾಬಿನ್ ಲಗೇಜ್ ಇಲ್ಲ – ವಿಮಾನ ಪ್ರಯಾಣಕ್ಕೂ ಮುನ್ನ ಓದಿ
ನವದೆಹಲಿ: ಕೋವಿಡ್ 19 ಬಗ್ಗೆ ಸಂಬಂಧಿಸಿದ ಪ್ರಶ್ನಾವಳಿ, ಕ್ಯಾಬಿನ್ ಲಗೇಜ್ ತಗೆದುಕೊಂಡು ಹೋಗುವಂತಿಲ್ಲ, ಆರೋಗ್ಯ ಸೇತು ಅಪ್ಲಿಕೇಶನ್ ಬಳಕೆ ಜೊತೆಗೆ ವಿಮಾನ ಪ್ರಯಾಣಿಸುವ 2 ಗಂಟೆಯ ಮೊದಲು ಚೆಕ್ ಇನ್ – ಇದು ಲಾಕ್‍ಡೌನ್ ತೆರವಾದ ಬಳಿಕ ವಿಮಾನ ಪ್ರಯಾಣಿಕರು ಅನುಸರಿಸಬೇಕಾದ ಕ್ರಮಗಳು. ಕೋವಿಡ್ 19 ನಿಂದಾಗಿ ಮಾರ್ಚ್ 25ರಿಂದ ಪ್ರಯಾಣಿಕ ವಿಮಾನ ಹಾರಾಟ ಸ್ಥಗಿತಗೊಂಡಿದೆ. ಈ ನಡುವೆ ದೇಶೀಯ ವಿಮಾನಗಳ ಹಾರಾಟಕ್ಕೆ ವಿಮಾನಯಾನ ಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಅಧಿಕೃತವಾಗಿ …
Read More »