Breaking News

ಬೆಂಗಳೂರು

ಸಮುದಾಯ ಪರೀಕ್ಷೆಯಲ್ಲಿ 7 ಮಂದಿಗೆ ಪಾಸಿಟಿವ್- ಸೋಂಕಿತರ ಮೊಬೈಲ್ ಸ್ವಿಚ್ಛ್ ಆಫ್

ಬೆಂಗಳೂರು: ಪಾದರಾಯನಪುರದಲ್ಲಿ ನಡೆಸಿದ ಸಮುದಾಯದ ಪರೀಕ್ಷೆಯಲ್ಲಿ ಬರೋಬ್ಬರಿ 7 ಮಂದಿಯಲ್ಲಿ ಸೋಂಕು ಇರೋದು ಪತ್ತೆಯಾಗಿದೆ. ಆದ್ರೆ ಏಳು ಮಂದಿ ಸದ್ಯ ಎಲ್ಲಿದ್ದಾರೆ ಎಂಬ ವಿಚಾರವೇ ನಿಗೂಢವಾಗಿದೆ. ಪರೀಕ್ಷೆ ವೇಳೆ ನೀಡಿದ ಇವರ ಮೊಬೈಲ್ ನಂಬರ್ ಗಳು ಸ್ವಿಚ್ಛ್ ಆಫ್ ಆಗಿವೆ. ಏಳು ಮಂದಿಗೆ ಸೋಂಕು ತಗುಲಿರೋದು ದೃಢವಾಗ್ತಿದ್ದಂತೆ ಪಾದರಾಯನಪುರದಲ್ಲಿ ಸಮುದಾಯಕ್ಕೆ ಸೋಂಕು ಹಬ್ಬಿದ್ಯಾ ಎಂಬ ಅನುಮಾನ ಮೂಡುತ್ತಿದೆ. ಕೋವಿಡ್-19 ಪರೀಕ್ಷೆ ವೇಳೆ 261 ಮಂದಿ ಪೈಕಿ 7 ಮಂದಿಯಲ್ಲಿ ಸೋಂಕು …

Read More »

ಹೆಚ್ಚು ಎಣ್ಣೆ ಕುಡಿದಿದ್ದಕ್ಕೆ ಗೆಳೆಯನ್ನ ಕೊಂದವರು ಅಂದರ್…………

ಬೆಂಗಳೂರು: ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದ ಗೆಳೆಯನನ್ನು ಕೊಂದ ಇಬ್ಬರನ್ನು ಬಂಧಿಸುವಲ್ಲಿ ಬೆಂಗಳೂರಿನ ಆರ್.ಟಿ.ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 4ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೇ 6ರಂದು ಮದ್ಯ ಖರೀದಿಸಿ ರಾಜೇಶ್, ಸುಜಿತ್ ಮತ್ತು ಕಿಶೋರ್ ಸೇರಿಕೊಂಡು ಪಾರ್ಟಿ ಮಾಡಿದ್ದರು. ಪಾರ್ಟಿ ಮಧ್ಯೆ ಹೆಚ್ಚು ಮದ್ಯ ತಮಗೆ ಬೇಕೆಂದು ಮೂವರು ಕಿತ್ತಾಡಿಕೊಂಡಿದ್ದಾರೆ. ಮದ್ಯ ಖರೀದಿಗೆ ಕಿಶೋರ್ ಹೆಚ್ಚು ನೀಡಿಲ್ಲ ಎಂದು ರಾಜೇಶ್ ಮತ್ತು ಸುಜಿತ್ ಕಿಡಿಕಾರಿದ್ದಾರೆ. …

Read More »

ಕರ್ನಾಟಕಕ್ಕೆ ಕಾದಿದೆ ದೊಡ್ಡ ಗಂಡಾತರ..? ಬೆಂಗಳೂರಿನ ಮೇಲೆ ಕೊರೋನಾ ಕಾರ್ಮೋಡ…!

ಬೆಂಗಳೂರು, ಮೇ 12- ರಾಜಧಾನಿ ಬೆಂಗಳೂರಿಗೆ ಹೊಸ ಕಂಟಕ ಎದುರಾಗಿದೆ. ಅಧಿಕಾರಿಗಳಿಗೆ ಹೊಸ ತಲೆನೋವು ಶುರುವಾಗಿದೆ. ಮಹಾಮಾರಿ ಕೊರೊನಾ ದಶದಿಕ್ಕುಗಳಿಂದಲೂ ಆವರಿಸುವ ಆತಂಕ ಪ್ರಾರಂಭವಾಗಿದೆ. ಹೊರರಾಜ್ಯಗಳಿಂದ ನಗರಕ್ಕೆ ಸುಮಾರು 30 ಸಾವಿರಕ್ಕೂ ಹೆಚ್ಚು ಕನ್ನಡಿಗರು ಬರುತ್ತಿದ್ದು, ಅವರನ್ನು ಕ್ವಾರಂಟೈನ್ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಂಗಳೂರಿಗೆ ವಿವಿಧೆಡೆಯಿಂದ ಬರುತ್ತಿರುವ 30 ಸಾವಿರ ಜನರನ್ನು ನಿಭಾಯಿಸುವುದು ಹೇಗೆ, ಕ್ವಾರಂಟೈನ್ ಮಾಡುವುದು ಹೇಗೆ ಎಂಬ ಟೆನ್ಷನ್ ಅಧಿಕಾರಿಗಳಿಗೆ ಪ್ರಾರಂಭವಾಗಿದೆ. ಇವರಲ್ಲಿ ಸೋಂಕು ತಗುಲಿದವರು …

Read More »

“ಕೊರೋನಾ ಹೆಚ್ಚಾಗಲು ತಬ್ಲಿಘೀಗಳು ಕಾರಣರಲ್ಲ, ಚಪ್ಪಾಳೆ ತಟ್ಟಿ, ದೀಪ ಹಚ್ಚಿದರೆ ಜನರ ಕಷ್ಟ ತೀರಲ್ಲ” : ಸಿದ್ದರಾಮಯ್ಯ

ಬೆಂಗಳೂರು, ಮೇ 12- ಕೊರೊನಾ ಸೋಂಕು ಹೆಚ್ಚಾಗಲು ತಬ್ಲಿಘೀಗಳು ಕಾರಣ ಎಂಬ ಆರೋಪದಲ್ಲಿ ಸತ್ಯವಿಲ್ಲ. ಕೋಮುವಾದಿಗಳು ಮತ್ತು ಆರ್‍ಎಸ್‍ಎಸ್‍ನವರು ರಾಜಕೀಯ ಕಾರಣಕ್ಕಾಗಿ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜನಜೀವನವನ್ನು ಸುಧಾರಿಸಲು, ಸೋಂಕನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು. ಈವರೆಗೆ ನಾವು ಸರ್ಕಾರಕ್ಕೆ …

Read More »

ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು

ಬೆಂಗಳೂರು : ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.ಇದೇ ಮೊದಲ ಬಾರಿಗೆ ಹೆಚ್ಚು ರಾಜ್ಯದಲ್ಲಿ ಒಂದೇ ದಿನದಲ್ಲಿ ಸೋಂಕು ಕಾಣಿಸಿಕೊಂಡಿರುವುದು ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ …

Read More »

ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಅಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲವಾಗಿ ಸಿಲಿಕಾನ್ ಸಿಟಿಯಲ್ಲಿ ಶೀಘ್ರವೇ ಬಿಎಂಟಿಸಿ ಬಸ್ ಓಡಾಟ ಶುರುವಾಗುತ್ತಾ ಅನ್ನೋ ಸುಳಿವೊಂದು  ಸಿಕ್ಕಿದೆ. ಹೌದು. 48 ದಿನಗಳ ಲಾಕ್‍ಡೌನ್ ಬಳಿಕ ಇಂದಿನಿಂದ ಬಿಎಂಟಿಸಿಯ ಎಲ್ಲಾ ನೌಕರರು ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ಸೂಚಿಸಿದೆ. ಸಾರಿಗೆ ಸಂಸ್ಥೆಯು ತುರ್ತು ಸೇವೆಗೆ ಒಳಪಡುವುದರಿಂದ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಅಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ. ಪ್ರಮುಖ ಸೂಚನೆಯೆಂದರೆ ಕೆಲಸಕ್ಕೆ …

Read More »

ಕೊರೊನಾ ನೆಪದಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳಿಗೆ ಸಂಬಳ ಕೊಡದ ಕಾಲೇಜು!

ಬೆಂಗಳೂರು: ಕೊರೊನಾ ಸೃಷ್ಟಿಸಿದ ಅವಾಂತರಗಳಿಂದ ಒಂದೆಡೆ ಜನಸಾಮಾನ್ಯರು ಕೆಲಸವಿಲ್ಲದೇ ಪರದಾಡುತ್ತಿದ್ದರೆ, ಮತ್ತೊಂದೆಡೆ ದುಡಿದ ಕೆಲಸಕ್ಕೂ ಸಂಬಳ ಸಿಗದೇ ಕೆಲ ಜನ ಒದ್ದಾಡುತ್ತಿದ್ದಾರೆ. ಇದಕ್ಕೆ ನೈಜ ಉದಾಹರಣೆಯೆಂದರೆ ಸೆಕ್ಯೂರಿಟಿ ಗಾರ್ಡ್. ಖಾಸಗಿ ಕಾಲೇಜೊಂದು ಸೆಕ್ಯೂರಿಟಿ ಗಾರ್ಡ್ ಗಳಿಗೆ ಸಂಬಳವನ್ನು ನೀಡದೇ ಸತಾಯಿಸುತ್ತಿದೆ. ಹೌದು. ಕೊರೊನಾದಿಂದಾಗಿ ಬಡವರ ಬದುಕು ಬೀದಿಗೆ ಬಿದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಲಾಕ್ ಡೌನ್ ಆದ್ರೂ ಕೆಲವೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಬೆಂಗಳೂರಿನ ಎಂಎಸ್ ಪಾಳ್ಯದ …

Read More »

.ಬೆಂಗಳೂರಿಗೆ ವಿಮಾನ ಹಾರಾಟ ಬೇಡ- ಪ್ರಧಾನಿ ಮೋದಿಗೆ ಸಿಎಂ ಬಿಎಸ್‍ವೈ ಸಲಹೆ!

ಬೆಂಗಳೂರು: ಕಂಟೈನ್ಮೆಂಟ್ ಝೋನ್‍ಗಳಿಗಷ್ಟೇ ಲಾಕ್‍ಡೌನ್ ಸೀಮಿತ ಮಾಡಿ ಎಂದು ದೇಶದ ಬಹುತೇಕ ಮುಖ್ಯಮಂತ್ರಿಗಳು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿದ್ದಾರೆ. ಇತ್ತ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಧಾನ ಮಂತ್ರಿಯವರ ವಿಡಿಯೋ ಕಾನ್ಫರೆನ್ಸ್  ನಲ್ಲಿ ಕರ್ನಾಟಕದ ಸಲಹೆಗಳನ್ನು ಮುಂದಿಟ್ಟಿದ್ದು, ಜಿಲ್ಲಾವಾರು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳನ್ನು ಗುರುತಿಸಬಾರದು. ಕಂಟೈನ್ಮೆಂಟ್ ವಲಯಗಳನ್ನು ಮಾತ್ರ ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು ಎಂಬ ಸಲಹೆಗಳನ್ನು ನೀಡಿದ್ದಾರೆ. ಸಿಎಂ ಬಿಎಸ್‍ವೈ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು: …

Read More »

ನಾಯಿ ಕಳೆದುಕೊಂಡ ದುಃಖದಲ್ಲಿ ಮೊಗ್ಗಿನ ಮನಸು ಬೆಡಗಿ………….

ಬೆಂಗಳೂರು: ಬಹುತೇಕರಿಗೆ ಪೆಟ್ ಡಾಗ್ ಎಂದರೆ ಎಲ್ಲಿಲ್ಲದ ಪ್ರೀತಿ, ಮಕ್ಕಳಿಗಿಂತ ಹೆಚ್ಚು ಪ್ರೀತಿಯಿಂದ ಸಾಕಿರುತ್ತಾರೆ. ಅವುಗಳ ಜೊತೆ ಯಾವಾಗಲೂ ಕಾಲ ಕಳೆಯುತ್ತಿರುತ್ತಾರೆ. ಈ ಮೂಲಕ ಕೆಲಸದ ದಣಿವನ್ನು ನೀಗಿಸಿಕೊಳ್ಳುತ್ತಿರುತ್ತಾರೆ. ಹೀಗೆ ಸಾಕು ಪ್ರಾಣಿಗಳು ಅವರ ಜೀವನದ ಭಾಗವೇ ಆಗಿರುತ್ತವೆ. ಅದೇ ರೀತಿ ನಟಿ ಶುಭ ಪೂಂಜಾ ಸಹ ನಾಯಿಯನ್ನು ಸಾಕಿದ್ದರು. ಆದರೆ ಅದು ಈಗ ಸಾವನ್ನಪ್ಪಿದೆ. ನಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಶುಭ ಪೂಂಜ ಕೊರಗುತ್ತಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಮನೆಯಲ್ಲೇ ಇರುವ …

Read More »

ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಡುತ್ತಿರುವ ಸಿಎಂಗಳ ಪಟ್ಟಿಯಲ್ಲಿ ಬಿಎಸ್ವೈಗೆ 2ನೇ ಸ್ಥಾನ..!

ಬೆಂಗಳೂರು, ಮೇ 11-ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ವೈರಸ್ ಹೆಚ್ಚು ಹಬ್ಬದಂತೆ ಯಶಸ್ವಿಯಾಗಿ ನಿರ್ವಹಣೆ ಮಾಡಿದ ಮುಖ್ಯಮಂತ್ರಿಗಳ ಪೈಕಿ ಬಿ.ಎಸ್.ಯಡಿಯೂರಪ್ಪನವರಿಗೆ ದೇಶದಲ್ಲೇ 2ನೇ ಸ್ಥಾನ ದೊರಕಿದೆ. ಟೈಮ್ಸ್ ನೌ ಹಾಗೂ ಓರೊ ಮಾಕ್ಸ್ ಜಂಟಿಯಾಗಿ ದೇಶದಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಮುಖ್ಯಮಂತ್ರಿಗಳ ಪೈಕಿ ದೆಹಲಿಯಲ್ಲಿ ಅರವಿಂದ್ ಕ್ರೇಜಿವಾಲ್‍ಗೆ ಮೊದಲ ಸ್ಥಾನ ಬಂದಿದ್ದರೆ, ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ 2ನೇ ಸ್ಥಾನ ಸಿಕ್ಕಿದೆ. ಕೊರೊನಾ ಭಾರತಕ್ಕೆ ಅಧಿಕೃತವಾಗಿ ಕಾಲಿಟ್ಟ ನಂತರ ಅದನ್ನು ತಡೆಗಟ್ಟಲು ಪ್ರಧಾನಿ …

Read More »