Breaking News

ಬೆಂಗಳೂರು

ದರೋಡೆ ಮಾಡಿ ಎಸ್ಕೇಪ್ ಆಗುತ್ತಿದ್ದ ಮೂವರಿಗೆ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬೆಂಗಳೂರು, ಮೇ 11- ಮೂರು ಮಂದಿ ದರೋಡೆಕೋರರನ್ನು ಸಾರ್ವಜನಿಕರೇ ಹಿಡಿದು ಸಿದ್ದಾಪುರ ಪೊಲೀಸರ ವಶಕ್ಕೆ ನೀಡಿದ್ದಾರೆ.ಸಿದ್ದಾಪುರ ಠಾಣೆ ಪೊಲೀಸರು ಈ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಂದ್ರಾ ಲೇಔಟ್‍ನ ಸಯ್ಯದ್ ನದೀಮ್ (23), ಮಾಗಡಿ ರಸ್ತೆಯ ಚೌಳರಪಾಳ್ಯ ರಾಮದಾಸ್ ಲೇಔಟ್‍ನ ಇರ್ಫಾನ್ ಪಾಷ (20) ಮತ್ತು ಪಾದರಾಯನಪುರದ ಮೌಶಾಕ್ ಅಹಮ್ಮದ್ (44) ಪೊಲೀಸರ ವಶದಲ್ಲಿರುವ ಆರೋಪಿಗಳು. ಈ ಮೂವರು ಹೊಸೂರು ರಸ್ತೆಯ ಸೆಲ್ ಪೆಟ್ರೋಲ್ ಬಂಕ್ ಬಳಿ ವ್ಯಕ್ತಿಯೊಬ್ಬರ …

Read More »

ಮೊಬೈಲ್ ಫೀವರ್ ಕ್ಲಿನಿಕ್‍ಗೆ ಚಾಲನೆ ನೀಡಿದ ಸಿಎಂ …………

ಬೆಂಗಳೂರು,ಮೇ 11- ಗೃಹ ಕಚೇರಿ ಕೃಷ್ಣಾದಲ್ಲಿ ಮೊಬೈಲ್ ಫೀವರ್ ಕ್ಲಿನಿಕ್‍ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರಿನ ನಾಲ್ಕು ವಿಭಾಗಗಳಿಯೂ ಮೊಬೈಲ್ ಫೀವರ್ ಕ್ಲಿನಿಕ್ ಸಂಚಾರ ಮಾಡಲಿದ್ದು, ಈಗಾಗಲೇ ಮೈಸೂರು, ಮಂಗಳೂರಲ್ಲಿ ಈ ಮೊಬೈಲ್ ಫೀವರ್ ಕ್ಲಿನಿಕ್ ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು. ನಾಲ್ಕು ಬಸ್‍ಗಳಲ್ಲಿ ಸಂಚಾರ ಮಾಡಲಿರುವ ಮೊಬೈಲ್ ಫೀವರ್ ಕ್ಲಿನಿಕ್‍ಗಳಲ್ಲಿ ಯಾರಿಗಾದರೂ ಅನಾರೋಗ್ಯ ಕಂಡುಬಂದರೆ ಇಲ್ಲಿ ಸಂಪರ್ಕಿಸಿದರೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ …

Read More »

ಸಂಜೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬಿಡುಗಡೆಯಾದ ಬುಲೆಟಿನ್………

ಬೆಂಗಳೂರು: ಇಂದು 14 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ 1, ಮಂಡ್ಯ 1, ಹಾವೇರಿ 1 ಮತ್ತು ವಿಜಯಪುರದಲ್ಲಿ 1, ಹಾವೇರಿ 1, ಆಂಧ್ರದ ಮೂಲದ ವ್ಯಕ್ತಿಯಿಂದ ಆತನ ಪತ್ನಿಗೆ, ಬೆಂಗಳೂರಿನಲ್ಲಿ 1 ಹೊಸ ಕೊರೊನಾ ಪ್ರಕರಣಗಳು …

Read More »

ಬೆಂಗ್ಳೂರು ಹೋಟಿಲಿನಲ್ಲಿ ಕ್ವಾರಂಟೈನ್ – 1 ದಿನಕ್ಕೆ ಊಟ, ತಿಂಡಿ, ಬಾಡಿಗೆ ಎಷ್ಟು?

ಬೆಂಗಳೂರು: ವಿದೇಶದಿಂದ ಕರ್ನಾಟಕಕ್ಕೆ ಆಗಮಿಸುತ್ತಿರುವ 6,100 ಮಂದಿ ಕನ್ನಡಿಗರನ್ನು ಕ್ವಾರಂಟೈನ್ ಮಾಡಲು ಸರ್ಕಾರ ಹೋಟೆಲ್ ಗಳನ್ನು ಬುಕ್ ಮಾಡಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತರು ಈ ವ್ಯವಸ್ಥೆ ಮಾಡಿದ್ದಾರೆ. 18 ಫೈವ್ ಸ್ಟಾರ್, 23 ತ್ರಿಸ್ಟಾರ್, 18 ಬಜೆಟ್ ಹೋಟೆಲ್ ಸೇರಿದಂತೆ ಒಟ್ಟು 6,008 ರೂಂ ಗಳನ್ನು ಬುಕ್ ಮಾಡಲಾಗಿದ್ದು, ಕ್ವಾರಂಟೈನ್ ವೆಚ್ಚವನ್ನು ಅವರೇ ತುಂಬಬೇಕಾಗುತ್ತದೆ. ಮೊದಲು ಬಂದವರು ತಮ್ಮ ಆಯ್ಕೆ ಅನ್ವಯ ಹೋಟೆಲಿಗೆ ಕರೆದುಕೊಂಡು …

Read More »

ನೆಗೆಟಿವ್ ಬಂದಿದ್ದ ತಬ್ಲಿಘಿಗೆ ಮತ್ತೆ ಪಾಸಿಟಿವ್………..

ಬೆಂಗಳೂರು: ಇಂದು 10 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ. ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ 1, ಹಾವೇರಿ 1 ಮತ್ತು ವಿಜಯಪುರದಲ್ಲಿ 1 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದೆ. ಸೋಂಕಿತರ ವಿವರ: 1. ರೋಗಿ-849: ಕಲಬುರಗಿಯ 38 ವರ್ಷದ ಪುರುಷ. ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. …

Read More »

ಇ-ಪಾಸ್​​ ಪಡೆದ ಅಂತರ್​​ ರಾಜ್ಯ ಪ್ರಯಾಣಿಕರಿಗೆ ಬಸ್​​ ವ್ಯವಸ್ಥೆ – ಕೆಎಸ್​ಆರ್​​ಟಿಸಿ ಸಂಸ್ಥೆ

ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್‌ನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಈ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಿದ್ದ ಲಾಕ್‌ಡೌನ್‌ ವಿಸ್ತರಣೆಯಾಗಿದೆ. ಎರಡು ಹಂತದ ಲಾಕ್‌ಡೌನ್‌ಗಳನ್ನು ಬಹಳ ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್‌ಡೌನ್‌ ಸಡಿಲಗೊಳಿಸಿ ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಿದೆ. ಇದರಲ್ಲಿ ಅಂತರ್‌ ರಾಜ್ಯ ಪ್ರಯಾಣವೂ ಒಂದು. ಹೌದು, ಅಂತರ್​ ರಾಜ್ಯ ಪ್ರಯಾಣಕ್ಕಾಗಿ ಜನ ಸರ್ಕಾರದಿಂದ ಇ- ಪಾಸ್‌ ಪಡೆಯಬೇಕಾದ ಅಗತ್ಯ ಇದೆ. ಯಾವುದೇ ಮುನ್ಸೂಚನೆ ಇಲ್ಲದೇ ದೇಶವ್ಯಾಪಿ …

Read More »

ಲಾಕ್‍ಡೌನ್ ಎಫೆಕ್ಟ್- ಶ್ರೀಮನ್ನಾರಾಯಣನ ಹೊಸ ಅವತಾರ

ಬೆಂಗಳೂರು: ಲಾಕ್‍ಡೌನ್ ಹಿನ್ನೆಲೆ ಸಿನಿಮಾ ರಂಗ ಸಂಪೂರ್ಣ ಸ್ತಬ್ಧವಾಗಿದ್ದು, ನಟ, ನಟಿಯರು ಸಹ ತಮ್ಮದೇ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಲವರು ಬೇಜಾರಲ್ಲಿ ಸಮಯ ಕಳೆದರೆ, ಇನ್ನೂ ಹಲವರು ತಮ್ಮ ಮುಂದಿನ ಪ್ರಾಜೆಕ್ಟ್‍ಗೆ ಸಿದ್ಧತೆ ನಡೆಸಿದ್ದಾರೆ, ಇನ್ನೂ ಹಲವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದಾರೆ. ಹೀಗೆ ಎಲ್ಲ ತಾರೆಯರು ತಮ್ಮದೇ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ನಟ ರಕ್ಷಿತ್ ಶೆಟ್ಟಿ ಸಹ ತಮ್ಮದೇ ಕಾರ್ಯದಲ್ಲಿ ತೊಡಗಿದ್ದು, ತಮ್ಮ ಹೊಸ ಅವತಾರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ …

Read More »

ನೆಲಮಂಗಲ ಬಳಿ ಟ್ರಾಫಿಕ್ ಜಾಮ್- ಬೆಂಗಳೂರಿನತ್ತ ಜನರು…………

ಬೆಂಗಳೂರು: ಲಾಕ್‍ಡೌನ್ ಆರಂಭವಾದ ದಿನಗಳಲ್ಲಿ ಬೆಂಗಳೂರು ತೊರೆದಿದ್ದ ಜನರು ನಗರಕ್ಕೆ ಆಗಮಿಸುತ್ತಿದ್ದು, ನೆಲಮಂಗಲ ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಲ್ಲಿ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಖಾಸಗಿ ಸಂಸ್ಥೆ, ಕಂಪನಿಗಳು ಆರಂಭಗೊಂಡಿವೆ. ಹೀಗಾಗಿ ತಮ್ಮ ಉದ್ಯೋಗಿಗಳಿಗೆ ಕೆಲಸಕ್ಕೆ ಹಾಜರಾಗುವಂತೆ ಕಂಪನಿಗಳು ನೋಟಿಸ್ ನೀಡಿದ್ದರಿಂದ ಜನರು ತಮ್ಮ ತಮ್ಮ ಸ್ವಂತ ವಾಹನಗಳಲ್ಲಿ ಬೆಂಗಳೂರು ನಗರವನ್ನು ಪ್ರವೇಶಿಸುತ್ತಿದ್ದಾರೆ. ಲಾಕ್‍ಡೌನ್ ಆದ ಬಳಿಕ ಇದೇ ಮೊದಲ ಬಾರಿಗೆ ನೆಲಮಂಗಲದ ನವಯುಗ …

Read More »

ಬೆಂಗ್ಳೂರಲ್ಲಿ ದಂಪತಿಯ ಬರ್ಬರ ಹತ್ಯೆ- ಮಗ ಟೆಕ್ಕಿಯಿಂದ್ಲೇ ಕೃತ್ಯ ಶಂಕೆ………….

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಂಪತಿಯ ಬರ್ಬರ ಹತ್ಯೆ ನಡೆದಿದ್ದು, ಮಗ ಟೆಕ್ಕಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದಂಪತಿ. ಇವರನ್ನು ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಗೋವಿಂದಪ್ಪ ಅವರು ಆರ್‍ಬಿಐ ನಿವೃತ್ತ ನೌಕರನಾಗಿದ್ದು, ಮಗ ನವೀನ್ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಂದೆ-ತಾಯಿಯನ್ನು ಕೊಲೆ …

Read More »

ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟ ಸರ್ಕಾರ…….

ಬೆಂಗಳೂರು: ಇತ್ತೀಚೆಗಷ್ಟೆ ಧಾರಾವಾಹಿಗಳ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿದ್ದ ಸರ್ಕಾರ ಇದೀಗ ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟಿದೆ. ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಮಾತ್ರ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಮಾತನಾಡಿದ ಸಚಿವ ಆರ್.ಅಶೋಕ್ ಅವರು, ಸರ್ಕಾರ ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟಿದೆ. ಶೂಟಿಂಗ್ ಬೇಡ ಬದಲಿಗೆ ಪೋಸ್ಟ್ ಪ್ರೊಡಕ್ಷನ್, ಪ್ರೀ ಪ್ರೊಡಕ್ಷನ್ ಕೆಲಸಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಎಡಿಟಿಂಗ್, ಮಿಕ್ಸಿಂಗ್, ಗ್ರಾಫಿಕ್ಸ್ ಈ ರೀತಿಯ ಕೆಲಸ ಮಾಡಿಕೊಳ್ಳಬಹುದು ಎಂದು …

Read More »