ಬೆಂಗಳೂರು: ಕೊರೋನಾ ಲಾಕ್ಡೌನ್ ನಡುವೆಯೇ ಕೊನೆಗೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಎರಡು ದಿನಗಳಿಂದ ಮಹಿಳೆಯರು ಮತ್ತು ಪುರುಷರು ಎನ್ನದೇ ಎಲ್ಲಾ ವಯೋಮಾನದವರು ಬೆಳಿಗ್ಗೆ 7 ಗಂಟೆಯಿಂದಲೇ ವೈನ್ ಸ್ಟೋರ್ಗಳು, ಎಂಆರ್ಪಿ ಎಣ್ಣೆ ಅಂಗಡಿಗಳ ಮುಂದೆ ನಿಂತು ಮದ್ಯ ಖರೀದಿ ಮಾಡುತ್ತಿದ್ದಾರೆ. ಕೊರೋನಾ ವೈರಸ್ ಕಾರಣ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಸರ್ಕಾರದ ನಿಯಮಗಳನ್ನು ಪಾಲಿಸುತ್ತಿರುವುದು ನೋಡುತ್ತಿದ್ದೇವೆ. ಹೀಗಿರುವಾಗ ರಾಜ್ಯದಲ್ಲಿ ಎಂಆರ್ಪಿ ಹಾಗೂ ಎಂಎಸ್ಐಎಲ್ ಮಳಿಗೆಗಳಲ್ಲಿ ಮಾತ್ರ ಮದ್ಯ …
Read More »ಬಾರ್, ರೆಸ್ಟೋರೆಂಟ್ ಸದ್ಯಕ್ಕೆ ಓಪನ್ ಮಾಡಲ್ಲ: ಸಚಿವ ನಾಗೇಶ್
ಬೆಂಗಳೂರು, : ಮೂರನೇ ಅವಧಿಯ ಲಾಕ್ಡೌನ್ ನಡುವೆಯೂ ಷರತ್ತುಗಳ ನಡುವೆ ಮೇ.04ರಿಂದ ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರವು ಸಂಪೂರ್ಣ ಅನುಮತಿ ನೀಡಿದೆ. ಎಂಎಸ್ಐಎಲ್ ಹಾಗೂ ವೈನ್ ಶಾಪ್ ಮೂಲಕ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ. ಇದರಿಂದ ಭರ್ಜರಿ ಗಳಿಕೆಯೂ ಆಗುತ್ತಿದೆ. ಆದರೆ, ಇದರ ಜೊತೆಗೆ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಮಾಡಲಾಗುತ್ತೆ ಎಂಬ ಸುದ್ದಿ ಹಬ್ಬುತ್ತಿದೆ. ಆದ್ರೆ, ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ …
Read More »ಕೆಎಸ್ಆರ್‌ಟಿಸಿ ಉಚಿತ ಬಸ್ ಸಂಚಾರ ಶುಕ್ರವಾರದಿಂದ ಸ್ಥಗಿತ?
ಬೆಂಗಳೂರು, ಮೇ 07 : ಬೆಂಗಳೂರು ನಗರದಿಂದ ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ತಲುಪಿಸಲು ಕೆಎಸ್ಆರ್‌ಟಿಸಿ ಆರಂಭಿಸಿದ್ದ ಬಸ್ ಸೇವೆ ಮೇ 8ರಿಂದ ಸ್ಥಗಿತಗೊಳ್ಳಲಿದೆ. ಗುರುವಾರದ ತನಕ ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಕಳೆದ 5 ದಿನಗಳಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ವಲಸೆ ಕಾರ್ಮಿಕರು ತೆರಳಿದ್ದಾರೆ. ಉಚಿತ ಪ್ರಯಾಣಕ್ಕೆ ಗುರುವಾರ ಕೊನೆ ದಿನವಾಗಿದ್ದು, ಶುಕ್ರವಾರದಿಂದ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಇದುವರೆಗೂ ಸುಮಾರು 3,500 ಬಸ್‌ಗಳನ್ನು …
Read More »ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ: ಸಿಎಂ ಪ್ಯಾಕೇಜ್ ಬಗ್ಗೆ ಸಿದ್ಧರಾಮಯ್ಯ ಟೀಕೆ
ಬೆಂಗಳೂರು,: ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರು, ಚಾಲಕರು, ರೈತರು ಸೇರಿ ಇತರೆ ವರ್ಗದ ಜನರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು 1610 ಕೋಟಿ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ ಈ ವಿಶೇಷ ಪ್ಯಾಕೇಜ್ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದು, ‘ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ’ ಇದ್ದಂತೆ ಇದು ಎಂದಿದ್ದಾರೆ. ಸಿಎಂ ಘೋಷಣೆ ಮಾಡಿರುವ ಆರ್ಥಿಕ ನೆರವಿನ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ”ನಾವು …
Read More »ವರದಿಗಾರ ಹನುಮಂತು ಕುಟುಂಬಕ್ಕೆ ವೆಬಿನಾರ್ ಹಣ – ಸುರಾನಾ ಕಾಲೇಜು ತೀರ್ಮಾನ
ಬೆಂಗಳೂರು: ಸುರಾನಾ ಪೀಣ್ಯಾ ಕ್ಯಾಂಪಸ್ ಅಲ್ಲಿ ವೆಬಿನಾರ್ ಅನ್ನು ಆಯೋಜನೆ ಮಾಡಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್‍ಲೈನ್ ಕ್ಲಾಸ್ ಮಾಡಲು ತೀರ್ಮಾನಿಸಿ ಇದನ್ನು ಶುರು ಮಾಡಿದ್ದೇವೆ ಎಂದು ಕಾಲೇಜಿನ ಪ್ರಾಂಶುಪಾಲೆ ರಮ್ಯಾ ಅವರು ಹೇಳಿದ್ದಾರೆ. ಕೇವಲ ಉಪನ್ಯಾಸಕರಿಂದ ಕ್ಲಾಸ್ ಮಾಡುವುದಕ್ಕಿಂತ ಅತಿಥಿ ಉಪನ್ಯಾಸಕರಿಂದ ಆನ್‍ಲೈನ್ ಕ್ಲಾಸ್ ಮಾಡಿಸಲು ಶುರು ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ಕ್ಲಾಸಿನ ಬಗ್ಗೆ ಗಂಭೀರತೆ ಇರಲಿ ಎಂದು 100, 200 ರೂಪಾಯಿ ಎಂದು ಫೀಸ್ ಕೂಡ ಮಾಡಿದ್ದೇವೆ. ಈ ಹಣವನ್ನು …
Read More »ಮಂಗಮ್ಮನಪಾಳ್ಯದ ಕಾರ್ಮಿಕನ ಪುತ್ರಿಯ ಕೋವಿಡ್-19 ವರದಿ ನೆಗೆಟಿವ್ ಬಂದಿದೆ.
ಬೆಂಗಳೂರು: ಮಂಗಮ್ಮನಪಾಳ್ಯದ ಕಾರ್ಮಿಕನ ಪುತ್ರಿಯ ಕೋವಿಡ್-19 ವರದಿ ನೆಗೆಟಿವ್ ಬಂದಿದೆ. ಮಂಗಮ್ಮನಪಾಳ್ಯದ ಕೂಲಿ ಕಾರ್ಮಿಕನಿ(ರೋಗಿ ನಂಬರ್ 654)ಗೆ ಸೋಂಕು ತಗುಲಿರೋದು ದೃಢವಾಗ್ತಿದ್ದಂತೆ ಆತನ ಕುಟುಂಬಸ್ಥರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಕಾರ್ಮಿಕನ ಪುತ್ರ ಮತ್ತು ಪತ್ನಿಗೆ ಸೋಂಕು ತಗುಲಿದೆ. ಆದ್ರೆ ಅವರ ಜೊತೆಯಲ್ಲಿದ್ದ ಪುತ್ರಿಯ ವರದಿ ನೆಗೆಟಿವ್ ಬಂದಿದೆ. ಕಾರ್ಮಿಕನ ಪುತ್ರ ನಗರದಲ್ಲಿ ಡೆಲಿವರಿ ಬಾಯ್ (ರೋಗಿ ನಂಬರ್ 678) ಆಗಿ ಕೆಲಸ ಮಾಡಿಕೊಂಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಇದೀಗ …
Read More »ಚಿಕನ್ ಗುನ್ಯಾ ಸೋಂಕು ಅಂತ ಖಾಸಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್
ಬೆಂಗಳೂರು: ಚಿಕನ್ ಗುನ್ಯಾ ಸೋಂಕು ಅಂತ ಖಾಸಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆ ಕೊರೊನಾ ಪಾಸಿಟಿವ್ ಬಂದಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ. 49 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಜೊತೆಗೆ ಆಸ್ಪತ್ರೆಯಿಂದ ಇತರೆ ರೋಗಿಗಳನ್ನ ಸ್ಥಳಾಂತರಗೊಳಿಸಲಾಗಿದೆ. ಸೋಂಕಿತ ಮಹಿಳೆಯು ಮೂಲತಃ ಪಶ್ಚಿಮ ಬಂಗಾಳದವರಾಗಿದ್ದು, ಯಶವಂತಪುರದ ಸುಬೇದಾರ್ ಪಾಳ್ಯದಲ್ಲಿರುವ ಮಗನ ಮನೆಗೆ ಮಾರ್ಚ್ 12ರಂದು ಬಂದಿದ್ದರು. ಅವರಿಗೆ ಏಪ್ರಿಲ್ 30ರಂದು ಜ್ಚರ ಕಾಣಿಸಿಕೊಂಡಿತ್ತು. ಹೀಗಾಗಿ ಚಿಕನ್ …
Read More »ಹೊರ ರಾಜ್ಯದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಬರಬಹುದು – ಷರತ್ತುಗಳು ಅನ್ವಯ
ಬೆಂಗಳೂರು: ಹೊರ ರಾಜ್ಯದಲ್ಲಿರುವ ಕನ್ನಡಿಗರು ಇನ್ನು ಮುಂದೆ ಕರ್ನಾಟಕಕ್ಕೆ ಬರಬಹುದು. ಲಾಕ್‍ಡೌನ್ ಘೋಷಣೆಗೂ ಮುನ್ನ ನೆರೆ ರಾಜ್ಯಕ್ಕೆ ಹೋಗಿರುವ ಕನ್ನಡಿಗರು ಪಾಸ್ ಪಡೆಯುವ ಮೂಲಕ ಮರಳಿ ಕರ್ನಾಟಕಕ್ಕೆ ಬರಬಹುದು. ರಾಜ್ಯಕ್ಕೆ ಬರುವ ಕನ್ನಡಿಗರು ಸೇವಾ ಸಿಂಧು ವೆಬ್‍ಸೈಟ್‍ಗೆ ತೆರಳಿ ವಿವರಗಳನ್ನು ನೀಡಬೇಕಾಗುತ್ತದೆ. ಈ ಎಲ್ಲ ವಿವರಗಳು ಸರಿಯಾಗಿದ್ದರೆ ಇ ಪಾಸ್ ಡೌನ್‍ಲೋಡ್ ಮಾಡಬಹುದು. ಇ ಪಾಸ್ ಸಿಕ್ಕಿದ ದಿನದಿಂದ ಒಂದು ವಾರದ ವರೆಗೆ ಮಾತ್ರ ಈ ಪಾಸ್ ಉರ್ಜಿತದಲ್ಲಿರುತ್ತದೆ. ಸ್ವಂತ …
Read More »ಶ್ರಮಿಕ ವರ್ಗಕ್ಕೆ B.S.Y. ನೆರವು……..
ಬೆಂಗಳೂರು: ಕೊರೊನಾ ಲಾಕ್‍ಡೌನ್ ಆಗಿ 47 ದಿನಗಳು ಕಳೆದಿವೆ. ಲಾಕ್‍ಡೌನ್ ಅವಧಿಯಲ್ಲಿ ಅತೀ ಹೆಚ್ಚು ಸಂಕಷ್ಟಕ್ಕೆ ತುತ್ತಾದವರು ಆಯಾ ದಿನದ ಕೆಲಸವನ್ನೇ ನಂಬಿ ಜೀವನ ನಡೆಸುತ್ತಾ ಬಂದಿವರೇ ಆಗಿದ್ದಾರೆ. ವೃತ್ತಿನಿರತ ಕ್ಷೌರಿಕರು, ಅಗಸರು, ರೈತರು, ಆಟೋ ಟ್ಯಾಕ್ಸಿ ಚಾಲಕರು, ಹೂ, ಹಣ್ಣು ಬೆಳೆಗಾರರು ಸಾಕಷ್ಟು ಕಷ್ಟ ನಷ್ಟಗಳನ್ನು ಉಂಡಿದ್ದರು. ಉದ್ಯಮ ವಲಯವೂ ಸ್ತಬ್ಧ ಆಗಿ ಉದ್ಯಮಿಗಳು ಕಂಗಾಲಾಗಿದ್ದರು. ಇದೀಗ ಈ ವರ್ಗದವರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. 1,610 ಕೋಟಿ …
Read More »ಮದ್ಯದ ಮತ್ತಿನಲ್ಲಿ ಪತ್ನಿಯ ಕತ್ತು ಸೀಳಿದ ಪಾಪಿ…….
ಬೆಂಗಳೂರು: ಮದ್ಯದ ಮತ್ತಿನಲ್ಲಿ ಪಾಪಿ ಪತಿಯೊಬ್ಬ ಪತ್ನಿಯನ್ನ ಕೊಲೆಗೈದ ಘಟನೆ ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯ ದಿವ್ಯ (24) ಕೊಲೆಯಾದ ಪತ್ನಿ. ತೀರ್ಥಪ್ರಸಾದ್ ಕೊಲೆಗೈದ ಪತಿ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತೀರ್ಥಪ್ರಸಾದ್ ಕೃತ್ಯ ಎಸದಿದ್ದಾನೆ ಎನ್ನಲಾಗಿದೆ. ಕಾರು ಚಾಲಕನಾಗಿದ್ದ ತೀರ್ಥಪ್ರಸಾದ್ ಬುಧವಾರ ಮದ್ಯ ಕುಡಿದು ಮನೆ ಬಂದಿದ್ದ. ಈ ವೇಳೆ ಪತ್ನಿಯ ಜೊತೆಗೆ ಜಗಳ ಆರಂಭಿಸಿ ಚಾಕುವಿನಿಂದ ಕತ್ತು ಸೀಳಿ ನಾಪತ್ತೆಯಾಗಿದ್ದಾನೆ. ಈ …
Read More »