ಬೆಂಗಳೂರು: “ಪತ್ನಿಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಿ. ಇಂದು ಮಧ್ಯಾಹ್ನದ ನಂತರ ಡೆಲಿವರಿ ಅದರೆ ಒಕೆ. ಟೈಂ ಚೆನ್ನಾಗಿದೆ” ಹೀಗೆಂದು ಕೊರೊನಾ ಸೋಂಕು ಪೀಡಿತ ಗರ್ಭಿಣಿಯ ಪತಿ ವೈದ್ಯರ ಬಳಿ ಬೇಡಿಕೆ ಇಟ್ಟಿದ್ದಾರೆ. ಗರ್ಭಿಣಿಯನ್ನು(ರೋಗಿ ಸಂಖ್ಯೆ 652) ವಿಕ್ಟೋರಿಯಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಈ ನಡುವೆ ಈ ಮೊದಲು ಪರೀಕ್ಷಿಸಿದ ಖಾಸಗಿ ಆಸ್ಪತ್ರೆಯವರು ಡೆಲಿವರಿಗೆ ಮೇ 9 ರಂದು ದಿನಾಂಕ ನೀಡಿದ್ದಾರೆ. ಆದರೆ ಈಗ ಸೋಂಕು ಬಂದಿರುವುದರಿಂದ ಕೋವಿಡ್ …
Read More »ಇಂದು ಬೆಳಿಗ್ಗೆ 11ಕ್ಕೆ ಯಡಿಯೂರಪ್ಪ ಸುದ್ದಿಗೋಷ್ಠಿ; ಮಹತ್ವದ ಮಾಹಿತಿ ನೀಡಲಿದ್ದಾರೆ ಸಿಎಂ?
ಬೆಂಗಳೂರು (ಮೇ 6): ಲಾಕ್ಡೌನ್ ಆರಂಭವಾದಾಗಿನಿಂದಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುತ್ತಲೇ ಇದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸದ್ಯ ರಾಜ್ಯದ ಪರಿಸ್ಥಿತಿ ಹೇಗಿದೆ ಎನ್ನುವುದರ ಬಗ್ಗೆ ಬಿಎಸ್ವೈ ಇಂದು 11 ಗಂಟೆಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ. ಲಾಕ್ಡೌನ್ ಶುರುವಾದ ದಿನಾಂಕ ಅಂದರೆ ಮಾ.21 ನೇ ತಾರೀಕಿನಿಂದ ಇಲ್ಲಿಯವರೆಗಿನ ಪರಿಣಾಮ, ಕೋರೋನಾ ತಡೆಗಟ್ಟಲು ಲಾಕ್‌ಡೌನ್ ಎಷ್ಟರಮಟ್ಟಿಗೆ ಸಹಕಾರಿಯಾಗಿದೆ, ಕೊರೊನಾ ತಡೆಗಟ್ಟುವಲ್ಲಿ ಸರ್ಕಾರ …
Read More »ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದ 11 ಜನರಿಗೆ ಕೊರೋನಾ ಸೋಂಕು; ಮಾದಾವರ ಬಳಿ ಹೈ ಅಲರ್ಟ್
ಬೆಂಗಳೂರು (ಮೇ 06); ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (Bangalore International Exhibition Centre) ಕೆಲಸ ಮಾಡುವ ಉತ್ತರಪ್ರದೇಶ ಮೂಲದ 11 ಜನರಲ್ಲಿ ಇದೀಗ ಕೊರೋನಾ ಸೋಂಕು ಪತ್ತೆಯಾಗಿದ್ದು ಮಾದಾವರ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಬೆಂಗಳೂರಿ ಮಾದಾವರ ಬಳಿ ಇರುವ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಅನೇಕ ಉತ್ತರ ಭಾರತೀಯರು ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಿದ ವೇಳೆ ಹೈ ಟೆಂಪರೇಚರ್ ಕಂಡುಬಂದಿತ್ತು. ಹೀಗಾಗಿ 11 ಜನರನ್ನು ನೆನ್ನೆ ವಿಕ್ಟೊರಿಯಾ ಆಸ್ಪತ್ರೆಗೆ ರವಾನೆ …
Read More »ಇಂದಿನಿಂದ ಎಣ್ಣೆ ಮತ್ತಷ್ಟು ದುಬಾರಿ?……..
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಎಣ್ಣೆ ಇಲ್ಲದೆ 42 ದಿನಗಳನ್ನು ಮುಗಿಸಿದ ಮದ್ಯಪ್ರಿಯರಿಗೆ ಇಂದು ಬಿಗ್ ಶಾಕ್ ಸುದ್ದಿಯೊಂದು ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಶೇ.6 ರಷ್ಟು ಅಬಕಾರಿ ಸುಂಕ ಹೆಚ್ಚಳದ ಬಿಸಿ ಅನುಭವಿಸಿದ್ದ ಮದ್ಯಪ್ರಿಯರಿಗೆ ಈಗ ಕೊರೊನಾ ಶಾಕ್ ಫಿಕ್ಸ್ ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ಹೌದು. ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆಯೆಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಅಬಕಾರಿ ಸುಂಕದ ಜೊತೆಗೆ ಮದ್ಯದ …
Read More »ಪಬ್‍ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದಕ್ಕೆ ಕೊಲೆಗೈದವನ ಕಾಲಿಗೆ ಗುಂಡೇಟು…..
ಬೆಂಗಳೂರು: ಪಬ್ ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದಕ್ಕೆ ಗೆಳೆಯನನ್ನು ಕೊಲೆಗೈದಿದ್ದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡೇಟು ಸದ್ದು ಕೇಳಿದೆ. ಪಬ್ ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದ ಅನ್ನೋ ಕಾರಣಕ್ಕೆ ಕರಣ್ ಸಿಂಗ್ ಎಂಬವನ್ನ ರೌಡಿ ಶೀಟರ್ ಪ್ರಭು ಕೊಲೆ ಮಾಡಿದ್ದನು. ಇಂದು ಪೊಲೀಸರು ಆಚಾರ್ಯ ಕಾಲೇಜ್ ಬಳಿಯ ಸಾಸಿವೆಘಟ್ಟದಲ್ಲಿ ಪ್ರಭು ಬಂಧನಕ್ಕೆ ಮುಂದಾಗಿದ್ದರು. ಈ ವೇಳೆ ಪೇದೆ …
Read More »ಧಾರಾವಾಹಿ ಶೂಟಿಂಗ್‍ಗೆ ಸರ್ಕಾರದಿಂದ ಅನುಮತಿ..!
ಬೆಂಗಳೂರು : ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿರುವ ಧಾರಾವಾಹಿ ಶೂಟಿಂಗ್‍ಗಳಿಗೆ ಸರ್ಕಾರ ಅನುಮತಿ ನೀಡಿ ಮಹತ್ವದ ನಿರ್ಧಾರ ಪ್ರಕಟಿಸಿದೆ. ಲಾಕ್‌ಡೌನ್‌ನಿಂದ ಕಿರುತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದು ಒಂದೂವರೆ ತಿಂಗಳಾಗಿವೆ. ಈ ಮಧ್ಯೆ ಲಾಕ್‌ಡೌನ್ ಕೊಂಚ ಸಡಲಿಕೆಯಾಗಿರುವುದರಿಂದ ಮತ್ತು ಬೇರೆ ಬೇರೆ ವಲಯಗಳಲ್ಲಿ ಕೆಲಸ ಪ್ರಾರಂಭವಾಗುತ್ತಿರುವುದರಿಂದ, ಕಿರುತೆರೆಯ ಚಿತ್ರೀಕರಣಕ್ಕೂ ಅನುವು ಮಾಡಿಕೊಡಬೇಕೆಂದು ಹಲವರು ಇದೀಗ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಕುರಿತು ಮಂಗಳವಾರ ಮಾತನಾಡಿದ್ದ ಕಂದಾಯ ಸಚಿವ ಆರ್. ಅಶೋಕ್, ಧಾರಾವಾಹಿ ಮತ್ತು …
Read More »ಕುಡುಕರ ಅವಾಂತರದಿಂದ ಮತ್ತೊಂದು ಕೊಲೆ!
ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ 43 ದಿನಗಳಿಂದ ಮದ್ಯ ಸಿಗದೆ ಪರದಾಡಿದ್ದ ಕುಡುಕರು ಸೋಮವಾರ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮದ್ಯ ಸೇವಿಸಿ ಸುಮ್ಮನಿರದ ಕೆಲವರು ಕೊಲೆ, ಹಲ್ಲೆಗೆ ನಡೆಸಿರುವ ಘಟನೆಗಳು ವರದಿಯಾಗುತ್ತಲೇ ಇವೆ. ಇಂತಹದ್ದೇ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಪುರುಷೋತ್ತಮ್ ಕೊಲೆಯಾದ ವ್ಯಕ್ತಿ. ಕಾಮಾಕ್ಷಿಪಾಳ್ಯದ ಆದಿತ್ಯ ಬಾರ್ ಮುಂದೆ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ …
Read More »2ನೇ ದಿನವೂಮದ್ಯ ಮಾರಾಟದಲ್ಲಿ ಬಂಪರ್- 197 ಕೋಟಿ ರೂ. ಮದ್ಯ ಮಾರಾಟ
ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ನಿಯಮಗಳ ಸಡಿಲಿಕೆಯ 2ನೇ ದಿನವೂ ಮದ್ಯ ಮಾರಾಟ ಜೋರಾಗಿದ್ದು, ಇಂದು 197 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ ಮಾಡಲಾಗಿದೆ ಎಂದು ಕೆಎಸ್‍ಬಿಸಿಎಲ್ ಅಧಿಕಾರಿ ತಿಳಿಸಿದ್ದಾರೆ. ಇಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಮಾರಾಟವಾಗಿರುವ ಮದ್ಯದ ಮಾಹಿತಿ ನೀಡಲಾಗಿದ್ದು, 36.37 ಲಕ್ಷ ಲೀಟರ್ ಭಾರತೀಯ ಮದ್ಯ ಹಾಗೂ 7.02 ಲಕ್ಷ ಲೀಟರ್ ಬಿಯರ್ ಮಾರಾಟ ಮಾಡಲಾಗಿದೆ. ಉಳಿದಂತೆ ಬೆಳಗ್ಗೆಯಿಂದ ನಾಲ್ಕು ಗಂಟೆಯವರೆಗೆ ಕರ್ನಾಟಕ ಪಾನೀಯ ನಿಗಮ (ಕೆಎಸ್‍ಬಿಸಿಎಲ್) ನಿಂದ …
Read More »ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ದಾವಣೆಗೆರೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಂದು ಒಂದೇ ದಿನ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲೆಯೊಂದರಲ್ಲೇ ಇಂದು 12 ಜನರಲ್ಲಿ ಸೋಂಕು …
Read More »ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.ಸುವಿದ್ಯಾ ವೆಬ್ಸೈಟ್ನಲ್ಲಿ ಲಭ್ಯ
ಬೆಂಗಳೂರು: ಕಳೆದ ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಲಾಕ್ಡೌನ್ ಹಿನ್ನೆಲೆ ಸುವಿದ್ಯಾ ವೆಬ್ಸೈಟ್ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಸುವಿದ್ಯಾ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಹಾಗೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ನಂಬರ್ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಗುಂಪು ಸೇರುವ ಸಾಧ್ಯತೆ ಇರುವುದರಿಂದ ಕೊರೊನಾ ಸೋಂಕು ಹರಡುವ ಭೀತಿಯಿಂದ ಸುವಿದ್ಯಾ …
Read More »