Breaking News

ಬೆಂಗಳೂರು

ಮಾಸ್ಕ್ ಧರಿಸದಿದ್ರೆ ಬೀಳುತ್ತೆ ಫೈನ್- 9 ಗಂಟೆ ಮೇಲೆ ರೋಡ್‍ಗಿಳಿದ್ರೆ ವೆಹಿಕಲ್ ಸೀಜ್………….

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 130ರ ಗಡಿ ದಾಟಿದೆ. ಆದರೂ ಜನ ಸಾಮಾನ್ಯರು ಎಚ್ಚೆತ್ತುಕೊಳ್ಳುತ್ತಿಲ್ಲ. ಇದರಿಂದಾಗಿ ಬಿಬಿಎಂಪಿ ಟೀಂ ಫೀಲ್ಡಿಗೆ ಇಳಿದಿದೆ. ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ನಿಮಯಗಳನ್ನು ಬಿಬಿಎಂಪಿ ಜಾರಿಗೆ ತಂದಿದೆ. ಮಾಸ್ಕ್ ಧರಿಸದೇ ಓಡಾಡಿದ್ರೆ 1 ಸಾವಿರ ರೂಪಾಯಿ ದಂಡ ಹಾಕಲಾಗುತ್ತದೆ. 9 ಗಂಟೆವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ 9 …

Read More »

ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕಹೆಚ್ಚಳ..

ಬೆಂಗಳೂರು: ಕೊರೊನಾ ಲಾಕ್‍ಡೌನ್ ನಡುವೆ ಮೆಡಿಕಲ್ ಮತ್ತು ಡೆಂಟಲ್ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಿದೆ. ಖಾಸಗಿ ಕಾಲೇಜ್‍ಗಳು, ಖಾಸಗಿ ವಿವಿಗಳು, ಡೀಮ್ಡ್ ವಿವಿಗಳ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಖಾಸಗಿ ಕೋಟಾದ ಸೀಟುಗಳಿಗೆ ಶೇ. 30ರಷ್ಟು ಶುಲ್ಕ ಅಧಿಕವಾಗಿದೆ. ಇನ್ನೂ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಸೇರುವ ವಿದ್ಯಾರ್ಥಿಗಳಿಗೆ ಶೇ. 20ರಷ್ಟು ಶುಲ್ಕವನ್ನು ಸರ್ಕಾರ …

Read More »

ಇನ್ನೂ ಮೂರ್ನಾಲ್ಕು ತಿಂಗಳು ಇರುತ್ತೆ ಕೊರೋನಾ : ಸಿಎಂ ಯಡಿಯೂರಪ್ಪ

ಬೆಂಗಳೂರು, ಏ.30- ಕೊರೊನಾ ಮಹಾಮಾರಿ ಇನ್ನೂ ಮೂರ್ನಾಲ್ಕು ತಿಂಗಳು ಮುಂದುವರಿಯುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ವೃದ್ಧಿ ದೃಷ್ಟಿಯಿಂದ ಮೇ 3ರ ನಂತರ ಕೈಗಾರಿಕೆಗಳನ್ನು ತೆರೆಯುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಇಂದು ಸಂಜೆ ಕೈಗಾರಿಕೆ ತೆರೆಯುವ ಕುರಿತಂತೆ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಮೇ 3ಕ್ಕೆ ಲಾಕ್‍ಡೌನ್ ಅವಧಿ ಅಂತ್ಯಗೊಳ್ಳಲಿದ್ದು, …

Read More »

ಮೇ 5.ರಂದು ಪ್ರಥಮ ಪಿಯುಸಿ ಫಲಿತಾಂಶ………..

ಬೆಂಗಳೂರು : ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಮೇ 5.ರಂದು, ಈಗಾಗಲೇ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಂಡಿರುವ ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು‌ಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆ ಸ್ಪಷ್ಟ ಪಡಿಸಿದೆ. ಖಾಸಗಿ ಕಾಲೇಜುಗಳು ಈ ಸಾಲಿನಲ್ಲಿ‌ ಶುಲ್ಕ ಹೆಚ್ಚಿಸುವ …

Read More »

ಲಾಕ್‍ಡೌನ್ ವೇಳೆ ಸೀಜ್ ಆದನಾಲ್ಕು ಚಕ್ರದ ವಾಹನಗಳಿಗೆ ಒಂದು ಸಾವಿರ ದಂಡ ಮತ್ತು ದ್ವಿಚಕ್ರ ಮತ್ತು ಆಟೋ ರಿಕ್ಷಾಗಳಿಗೆ 500 ದಂಡ

ಬೆಂಗಳೂರು : ಲಾಕ್‍ಡೌನ್ ವೇಳೆ ಸೀಜ್ ಆದ ವಾಹನಗಳನ್ನು ದಂಡ ವಿಧಿಸಿ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.ಲಾಕ್‍ಡೌನ್ ವೇಳೆ ಸೀಜ್ ಆದ ವಾಹನಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಇದರ ಬೆನ್ನಲ್ಲೇ ಹೈಕೋರ್ಟ್ ಸೀಜ್ ಆದ ವಾಹನಗಳಿಗೆ ಫೈನ್ ಹಾಕಿ ನಂತರ ಬಿಡುಗಡೆ ಮಾಡುವಂತೆ ಸೂಚಿಸಿದೆ. ಹೈಕೋರ್ಟ್ ನೀಡಿರುವ ಆದೇಶದಲ್ಲಿ ಲಾಕ್‍ಡೌನ್ ವೇಳೆ ಸೀಜ್ ಮಾಡಲಾದ ವಾಹನಗಳಿಗೆ ಫೈನ್ …

Read More »

ಪಾದರಾಯನಪುರಕ್ಕೆ ‘ಫ್ಯಾಕ್ಟರಿ’ ಕಂಟಕ………….

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 3 ದಿನಗಳಿಂದ ಕಡಿಮೆಯಾಗಿದ್ದ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಇವತ್ತು ಏಕಾಏಕಿ ಜಿಗಿತ ಕಂಡು ಬಂದಿದೆ. ಇವತ್ತು 10 ಸೋಂಕಿತರ ಪೈಕಿ, 8 ಮಂದಿ ಪಾದರಾಯನಪುರದವರು. ಇಲ್ಲಿ ಪತ್ತೆಯಾದ ಪ್ರಕರಣಗಳ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ತಬ್ಲಿಘಿಯ ಸಂಪರ್ಕ ಹೊಂದಿದ್ದ ಲೆದರ್ ಫ್ಯಾಕ್ಟರಿಯ ಮಾಲೀಕ(ರೋಗಿ ನಂ.199)ನಿಂದ ಏಳು ಮಂದಿಗೆ ಸೋಂಕು ತಗುಲಿದೆ. ಕಾರ್ಮಿಕನೊಬ್ಬನ ಇಡೀ ಕುಟುಂಬವನ್ನು ಕ್ವಾರಂಟೈನ್ ಮಾಡಿದ ಬಳಿಕ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಹರಡಿರುವುದು ಗೊತ್ತಾಗಿದೆ. …

Read More »

ಮಾಸ್ಕ್ ಧರಿಸದಿದ್ದರೆ, ಸರಿಯಾಗಿ ವಿಲೇವಾರಿ ಮಾಡದಿದ್ದರೆ 1 ಸಾವಿರ ರೂ. ದಂಡ ಹಾಗೂ ಕೇಸ್

ಬೆಂಗಳೂರು: ಕೊರೊನಾ ಅವಾಂತರದ ಹಿನ್ನೆಲೆ ಮಾಸ್ಕ್ ಧರಿಸುವ ಕುರಿತು, ಎಲ್ಲೆಂದರಲ್ಲಿ ಉಗುಳುವ ಕುರಿತು ಈಗಾಗಲೇ ಹಲವು ರಾಜ್ಯಗಳಲ್ಲಿ ದಂಡ ಹಾಕಲಾಗುತ್ತಿದ್ದು, ಅದೇ ರೀತಿ ತಾಜ್ಯದಲ್ಲೂ ದಂಡ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಬಿಬಿಎಂಪಿ ಕಮೀಷನರ್ ಅನಿಲ್ ಕುಮಾರ್  ಮಾಹಿತಿ ನೀಡಿದ್ದು, ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಬಿಬಿಎಂಪಿ ಈ ನಿರ್ಧಾರ ಕೈಗೊಂಡಿದ್ದು, ಶುಕ್ರವಾರದಿಂದಲೇ ದಂಡ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕವಾಗಿ ಮಾಸ್ಕ್ ಹಾಕದಿದ್ದರೆ, ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದರೆ, ಎಲ್ಲೆಂದರಲ್ಲಿ …

Read More »

ಜನಪ್ರತಿನಿಧಿಗಳು ಹಾಗೂ ಅವರ ಕಾರ್ಯದರ್ಶಿಗಳು ಸ್ಪಂದಿಸಿದ ರೀತಿ ನನ್ನನ್ನು ಮಂತ್ರಮುಗ್ದನ್ನಾಗಿಸಿದೆ.

ಬೆಂಗಳೂರು: ನಟ ಅನಿರುದ್ಧ್ ಕಿರುತೆರೆಯ ಧಾರಾವಾಹಿ ಮೂಲಕ ಮನೆ ಮಾತಾಗಿದ್ದು, ಜೊತೆ ಜೊತೆಯಲಿ ಸೀರಿಯಲ್‍ನಿಂದ ಕನ್ನಡಿಗರ ಮನ ಗೆದ್ದಿದ್ದಾರೆ. ಹೀಗಾಗಿ ಅವರಿಗೆ ಫ್ಯಾನ್ ಫಾಲೋವರ್ಸ್ ಹೆಚ್ಚಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಹ ಈ ಧಾರಾವಾಹಿ ಹವಾ ಹೆಚ್ಚಾಗಿದೆ. ನಟ ಅನಿರುದ್ಧ ಹೆಚ್ಚು ಪ್ರಸಿದ್ಧಿ ಪಡೆಯುತ್ತಿದ್ದಾರೆ. ನಟ ಅನಿರುದ್ಧ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದು, ತಮ್ಮ ವೃತ್ತಿ ಜೀವನದ ಕುರಿತು ಅಪ್‍ಡೇಟ್ ನೀಡುವುದರ ಜೊತೆಗೆ, ವೈಯಕ್ತಿಕ ವಿಚಾರಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ. ಅದೇ ರೀತಿ …

Read More »

ಬೆಂಗಳೂರು:ಹಳ್ಳಿಗರ ನೆರವಿಗೆ ನಿಂತ ಶಾನ್ವಿಶ್ರೀವಾಸ್ತವ್………..

ಬೆಂಗಳೂರು: ಶಾನ್ವಿ ಶ್ರೀವಾಸ್ತವ್ ಉತ್ತರ ಪ್ರದೇಶದ ವಾರಾಣಸಿಯವರಾದರೂ ಕನ್ನಡ ಚಿತ್ರರಂಗದಲ್ಲಿ ನೆಲೆ ಕಂಡುಕೊಂಡಿದ್ದಾರೆ. ಈಗಾಗಲೇ ಸ್ಯಾಂಡಲ್‍ವುಡ್‍ನಲ್ಲಿ ಹತ್ತಾರು ಸಿನಿಮಾಗಳನ್ನು ಮಾಡುವ ಮೂಲಕ ಗುರುತಿಸಿಕೊಂಡಿರುವ ಶಾನ್ವಿ, ತಮ್ಮ ನಟನೆ ಮೂಲಕವೇ ಕನ್ನಡಿಗರನ್ನು ಸೆಳೆದಿದ್ದಾರೆ. ಸ್ಯಾಂಡಲ್‍ವುಡ್ ಪ್ರಸಿದ್ಧ ನಟರೊಂದಿಗೆ ಶಾನ್ವಿ ತೆರೆ ಹಂಚಿಕೊಂಡಿದ್ದು, ಇತ್ತೀಚೆಗೆ ಶ್ರೀಮನ್ನಾರಾಯಣ ಚಿತ್ರದಲ್ಲೂ ಮೋಡಿ ಮಾಡಿದ್ದಾರೆ. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅವರು, ತಾರಕ್, ಮಫ್ತಿ, ದಿ ವಿಲನ್ ಅವನೇ ಶ್ರೀಮನ್ನಾರಾಯಣ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ …

Read More »

ಕೊರೊನಾ ವಾರಿಯರ್ಸ್ ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ………..

ಬೆಂಗಳೂರು: ಕೊರೊನಾ ವಾರಿಯರ್ಸ್ ಕೋವಿಡ್-19 ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ನೀಡುವುದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಇಡೀ ದೇಶವನ್ನೇ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ಸೋಂಕಿನ ವಿರುದ್ಧ ಆಸ್ಪತ್ರೆ ಸಿಬ್ಬಂದಿ, ಪೊಲೀಸರು, ಆಶಾ ಕಾರ್ಯಕರ್ತೆರು ಸೇರಿಂದಂತೆ ಜೀವ ಹಂಗು ತೊರೆದು ಹೋರಾಡುತ್ತಿದ್ದಾರೆ. ಹೀಗಾಗಿ ಒಂದು ವೇಳೆ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸುವಾಗ ಸೋಂಕಿಗೆ ಗುರಿಯಾಗಿ ಸಾವನ್ನಪ್ಪಿದ್ದರೆ, ಅವರಿಗೆ 30 ಲಕ್ಷ ಪರಿಹಾರ ನೀಡುವುದಕ್ಕೆ ಸಿಎಂ ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ. …

Read More »