Breaking News

ಬೆಂಗಳೂರು

ನರ್ಸ್ ಪತಿ ಲಾಕ್‍ಡೌನ್ ಹೊತ್ತಲ್ಲೇ ನಾಪತ್ತೆಯಾಗಿದ್ದಾನೆ. ಇದೀಗ ನರ್ಸ್ ನನಗೆ ನನ್ನ ಗಂಡ ಬೇಕು, ನ್ಯಾಯ ಕೊಡಿಸಿ ಎಂದು ಕಣ್ಣೀರು

ಬೆಂಗಳೂರು: ಕೊರೊನಾ ಶುರುವಾದಾಗಿನಿಂದ ನರ್ಸ್ ಗಳು ಹಗಲಿರುಳು ಎನ್ನದೇ ಜನರ ಜೀವ ಕಾಪಾಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಇಂತಹ ಕೊರೊನಾ ವಾರಿಯರ್ಸ್ ನರ್ಸ್ ಪತಿ ಲಾಕ್‍ಡೌನ್ ಹೊತ್ತಲ್ಲೇ ನಾಪತ್ತೆಯಾಗಿದ್ದಾನೆ. ಇದೀಗ ನರ್ಸ್ ನನಗೆ ನನ್ನ ಗಂಡ ಬೇಕು, ನ್ಯಾಯ ಕೊಡಿಸಿ ಎಂದು ಕಣ್ಣೀರು ಹಾಕುತ್ತಿದ್ದಾರೆ. ದಾವಣಗೆರೆ ಮೂಲದ ನರ್ಸ್ ಶಾಂತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಪತಿ ಸಿದ್ದರಾಜು ನಾಪತ್ತೆಯಾಗಿದ್ದಾನೆ. ಫೋನ್ ಮಾಡಿದರೆ ಸ್ವಿಚ್ ಆಫ್ …

Read More »

ಗದಗ, ತುಮಕೂರು ಮತ್ತು ವಿಜಯಪುರಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಿಗೆ ಕೇಂದ್ರ ಸರ್ಕಾರದ ಅನುಮತಿ

ಬೆಂಗಳೂರು: ಗದಗ, ತುಮಕೂರು ಮತ್ತು ವಿಜಯಪುರಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಿಗೆ ಕೇಂದ್ರ ಸರ್ಕಾರದ ಅನುಮತಿ ದೊರಕಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೀಗ 26 ಕೋವಿಡ್ ಟೆಸ್ಟಿಂಗ್ ಲ್ಯಾಬ್‍ಗಳು ಕಾರ್ಯ ನಿರ್ವಹಿಸುವಂತಾಗಿದೆ. ರಾಜ್ಯದಲ್ಲಿ ಈಗ ದಿನಕ್ಕೆ 5,000 ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯ ಲಭ್ಯವಾದಂತಾಗಿದ್ದು, ವೈದ್ಯಕೀಯ ಸೌಲಭ್ಯ ಹೆಚ್ಚಳ ಮತ್ತು ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ. ಪ್ರಸ್ತುತ ಆರ್.ಟಿ.ಪಿ.ಸಿ.ಆರ್ ಲ್ಯಾಬ್ – 15, ಸಿಬಿಎನ್‍ಎಎಟಿ – 03 ಮತ್ತು ಖಾಸಗಿಯ 08 ಲ್ಯಾಬ್ …

Read More »

ಮಹಿಳೆ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬೇಡಿ, ಬೇಕಿದ್ದರೆ ನನ್ನ ಅರ್ಧ ಸಂಬಳವನ್ನು ನೀಡುತ್ತೇನೆ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ.

ಬೆಂಗಳೂರು: ಹಲವರು ಮದ್ಯದಂಗಡಿ ಯಾವಾಗ ತೆರೆಯುತ್ತೆ ಎಂದು ಕಾಯುತ್ತಿದ್ದಾರೆ. ಇನ್ನು ಕೆಲವರು ಮದ್ಯದಂಗಡಿ ತೆರೆಯುವಂತೆ ಸರ್ಕಾರಕ್ಕೆ ದುಂಬಾಲು ಬಿದ್ದಿದ್ದಾರೆ. ಆದರೆ ಇಲ್ಲೊಬ್ಬ ಮಹಿಳೆ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬೇಡಿ, ಬೇಕಿದ್ದರೆ ನನ್ನ ಅರ್ಧ ಸಂಬಳವನ್ನು ನೀಡುತ್ತೇನೆ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಮುಖ್ಯಮಂತ್ರಿಗಳಿಗೆ ನನ್ನದೊಂದು ಮನವಿ. ಎಣ್ಣೆ ಅಂಗಡಿ ತೆರೆಯಲು ಅವಕಾಶ ನೀಡಬೇಡಿ. ಏಕೆಂದರೆ ಮದ್ಯ …

Read More »

ರಾಜಸ್ಥಾನದಿಂದ ಬಂದ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಬೇಡಿ:

ಬೆಂಗಳೂರು: ರಾಜಸ್ಥಾನದಿಂದ ಬಂದ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ಬೆಂಗಳೂರಿನ ಸುಂಕದಕಟ್ಟೆಯ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೊರ ರಾಜ್ಯದಲ್ಲಿ ಸಿಲುಕಿದ್ದ ಬೆಂಗಳೂರಿಗರನ್ನ ಮಧ್ಯರಾತ್ರಿ ನಗರಕ್ಕೆ ಕರೆದುಕೊಂಡು ಬರುವುದನ್ನು ವಿರೋಧಿಸಿ ಸುಂಕದಕಟ್ಟೆಯ ಸ್ಥಳೀಯರು ಪ್ರತಿಭಟನೆ ಮಾಡುತ್ತಿದ್ದಾರೆ. ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ರಾಜಸ್ಥಾನಕ್ಕೆ ತೆರಳಿದ್ದರು. ಅಲ್ಲಿನ ಸರ್ಕಾರ ವಿದ್ಯಾರ್ಥಿಗಳನ್ನ ಇದೀಗ ಬೆಂಗಳೂರಿಗೆ ಕಳುಹಿಸಿದೆ. ರಾಜಸ್ಥಾನದಿಂದ ಬಂದ ವಿದ್ಯಾರ್ಥಿಗಳನ್ನ ಸುಂಕದಕಟ್ಟೆಯ ಸರ್ಕಾರಿ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಲು ಬಿಬಿಎಂಪಿ ಮುಂದಾಗಿದೆ. …

Read More »

ಮಾಸ್ಕ್ ಧರಿಸದಿದ್ರೆ ಬೀಳುತ್ತೆ ಫೈನ್- 9 ಗಂಟೆ ಮೇಲೆ ರೋಡ್‍ಗಿಳಿದ್ರೆ ವೆಹಿಕಲ್ ಸೀಜ್………….

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 130ರ ಗಡಿ ದಾಟಿದೆ. ಆದರೂ ಜನ ಸಾಮಾನ್ಯರು ಎಚ್ಚೆತ್ತುಕೊಳ್ಳುತ್ತಿಲ್ಲ. ಇದರಿಂದಾಗಿ ಬಿಬಿಎಂಪಿ ಟೀಂ ಫೀಲ್ಡಿಗೆ ಇಳಿದಿದೆ. ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ನಿಮಯಗಳನ್ನು ಬಿಬಿಎಂಪಿ ಜಾರಿಗೆ ತಂದಿದೆ. ಮಾಸ್ಕ್ ಧರಿಸದೇ ಓಡಾಡಿದ್ರೆ 1 ಸಾವಿರ ರೂಪಾಯಿ ದಂಡ ಹಾಕಲಾಗುತ್ತದೆ. 9 ಗಂಟೆವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ 9 …

Read More »

ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕಹೆಚ್ಚಳ..

ಬೆಂಗಳೂರು: ಕೊರೊನಾ ಲಾಕ್‍ಡೌನ್ ನಡುವೆ ಮೆಡಿಕಲ್ ಮತ್ತು ಡೆಂಟಲ್ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಿದೆ. ಖಾಸಗಿ ಕಾಲೇಜ್‍ಗಳು, ಖಾಸಗಿ ವಿವಿಗಳು, ಡೀಮ್ಡ್ ವಿವಿಗಳ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಖಾಸಗಿ ಕೋಟಾದ ಸೀಟುಗಳಿಗೆ ಶೇ. 30ರಷ್ಟು ಶುಲ್ಕ ಅಧಿಕವಾಗಿದೆ. ಇನ್ನೂ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಸೇರುವ ವಿದ್ಯಾರ್ಥಿಗಳಿಗೆ ಶೇ. 20ರಷ್ಟು ಶುಲ್ಕವನ್ನು ಸರ್ಕಾರ …

Read More »

ಇನ್ನೂ ಮೂರ್ನಾಲ್ಕು ತಿಂಗಳು ಇರುತ್ತೆ ಕೊರೋನಾ : ಸಿಎಂ ಯಡಿಯೂರಪ್ಪ

ಬೆಂಗಳೂರು, ಏ.30- ಕೊರೊನಾ ಮಹಾಮಾರಿ ಇನ್ನೂ ಮೂರ್ನಾಲ್ಕು ತಿಂಗಳು ಮುಂದುವರಿಯುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ವೃದ್ಧಿ ದೃಷ್ಟಿಯಿಂದ ಮೇ 3ರ ನಂತರ ಕೈಗಾರಿಕೆಗಳನ್ನು ತೆರೆಯುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಇಂದು ಸಂಜೆ ಕೈಗಾರಿಕೆ ತೆರೆಯುವ ಕುರಿತಂತೆ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಮೇ 3ಕ್ಕೆ ಲಾಕ್‍ಡೌನ್ ಅವಧಿ ಅಂತ್ಯಗೊಳ್ಳಲಿದ್ದು, …

Read More »

ಮೇ 5.ರಂದು ಪ್ರಥಮ ಪಿಯುಸಿ ಫಲಿತಾಂಶ………..

ಬೆಂಗಳೂರು : ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಮೇ 5.ರಂದು, ಈಗಾಗಲೇ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಂಡಿರುವ ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು‌ಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆ ಸ್ಪಷ್ಟ ಪಡಿಸಿದೆ. ಖಾಸಗಿ ಕಾಲೇಜುಗಳು ಈ ಸಾಲಿನಲ್ಲಿ‌ ಶುಲ್ಕ ಹೆಚ್ಚಿಸುವ …

Read More »

ಲಾಕ್‍ಡೌನ್ ವೇಳೆ ಸೀಜ್ ಆದನಾಲ್ಕು ಚಕ್ರದ ವಾಹನಗಳಿಗೆ ಒಂದು ಸಾವಿರ ದಂಡ ಮತ್ತು ದ್ವಿಚಕ್ರ ಮತ್ತು ಆಟೋ ರಿಕ್ಷಾಗಳಿಗೆ 500 ದಂಡ

ಬೆಂಗಳೂರು : ಲಾಕ್‍ಡೌನ್ ವೇಳೆ ಸೀಜ್ ಆದ ವಾಹನಗಳನ್ನು ದಂಡ ವಿಧಿಸಿ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.ಲಾಕ್‍ಡೌನ್ ವೇಳೆ ಸೀಜ್ ಆದ ವಾಹನಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಇದರ ಬೆನ್ನಲ್ಲೇ ಹೈಕೋರ್ಟ್ ಸೀಜ್ ಆದ ವಾಹನಗಳಿಗೆ ಫೈನ್ ಹಾಕಿ ನಂತರ ಬಿಡುಗಡೆ ಮಾಡುವಂತೆ ಸೂಚಿಸಿದೆ. ಹೈಕೋರ್ಟ್ ನೀಡಿರುವ ಆದೇಶದಲ್ಲಿ ಲಾಕ್‍ಡೌನ್ ವೇಳೆ ಸೀಜ್ ಮಾಡಲಾದ ವಾಹನಗಳಿಗೆ ಫೈನ್ …

Read More »

ಪಾದರಾಯನಪುರಕ್ಕೆ ‘ಫ್ಯಾಕ್ಟರಿ’ ಕಂಟಕ………….

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 3 ದಿನಗಳಿಂದ ಕಡಿಮೆಯಾಗಿದ್ದ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಇವತ್ತು ಏಕಾಏಕಿ ಜಿಗಿತ ಕಂಡು ಬಂದಿದೆ. ಇವತ್ತು 10 ಸೋಂಕಿತರ ಪೈಕಿ, 8 ಮಂದಿ ಪಾದರಾಯನಪುರದವರು. ಇಲ್ಲಿ ಪತ್ತೆಯಾದ ಪ್ರಕರಣಗಳ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ತಬ್ಲಿಘಿಯ ಸಂಪರ್ಕ ಹೊಂದಿದ್ದ ಲೆದರ್ ಫ್ಯಾಕ್ಟರಿಯ ಮಾಲೀಕ(ರೋಗಿ ನಂ.199)ನಿಂದ ಏಳು ಮಂದಿಗೆ ಸೋಂಕು ತಗುಲಿದೆ. ಕಾರ್ಮಿಕನೊಬ್ಬನ ಇಡೀ ಕುಟುಂಬವನ್ನು ಕ್ವಾರಂಟೈನ್ ಮಾಡಿದ ಬಳಿಕ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಹರಡಿರುವುದು ಗೊತ್ತಾಗಿದೆ. …

Read More »