ಬೆಂಗಳೂರು: ಪ್ರಧಾನಿ ಮೋದಿ ಕೊರೊನಾ ತಡೆಗೆ ತ್ರಿ ಝೋನ್ ಮಂತ್ರವನ್ನು ಇಂದೂ ಕೂಡ ಪಠಿಸಿದ್ದಾರೆ. ಸೋಂಕಿನ ತೀವ್ರತೆಯ ಆಧಾರದ ಮೇಲೆ ಝೋನ್‍ಗಳನ್ನು ವಿಂಗಡಿಸಲಾಗಿದ್ದು, ಅಲ್ಲಿನ ಪರಿಸ್ಥಿತಿಗಳಿಗೆ ಅನುಗುಣವಾಗಿ ಪ್ರಣಾಳಿಕೆ ರೂಪಿಸಿ ಎಂದು ರಾಜ್ಯ ಸರ್ಕಾರಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ಮೋದಿ ಸಲಹೆ ಅನ್ವಯ ಬೆಂಗಳೂರು, ಮೈಸೂರು, ಕಲಬುರಗಿ ಸೇರಿದಂತೆ, ರೆಡ್ ಜೋನ್ ಜಿಲ್ಲೆಗಳಲ್ಲಿ ಕೊರೊನಾ ಲಾಕ್‍ಡೌನ್ ಮುಂದುವರೆಯುವ ಸಾಧ್ಯತೆಗಳಿವೆ ಹೆಚ್ಚಿವೆ. ಒಂದಿಷ್ಟು ಮಾನದಂಡಗಳನ್ನು ಇಟ್ಟುಕೊಂಡು ಇವತ್ತು ಕೊರೊನಾಗೆ ಸಂಬಂಧಿಸಿದಂತೆ …
Read More »ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಸಿಎಂಗೆ ಎಚ್‍ಡಿಡಿ ಪತ್ರ
ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ಮಾರುಕಟ್ಟೆಗಳಿಗೆ ಫಸಲು ಸಾಗಿಸಲಾರದೇ, ಖರೀದಿದಾರರು ಸಿಗದೇ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಸಿಎಂ ಯಡಿಯೂರಪ್ಪಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ. 2 ಪುಟಗಳ ಪತ್ರ ಬರೆದಿರುವ ಎಚ್‍ಡಿಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ರೈತರು ಕೂಡ ಈಗ ಬೀದಿಗೆ ಬೀಳುವಂತಾಗಿದೆ. ಹಣ್ಣು, ತರಕಾರಿ, ಹೂವು ಬೆಳೆಗಾರರ ನೆರವಿಗೆ ಬರಬೇಕು. ಕೃಷಿ, ತೋಟಗಾರಿಕೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಿ ನಷ್ಟ …
Read More »ಇಂದು 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆ……….update……
ಬೆಂಗಳೂರು: ಇಂದು 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದು, ಓರ್ವ ರೋಗಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 512ಕ್ಕೆ ಏರಿದ್ದು, ಸಾವಿನ ಸಂಖ್ಯೆ 20ಕ್ಕೆ ತಲುಪಿದೆ. ಇದುವರೆಗೂ ಕೊರೊನಾದಿಂದ 193 ಮಂದಿ ಗುಣಮುಖರಾಗಿದ್ದಾರೆ. ಇಂದು ಒಟ್ಟು 11 ಮಂದಿ ಆಸತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ರಾಜ್ಯದ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಮಂಡ್ಯ 2, ದಕ್ಷಿಣ ಕನ್ನಡ 2, ವಿಜ …
Read More »ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ: ಡಿ.ಕೆ ಶಿವಕುಮಾರ್
ಬೆಂಗಳೂರು: ಜೀವನವನ್ನು ಪಣಕ್ಕಿಟ್ಟು ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ವೈದ್ಯರಿಗೆ ಹೊರತು ಪಡಿಸಿ ಉಳಿದ ಕೆಲವರಿಗೆ ಪಿಪಿಎ ಕಿಟ್ ಸಿಗುತ್ತಿಲ್ಲ. ಹೀಗಾಗಿ ಇಂದು ಪಿಪಿಇ ಕಿಟ್ ವಿರತರಣೆ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ವೈದ್ಯರನ್ನ ಹೊರತುಪಡಿಸಿ ಉಳಿದವರಿಗೆ ಪಿಪಿಎ ಕಿಟ್ ವಿತರಣೆ ಮಾಡಿದ್ದೇವೆ. ಜನ ಲಾಕ್ …
Read More »ಕರ್ನಾಟಕದಲ್ಲಿ ಮೇ. 15ರವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ.:B.S.Y.
ಬೆಂಗಳೂರು: ಇಂದು ಸೋಮವಾರ ಪ್ರಧಾನಿ ಮೋದಿ ಜೊತೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ವೇಳೆ ಬಹುತೇಕ ರಾಜ್ಯಗಳು ಲಾಕ್‌ಡೌನ್ ವಿಸ್ತರಣೆಗೆ ಒಲವು ತೋರಿಸಿದ್ದಾರೆ. ಕರ್ನಾಟಕದದಿಂದ ವಲಯವಾರು ವಿಸ್ತರಣೆ ಮಾಡಿ ಲಾಕ್‌ಡೌನ್ ಮುಂದುವರೆಸುವ ಮನವಿ ಮಾಡಲಾಗಿದೆ. ಅಲ್ಲದೇ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ. ಹೌದು ದೇಶದಲ್ಲಿ ಮೇ. 3ಕ್ಕೆ ಎರಡನೇ ಹಂತದ ಲಾಕ್‌ಡೌನ್ ಅಂತ್ಯವಾಗಲಿದ್ದು, ಮುಂದೇನು? ಲಾಕ್‌ಡೌನ್ …
Read More »1500ಕ್ಕೂ ಹೆಚ್ಚು ನಂದಿನಿ ಪಾರ್ಲರ್ ಬಳಿ ಹಣ್ಣು-ತರಕಾರಿ ಮಾರಾಟಕ್ಕೆ ಅವಕಾಶ
ಬೆಂಗಳೂರು, ಏ.27- ರಾಜ್ಯಾದ್ಯಂತ ಇರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯ ಎಲ್ಲಾ 14 ಜಿಲ್ಲಾ ಹಾಲು ಒಕ್ಕೂಟಗಳ 1500ಕ್ಕೂ ಹೆಚ್ಚು ನಂದಿನಿ ಮಳಿಗೆ, ಶಾಪಿ, ಪಾರ್ಲರ್, ಪ್ರಾಂಚೈಸಿಗಳ ಬಳಿ ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ಬರುವ ರೈತರಿಗೆ ಕೆಎಂಎಫ್ ಹಾಗೂ ಒಕ್ಕೂಟಗಳ ವತಿಯಿಂದ ಉಚಿತವಾಗಿ ದಿನವಹಿ, ಕುಡಿಯುವ ನೀರು, ಮಜ್ಜಿಗೆ, ಸ್ಯಾನಿಟೈಜರ್, ಕೈಗವಚು ಮತ್ತು ಮಾಸ್ಕ್ ಗಳನ್ನು ಒದಗಿಸಲಾಗುವುದು. ರೈತರು …
Read More »ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಿ: ಕುಮಾರಸ್ವಾಮಿ
ಬೆಂಗಳೂರು:ದೇಶದ ಜಿಡಿಪಿ ಕುಸಿತವಾಗೋ ಮುನ್ಸೂಚನೆ ಹಿನ್ನೆಲೆಯಲ್ಲಿ ಜನ ಸಾಮಾನ್ಯರಿಗೆ ಹಣ ಉಳಿಸುವ ಮಾರ್ಗಗಳನ್ನ ಸರ್ಕಾರ ಹುಡುಕಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯ ಮಾಡಿದ್ದಾರೆ. ಮೊದಲಿಗೆ, “ರಿಸರ್ವ್ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು …
Read More »ಕೊರೊನಾ ಸೋಂಕಿತನೊಬ್ಬ ತುರ್ತು ನಿರ್ಗಮನದ ಕಿಟಕಿಯಿಂದ ಬಿದ್ದು ಆತ್ಮಹತ್ಯೆ
ಬೆಂಗಳೂರು: ಕೊರೊನಾ ಸೋಂಕಿತನೊಬ್ಬ ತುರ್ತು ನಿರ್ಗಮನದ ಕಿಟಕಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. 50 ವರ್ಷದ 466ನೇ ಕೊರೊನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಉಸಿರಾಟದ ತೊಂದಾರೆಯಿಂದ ಬಳಲುತ್ತಿದ್ದರಲ್ಲದೇ ಕಳೆದ ನಾಲ್ಕು ವರ್ಷಗಳಿಂದ ಕಿಡ್ನಿ ವೈಫಲ್ಯ ಸಮಸ್ಯೆಯಿಂದಲೂ ಬಳುತ್ತಿದ್ದರು. ಅವರನ್ನು ಡಯಾಲಿಸಿಸ್ ಗೆ ಒಳಪಡಿಸಲಾಗಿತ್ತು. ಇತ್ತೀಚೆಗೆ ಇವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಿನ್ನೆ …
Read More »ಅಕ್ರಮ ಮದ್ಯ ಸಾಗಾಟದಲ್ಲಿ ಅಧಿಕಾರಸ್ಥರ ಕೈವಾಡ; A.A.P.ಆರೋಪ
ಬೆಂಗಳೂರು, ಏಪ್ರಿಲ್ 25: ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಎಗ್ಗಿಲ್ಲದೆ ಮದ್ಯ ಸರಬರಾಜು ಆಗುತ್ತಿದೆ. ಮುಖ ಬೆಲೆಯ ಹತ್ತು ಪಟ್ಟಿಗೂ ಹೆಚ್ಚಿನ ಬೆಲೆಯಲ್ಲಿ ಮದ್ಯ ಸರಬರಾಜು ಮಾಡಿ ನೂರಾರು ಕೋಟಿ ರೂಪಾಯಿಗಳ ಅಕ್ರಮ ಗಳಿಕೆಗೆ ಈ ಲಾಕ್ ಡೌನ್ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಸಮಾಜ ವಿದ್ರೋಹಿ ಶಕ್ತಿಗಳ ಹಿಂದೆ ಅಧಿಕಾರಸ್ಥರ ನೇರ ಕೈವಾಡವಿರುವುದು ಕಂಡುಬರುತ್ತಿದೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಬೆಂಗಳೂರು ನಗರದ ಎಸಿಪಿ ವಾಸು ಎಂಬುವವರು …
Read More »ಏರ್ ಪೋರ್ಟ್ ರಸ್ತೆಯಲ್ಲಿ ಟೋಲ್ ಶುಲ್ಕ ಹೆಚ್ಚಳ …….
ಬೆಂಗಳೂರು, ಏಪ್ರಿಲ್ 26 : ಲಾಕ್ ಡೌನ್ ಮುಗಿದ ಬಳಿಕ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಸಂಚಾರ ನಡೆಸುವ ವಾಹನ ಸವಾರರು ಹೆಚ್ಚಿನ ಟೋಲ್ ಶುಲ್ಕ ಪಾವತಿ ಮಾಡಬೇಕು. ಹೌದು, ಎನ್‌ಎಚ್‌ಎಐ 5 ರಿಂದ 30 ರೂ. ತನಕ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಿದೆ. ಸಾದಹಳ್ಳಿ ಟೋಲ್ ಗೇಟ್‌ನಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಶುಲ್ಕ ಹೆಚ್ಚಳ ಮಾಡಿದೆ. ಕಾರು, ವ್ಯಾನ್, ಜೀಪು ಒಂದು ಕಡೆ …
Read More »