Breaking News

ಬೆಂಗಳೂರು

ದೇಶದ ಪ್ರತಿಯೊಬ್ಬ ನಾಗರಿಕನೂ ಕೊರೊನಾ ಯುದ್ಧದಲ್ಲಿ ಸೈನಿಕ: ಮೋದಿ….

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 64ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶದ ಪ್ರತಿಯೋರ್ವ ನಾಗರಿಕನೂ ಕೊರೊನಾ ವೈರಸ್ ತೊಲಗಿಸಲು ದೇಶ ಸಾರಿರುವ ಯುದ್ಧದಲ್ಲಿ ಸೈನಿಕ ಎಂದು ಹೇಳಿದ್ದಾರೆ. ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವೈರಸ್ ವಿರುದ್ಧ ದೇಶದ ಜನರು ಹೋರಾಡುತ್ತಿರುವುದಕ್ಕೆ ಮೋದಿ ಶ್ಲಾಘಿಸಿದರು. ಸರ್ಕಾರದ ಜೊತೆ ಕೈಜೋಡಿಸಿ ದೇಶದ …

Read More »

ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿ…………

ಬೆಂಗಳೂರು – ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ರಾಜ್ಯವನ್ನು ಹಿಂಡಿ ಹಿಪ್ಪೆ ಮಾಡಿದ್ದ ಕೊರೋನಾ ಇಂದು ಕೇವಲ ಒಂದೇ ಒಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಇಂದು ಬಂದಿರುವ ವರದಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೋರ್ವಳಲ್ಲಿ ಮಾತ್ರ ಕೊರೋನಾ ವೈರಸ್ ಪತ್ತೆಯಾಗಿದೆ. ಉಳಿದಂತೆ ಬೇರೆ ಯಾವುದೇ ಪ್ರದೇಶದಲ್ಲಿ ಕೊರೋನಾ ರೋಗ ಪತ್ತೆಯಾಗಿಲ್ಲ. ಇದರಿಂದಾಗಿ ರಾಜ್ಯದಲ್ಲಿ ರೋಗಿಗಳ ಸಂಖ್ಯೆ 501 ಆದಂತಾಗಿದೆ. …

Read More »

ಬಿಬಿಎಂಪಿ 7 ವಲಯಗಳಲ್ಲಿ 38 ವಾರ್ಡ್ ಗಳು ರೆಡ್‍ಝೋನ್………..

ಬೆಂಗಳೂರು: ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ ಸಿಲಿಕಾನ್ ಸಿಟಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಟ್‍ಸ್ಪಾಟ್ ಪಟ್ಟಿಯಿಂದ ನಮ್ಮ ಏರಿಯಾ ಇಲ್ಲ ಅಂತ ನಿಟ್ಟುಸಿರು ಬಿಡುತ್ತಿರುವವರು ಆತಂಕ ಪಡುವಂತಾಗಿದೆ. ಬೆಂಗಳೂರಿನಲ್ಲಿ ವಲಯವಾರು ರೆಡ್ ಝೋನ್‍ಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಬಿಬಿಎಂಪಿ 8 ವಲಯಗಳಲ್ಲಿ 38 ವಾರ್ಡ್ ಗಳು ರೆಡ್ ಝೋನ್ ಪಟ್ಟಿಯಲ್ಲಿವೆ. ಬೆಂಗಳೂರಿನಲ್ಲಿ 80 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ಬಿಬಿಎಂಪಿ 8 …

Read More »

17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿ ಬಚಾವ್…..

ಬೆಂಗಳೂರು: 17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸ್ನೇಹಾ (ಹೆಸರು ಬದಲಾಯಿಸಲಾಗಿದೆ) ಎಂಬಾಕೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯ ಅಗ್ನಿಶಾಮಕ ಸಿಬ್ಬಂದಿಯ ವರ್ಗ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ನಡೆದಿದ್ದೇನು? ಸ್ನೇಹಾ ದೆಹಲಿ ಮೂಲದ ಯುವತಿಯಾಗಿದ್ದು, ಎಲೆಕ್ಟ್ರಾನಿಕ್ ಸಿಟಿಯ ಪ್ರೆಸ್ಟೀಜ್ ಸನ್‍ರೈಸ್ …

Read More »

ಲಾಕ್‍ಡೌನ್ ಸಡಿಲಿಕೆ ಮಾಡಿದ್ದು, ಜನ ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ

ಬೆಂಗಳೂರು: ಗ್ರೀನ್ ಝೋನ್ ನಲ್ಲಿರುವ ಜಿಲ್ಲೆಗಳಲ್ಲಿ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಲಾಕ್‍ಡೌನ್ ಸಡಿಲಿಕೆ ಮಾಡಿದ್ದು, ಜನ ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ರಾಯಚೂರು, ಕೊಪ್ಪಳ, ಯಾದಗಿರಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ನಿರ್ಲಕ್ಷ್ಯದಿಂದ ಓಡಾಡುತ್ತಿದ್ದಾರೆ. ರಾಯಚೂರಿನಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ಜನ ನಿಯಮಗಳನ್ನು ಪಾಲಿಸದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಮಾರುಕಟ್ಟೆ ಪ್ರದೇಶಗಳು ಜನಜಂಗುಳಿಯಿಂದ ಕೂಡಿದ್ದು, ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕೊಪ್ಪಳದಲ್ಲಿ ಸಹ ಕಟ್ಟೆಚ್ಚರ …

Read More »

ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿಯಾಗಿ ಇರುವುದು ಕಂಡು ಬಂದಿದೆ. ಇದೀಗ ರಾಜ್ಯದಲ್ಲಿ ಕೂಡ ಈ ಪ್ರಕ್ರಿಯೆ ಲಭ್ಯವಾದಂತಾಗಿದೆ. ಈ …

Read More »

ನಿಜವಾದ ಸಂತೋಷ ಅಂದ್ರೆ ಏನೆಂದು ತೋರಿಸಿದೆ – ಭಾವಿ ಪತ್ನಿಗೆ ಕೃಷ್ಣ ವಿಶ್

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮಿಲನಾ ನಾಗರಾಜ್ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹೀಗಾಗಿ ನಟ ಡಾರ್ಲಿಂಗ್ ಕೃಷ್ಣ ತಮ್ಮ ಗೆಳತಿಗೆ ಸೋಶಿಯಲ್ ಮೀಡಿಯಾದ ಮೂಲಕ ವಿಶೇಷ ರೀತಿಯಲ್ಲಿ ಶುಭಾಶಯ ತಿಳಿಸಿದ್ದಾರೆ. ಕೊರೊನಾ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಮಿಲನಾ ನಾಗರಾಜ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತ ಕೃಷ್ಣ ಕೂಡ ತಮ್ಮ ಪ್ರೇಯಸಿಯನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದ ಮೂಲಕವೇ ಕೃಷ್ಣ ವಿಶ್ ಮಾಡಿದ್ದಾರೆ. ಕೃಷ್ಣ ಇನ್‍ಸ್ಟಾಗ್ರಾಂನಲ್ಲಿ ಒಂದು …

Read More »

ಕಾರ್ಮಿಕರ ಓಡಾಟಕ್ಕೆ ರಸ್ತೆಗೆ ಇಳಿಯಿತು 137 KSRTC ಬಸ್ಸುಗಳು

ಬೆಂಗಳೂರು: 6 ಜಿಲ್ಲೆಗಳಲ್ಲಿ ಕಾರ್ಮಿಕರ ಓಡಾಟಕ್ಕೆ ಕೆಎಸ್ಆರ್‌ಟಿಸಿಯ 137 ಬಸ್ಸುಗಳು ರಸ್ತೆಗೆ ಇಳಿದಿದೆ. 56 ಸೀಟುಗಳ ಈ ಬಸ್ಸಿನಲ್ಲಿ 21 ಕಾರ್ಮಿಕರಿಗೆ ಮಾತ್ರ ಪ್ರಯಾಣಿಸಲು ಅನುಮತಿ ಸಿಕ್ಕಿದೆ. ಕಾರ್ಮಿಕರು ಸೀಟು ಖಾಲಿ ಬಿಟ್ಟು ಕೂರಬೇಕು ಎಂದು ಷರತ್ತು ವಿಧಿಸಲಾಗಿದೆ. ಈ ಬಸ್ಸುಗಳು ಲಾಕ್ ಡೌನ್ ನಲ್ಲಿ ಸಿಲುಕಿರುವ ವಲಸಿಗ ಕಾರ್ಮಿಕರಿಗಾಗಿ ಮಾತ್ರ ಎಂದು ಕೆಎಸ್ಆರ್‌ಟಿಸಿ ಸ್ಪಷ್ಟಪಡಿಸಿದೆ. ಈ ಬಸ್ಸುಗಳು ಜಿಲ್ಲಾ ವ್ಯಾಪ್ತಿಯ ಒಳಗಡೆ ಮಾತ್ರ ಸಂಚರಿಸುತ್ತದೆ. ಜಿಲ್ಲಾಡಳಿತದ ಮನವಿಯ ಹಿನ್ನೆಲೆಯಲ್ಲಿ …

Read More »

ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುತ್ತಿಲ್ಲ,ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ

– ಬೆಂಗ್ಳೂರಿನ 11 ಮಂದಿ, ಬೆಳಗಾವಿಯ 9 ಜನರಿಗೆ – ಬಿಹಾರ ಕಾರ್ಮಿಕನಿಂದ 9 ಜನರಿಗೆ ಕೊರೊನಾ – ಬೆಳಗಾವಿಯಲ್ಲೂ ಒಬ್ಬನಿಂದ 9 ಮಂದಿಗೆ ಸೋಂಕು ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಕಳೆದ 24 ಗಂಟೆಯಲ್ಲಿ ರಾಜ್ಯದ 26 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ ಕಂಡಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು 11 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಅದರಲ್ಲೂ ಬಿಹಾರ ಕಾರ್ಮಿಕನಿಂದಲೇ …

Read More »

ಬಡವರಿಗೆ 3 ಸಾವಿರ ದಿನಸಿ, ತರಕಾರಿ ಕಿಟ್ ವಿತರಿಸಿದ ಗ್ರಾ.ಪಂ.ಸದಸ್ಯ…….

ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿವರಿಗೆ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಸುಮಾರು 3000 ದಿನಸಿ ಹಾಗೂ ತರಕಾರಿ ಇರುವ ಕಿಟ್‍ಗಳನ್ನ ಪ್ರತಿ ಮನೆ ಮನೆಗೂ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ವಾಜರಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ವಿ.ಕೆ.ಎಸ್.ಕೆಂಪರಾಜು ಬಡವರಿಗೆ ಕಿಟ್‍ಗಳನ್ನ ವಿತರಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತಾಂಡವವಾಡುತ್ತಿದೆ. ಈ ಅಪಾಯಕಾರಿ ವೈರಸ್ ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗ್ರತೆಯನ್ನ ವಹಿಸಿ ಲಾಕ್‍ಡೌನ್ ಜಾರಿಗೆ …

Read More »