ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ಸಂಜೆ ಉಮೇಶ್ ಕತ್ತಿ ಅಂತ್ಯಸಂಸ್ಕಾರ ಬೆಂಗಳೂರು: ಕಳೆದ ರಾತ್ರಿ ಬೆಂಗಳೂರಿನಲ್ಲಿ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಮೃತದೇಹದ ಅಂತಿಮ ಸಂಸ್ಕಾರ ಇಂದು ಸಂಜೆ ಬೆಳಗಾವಿಯ ಬೆಲ್ಲದ ಬಾಗೇವಾಡಿಯಲ್ಲಿ ನೆರವೇರಲಿದೆ. ಬೆಳಗಾವಿಯ ಶಿವಬಸವ ನಗರದಲ್ಲಿರುವ ಸಚಿವರ ಸ್ವಗೃಹ ಮತ್ತು ಬೆಳಗ್ಗೆ 10.30ಕ್ಕೆ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮಧ್ಯಾಹ್ನ 12ಕ್ಕೆ ಸ್ವಗ್ರಾಮ ಬೆಲ್ಲದ ಬಾಗೇವಾಡಿಗೆ ಮೃತದೇಹವನ್ನು ರವಾನಿಸಲಿದ್ದು, …
Read More »ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ.: ಸಿಎಂ ಘೋಷಣೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ. ಅಕ್ಟೋಬರ್ನಲ್ಲಿ ನೂತನ ವೇತನ ಆಯೋಗ ರಚಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿದ ಬಳಿಕ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ, ವೇತನ ಪರಿಷ್ಕರಣೆಗೆ ಸಂಬಂಧಿಸಿದ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಇನ್ನುಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು. …
Read More »ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 229 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ 229 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಬಿ ವೃಂದದಲ್ಲಿನ ಉಳಿಕೆ ಮೂಲ ವೃಂದದ ಸಹಾಯಕ ಅಭಿಯಂತರರು 129 ಹುದ್ದೆಗಳು ಮತ್ತು ಹೈದರಾಬಾದ್ ಕರ್ನಾಟಕ 59 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ …
Read More »ಕಳ್ಳತನ ಯತ್ನ ವಿಫಲ.. ಸಿಟ್ಟಿಗೆದ್ದ ಖದೀಮ ಅಂಗಡಿಯಲ್ಲಿ ಮಾಡಿದ್ದೇನು ಗೊತ್ತಾ?
ಬೆಂಗಳೂರು: ದಿನವಿಡೀ ಕಾದು ಯತ್ನಿಸಿದರೂ ಕನ್ನ ಹಾಕುವ ಪ್ಲಾನ್ ವಿಫಲವಾಗಿದ್ದಕ್ಕೆ ಸಿಟ್ಟಿಗೆದ್ದ ಕಳ್ಳನೊಬ್ಬ ಸಿಕ್ಕ ಸಿಕ್ಕ ವಸ್ತುಗಳನ್ನು ಕಿತ್ತೆಸೆದು ಪರಾರಿಯಾಗಿದ್ದಾನೆ. ಸೂಪರ್ ಮಾರ್ಕೆಟ್ನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಖದೀಮನು ತನ್ನ ಪ್ರಯತ್ನ ಕೈಗೂಡದೆ ಪರಾರಿಯಾಗಿರುವ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 27ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂಜೆಯಿಂದಲೇ ಹೊಂಚು ಹಾಕಿ ರಾತ್ರಿ ಸೂಪರ್ ಮಾರ್ಕೆಟ್ ಒಂದಕ್ಕೆ ನುಗ್ಗಿದ್ದ ಖದೀಮ ಆ್ಯಕ್ಸೆಲ್ ಬ್ಲೇಡ್ ಬಳಸಿ ಕ್ಯಾಶ್ ಬಾಕ್ಸ್ …
Read More »ಬೆಂಗಳೂರಿನಲ್ಲಿ ಮಳೆಯ ಅವಾಂತರಕ್ಕೆ ಹಲವಾರು ರಸ್ತೆಗಳು ಜಲಾವೃತ
ಬೆಂಗಳೂರು: ಟ್ರಾಫಿಕ್ ಜಾಮ್ ಉಂಟಾದಾಗ ಸಂಚಾರಿ ಪೊಲೀಸರು ವಾಹನ ದಟ್ಟಣೆಯಾಗಿರುವ ಮಾರ್ಗದಲ್ಲಿ ಸಂಚಾರಿಸಬೇಡಿ ಎಂದು ಹೇಳುವುದು ಸರ್ವೇಸಾಮಾನ್ಯ. ಇಲ್ಲಿಯೂ ಸಹ ಟ್ರಾಫಿಕ್ ಪೊಲೀಸರು ಈ ಮಾರ್ಗಗಳಲ್ಲಿ ವಾಹನ ಚಲಾಯಿಸಬೇಡಿ ಬದಲಾಗಿ ಪರ್ಯಾಯ ಮಾರ್ಗದಲ್ಲಿ ಸಂಚಾರ ನಡೆಸಿ ಎಂದು ಮನವಿ ಮಾಡುತ್ತಿದ್ದಾರೆ. ಈ ಬಾರಿ ಮನವಿ ಮಾಡುತ್ತಿರುವುದು ಟ್ರಾಫಿಕ್ ಜಾಮ್ ಕಾರಣಕ್ಕೆ ಅಲ್ಲ, ರಸ್ತೆಗಳು ಜಲಾವೃತ ಆಗಿದ್ದಕ್ಕಾಗಿ ಎನ್ನುತ್ತಿದ್ದಾರೆ. ಕಳೆದ ಒಂದು ವಾರದಿಂದ ಐಟಿ ಸಿಟಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ರಾಜಧಾನಿ ಥಂಡಾ …
Read More »ಬೆಂಗಳೂರಿನ ಈ ದುಸ್ಥಿತಿಗೆ ಕಾಂಗ್ರೆಸ್ ದುರಾಡಳಿತವೇ ಕಾರಣ: ಸಿಎಂ ಬೊಮ್ಮಾಯಿ
ಬೆಂಗಳೂರು: ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಾರ್ಭಟ ಜೋರಾಗಿದೆ. ದಾಖಲೆಯ ಮಳೆಗೆ ಮಹಾನಗರಿ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರಿನಲ್ಲಿ ಈ ಸ್ಥಿತಿ ನಿರ್ಮಾಣಗೊಳ್ಳಲು ಹಿಂದಿನ ಕಾಂಗ್ರೆಸ್ ನೇರ ಕಾರಣ, ಅವರ ಆಡಳಿತ ಅವಧಿಯಲ್ಲಿ ನಗರದ ಕೆರೆ ಒಳಭಾಗ, ಕರೆ ಸುತ್ತಲಿನ ನಿರ್ಬಂಧಿತ ಪ್ರದೇಶ ಹಾಗೂ ರಾಜಕಾಲುವೆಗಳ ಮೇಲೆ …
Read More »ಪಿಎಸ್ಐ ಹಗರಣ: 8 ದಿನ ಸಿಐಡಿ ಕಸ್ಟಡಿಗೆ ಅಮೃತ್ ಪಾಲ್
ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಯಾಗಿರುವ ಪೊಲೀಸ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಅವರನ್ನು ಎಂಟು ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ನೀಡಿ ನಗರದ ಎಸಿಎಂಎಂ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಸಿಐಡಿ ಮನವಿ ಪುರಸ್ಕರಿಸಿದ ಬೆಂಗಳೂರಿನ ಒಂದನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯವು ಸೆ.12ರ ವರೆಗೆ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ಪ್ರಕರಣದಲ್ಲಿ ಏಳನೇ ಆರೋಪಿಯಾಗಿರುವ …
Read More »ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಕೇಂದ್ರ ಸರ್ಕಾರ ನೀಡುತ್ತಿದ್ದ 5 ಕೆ.ಜಿ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯ
ಬೆಂಗಳೂರು : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯವಾಗಲಿದೆ. ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 2020 ರಿಂದ ಪಡಿತರ ಚೀಟಿದಾರರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪ್ರತಿ ಯುನಿಟ್ ಗೆ 5 ಕೆಜಿ ಅಕ್ಕಿ ಅಥವಾ ಗೋಧಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಆದರೆ. ಉಚಿತ ಅಕ್ಕಿ ಸೌಲಭ್ಯ ಈ …
Read More »SC/ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ‘ಬಿಗ್ ಶಾಕ್’: ‘ಉಚಿತ ವಿದ್ಯುತ್ ಯೋಜನೆ’ ಆದೇಶ ವಾಪಸ್ಸು
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕೆಳಗಿರುವಂತ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡೋದಾಗಿ ಘೋಷಣೆ ಮಾಡಿತ್ತು. ಇದೀಗ ಈ ಯೋಜನೆಯನ್ನು ಹಿಂಪಡೆದು, ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ …
Read More »ಬೆಂಗಳೂರಲ್ಲಿ ಬಸ್ ಚಾಲಕನ ಮೇಲೆ ಟ್ರಾಫಿಕ್ ಸಿಬ್ಬಂದಿ ಹಲ್ಲೆ: ದೂರು ದಾಖಲು
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ ನಡೆಸಿರುವ ಪ್ರಕರಣ ಶನಿವಾರ ತಡರಾತ್ರಿ ನಗರದ ಕಾರ್ಪೊರೇಷನ್ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ರಾತ್ರಿ 11 ಗಂಟೆ ಸುಮಾರಿಗೆ ಕಾರ್ಪೊರೇಷನ್ ಬಳಿ ಸಾಗರದಿಂದ ತಿರುವಣ್ಣಾಮಲೈಗೆ ಹೋಗುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಡ್ರೈವರ್ ಪ್ರಕಾಶ್, ಟಿಕೆಟ್ ಕಾಯ್ದಿರಿಸಿದ್ದ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಕಾರ್ಪೋರೇಷನ್ ಬಳಿ ಬಸ್ ನಿಲ್ಲಿಸಿದ್ದರು. ಈ ವೇಳೆ ಹಿಂದೆ ಎರಡು ಮೂರು ಬಸ್ಗಳು ಬಂದು ನಿಂತಿವೆ. …
Read More »
Laxmi News 24×7