Breaking News

ಬೆಂಗಳೂರು

ತಕ್ಷಣ ಎಲ್ಲ ಪತ್ರಕರ್ತರಿಗಾಗಿ ಅಗತ್ಯ ತಪಾಸಣಾ ಶಿಬಿರ ಏರ್ಪಡಿಸುವಂತೆ ಸೂಚನೆ ನೀಡಿದ್ದಾರೆ:B.S.Y

ಬೆಂಗಳೂರು: ಕೊರೊನಾ ವೈರಸ್ ಮಾಧ್ಯಮದವರ ಮೇಲೂ ತನ್ನ ವಕ್ರದೃಷ್ಟಿ ಬೀರಿದೆ. ನಿನ್ನೆ ಮುಂಬೈನಲ್ಲಿ 53 ಪತ್ರಕರ್ತರಿಗೆ ಕೊರೊನಾ ಸೋಂಕು ದೃಢಪಟ್ಟ ಬಳಿಕ ಇತರೆ ನಗರಗಳ ಪತ್ರಕರ್ತರಲ್ಲಿ ಆತಂಕ ಸೃಷ್ಟಿಯಾಗಿದೆ. ರಿಸ್ಕ್​ ತೆಗೆದುಕೊಂಡು ವರದಿ ಮಾಡುವ ಪತ್ರಕರ್ತರು ಬಹಳ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಮುಂಬೈ ಘಟನೆ ಬಳಿಕ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ಮಾಧ್ಯಮ ಸಿಬ್ಬಂದಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ಮುಂದಾಗಿದೆ. ಮುಂಬೈ ಪ್ರಕರಣದ ಬಗ್ಗೆ ಪರ್ತಕರ್ತರಿಂದ ಮಾಹಿತಿ …

Read More »

ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 119 ಪುಂಡರು ವಶಕ್ಕೆ

ಬೆಂಗಳೂರು, ಏ.21- ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇದುವರೆಗೆ 119 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಅರಮನೆ ಮೈದಾನದಲ್ಲಿರುವ ಇಸ್ಕಾನ್ ಅಕ್ಷಯ ಪಾತ್ರೆ ಪ್ರತಿಷ್ಠಾನ ಹಾಗೂ ರಾಜ್ಯ ಸರ್ಕಾರದ ಉಚಿತ ಆಹಾರ ಪದಾರ್ಥಗಳ ವಿತರಣಾ ವಿಭಾಗಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಪರಿಶೀಲಿಸಿದರಲ್ಲದೆ, ಸಿವಿಲ್ ಡಿಫೆನ್ಸ್ ಕಾರ್ಯಕರ್ತರ ಮೂಲಕ ಮನೆಮನೆಗೆ ದಿನಸಿ ಪದಾರ್ಥಗಳ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ …

Read More »

ಸರ್ಕಾರ ತೆಗೆದುಕೊಂಡ ತೀರ್ಮಾನಕ್ಕೆ ನಾವು ಬದ್ಧ.:ಡಿ.ಕೆ.ಶಿವಕುಮಾರ್

ಬೆಂಗಳೂರು, ಏ.21- ಎಲ್ಲರೂ ಕಾನೂನು ಗೌರವಿಸಬೇಕು. ಕೊರೊನಾ ಹೋರಾಟದಲ್ಲಿ ಸರ್ಕಾರ ತೆಗೆದುಕೊಳ್ಳುವ ಒಳ್ಳೆಯ ನಿರ್ಧಾರಗಳ ಜೊತೆಯಲ್ಲಿ ಇರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಹತ್ತು ಸಾವಿರ ಮಂದಿಗೆ ತಲಾ 10 ಕೆಜಿ ಅಕ್ಕಿ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ತೆಗೆದುಕೊಂಡ ತೀರ್ಮಾನಕ್ಕೆ ನಾವು ಬದ್ಧ. ನಾವು ಕೂಡ ಅನೇಕ ಸಲಹೆಗಳನ್ನು ನೀಡಿದ್ದೇವೆ. ಅವುಗಳಲ್ಲಿ ಎಷ್ಟನ್ನು ಸ್ವೀಕಾರ ಮಾಡುತ್ತಾರೋ …

Read More »

ಮುಂದಿನ ಮೂರು ತಿಂಗಳ ಅವಧಿಗೆ ಅಡುಗೆ ಅನಿಲ ಸಿಲಿಂಡರ್ ಉಚಿತ:BSY

ಬೆಂಗಳೂರು: ದೇಶಾದ್ಯಂತ ಲಾಕ್​ಡೌನ್​ ಜಾರಿಯಾಗಿರುವ ಹಿನ್ನಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬಡವರು, ನಿರ್ಗತಿಕರ ಸ್ಥಿತಿ ಅಯೋಮಯವಾಗಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಜನರಿಗೆ ಒದಗಿಸಲು ರಾಜ್ಯ ಸರ್ಕಾರ ಸಾಕಷ್ಟು ಯತ್ನ ನಡೆಸಿದೆ. ಈ ನಿಟ್ಟಿನಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ ಅಡುಗೆ ಅನೀಲ ವಿತರಿಸಲು ಮುಂದಾಗಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಬಡವರಿಗೆ 2 ತಿಂಗಳ ಪಡಿತರವನ್ನು ಮುಂಚಿತವಾಗಿ ವಿತರಣೆ ಮಾಡಲು ಆದೇಶ ನೀಡಿದೆ. ಇದೀಗ …

Read More »

ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆ…….

ಬೆಂಗಳೂರು, ಏ.21- ಪಾದರಾಯನಪುರ ದುರ್ಘಟನೆಯ ಬಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ವಿಷಾದ ವ್ಯಕ್ತ ಪಡಿಸಿದ್ದು, ಜಾತಿ ಧರ್ಮ ಮರೆತು ಕೊರೊನಾ ವಿರುದ್ಧ ಒಟ್ಟಾಗಿ ಹೋರಾಟ ಮಾಡೋಣ ಎಂದು ಮನವಿ ಮಾಡಿದ್ದಾರೆ.ನಿನ್ನೆಯ ‍ಘಟನೆಯ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ತುರ್ತು ಸಭೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗಾಗಿ ಇಂದು ಬೆಳಗ್ಗೆ ಟ್ವಿಟ್ ಮೂಲಕ ಜಮೀರ್ ಕೆಲ ಸ್ಪಷ್ಟನೆಗಳನ್ನು ನೀಡಿದ್ದಾರೆ. ಪಾದರಾಯನಪುರದಲ್ಲಿ …

Read More »

ಬೆಂಗಳೂರು:ಲಾಕ್‍ಡೌನ್, ಟಫ್ ರೂಲ್ಸ್ ಮಧ್ಯೆ ಭಾರೀ ಪ್ರಮಾಣದ ವಾಹನಗಳು ರಸ್ತೆಗಿಳಿದಿವೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದರೂ ವಾಹನ ದಟ್ಟಣೆ ಉಂಟಾಗಿದ್ದು, ಅಚ್ಚರಿ ಮೂಡಿಸಿದೆ. ಬೆಳಗ್ಗೆ ಈ ದೃಶ್ಯ ಕಂಡ ಸಿಲಿಕಾನ್ ಸಿಟಿ ಜನತೆಗೆ ಅಚ್ಚರಿ ಉಂಟಾಗಿದ್ದು, ಲಾಕ್‍ಡೌನ್ ಜಾರಿಯಲ್ಲಿದೆಯೋ ಅಥವಾ ಇಲ್ಲವೋ, ಇಷ್ಟು ಬೇಗ ಲಾಕ್‍ಡೌನ್ ಹಿಂಪಡೆದುಬಿಟ್ಟರಾ, ಪ್ರಧಾನಿ ಮೋದಿ ಲಾಕ್‍ಡೌನ್ ಆದೇಶ ಹಿಂಪಡೆದರಾ ಎಂಬ ಅನುಮಾನ ಮೂಡುವಷ್ಟರಮಟ್ಟಿಗೆ ವಾಹನಗಳು ರಸ್ತೆಗಿಳಿದಿವೆ. ಬೆಂಗಳೂರಿನ ಕೆ.ಆರ್.ಮಾರ್ಕೆಟ್‍ನಲ್ಲಿ ಈ ದೃಶ್ಯ ಕಂಡುಬಂದಿದ್ದು, ಲಾಕ್‍ಡೌನ್, ಟಫ್ ರೂಲ್ಸ್ ಮಧ್ಯೆ ಭಾರೀ ಪ್ರಮಾಣದ ವಾಹನಗಳು ರಸ್ತೆಗಿಳಿದಿವೆ. …

Read More »

ಲಾಕ್ ಡೌನ್‍ನಲ್ಲಿ ಸಾಧಕರ ಸಾಧನೆಗಳ ತಿಳಿಯುವ ಸಮಯ………..

ಕೊವಿಡ್-19. ಭಾರತ ದೇಶದಲ್ಲಿ 2020 ಮಾರ್ರ್ಚ್‍ನಿಂದ ಬಹು ದೊಡ್ಡ ಆಘಾತ, ಗಂಡಾಂತರ ತಂದೊಡ್ಡಿದೆ. ಈ ಸಮಯದಲ್ಲಿ ಕೇಂದ್ರ ಸರ್ಕಾರ ದೇಶದ ಜನರ ಸುರಕ್ಷತೆಗಾಗಿ ದೇಶಕ್ಕೆ ದೇಶವನ್ನೆ ಲಾಕ್‍ಡೌನ್ ಮಾಡಿದೆ. ಇದು ಸಮಯೋಚಿತವಾದ ಮತ್ತು ಅತ್ಯಂತ ಸೂಕ್ತವಾದ ತಿರ್ಮಾನವಾಗಿದೆ. ಚೀನಾದ ವುಹಾನ್ ಪ್ರಾಂತ್ಯದಲ್ಲಿ ಮೊಟ್ಟ ಮೊದಲು ಹುಟ್ಟಿಕೊಂಡ ಈ ವೈರಸ್ ಜಗತ್ತಿನ ಎಲ್ಲಾ ದೇಶಗಳಿಗೆ ಬಹು ಬೇಗನೆ ಪಸರಿಸಿ ಮಾನವರ ಪ್ರಾಣ ಹಾನಿಮಾಡಲು ಪ್ರಾರಂಭಿಸಿದೆ. ಮುಂದುವರೆದ ದೇಶಗಳೆಂಬ ಹಣೆಪಟ್ಟಿ ಕಟ್ಟಿಕೊಂಡ ದೇಶಗಳು …

Read More »

ಕಾರ್ಗೋ ಫ್ಲೈಟ್ ದರ ಏರಿಕೆಯಿಂದ ವಿದೇಶಕ್ಕೆ ರಪ್ತಾಗುತ್ತಿಲ್ಲ ಹಣ್ಣು, ತರಕಾರಿ

ಬೆಂಗಳೂರು 20_ ಕೋವಿಡ್ 19 ಎಲ್ಲ ಕ್ಷೇತ್ರದಲ್ಲೂ ಸಮಸ್ಯೆ ಸೃಷ್ಟಿಸಿದೆ. ಹಣ್ಣು ತರಕಾರಿ ವಿದೇಶಕ್ಕೆ ರಫ್ತು ಮಾಡಲೂ ಇದು ಅಡ್ಡಿಯಾಗಿದೆ. ಪ್ರತಿನಿತ್ಯ ಸಾವಿರಾರು ವಿಮಾನ ವಿದೇಶಕ್ಕೆ ಹೋಗಿ ಬರುತ್ತಿದ್ದ ಕಾರಣ ಹಣ್ಣು ತರಕಾರಿ ಕೂಡ ನಿರಾತಂಕವಾಗಿ ಸರಬರಾಜಾಗುತ್ತಿತ್ತು. ಆದ್ರೆ ಕೋವಿಡ್ 19 ನಿಂದಾಗಿ ವಿಮಾನ ಸಂಚಾರ ಸ್ಥಗಿತವಾಗಿದೆ. ವಿದೇಶದಿಂದಲೂ ಯಾವುದೇ ವಸ್ತು ಆಮದಾಗುತ್ತಿಲ್ಲ. ಹೀಗಾಗಿ ಹಣ್ಣು, ತರಕಾರಿ ಕೊಂಡೊಯ್ದ ಕಾರ್ಗೊ ಫ್ಲೈಟ್ ವಾಪಸ್ ಬರುವಾಗ ಖಾಲಿ ಬರುವ ಸ್ಥಿತಿ ಇದೆ. …

Read More »

ಪಾದರಾಯನಪುರದ ಪುಂಡರ ‘ಲೀಡರ್’ ಜಮೀರ್ ಹೇಳಿಕೆಗಳು ಸರಿಯೇ..?

ಬೆಂಗಳೂರು, – ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಇಡೀ ದೇಶದ ಜನತೆ ಆತಂಕಕ್ಕೊಳಗಾಗಿ ಗೃಹಬಂಧನದಲ್ಲಿದೆ. ಆದರೆ, ಬೆಂಗಳೂರಿನ ಪಾದರಾಯನಪುರದ ಜನತೆಗೆ ಅದೇನಾಗಿದೆಯೋ ಏನೋ ಗೊತ್ತಿಲ್ಲ. ಮನಬಂದಂತೆ ವರ್ತಿಸುತ್ತಿದ್ದಾರೆ. ಇಲ್ಲಿನ ಜನಪ್ರತಿನಿಧಿಯಾದ ಜಮೀರ್ ಅಹಮ್ಮದ್ ಕೂಡ ಸಮರ್ಥಿಸಿಕೊಳ್ಳಲು ಮುಂದಾಗಿ ಗೂಂಡಾ ರೀತಿಯಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್-19 ಮನುಕುಲಕ್ಕೆ ಕಂಟಕವಾಗಿ ಪರಿಣಮಿಸಿದೆ. ಸೋಂಕಿತರನ್ನು ಚಿಕಿತ್ಸೆಗೊಳಪಡಿಸುವುದು, ಶಂಕಿತರನ್ನು ಕ್ವಾರಂಟೈನ್ ಮಾಡುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಜಾತಿ-ಮತ, ಧರ್ಮಗಳನ್ನು ಬದಿಗೊತ್ತಿ ಸರ್ಕಾರ …

Read More »

ಮೇ ತಿಂಗಳಾಂತ್ಯಕ್ಕೆ ಮೆಡಿಕಲ್ ಕಾಲೇಜ್ ಗಳಲ್ಲಿ 60 ಲ್ಯಾಬ್ ಸ್ಥಾಪನೆ ……

ಬೆಂಗಳೂರು, -ರಾಜ್ಯದ ಎಲ್ಲ ಮೆಡಿಕಲ್ ಕಾಲೇಜ್ ಗಳಲ್ಲಿ ಲ್ಯಾಬ್ ತೆರೆಯಲು ಉದ್ದೇಶಿಸಲಾಗಿದ್ದು, ಮೇ ಅಂತ್ಯಕ್ಕೆ 60 ಲ್ಯಾಬ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಈವರೆಗೆ 23397 ಪರೀಕ್ಷೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ 59.21 ಪರೀಕ್ಷೆಯ ಪೈಕಿ ಒಬ್ಬರಿಗೆ ಸೋಂಕು ಕಂಡುಬರುತ್ತಿದೆ ಎಂದರು. ನಿನ್ನೆವರೆಗೂ ಕೇರಳ ಇತ್ತು. ಇವತ್ತು ಎರಡನೇ ಸ್ಥಾನಕ್ಕೆ ಹರಿಯಾಣ ಬಂದಿದೆ. ಸದ್ಯಕ್ಕೆ ಕೇರಳ ಮೂರನೇ …

Read More »