Breaking News

ಬೆಂಗಳೂರು

ಪಾದರಾಯನಪುರದ ಘಟನೆ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ: ಬೊಮ್ಮಾಯಿ

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದರಾಯನಪುರದಲ್ಲಿ ನಡೆದ ಘಟನೆ ಬಗ್ಗೆ ಕಠಿಒಣ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆಮಾತನಾಡಿದ ಅವರು, ಘಟನೆ ಸಂಬಂಧ ಈಗಾಗಲೇ 60 ಜನರನ್ನ ಬಂಧನ ಮಾಡಲಾಗಿದೆ. ಘಟನೆಯಾದ 3-4 ಗಂಟೆಯಲ್ಲಿ ಎಲ್ಲಾ ಪ್ರಮುಖರನ್ನ ಅರೆಸ್ಟ್ ಮಾಡಿದ್ದೇವೆ. ಪಾದರಾಯನಪುರದ ಘಟನೆ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇವೆ ಎಂದರು. ಪೊಲೀಸರು, …

Read More »

ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು:H.D.K

ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ,ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು.ದೇಶದ ಸ್ವಾಸ್ಥ್ಯ ಕಿಂತ ಬೇರಾವುದೂ ಮುಖ್ಯವಲ್ಲ. ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದು. ಕಾನೂನು ಕೈಗೆತ್ತಿಕೊಂಡು ಗೂಂಡಾಗಿರಿ,ದೌರ್ಜನ್ಯ ನಡೆಸಿರುವುದು ಅಕ್ಷಮ್ಯ ಅಪರಾಧ. ಯಾವುದೇ ಧರ್ಮದವರಿರಲಿ ಈ ದೇಶದ ಕಾನೂನಿಗೆ ತಲೆ ಬಾಗಿಸಬೇಕು. ಇಂತಹ ಅತಿರೇಕದ ಹುಚ್ಚಾಟಗಳನ್ನು …

Read More »

ಕೊರೋನಾ ಲಾಕ್​​ಡೌನ್​​: ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ, ಮಹತ್ವದ ಚರ್ಚೆ

ಇಂದು ಸಿಎಂ ಬಿ.ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ಕಡಿಮೆಯಾಗದ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಜತೆಗೆ ಕೇಂದ್ರ ಗೃಹ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿ ಮತ್ತು ಮುಂದೆ ಕೈಗೊಳ್ಳಬೇಕಾದ ಮಹತ್ವ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ಧಾರೆ.​​ ಬೆಂಗಳೂರು(ಏ.20): ಕೊರೋನಾ ವೈರಸ್​​ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಚ್​ 23ರಿಂದ ಏಪ್ರಿಲ್ 14ರತನಕ 21 …

Read More »

ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಪಕ್ಷದ ಜೊತೆಗೆ ಹೆಜ್ಜೆ ಹಾಕುವುದು ನಮ್ಮ ಕರ್ತವ್ಯವೂ ಹೌದು; ಸಿದ್ದರಾಮಯ್ಯ

ಬೆಂಗಳೂರು (ಏಪ್ರಿಲ್‌ 19); ಕೊರೋನಾ ಸೋಂಕು ಇಡೀ ರಾಜ್ಯಕ್ಕೆ ಕಂಟಕವಾಗಿರುವ ಹಿನ್ನೆಲೆಯಲ್ಲಿ ಈ ಸೋಂಕು ಹರಡದಂತೆ ತಡೆಯುವ ಮತ್ತು ಕುಸಿಯುತ್ತಿರುವ ರಾಜ್ಯದ ಆರ್ಥಿಕತೆಯನ್ನು ಸುಧಾರಿಸಲು ಪರಿಹಾರ ಸೂಚಿಸುವುದು ಹಾಗೂ ಇಂತಹ ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಪಕ್ಷದ ಜೊತೆ ಜೊತೆಗೆ ಹೆಜ್ಜೆ ಹಾಕುವುದು, ಸತ್ಯಗಳನ್ನು ಪ್ರಸ್ತುತ ಪಡಿಸುವುದು ವಿರೋಧ ಪಕ್ಷದ ಕರ್ತವ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಮಾಜಿ ಡಿಸಿಎಂ ಜಿ.ಪರಮೇಶ್ವರ್‌, ಮಾಜಿ ಸ್ಪೀಕರ್‌ ರಮೇಶ್ …

Read More »

ಆಸ್ಪತ್ರೆ ಸಿಗದೇ 7 ಕಿ.ಮೀ ನಡಿಗೆ – ಕೊನೆಗೆ ಡೆಂಟಲ್ ಆಸ್ಪತ್ರೆಯಲ್ಲಿ ಹೆರಿಗೆ

ಬೆಂಗಳೂರು: ಕೊರೊನಾ ಲಾಕ್‍ಡೌನ್ ವೇಳೆ ಏಳು ಕಿ.ಮೀ ನಡೆದುಕೊಂಡು ಬಂದು ಕೊನೆಗೆ ಎಲ್ಲೂ ಆಸ್ಪತ್ರೆ ಸಿಗದೆ ಡೆಂಟಲ್ ಆಸ್ಪತ್ರೆಯಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಂಗಳೂರಿನ ದೊಡ್ಡ ಬೊಮ್ಮಸಂದ್ರದಲ್ಲಿ ನಡೆದಿದೆ. ಕೊರೊನಾ ಲಾಕ್‍ಡೌನ್‍ನಿಂದ ದೇಶವೇ ಸ್ತಬ್ಧವಾಗಿದೆ. ಈ ವೇಳೆ ಲೊಟ್ಟೆಗೊಲ್ಲಹಳ್ಳಿಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಆಸ್ಪತ್ರೆಗೆ ಹೋಗಲು ಯಾವುದೇ ವಾಹನ ಕೂಡ ಸಿಕ್ಕಿಲ್ಲ. ಆಕೆ ಆಸ್ಪತ್ರೆ ಸಿಗುತ್ತದೆ ಎಂಬ …

Read More »

ಪಾದರಾಯನಪುರದಲ್ಲಿ ಪುಂಡರ ಗಲಾಟೆ- ರಕ್ಷಣೆಗೆ ಬಂದವರ ಮೇಲೆ ಅಟ್ಯಾಕ್

ಬೆಂಗಳೂರು: ಪಾದರಾಯನಪುರದಲ್ಲಿ ಪುಂಡರ ಹಾವಳಿ ಮುಂದುವರಿದಿದ್ದು, ಚೆಕ್‍ಪೋಸ್ಟ್ ಒಡೆದು ಹಾಕಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪಾದರಾಯನಪುರದ 58 ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲು ಹೋದ ಸಿಬ್ಬಂದಿ ಹೋಗಿದ್ದರು. ಇಂದು ರಾತ್ರಿಯಾಗುತ್ತಿದ್ದಂತೆ ಪಾದರಾಯನಪುರದ ಕೆಲ ಪುಂಡರು ರೌಡಿಗಳ ರೀತಿಯಲ್ಲಿ ವರ್ತಿಸಿದ್ದಾರೆ. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು ಟೆಂಟ್ ಗಳನ್ನು ಧ್ವಂಸಗೊಳಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಕಡಿಮೆ ಸಂಖ್ಯೆಯಲ್ಲಿರೋದನ್ನ ಗಮನಿಸಿದ ಪುಡಿ ರೌಡಿಗಳು ದಾಂಧಲೆಯನ್ನು ನಡೆಸಿದ್ದಾರೆ. ಏಕಾಏಕಿ ವಾಹನಗಳ ಸಮೇತ ಗುಂಪು …

Read More »

ಅಸಹಾಯಕ ಸಿನಿಮಾ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಷನ್ ಆಸರೆ

ಬೆಂಗಳೂರು: ಕೊರೊನಾ ವೈರಸ್ ಅಟಾಟೋಪದಿಂದಾಗಿ ಹೆಚ್ಚೂ ಕಡಿಮೆ ಇಡೀ ವಿಶ್ವವೇ ಸ್ತಬ್ಧವಾಗಿದೆ. ಅದರಲ್ಲಿ ನಮ್ಮ ದೇಶ, ರಾಜ್ಯವೂ ಹೊರತಾಗಿಲ್ಲ. ಮೇಲ್ನೋಟಕ್ಕೆ ಲಾಕ್‍ಡೌನ್ ಈ ಕ್ಷಣದ ಅನಿವಾರ್ಯತೆಯಾಗಿ ಕಂಡರೂ ಕೂಡಾ ದಿನದ ತುತ್ತನ್ನು ಆ ದಿನವೇ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಿದ್ದ ಕೋಟಿ ಕೋಟಿ ಜೀವಗಳು ತೀವ್ರತರನಾದ ಸಂಕಷ್ಟಕ್ಕೀಡಾಗಿವೆ. ಆ ಸಾಲಿನಲ್ಲಿ ಕನ್ನಡ ಚಿತ್ರರಂಗದ ಭಾಗವಾಗಿರುವ ಕಾರ್ಮಿಕರೂ ಕೂಡ ಸೇರಿಕೊಂಡಿದ್ದಾರೆ. ಅಂಥವರಿಗೆಲ್ಲ ನೆರವಾಗುವಂಥ ಸಾರ್ಥಕ ಕಾರ್ಯವನ್ನು ಸುಧಾ ಮೂರ್ತಿ ಸಾರಥ್ಯದ ಇನ್ಫೋಸಿಸ್ ಫೌಂಡೇಷನ್ …

Read More »

ನಶೆಯಲ್ಲಿಸಾಧ್ಯವಾದ್ರೆ ಹಿಡಿಯಿರಿ ಎಂದು ಎಸ್ಕೇಪ್,1 ಕಿ.ಮೀ ಚೇಸ್ ಮಾಡಿ ತಡೆದ ಪೊಲೀಸರು

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಕೆಲವು ಕಡೆ ಕಟ್ಟುನಿಟ್ಟಿನ ರೀತಿಯಲ್ಲಿ ಸೀಲ್‍ಡೌನ್ ಕೂಡ ಮಾಡಲಾಗಿದೆ. ಆದರೆ ಈ ಮಧ್ಯೆ ಯುವತಿಯರಿಬ್ಬರು ಕುಡಿದ ನಶೆಯಲ್ಲಿ ಕಾರನ್ನು ರ‍್ಯಾಶ್ ಆಗಿ ಚಾಲನೆ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಲೀಲಾ ಪ್ಯಾಲೇಸ್ ಚೆಕ್ ಪೋಸ್ಟ್ ಬಳಿ ಯುವತಿಯರು ಪುಂಡಾಟ ಮಾಡಿದ್ದಾರೆ. ಪೊಲೀಸರು ಲೀಲಾ ಪ್ಯಾಲೇಸ್ ಬಳಿ ವಾಹನಗಳ ತಪಾಸಣೆ ಮಾಡುತ್ತಿದ್ದರು. ಆಗ ನಶೆಯಲ್ಲಿದ್ದ ಯುವತಿಯರು ಕಾರನ್ನು …

Read More »

388ಕ್ಕೆ ಏರಿದ ಸೋಂಕಿತರ ಸಂಖ್ಯೆ – ಮೈಸೂರಿನಲ್ಲಿ ನಾಲ್ವರಿಗೆ ಕೊರೊನಾ

ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇವತ್ತು ನಾಲ್ವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 388ಕ್ಕೆ ಏರಿಕೆ ಕಂಡಿದೆ. ಬೆಳಗ್ಗೆ ಒಟ್ಟು ನಾಲ್ವರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ದೆಹಲಿಗೆ ತಬ್ಲಿಘಿ ಜಮಾತ್‍ಗೆ ಹೋಗಿದ್ದ ಮೈಸೂರಿನ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನೂ ನಂಜನಗೂಡಿನ ಇಬ್ಬರಲ್ಲಿ ಸೋಂಕು ಇರುವುದು ದೃಢವಾಗಿದೆ. ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 4 #COVID19 …

Read More »

ರಾಜ್ಯದ ವಿವಿಧೆಡೆ ಗುಡುಗು , ಭಾರೀ ಮಳೆ, ನಿವೃತ್ತ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

ಬೆಂಗಳೂರು: ರಾಜ್ಯದ ಹಲವೆಡೆ ಸಿಡಿಲು, ಗುಡುಗು ಸಹಿತ ಮಳೆ ಸುರಿದಿದ್ದು, ಸಿಡಿಲಿನ ಹೊಡೆತಕ್ಕೆ ನಿವೃತ್ತ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ನಿವೃತ್ತ ಯೋಧ ಚನ್ನಬಸಪ್ಪ ರುದ್ರಪ್ಪ ಚಾಜಗೌಡ (50) ಮೃತರಾಗಿದ್ದಾರೆ. ಸಂಜೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಈ ವೇಳೆ ಸಿಡಿಲು ಬಡಿದು ಚನ್ನಬಸಪ್ಪ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಚನ್ನಬಸಪ್ಪ ಅವರು ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಸುತ್ತಿದ್ದರು. ಕೆಲಸದಿಂದ ನಿವೃತ್ತಿ …

Read More »