ಬಹುನಿರೀಕ್ಷಿತ ಬಿಗ್‌ಬಾಸ್ ಕನ್ನಡ ಒಟಿಟಿ ಸೀಸನ್-1 ಇಂದು ಆರಂಭವಾಗಿದ್ದು ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಾಕಷ್ಟು ಕಾಂಟ್ರವರ್ಸಿ ಜೊತೆ ತಮ್ಮ ಜೋತಿಷ್ಯದ ಮೂಲಕ ಚಿರಪರಿಚಿತರಾದ ಆರ್ಯವರ್ಧನ್ ಗುರೂಜಿ ಈಗ ಬಿಗ್‌ಬಾಸ್ ಕನ್ನಡ ಒಟಿಟಿ ಸೀಸನ್-1ರ ಮೊದಲ ಸ್ಪರ್ಧಿಯಾಗಿದ್ದಾರೆ. ಇನ್ನೂಆರ್ಯವರ್ಧನ್ ಗುರೂಜಿಯನ್ನಸ್ಟೇಜ್ ಮೇಲೆ ಬರಮಾಡಿಕೊಂಡ ಅಭಿನಯ ಚಕ್ರವರ್ತಿ ಸುದೀಪ್ ಅವರು, ಆರ್ಯವರ್ಧನ್ ಜೊತೆ ಕೆಲಕಾಲ ಮಾತನಾಡಿದರು. ಈ ವೇಳೆ ಮಾತನಾಡೋದಕ್ಕೆ ತುಂಬಾ ಚಡಪಡಿಸುತ್ತಿದ್ದ ಆರ್ಯವರ್ಧನ್ …
Read More »BJP ಗೆ ಸೆಡ್ಡು ಹೊಡೆಯುತ್ತಾ ಹಿಂದೂಸ್ಥಾನ ಜನತಾ ಪಾರ್ಟಿ ಪಕ್ಷ ?
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿಗೆ ಸೆಡ್ದು ಹೊಡೆಯುವ ನಿಟ್ಟಿನಲ್ಲಿ ಹೊಸದೊಂದು ರಾಜಕೀಯ ಪಕ್ಷ ಉದಯವಾಗಲಿದ್ದು, ನಾಳೆ ನೂತನ ಪಕ್ಷಕ್ಕೆ ಚಾಲನೆ ದೊರೆಯಲಿದೆ. ವಿನಾಯಕ ಮಾಳದಕರ್ ನೇತೃತ್ವದಲ್ಲಿ ಹಿಂದೂಸ್ಥಾನ ಜನತಾ ಪಾರ್ಟಿ ಎಂಬ ಹೊಸ ಪಕ್ಷ ಅಸ್ತಿತ್ವಕ್ಕೆ ಬರಲಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿರುವ ಶರಣ ಸೇವಾ ಸಮಾಜದಲ್ಲಿ ನಾಳೆ ಉದ್ಘಾಟನಾ ಸಮಾರಂಭ ನಡೆಯಲಿದೆ. ನಾಳೆ ಶರಣ ಸೇವಾ ಸಮಾಜದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆ ಬಳಿಕ ಮಠಾಧೀಶರಿಂದಲೇ ಹಿಂದೂಸ್ಥಾನ ಜನತಾ …
Read More »ಸಂಪುಟ ವಿಸ್ತರಣೆಗಾಗಿ ದಿಲ್ಲಿಗೆ ಬರುವುದು ಬೇಡ..: ರಾಜ್ಯ ನಾಯಕರಿಗೆ ಶಾ ಖಡಕ್ ಸಂದೇಶ
ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಅನುಮತಿ ಕೇಳುವುದಕ್ಕಾಗಿ ಯಾರೂ ದಿಲ್ಲಿಗೆ ಬರುವುದು ಬೇಡ. ವಿಸ್ತರಣೆ ಮಾಡುವಾಗ ನಾವೇ ಹೇಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಅವರ ಪ್ರತಿನಿಧಿಯಾಗಿ ಕಂದಾಯ ಸಚಿವ ಆರ್.ಅಶೋಕ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವ ಅವರು, ಸಂಪುಟ …
Read More »ಕರಾವಳಿ ಘಟನೆ ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ: ಆರಗ ವಿರುದ್ಧ ಶಾ ಗರಂ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಘಟನೆಗಳ ಕುರಿತು ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಕರಣಗಳನ್ನು ಸರಿಯಾಗಿ ನಿರ್ವಹಿಸದಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಗರಂ ಆಗಿದ್ದಾರೆ. ಕಾರ್ಯಕರ್ತರ ರಕ್ಷಣೆ ಮತ್ತು ವಿಶ್ವಾಸ ಗಳಿಸಲು ಪ್ರಯತ್ನಿಸುವಂತೆ ಸಿಎಂ ಬಸವ ರಾಜ ಬೊಮ್ಮಾಯಿಗೆ ಸೂಚಿಸಿದ್ದಾರೆ. ಕೇಂದ್ರ ಸಂಸ್ಕೃತಿ ಸಚಿವಾಲಯ ಆಯೋಜಿಸಿದ್ದ “ಸಂಕಲ್ಪ್ ಸೆ ಸಿದ್ಧಿ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಶಾ, ಗುರುವಾರ ಬೆಳಗ್ಗೆ ಸಿಎಂ …
Read More »ಸಿದ್ದರಾಮಯ್ಯಗೆ ಶುಭ ಕೋರಿದವರ ಮೇಲೆ ಬಿತ್ತು ಕೇಸ್
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪಾಲಿಕೆಯಿಂದ ಅನುಮತಿ ಪಡೆಯದೆ ಬೃಹತ್ ಬ್ಯಾನರ್ ಅಳವಡಿಸಿದ್ದವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ವಸಂತನಗರ ಉಪ ವಿಭಾಗ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ಬಿ.ವಿ. ವೀಣಾ, ದೂರು ನೀಡಿದ್ದಾರೆ. ಇದರ ಮೇರೆಗೆ ಕಾಂಗ್ರೆಸ್ ಮುಖಂಡರಾದ ಟಿ.ಎಸ್. ರಮೇಶ್ ಬಾಬು ಮತ್ತು ಜಯಬಾಲ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು …
Read More »ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಕಾರ್ಯಕ್ರಮದ ನಿಮಿತ್ತ ಬುಧವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಅಮಿತ್ ಶಾ ಅವರನ್ನು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಸಂಸ್ಕೃತಿ …
Read More »ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಸಿಹಿಸುದ್ದಿ : ಶೀಘ್ರವೇ ಉಚಿತ ವಿದ್ಯುತ್ ಅನುಷ್ಠಾನ
ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಳಿಗೆ ಉಚಿತವಾಗಿ 75 ಯೂನಿಟ್ ವಿದ್ಯುತ್ ನೀಡುವ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಇಂಧನ ಇಲಾಖೆ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆಯನ್ನು ತ್ವರಿತವಾಗಿ ಜಾರಿಗೆ …
Read More »M.B.ಪಾಟೀಲ ಮನೆಯಲ್ಲಿ ಕಳವು: ಒಡಿಶಾದಲ್ಲಿ ಆರೋಪಿ ಸೆರೆ
ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ನಿವಾಸದಲ್ಲಿ ನಡೆದಿದ್ದ ಕಳವು ಪ್ರಕರಣದ ಆರೋಪಿಯನ್ನು ಪೊಲೀಸರು ಒಡಿಶಾದಲ್ಲಿ ಬಂಧಿಸಿ, ನಗರಕ್ಕೆ ಕರೆತಂದಿದ್ದಾರೆ. ಶಾಸಕರ ಮನೆಯಲ್ಲಿ ಲಾಂಡ್ರಿ ಕೆಲಸ ಮಾಡುತ್ತಿದ್ದ ಜಯಂತ್ ದಾಸ್ ಬಂಧಿತ ಆರೋಪಿ. ಆರೋಪಿಯನ್ನು ಐದು ದಿನಗಳ ಕಾಲ ವಶಕ್ಕೆ ಪಡೆದಿರುವ ಸದಾಶಿವನಗರದ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ‘ಐದು ವರ್ಷಗಳಿಂದ ಶಾಸಕರ ಮನೆಯಲ್ಲಿ ಆರೋಪಿ ಕೆಲಸಕ್ಕಿದ್ದ. ಆತನ ಮೇಲೆಯೇ ಅನುಮಾನ ವ್ಯಕ್ತಪಡಿಸಿ ದೂರು ನೀಡಲಾಗಿತ್ತು. …
Read More »ಪ್ರವೀಣ್ ನೆಟ್ಟಾರು ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು..!
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸೋಮವಾರ ಬಂಧನವಾಗಿರುವ ಇಬ್ಬರು ಆರೋಪಿಗಳು ಹಲವು ವರ್ಷಗಳಿಂದ ಬೆಂಗಳೂರಿನ ಬೇಕರಿಯಲ್ಲಿಯೇ ಕೆಲಸ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ. ಮಾನ್ಯತಾ ಟೆಕ್‌ಪಾರ್ಕ್ ಬಳಿಯ ಬೇಕರಿಯಲ್ಲಿ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಅಲ್ತಾಫ್ ಹಾಗೂ ಇರ್ಫಾನ್ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ನಡೆಸಿ, ತಲೆಮರೆಸಿಕೊಳ್ಳಲು ವಾಪಸ್ ಬೆಂಗಳೂರಿಗೆ ಬಂದಿದ್ದರು. ಬಳಿಕ ಏನೂ ಗೊತ್ತಿಲ್ಲದವರಂತೆ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಮೂಲತಃ ಸುಳ್ಯ …
Read More »ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್ ಕುಮಾರ್
ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ. ಅಲ್ಲದೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ …
Read More »