Breaking News

ಬೆಂಗಳೂರು

ರೈತರ ಉತ್ಪನ್ನಗಳನ್ನ ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿ: ಎಚ್‍ಡಿಕೆ

ಸರ್ಕಾರ ಮೂಗಿಗೆ ತುಪ್ಪ ಸವರೋ ಬಗ್ಗೆ ಮಾತನಾಡ್ತಿದೆ – ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.   ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಸಂಕಷ್ಟ ಪಡುತ್ತಿದ್ದಾರೆ. ಹೀಗಾಗಿ ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ …

Read More »

ಕರ್ನಾಟಕದಲ್ಲಿ ಏ.30ರವರೆಗೆ ಲಾಕ್‍ಡೌನ್ ವಿಸ್ತರಣೆ………..

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವ ಸಂಬಂಧ ಏಪ್ರಿಲ್ 30ರವರೆಗೆ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮುಂದುವರಿಯಲಿದೆ. ದೇಶಾದ್ಯಂತ ಹೇರಲಾಗಿರುವ 21 ದಿನಗಳ ಲಾಕ್‍ಡೌನ್ ಏ.14ಕ್ಕೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ಲಾಕ್‍ಡೌನ್ ವಿಧಿಸಿದ ಪರಿಣಾಮ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ ಏ.30ರವರೆಗೆ ಲಾಕ್‍ಡೌನ್ ವಿಸ್ತರಿಸಬೇಕೆಂದು ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿದ್ದರು. ಮೋದಿ ಜೊತೆಗಿನ ವಿಡಿಯೋ …

Read More »

ಲಾಕ್‍ಡೌನ್ ಪಾಲಿಸದಿದ್ರೆ ಸೀಲ್‍ಡೌನ್: ಸಿಎಂ ಎಚ್ಚರಿಕೆ

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವ ಸಂಬಂಧ ಕರ್ನಾಟಕದಲ್ಲಿ 15 ದಿನ ಲಾಕ್‍ಡೌನ್ ವಿಸ್ತರಿಸಲಾಗಿದೆ. ಮುಂದಿನ 2 ವಾರ ಲಾಕ್‍ಡೌನ್ ಬಹಳ ಕಠಿಣವಾಗಿರುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಪ್ರಧಾನಿ ಮೋದಿ ನಾಲ್ಕು ಗಂಟೆಗಳ ಕಾಲ ಸಂವಾದ ನಡೆಸಿದ್ದಾರೆ. ಕೊರೊನಾ ಬಗ್ಗೆ ಕಳವಳ ವ್ಯಕ್ತಪಡಿಸಿದರು. 2.44 ಲಕ್ಷ ವೈಯಕ್ತಿಕ ರಕ್ಷಣಾ ಸಾಧನ (ಪಿಪಿಇ) ಕಿಟ್, ಮಾಸ್ಕ್ …

Read More »

ಭಾರತದಲ್ಲಿ ಸಮುದಾಯ ಹಂತಕ್ಕೆ ಸೋಂಕು ಹೋಗಿಲ್ಲ: ತಪ್ಪು ಒಪ್ಪಿಕೊಂಡ ಡಬ್ಲ್ಯೂಎಚ್‍ಒ

ನವದೆಹಲಿ: ಕೊರೊನಾ ವೈರಸ್ ಸಮುದಾಯ ಪ್ರಸರಣ ಹಂತ ತಲುಪಿದ ದೇಶಗಳ ಪಟ್ಟಿಯಲ್ಲಿ ಭಾರತವನ್ನು ತೋರಿಸಿದ್ದ ವಿಶ್ವ ಆರೋಗ್ಯ ಸಂಸ್ಥೆ, ತನ್ನ ಯಥಾಸ್ಥಿತಿ ವರದಿಯ ದೋಷವನ್ನು ಒಪ್ಪಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆ ಯಥಾಸ್ಥಿತಿ ವರದಿಯಲ್ಲಿ, ‘ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ಹೋಗಿ’ ಎಂದು ಹೇಳಿತ್ತು. ಆದರೆ ಈಗ ತಮ್ಮ ತಪ್ಪನ್ನು ಒಪ್ಪಿಕೊಂಡು, ಭಾರತದಲ್ಲಿ ಸೋಂಕು ಹರಡುವ ಕ್ಲಸ್ಟರ್ ಕಾಣಿಸಿಕೊಂಡಿವೆ. ಆದರೆ ಸಮುದಾಯ ಪ್ರಸರಣದ ಸ್ಥಿತಿ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದೆ. …

Read More »

ತಾನು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಾಗದ ಕಾರಣ ಬೇಸತ್ತ ರೈತ ಆತ್ಮಹತ್ಯೆ

ಬೆಂಗಳೂರು: ಕೊರೊನಾ ವೈರಸ್ ನಿಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್​ಡೌನ್​ನಿಂದಾಗಿ ತಾನು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಾಗದ ಕಾರಣ ಬೇಸತ್ತ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಗಂಗಾಧರ್ (60) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೈತ. ತುಮಕೂರಿನ ಶಿರಾ ತಾಲ್ಲೂಕಿನ ದೇವರಹಳ್ಳಿಯಲ್ಲಿರುವ ತನ್ನ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತ ಬ್ಯಾಂಕ್​ ಮತ್ತು ಸ್ಥಳೀಯ ಸಾಲಗಾರರ ಬಳಿ ಸುಮಾರು 4.4 ಲಕ್ಷ ರೂ ಸಾಲ ಮಾಡಿದ್ದರು. ಬಿಸಿಲಿನ ಪರಿಣಾಮ …

Read More »

ಒಟ್ಟು 18 ಜಿಲ್ಲೆಗಳಲ್ಲಿ ಸೀಲ್‍ಡೌನ್ ಮಾಡಲು ಸಿದ್ಧತೆ ನಡೆಯುತ್ತಿದೆ..

ಬೆಂಗಳೂರು: ಒಂದು ಕಡೆ ಸೀಲ್‍ಡೌನ್ ಮಾದರಿ ನಿರ್ಬಂಧ ಹಾಕುತ್ತಿರುವ ಬೆಂಗಳೂರು ಪೊಲೀಸರು, ಅಡ್ಡಾದಿಡ್ಡಿ ಓಡಾಡುತ್ತಿರುವವರಿಗೆ ಮತ್ತಷ್ಟು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಬೆಂಗಳೂರು ರಸ್ತೆಗಳನ್ನು ಸೀಲ್ ಮಾಡುವುದರ ಜೊತೆಗೆ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಉದ್ದೇಶಿಸಿದ್ದಾರೆ. ಈಗಾಗಲೇ ನೀಡಿರುವ ತುರ್ತು ಕೋವಿಡ್-19 ಪಾಸ್‍ಗಳನ್ನು ಶನಿವಾರದಿಂದ ರದ್ದು ಮಾಡಲು ಬಯಸಿದ್ದಾರೆ. ಬೆಂಗ್ಳೂರು ಪೊಲೀಸರ ಪ್ಲಾನ್: ನಗರದಲ್ಲಿ 70,000 ತುರ್ತು ಕೋವಿಡ್-19 ಪಾಸ್, ಆನ್‍ಲೈನ್ 1.30 ಲಕ್ಷ ಪಾಸ್ ವಿತರಣೆ ಮಾಡಲಾಗಿದೆ. ಆದರೆ ದಿನಕ್ಕೆ …

Read More »

ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಬೇಕಿದೆ:ಡಿ.ಕೆ.ಶಿವಕುಮಾರ್

ಬೆಂಗಳೂರು: ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜನಿಸಿ 129 ವರ್ಷವಾಗಿದೆ. ಜನ್ಮದಿನ ಆಚರಿಸಲು ಇಡೀ ದೇಶ ಬಹಳ ಉತ್ಸುಕವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರು ನಮಗೆ ನೀಡಿರುವ ಸಂವಿಧಾನದ ಪ್ರಸ್ತಾವನೆಯನ್ನು ನೀವುಗಳು ಇರುವ ಸ್ಥಳದಿಂದಲೇ ಅಂದು ಬೆಳಿಗ್ಗೆ 10 ಗಂಟೆಗೆ ಸಂವಿಧಾನ ಪಿಠೀಕೆ ಓದುವ ಮೂಲಕ ನಮ್ಮ ಐಕ್ಯತೆ, ಸಮಗ್ರತೆ, ಬ್ರಾತೃತ್ವವನ್ನು ಎತ್ತಿ ಹಿಡಿದು ಈ ದಿನವನ್ನು ವಿಶೇಷವಾಗಿ ಆಚರಿಸಬೇಕು ಎಂದು ರಾಜ್ಯ ಹಾಗೂ …

Read More »

ಬೆಂಗ್ಳೂರಿನ 2 ವಾರ್ಡ್‍ಗಳು ಸೀಲ್‍ಡೌನ್ – ಬಿಬಿಎಂಪಿಯಿಂದಲೇ ಆಹಾರ ವಿತರಣೆ

ಬೆಂಗಳೂರು: ಇಂದು ಮಧ್ಯರಾತ್ರಿಯಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸಂಪೂರ್ಣವಾಗಿ ಸೀಲ್ ಮಾಡಲಾಗುತ್ತದೆ ಎನ್ನುವ ಸುದ್ದಿಗಳ ಮಧ್ಯೆ ನಗರದ ಮಧ್ಯೆ ಬಾಪೂಜಿನಗರ ಮತ್ತು ಪಾದರಾಯನಪುರ ವಾರ್ಡ್ ಅನ್ನು ಸಂಪೂರ್ಣ ಸೀಲ್ ಮಾಡಲು ಬಿಬಿಎಂಪಿ ಮುಂದಾಗಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು, ಬಾಪೂಜಿ ನಗರ ವಾರ್ಡ್ 134 & ಪಾದರಾಯನಪುರ ವಾರ್ಡ್ 135ರಲ್ಲಿ ಕೋವಿಡ್ -19  ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಣ …

Read More »

ದೂರದಿಂದಲೇ ಒಂದಾದ ಪ್ರೇಮಿಗಳು – ಬೆಂಗ್ಳೂರಿನ ಗಿರಿನಗರ ಠಾಣೆಯಲ್ಲೊಂದು ಅಪರೂಪದ ದೃಶ್ಯ

ಬೆಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇದರಿಂದ ಅನೇಕ ಮದುವೆ ಸಮಾರಂಭಗಳಿಗೆ ಬ್ರೇಕ್ ಬಿದ್ದಿದೆ. ಆದರೂ ಕೆಲವು ಜೋಡಿಗಳು ಲಾಕ್‍ಡೌನ್ ನಿಯಮವನ್ನು ಪಾಲಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೀಗ ಕೊರೊನಾ ಲಾಕ್‍ಡೌನ್ ನಡುವೆಯೇ ಪ್ರೇಮಿಗಳಿಬ್ಬರು ಮದುವೆಯಾಗಿದ್ದಾರೆ. ಮುರುಗನ್ ಮತ್ತು ಮೇಘಶ್ರೀ ಮದುವೆಯಾದ ಪ್ರೇಮಿಗಳು. ಇವರಿಬ್ಬರು ಅನೇಕ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇವರ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮರುಗನ್ ಮತ್ತು ಮೇಘಶ್ರೀ ಮನೆಯಿಂದ ಓಡಿ …

Read More »

ಕರ್ನಾಟಕ ನೆಲದಲ್ಲಿ ತಮಿಳುನಾಡು ಖಾಕಿ ಚೆಕ್‍ಪೋಸ್ಟ್ – ಬಸವರಾಜ್ ಬೊಮ್ಮಾಯಿ ಫುಲ್ ಗರಂ

ಬೆಂಗಳೂರು: ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಕೂಡ ಲಾಕ್‍ಡೌನ್ ಅನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎನ್ನುವ ಬಗ್ಗೆ ಸ್ವತಃ ಗೃಹಮಂತ್ರಿಗಳು ಹಾಗೂ ಬೆಂಗಳೂರು ಕಮಿಷನರ್ ಖುದ್ದು ಚೆಕ್ ಪೋಸ್ಟ್ ಹಾಗೂ ಬಾರ್ಡರ್‌ಗಳಿಗೆ ಭೇಟಿ ನೀಡಿ ರಿಯಾಲಿಟಿ ಚೆಕ್ ನಡೆಸಿದ್ದಾರೆ. ನಕಲಿ ಪಾಸ್‍ಗಳನ್ನು ಬಳಸಿ ಹಾಗೂ ಅನವಶ್ಯಕವಾಗಿ ಓಡಾಟ ಮಾಡುತ್ತಿದ್ದವರ ಪಾಸ್‍ಗಳನ್ನು ವಶಕ್ಕೆ ಪಡೆದು ವಾಹನಗಳನ್ನು ಸೀಜ್ ಮಾಡಿದ್ದಾರೆ. ದೇಶಾದ್ಯಂತ ಲಾಕ್‍ಡೌನ್ ಹೇರಿದರೂ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ …

Read More »