Breaking News

ಬೆಂಗಳೂರು

3.17 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದು: ಅನರ್ಹರಲ್ಲಿ ಸರ್ಕಾರಿ ನೌಕರರೇ ಹೆಚ್ಚು

ಬೆಂಗಳೂರು: ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಆರ್ಥಿಕವಾಗಿ ಸಬಲರಾಗಿರುವವರು ಪಡೆದಿದ್ದ 3,17,441 ಬಿಪಿಎಲ್‌ ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಳೆದ ಒಂದೂವರೆ ವರ್ಷದಿಂದ ರದ್ದುಪಡಿಸುತ್ತಿದೆ. ಇಂಥ ಅನರ್ಹರಿಂದ 11. 91 ಕೋಟಿ ರೂ. ದಂಡವನ್ನೂ ವಸೂಲಿ ಮಾಡಲಾಗಿದೆ. ಆರ್ಥಿಕವಾಗಿ ಸಬಲರಾಗಿರುವವರೂ ಪಡಿತರ ಚೀಟಿ ಪಡೆದು ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರು, ವಾರ್ಷಿಕ 1.20ಲಕ್ಷ ರೂ. ಆದಾಯ ಗಳಿಸುವವರು, ಮೂರು ಹೆಕ್ಟೇರ್‌ಗಿಂತ …

Read More »

ಸರ್ಕಾರದ ವಿರುದ್ಧ ಕಾರ್ಯಕರ್ತರ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್‌ಗೆ ಫೀಲ್ಡ್ ಗಿಳಿತಾರಾ ಅಮಿತ್ ಶಾ?

ಬೆಂಗಳೂರು: ಪಕ್ಷದ ಯುವ‌ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಘಟನೆಯಿಂದ ಕಾರ್ಯಕರ್ತರಲ್ಲಿ ಆಕ್ರೋಶದ ಕಟ್ಟೆ ಹೊಡೆದಿದೆ. ಡ್ಯಾಮೇಜ್ ಕಂಟ್ರೋಲ್ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಇದೇ ಮೊದಲ ಬಾರಿ ಬಿಜೆಪಿ ಕಾರ್ಯಕರ್ತರು ತನ್ನದೇ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳ ಮುತ್ತಿಗೆ, ಗೃಹ ಸಚಿವರ ಮುತ್ತಿಗೆಯಂತಹ ಚಟುವಟಿಕೆ ನಡೆಸಿದ್ದಾರೆ. ರಾಜ್ಯಾದ್ಯಂತ ಆಡಳಿತ ಪಕ್ಷದ ಸರ್ಕಾರದ ವಿರುದ್ಧ ಅವರ ಕಾರ್ತಕರ್ತರೇ ದೊಡ್ಡ ಮಟ್ಟದಲ್ಲಿ …

Read More »

ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸರ್ಕಾರದಿಂದ ‘ಅರಿಶಿನ-ಕುಂಕುಮ’ ವಿತರಣೆ

ಬೆಂಗಳೂರು : ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದಿನ ದಿನ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ಅವರ ನಿರ್ದೇಶನದ …

Read More »

ನಾಲಿಗೆ ಹರಿಬಿಟ್ಟು ಕುರ್ಚಿಗೆ ಕುತ್ತು ತಂದುಕೊಂಡ ತೇಜಸ್ವಿ ಸೂರ್ಯ

ಬೆಂಗಳೂರು,ಆ.1- ಸರ್ಕಾರ ಹಾಗೂ ಪಕ್ಷಕ್ಕೆ ಭಾರೀ ಮುಜುಗರ ಸೃಷ್ಟಿಸಿರುವ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬದಲಾವಣೆ ಮಾಡುವ ಸಂಭವವಿದೆ. ದಕ್ಷಿಣಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನಟ್ಟಾರ್ ಕೊಲೆಯಾದ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರೊಂದಿಗೆ ತೇಜಸ್ವಿ ಸೂರ್ಯ ದೂರವಾಣಿಯಲ್ಲಿ ಮಾತನಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.   ಕಾಂಗ್ರೆಸ್ ಸರ್ಕಾರ ಇದ್ದರೆ ನಾವು …

Read More »

ದೇವೇಗೌಡರ ಬಳಿ 4 ಪಂಚೆ – ಜುಬ್ಬಾ ಬಿಟ್ಟರೆ ಇರಲು ಸ್ವಂತ ಮನೆಯೂ ಇಲ್ಲ: ಸಿ.ಎಂ. ಇಬ್ರಾಹಿಂ

ಮಾಜಿ ಪ್ರಧಾನಿ ದೇವೇಗೌಡರು ಈ ನಾಡಿನ ರೈತರ ಕುರಿತು ಅಪಾರ ಕಾಳಜಿ ಹೊಂದಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ …

Read More »

ಡಿಸೆಂಬರ್‌ನಲ್ಲೇ ವಿಧಾನಸಭೆ ಚುನಾವಣೆ: H.D.K.

ಬೀದರ್: ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿದರೆ ರಾಜ್ಯದಲ್ಲಿ ಡಿಸೆಂಬರ್‌ನಲ್ಲೇ ವಿಧಾನಸಭೆ ಚುನಾವಣೆ ನಡೆಯುವ ಲಕ್ಷಣಗಳು ಕಂಡು ಬರುತ್ತಿವೆ. ಹೀಗಾಗಿ ಮೊದಲ ಹಂತದಲ್ಲಿ ಜೆಡಿಎಸ್‌ ಗೆಲ್ಲಲು ಸಾಧ್ಯವಿರುವ 134 ಕ್ಷೇತ್ರಗಳಲ್ಲಿ ಸಿದ್ಧತೆ ಆರಂಭಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.   ಬೀದರ್‌ ಜಿಲ್ಲಾ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೊಣೆಯನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ ಅವರಿಗೆ ವಹಿಸಲಾಗಿದೆ. 10, 12 ದಿನಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ …

Read More »

ನಿಮ್ಮ ಜಮೀನಿನಲ್ಲಿ ಉಚಿತ ಕೊಳವೇ ಬಾವಿ ಕೊರೆಸಬೇಕೇ: ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಹಲವಾರು ರೈತರು ಇಂದಿಗೂ ಮಳೆಯನ್ನೇ ಆಶ್ರಯಿಸಿಕೊಂಡು ಜಮೀನು ಕಾರ್ಯದಲ್ಲಿ ತೊಡಗಿದ್ದಾರೆ. ಕಾರಣ ಅವರಲ್ಲಿ ಕೊಳವೆ ಬಾವಿ ತೋಡಿಸುವಷ್ಟು ಆರ್ಥಿಕ ಶಕ್ತಿ ಇಲ್ಲದಿರುವುದು. ಈ ಕಾರಣಕ್ಕೆ ಸರ್ಕಾರವೇ ಉಚಿತವಾಗಿ ಈ ಸೌಲಭ್ಯಗಳನ್ನು ರೈತರಿಗೆ ನೀಡುತ್ತಿದೆ. ನೀವು ಸದುಪಯೋಗಪಡಿಸಿಕೊಳ್ಳಿ. ಯೋಜನೆ ಏನು? : ಕೊಳವೆ ಬಾವಿ (ಬೋರ್ ವೆಲ್) ಕೊರೆಯುವ ಮತ್ತು ತೆರೆದ ಬಾವಿ ತೋಡುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದೇ ಗಂಗಾ ಕಲ್ಯಾಣ ಯೋಜನೆ. ವಿದ್ಯುತ್ ಸಂಪರ್ಕ ಕಲ್ಪಿಸಿ ಪಂಪ್ …

Read More »

ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಅತ್ಯಾಚಾರ: ತನ್ನದೇ ಠಾಣೆ ಅಧಿಕಾರಿಗಳಿಂದ ಬಂಧನ

ಬೆಂಗಳೂರು: ಪಾರ್ಕ್ ಬಳಿ ಒಂಟಿಯಾಗಿ ನಿಂತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಗೋವಿಂದರಾಜನಗರ ಪೊಲೀಸ್ ಕಾನ್ಸ್ಟೇಬಲ್ ನನ್ನು ಬಂಧಿಸಲಾಗಿದೆ. ಪವನ್ ದ್ಯಾವಣ್ಣಬವರ್ ಬಂಧಿತ ಕಾನ್ಸ್ಟೇಬಲ್ ಎಂದು ಗುರುತಿಸಲಾಗಿದೆ. ಆರೋಪಿ ಪವನ್, ಕಳೆದ ಆರನೇ ತಾರೀಕಿನಂದು ರಾತ್ರಿ ಗಸ್ತು ವೇಳೆ ಬಾಲಕಿಯನ್ನ ಪಾರ್ಕ್ ಬಳಿ ಕಂಡಿದ್ದ. ಚಾಮರಾಜನಗರ ಹೋಗ್ಬೇಕು ಎಂದು ಕೂತಿದ್ದ ಬಾಲಕಿ ನೋಡಿ ಡ್ರಾಪ್ ಕೊಡುವುದಾಗಿ ಕಾನ್ಸ್ಟೇಬಲ್ ಪವನ್ ಪುಸಲಾಯಿಸಿದ್ದಾನೆ. ನಂತರ ಡ್ರಾಪ್ ಕೊಡುತ್ತಿನಿ ಎಂದು ಬಾಲಕಿಯನ್ನು ರೂಂ ಗೆ ಕರೆದುಕೊಂಡು …

Read More »

2017 ನೇ ಸಾಲಿನ `KAS’ ಫಲಿತಾಂಶ ಪ್ರಕಟ : ಪಾಸಾದ ಅಭ್ಯರ್ಥಿಗಳ ಪೂರ್ಣ ಪಟ್ಟಿ ಇಲ್ಲಿದೆ.!

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) 2017ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆ ಫಲಿತಾಂಶವನ್ನ ಪ್ರಕಟಿಸಿದೆ. ಅಂದ್ಹಾಗೆ, ಅಭ್ಯರ್ಥಿಗಳು ಈ ಪರೀಕ್ಷಾ ಫಲಿತಾಂಶಕ್ಕಾಗಿ ಬಹು ದಿನಗಳಿಂದ ಕಾಯುತ್ತಿದ್ರು.   ಲೋಕಸೇವಾ ಆಯೋಗ ಈಗ 1:3 ಅನುಪಾತದಲ್ಲಿ ಸಂದರ್ಶನಕ್ಕೆ ಅರ್ಹರಾದ 318 ಅಭ್ಯರ್ಥಿಗಳ ಪಟ್ಟಿಯನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅನಂತರ ಅವರ ಸಂದರ್ಶನ ನಡೆಸಿ, ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ. …

Read More »

ಬಳೆ ತೊಟ್ಟುಕೊಳ್ಳಿ , ಬಿಜೆಪಿ ನಾಯಕರೇ.. ನೀವು ಗಂಡಸರಾ..?

ಬೆಂಗಳೂರು: ಬಳೆ ತೊಟ್ಟುಕೊಳ್ಳಿ , ಬಿಜೆಪಿ ನಾಯಕರೇ.. ಹೀಗಂತ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರೆ ನಾಯಕರ ಫೋಟೋ ಹಾಕಿ ಭಜರಂಗದಳ ಕಾರ್ಯಕರ್ತರು ಪೋಸ್ಟ್ ಹಾಕುವ ಸಾಮಾಜಿಕ ಜಾಲತಾಣದಲ್ಲಿ ಸಿಟ್ಟು ಹೊರಹಾಕ್ತಿದ್ದಾರೆ.   ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಭಜರಂಗದಳದ ಫೇಸ್ ಬುಕ್‌ನಲ್ಲಿ ಬಳೆ ತೊಟ್ಟುಕೊಳ್ಳಿ,ಬಿಜೆಪಿ ನಾಯಕರೇ.. ಇನ್ನೆಷ್ಟು ಹಿಂದೂಗಳ ಬಲಿದಾನವಾಗಬೇಕು?ನಿಮ್ಮನ್ನು ಗಂಡಸರು ಎಂದು ಆರಿಸಿದೆವು..ಆದರೆ ನೀವು..? ಎಂದೆಲ್ಲಾ ಬರೆದು ಫೋಸ್ಟ್ …

Read More »