Breaking News

ಬೆಂಗಳೂರು

ನಾಳೆ ಜನತಾ ಕರ್ಫ್ಯೂನಲ್ಲಿ ಏನೆಲ್ಲಾ ಬಂದ್ ಇರುತ್ತೆ

ಬೆಂಗಳೂರು : ಮಾರ್ಚ್ 22ರ ಭಾನುವಾರದಂದು (ನಾಳೆ) ಪ್ರಧಾನಿ ನರೇಂದ್ರ ಮೋದಿಯವರು ಜನತಾ ಕರ್ಪ್ಯೂಗೆ ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಬಹುತೇಕ ಜನರು ಅಂದು ಸ್ವಯಂ ಗೃಹ ಬಂಧನಕ್ಕೆ ಒಳಗಾಗಲಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಮನೆಯಿಂದ ಹೊರಗೆ ಬಾರದೇ ಪ್ರಧಾನಿಯವರ ಜನತಾ ಕರ್ಪ್ಯೂಗೆ ಬೆಂಬಲ ಸೂಚಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದೆಲ್ಲೆಡೆ ಏನೆಲ್ಲಾ ವ್ಯವಸ್ಥೆ ಇರೋದಿಲ್ಲ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.. ಮಾರ್ಚ್ 22ರ ಭಾನುವಾರದಂದು ಪ್ರಧಾನಿ ನರೇಂದ್ರ …

Read More »

ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲವೆಂದು ಹೆತ್ತ ಕರುಳನ್ನೇ ಕತ್ತುಹಿಸುಕಿ ಕೊಲೆಗೈದ ಪಾಪಿ ತಂದೆ

ಬೆಂಗಳೂರು: ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲ, ಅವರ ಅಮ್ಮನ ರೀತಿ ಬೆಳೆಯುತ್ತಿವೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ದಾರುಣ ಘಟನೆ ಅಕ್ಷಯನಗರದ ಹನಿ ಡಿವ್​ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ ಎನ್ನಲಾಗಿದೆ. ತೌಶಿನಿ( 3), ಶಾಸ್ತಾ(1.5) ಮೃತ ಕಂದಮ್ಮಗಳು. ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲ. ಇಂತಹ ಮಕ್ಕಳು ನನಗೆ ಬೇಡ್ವೇ ಬೇಡ ಎಂಬ ಕ್ಷುಲ್ಲಕ ಕಾರಣಕ್ಕೆ ಆರೋಪಿ ತಂದೆ ಜತಿನ್​(35) ಮಕ್ಕಳ ಕತ್ತುಹಿಸುಕಿ ಕೊಲೆಗೈದಿದ್ದಾನೆ. ಕೇರಳ ಮೂಲದ …

Read More »

ಕೊರೊನಾ ಭಯದಲ್ಲಿ ಮಾಲ್ಡೋವಾದಲ್ಲಿ ಸಿಲುಕಿದ ಕನ್ನಡಿಗ ವಿದ್ಯಾರ್ಥಿಗಳು

ನೆಲಮಂಗಲ: ಕೊರೊನಾ ಭೀತಿಯಲ್ಲಿ ಮಾಲ್ಡೋವಾದಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಸಿಲುಕಿ ಪರದಾಡುತ್ತಿದ್ದಾರೆ. ರಾಜ್ಯದ ಸುಮಾರು 12 ವಿದ್ಯಾರ್ಥಿಗಳು ಮಾಲ್ಡೋವಾ ದೇಶದ Nicolae Testemiteanu state university of medicine and pharmacy ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಕೊರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ಮಾಲ್ಡೋವಾ ದೇಶದಲ್ಲಿ ಈಗಾಗಲೇ ಕೊರೊನಾ ವ್ಯಾಪಿಸುತ್ತಿದ್ದು, ಕ್ವೆರೆಂಟೈನ್ ಆಗಿರುವ ವಿದ್ಯಾರ್ಥಿಗಳು ಮಾಲ್ಡೋವಾದಲ್ಲಿ ಕರ್ಫೂ ಜಾರಿಯಾಗಿರುವ ಹಿನ್ನೆಲೆ ಯಾವುದೇ ದಿನನಿತ್ಯದ ಪದಾರ್ಥಗಳು ಸಿಗದೆ ಒದ್ದಾಡುತ್ತಿದ್ದಾರೆ. ನಮ್ಮನ್ನು ರಕ್ಷಿಸಿ ಭಾರತಕ್ಕೆ ವಾಪಸ್ …

Read More »

ಬೆಂಗಳೂರು,: ಸರ್ಕಾರಿ ಕಚೇರಿಗಳಿಗೆ ಥರ್ಮಲ್ ಸಿಸಿ ಕ್ಯಾಮಾರ ಅಳವಡಿಕೆಗೆ ಚಿಂತನೆ

ಬೆಂಗಳೂರು, ಮಾ.21- ಸರ್ಕಾರಿ ಕಚೇರಿಗಳಲ್ಲಿ , ಜನಸಂದಣೀಯ ಪ್ರಮುಖ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಥರ್ಮಲ್ ಟೆಸ್ಟ್ ಸಿಸಿ ಕ್ಯಾಮಾರ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕೊರೊನಾ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಜನ ಸಾಮಾನ್ಯರ ಆತಂಕ ದುಪ್ಪಟ್ಟಾಗಿದೆ. ಖಾಸಗಿ ಸಂಸ್ಥೆಗಳು ಬಹುತೇಕ ಮನೆಗೆಲಸದ ಪದ್ಧತಿಯನ್ನು ಅಳವಡಿಸಿಕೊಂಡಿವೆ. ವಾಣಿಜ್ಯ ಸಂಕೀರ್ಣಗಳು, ಮಾಲ್‍ಗಳು, ಚಿತ್ರಮಂದಿರಗಳು, ಪ್ರಮುಖ ಮಾರುಕಟ್ಟೆಗಳು ಮುಚ್ಚಿವೆ. ಆದರೆ ಸರ್ಕಾರ ಇನ್ನೂ ಸರ್ಕಾರಿ ಕಚೇರಿಗಳಿಗೆ ರಜೆ ನೀಡಿಲ್ಲ. ಎಲ್ಲಾ ಸರ್ಕಾರಿ ಕಚೇರಿಗಳು ಚಾಲ್ತಿಯಲ್ಲಿವೆ. …

Read More »

ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರನ್ನು ಭೇಟಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದರು. ಬೆಂಗಳೂರಿನಲ್ಲಿರುವ ಮೊಯ್ಲಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸತೀಶ ಜಾರಕಿಹೊಳಿ ಸನ್ಮಾನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾದ್ಯಕ್ಷ ಲಕ್ಷ್ಮಣರಾವ …

Read More »

ಬೆಂಗಳೂರು: ಜನತಾ ಕರ್ಫ್ಯೂ ಪಾಲಿಸಿ ಡಾ. ಅಶ್ವತ್ಥನಾರಾಯಣ ನಿರ್ದೇಶಿಸಿದ್ದಾರೆ.

ಬೆಂಗಳೂರು: ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಐಟಿ-ಬಿಟಿ ಕಂಪನಿಗಳ ಎಲ್ಲ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ನಿರ್ದೇಶಿಸಿದ್ದಾರೆ. ಐಟಿ- ಬಿಟಿ, ಸ್ಟಾರ್ಟ್‌ ಅಪ್‌ ಕಂಪನಿಗಳ ಮುಖ್ಯಸ್ಥರ ಜತೆ ಶುಕ್ರವಾರ ವೀಡಿಯೋ ಕಾನ್ಫರೆನ್ಸ್‌ ನಡೆಸಿದ ಡಾ. ಅಶ್ವತ್ಥನಾರಾಯಣ, ಕೊರೊನಾ ನಿಯಂತ್ರಣ ಸಂಬಂಧ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ವಿವರಿಸಿದರು. ಜತೆಗೆ ಅವರಿಂದ ಸಲಹೆ- ಸೂಚನೆಗಳನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ …

Read More »

ಕೇರಳದಂತೆ ರಾಜ್ಯದಲ್ಲೂ ವಿಶೇಷ ಪ್ಯಾಕೆಜ್ ಘೋಷಿಸಿ: ಹೆಚ್ ಡಿ ಕುಮಾರಸ್ವಾಮಿ

ಕೊರೊನಾ ವೈರಸ್ ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೊರೊನಾ ವೈರಸ್​ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ …

Read More »

ಗೋವಾ ಕನ್ನಡಿಗರ ರಕ್ಷಣೆಗೆ ಆಗ್ರಹಿಸಿ ಪ್ರತಿ ಪಕ್ಷ ಧರಣಿ- ಸಿಎಂ ಉತ್ತರಕ್ಕೆ ಬಿಗಿಪಟ್ಟು

ಬೆಂಗಳೂರು: ಗೋವಾದಲ್ಲಿ ಇರುವ ಕನ್ನಡಿಗರ ಸಮಸ್ಯೆ ವಿಧಾನ ಪರಿಷತ್ ನಲ್ಲಿಂದು ಪ್ರತಿ ಧ್ವನಿಸಿತು. ಗೋವಾ ಕನ್ನಡಿಗರನ್ನು ರಕ್ಷಣೆ ಮಾಡುವಂತೆ ಪ್ರತಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಮುಖ್ಯಮಂತ್ರಿಗಳು ಉತ್ತರ ನೀಡುವಂತೆ ವಿಪಕ್ಷಗಳು ಒತ್ತಾಯ ಮಾಡಿದರು. ಸದನದಲ್ಲಿ ಗದ್ದಲ ಕೋಲಾಹಲಕ್ಕೆ ಸೃಷ್ಟಿಯಾಗಿದ್ದರಿಂದ ಕಲಾಪವನ್ನು ಮುಂದೂಡಿದ ಘಟನೆ ಕೂಡ ನಡೀತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪದಲ್ಲಿ ಗೋವಾದಲ್ಲಿ ಪೊಗೊ ಕಾಯಿದೆಯಿಂದ ಸಾವಿರಾರು ಕನ್ನಡಿಗರು ಆತಂಕದಲ್ಲಿ ಇದ್ದಾರೆ ಎಂದು ಬಸವರಾಜ …

Read More »

ಬೆಂಗಳೂರು: :ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ

ಬೆಂಗಳೂರು: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಯಾರಾದರೂ ಸಿನಿಮಾ ಮಾಡಿದರೆ ಹೇಳಿ ನಾನು ನಿರ್ಭಯಾ ತಾಯಿ ಪಾತ್ರವನ್ನು ಮಾಡುತ್ತೇನೆ ಎಂದು ಹಿರಿಯ ನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ. ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇಂದು ನಿರ್ಭಯಾ ದೋಷಿಗಳಿಗೆ ಮರಣದಂಡನೆ ಆಗಿದೆ. ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು ಎಂದು ನಿರ್ಭಯಾ ತಾಯಿ ಆಶಾದೇವಿ ತಮ್ಮ ಮೊದಲ …

Read More »

ಸಾರಥಿ ಹೆಗಲ ಮೇಲೆ ಕುಳಿತ ಪುಟ್ಟ ರಾಮನ ಪರಿಚಯಿಸಿದ ತರುಣ್ ಸುಧೀರ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಜೈಶ್ರೀರಾಮ್ ಹಾಡಿನಲ್ಲಿ ಕಾಣಿಸಿಕೊಂಡ ಪುಟ್ಟ ರಾಮನನ್ನು ಸಿನಿಮಾದ ನಿರ್ದೇಶಕ ತರುಣ್ ಸುಧೀರ್ ಪರಿಚಯ ಮಾಡಿಕೊಟ್ಟಿದ್ದಾರೆ. ತರುಣ್ ಸುಧೀರ್ ನಿರ್ದೇಶನ ಮತ್ತು ಡಿಬಾಸ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಮುಂದಿನ ಏಪ್ರಿಲ್‍ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಈ ಹಿಂದೆ ಚಿತ್ರತಂಡ ಟೀಸರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ದರ್ಶನ್ ಅವರ ಜೊತೆ ಪುಟ್ಟ ರಾಮನೊಬ್ಬ ಕಾಣಿಸಿಕೊಂಡಿದ್ದನು. ಈ ವಿಚಾರವಾಗಿ ದರ್ಶನ್ ಅವರ …

Read More »