ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ಶ್ರೀಮತಿ ಮಂಜುಳ NV ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನೆಹರು ಯುವ ಕೇಂದ್ರ (ಭಾರತ ಸರ್ಕಾರ )ಮತ್ತು ಸುವರ್ಣ ಚಾರಿಟಬಲ್ ಟ್ರಸ್ಟ್ (ರಿ) ವತಿಯಿಂದ ಸಮಾಜ ಸೇವೆಯನ್ನು ಗುರುತಿಸಿ “ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗಿದೆ . ಈ ಪ್ರಶಸ್ತಿ ನ ಮಾಜಿ ಕೇಂದ್ರ ಸಚಿವರಾದ ಶ್ರೀ ಕೆಎಚ್ ಮುನಿಯಪ್ಪ ಅವರು ಮತ್ತು ನೆಹರು ಯುವ ಕೇಂದ್ರದ ಅಧ್ಯಕ್ಷರು ಪ್ರಶಸ್ತಿಯನ್ನು ನೀಡಿದರು . ಶ್ರೀಮತಿ …
Read More »ವೈರಸ್‍ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ವೈರಸ್‍ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕರ ಜೊತೆ ವೈದ್ಯಕೀಯ ಶಿಕ್ಷಣ ಸಚಿವರು ಇಂದು ಸಭೆ ನಡೆಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಿನ್ನೆ ಸಿಕ್ಕಿರುವ ಮಾಹಿತಿ ಪ್ರಕಾರ ವಿದೇಶದಿಂದ ಬಂದಿರುವ ಓರ್ವ ವಿದ್ಯಾರ್ಥಿನಿ ಹಾಗೂ ಅವರನ್ನು ಕರೆದುಕೊಂಡ ಬಂದ ವೈದ್ಯರೊಬ್ಬರಿಗೆ ವೈರಸ್ ಸೋಂಕು …
Read More »ಕೊರೊನಾ ಭಯ : ಹಾಸ್ಟೆಲ್-ಪಿಜಿ ಬಿಟ್ಟು ಮನೆಗಳಿಗೆ ವಾಪಸಾಗುವಂತೆ ಸೂಚನೆ.
ಬೆಂಗಳೂರು, ಮಾ.17- ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಮತ್ತು ಪಿಜಿಯಲ್ಲಿರುವವರು ತಮ್ಮ ಮನೆಗಳಿಗೆ ವಾಪಸಾಗುವಂತೆ ಬಿಬಿಎಂಪಿ ಮನವಿ ಮಾಡಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಹೊರ ಊರಿನಿಂದ ಆಗಮಿಸಿ ನಗರದ ಹಾಸ್ಟೆಲ್ ಮತ್ತು ಪಿಜಿಯಲ್ಲಿ ತಂಗಿರುವವರು ಕೂಡಲೇ ತಮ್ಮ ಊರುಗಳಿಗೆ ಹಿಂದಿರುಗುವಂತೆ ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಊರಿಗೆ ತೆರಳಲು ಸಾಧ್ಯವಾಗದೆ ಹಾಸ್ಟೆಲ್‍ನಲ್ಲೇ ತಂಗಿರುವ ವಿದ್ಯಾರ್ಥಿಗಳು ವೈಯಕ್ತಿಕ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಅನಿಲ್‍ಕುಮಾರ್ …
Read More »ಇಂದೋರ್ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಿಂತಲೂ ಉತ್ತಮ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಬೆಂಗಳೂರಿನ ಸ್ವಚ್ಛತೆ ಕಾಪಾಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೆಂಗಳೂರು: ಇಂದೋರ್ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಿಂತಲೂ ಉತ್ತಮ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಬೆಂಗಳೂರಿನ ಸ್ವಚ್ಛತೆ ಕಾಪಾಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ಮಾದರಿ ಯೋಜನಡೆಯಡಿ ಪ್ರಾಯೋಗಿಕವಾಗಿ ಮತ್ತಿಕೆರೆ ವಾರ್ಡಿನಲ್ಲಿ ಸಮಗ್ರ ಘನತ್ಯಾಜ್ಯ ನಿರ್ವಹಣೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಡಾ. ಅಶ್ವತ್ಥನಾರಾಯಣ ಮಾತನಾಡಿದರು. ಸ್ವಚ್ಛತೆಯ ದೃಷ್ಟಿಯಿಂದ ಪ್ರಮುಖ ಕಾರ್ಯಕ್ರಮವಾದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಇದು ಸಾರ್ವಜನಿಕರು ಸೇರುವ ಕಾರ್ಯಕ್ರಮವಲ್ಲ ಎಂದು ಮೊದಲೇ ಸೂಚನೆ …
Read More »ಮಹಾಮಾರಿ ಕರೋನಾಕ್ಕೆ ಹೆದರಿ ಕಲಬುರಗಿ ಕಡೆಗೆ ಸಚಿವರು ಬರುತ್ತಿಲ್ಲ. ಇವರ ಈ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕಲಬುರಗಿ,ಮಾ.16- ಡೆಡ್ಲಿ ಕೊರೋನಾ ವೈರಸ್‍ನಿಂದ ಕಲಬುರಗಿಯ ಜನ ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಜನತೆಯ ಆತಂಕ ದೂರ ಮಾಡಬೇಕಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತ್ರ ಜಿಲ್ಲೆಯ ಕಡೆ ತಲೆ ಹಾಕಿಲ್ಲ. ಮಹಾಮಾರಿ ಕರೋನಾಕ್ಕೆ ಹೆದರಿ ಕಲಬುರಗಿ ಕಡೆಗೆ ಸಚಿವರು ಬರುತ್ತಿಲ್ಲ. ಇವರ ಈ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದೇಶದಲ್ಲೇ ಕೊರೋನಾಕ್ಕೆ ಮೊದಲ ಬಲಿ ಕಲಬುರಗಿಯಲ್ಲಿ ಆಗಿದ್ದು, ಕಲಬುರಗಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಕೊರೋನಾ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದೆ. …
Read More »31ಸಾವಿರ ಮನೆಗಳಿಗೆ 183 ಕೋಟಿ ರೂ.ಗಳು ಬಿಡುಗಡೆ:ವಸತಿ ಸಚಿವ ವಿ.ಸೋಮಣ್ಣ
ಬೆಂಗಳೂರು, ಮಾ.16- ರಾಜ್ಯದಲ್ಲಿ 31ಸಾವಿರ ಮನೆಗಳಿಗೆ 183 ಕೋಟಿ ರೂ.ಗಳು ಬಿಡುಗಡೆ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಿ.ಎಸ್.ಹೂಲಗೇರಿ ಅವರ ಪರವಾಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರ್ಹ ಫಲಾನುಭವಿಗಳ ಖಾತೆಗೆ ಈ ಹಣವನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ವಸತಿ ಯೋಜನೆಯಡಿ ಮನೆ ನಿರ್ಮಾಣದ ಪ್ರಗತಿಯ ಮಾಹಿತಿ ಪಡೆಯುವ ಸಂಬಂಧ ಶಾಸಕರಿಗೆ ಪತ್ರ ಬರೆದು ವಿಧಾನಸಭಾ …
Read More »ಪೌರತ್ವ ತಿದ್ದುಪಡಿ ಕಾಯ್ದೆ ಭಾರತದ ನೈತಿಕ, ಸಾಂವಿಧಾನಿಕ ಬಾಧ್ಯತೆ: RSS ನಿರ್ಣಯ ಅಂಗೀಕಾರ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಆರ್‌ಎಸ್ಎಸ್ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿಎಎ ಜಾರಿ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ, ರಾಮ ಮಂದಿರ ನಿರ್ಮಾಣ ಹಸಿರು ನಿಶಾನೆಗೆ ಆರ್‌ಎಸ್ಎಸ್ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದೆ. ರಾಜಕೀಯ ಪಕ್ಷಗಳು ಸಿಎಎ ಬಗ್ಗೆ ಗೊಂದಲ ಸೃಷ್ಟಿಸುತ್ತಿವೆ. ಆದರೆ ಸಿಎಎ ಜಾರಿಗೆ ತಂದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಆರ್‌ಎಸ್ಎಸ್ ಕಾರ್ಯವಾಹಕ ಸುರೇಶ್ ಭೈಯಾಜೀ ಜೋಷಿ ಹೇಳಿದ್ದಾರೆ. ಅಂದಹಾಗೆ ಬೆಂಗಳೂರು …
Read More »ಶಿಕ್ಷಣ ಸಚಿವರ ಸಂದೇಶ ದ್ವಿತೀಯ ಪಿಯುಸಿ ವಿದ್ಯಾಥಿಗಳಿಗೆ
ಬೆಂಗಳೂರು, ಮಾ.16- ಮಾರ್ಚ್ 4ರಿಂದ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ ಈವರೆಗೆ ಸುಲಲಿತವಾಗಿ ನಡೆದಿದ್ದು, ಇನ್ನೂ ಏಳು ದಿನಗಳ ಕಾಲ ನಡೆಯಲಿರುವ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಎದುರಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಹೇಳಿದ್ದಾರೆ. ಈಗಾಗಲೇ 39 ವಿಷಯಗಳ ಪರೀಕ್ಷೆ ಮುಗಿದಿದೆ. ಇನ್ನೂ 7 ಪರೀಕ್ಷೆಗಳು ನಡೆಯಬೇಕಿದೆ. ವಿದ್ಯಾರ್ಥಿಗಳು ನಿರ್ಭಯದಿಂದ ಪರೀಕ್ಷೆ ಬರೆಯಿರಿ. ವಿಜಯಪುರದಲ್ಲಿ ಯಾರೋ ಇಬ್ಬರು ಕಿಡಿಗೇಡಿಗಳು ಮಾಡಿದ ಕೃತ್ಯದಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲವು ವದಂತಿ …
Read More »ಕೊರೊನಾ ಹರಡದಂತೆ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿ ವೇತನ
ಬೆಂಗಳೂರು, ಮಾ.16- ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಹಗಲಿರುಳು ಯೋಧರ ರೀತಿ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿ ವೇತನ ಹಾಗೂ ಪಾಲಿಸಿ (ವಿಮೆ) ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸರ್ಕಾರಿ ವೈದ್ಯರು ಯೋಧರ ರೀತಿ ಕೊರೊನಾ ವೈರಸ್ ತಡೆಗಟ್ಟಲು ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ನಾನು ಅವರಿಗೆ ವಿಶೇಷವಾದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಸಿಬ್ಬಂದಿಗಳಿಗೆ ಆರ್ಥಿಕ ಬೆಂಬಲ ಹೆಚ್ಚಿಸುವ ನಿಟ್ಟಿನಲ್ಲಿ ವೇತನ ಹೆಚ್ಚಳ …
Read More »ಮೊದಲು ₹18 ಕೋಟಿ, ನಂತರ 12 ಕೋಟಿಗೆ ಮನವಿ; ಸುನೀಲ್ ಪುರಾಣಿಕ್‌ಗೆ ಸಿಎಂ ತರಾಟೆ
ಕರ್ನಾಟಕ ಚಲನಚಿತ್ರ ಅಕಾಡೆಮಿ ಒಂದಕ್ಕೇ ಬರೋಬ್ಬರಿ 18 ಕೋಟಿ ರೂಪಾಯಿ ಅನುದಾನ ಕೇಳಿದ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್‌ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತರಾಟೆ ತೆಗೆದುಕೊಂಡಿದ್ದಾರೆ. ಸುನೀಲ್ ಪುರಾಣಿಕ್ ಸಿಎಂ ಬಳಿ ಒಂದು ವರ್ಷಕ್ಕೆ ₹18 ಕೋಟಿಯನ್ನ ಚಲನಚಿತ್ರ ಅಕಾಡೆಮಿಗೆ ಬಿಡುಗಡೆ ಮಾಡಿ ಎಂದು ಕೇಳಿದ್ದಾರಂತೆ.. 18 ಕೋಟಿ ರೂಪಾಯಿಗಳ ಮನವಿ ಪತ್ರ ತೆಗೆದುಕೊಂಡು ಸಿಎಂ ಬಳಿ ಹೋದ ಸುನೀಲ್ ಪುರಾಣಿಕ್ ಅದಕ್ಕೂ ಮುನ್ನ ಬಿಎಸ್ವೈ ಪುತ್ರ ಬಿ.ವೈ ವಿಜಯೇಂದ್ರರನ್ನು ಭೇಟಿ …
Read More »