ಬೆಂಗಳೂರು, ಜ.30- ಡಿಜಿ ಮತ್ತು ಐಜಿಪಿ ನೀಲಮಣಿ ಎನ್.ರಾಜು ಹಾಗೂ ಡಿಜಿಪಿ ಗಳಾದ ಎಂ.ಎನ್.ರೆಡ್ಡಿ ಮತ್ತು ರಾಘವೇಂದ್ರ ಔರಾದ್ಕರ್ ಅವರುಗಳು ನಾಳೆ ನಿವೃತ್ತಿ ಯಾಗಲಿದ್ದಾರೆ. ಒಂದೇ ದಿನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿದೆ. ಕೋರಮಂಗಲದ ಕೆಎಸ್‍ಆರ್‍ಪಿ ಪರೇಡ್ ಮೈದಾನದಲ್ಲಿ ನಾಳೆ ಬೆಳಗ್ಗೆ 8 ಗಂಟೆಗೆ ಬೀಳ್ಕೊಡುಗೆ ಕವಾಯತು ನಡೆಯಲಿದೆ. ಹಿರಿಯ, ಕಿರಿಯ ಪೊಲೀಸ್ ಅಧಿಕಾರಿಗಳು ಈ ಬೀಳ್ಕೊಡುಗೆ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Read More »ನಾಳೆಯೊಳಗೆ ಶೇ.99ರಷ್ಟು ಸಂಪುಟ ವಿಸ್ತರಣೆ ಕ್ಲಿಯರ್(ಇತ್ಯರ್ಥ) ಆಗಲಿದೆ.
ಮೂಲಗಳ ಪ್ರಕಾರ ಭಾನುವಾರ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಮಯ ನಿಗದಿಪಡಿಸಿದ್ದು ಅಂದು 12 ಮಂದಿ ಶಾಸಕರು ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಗೆದ್ದಿರುವ 11 ಮಂದಿ ಶಾಸಕರ ಪೈಕಿ 9 ಮಂದಿ ಹಾಗೂ ಮೂಲ ಬಿಜೆಪಿಯಿಂದ ಮೂವರು ಮೊದಲ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವವಿದೆ. ಯಡಿಯೂರಪ್ಪ ನಾಳೆ ಬೆಂಗಳೂರಿಗೆ ಹಿಂತಿರುಗಲಿದ್ದು, ಭಾನುವಾರ ವಿಸ್ತರಣೆಗೆ ಸಮಯವನ್ನು ನಿಗದಿಪಡಿಸುವ ಸಾಧ್ಯತೆ ಇದೆ ಬೆಂಗಳೂರು,ಜ.30- ಒಂದು ವೇಳೆ ದೆಹಲಿ ವರಿಷ್ಠರು ಅನುಮತಿ …
Read More »ಇನ್ನು ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭವಾಗಿರುವಂತೆ ಸಂಪುಟಕ್ಕೆ ಸೇರ್ಪಡೆಯಾಗುವ ಆಕಾಂಕ್ಷಿಗಳು ತಮ್ಮ ತಮ್ಮ ಗಾಡ್‍ಫಾದರ್‍ಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ
ಬೆಂಗಳೂರು,ಜ.30-ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸಿದರು ಎಂಬ ಗಾದೆಯಂತೆ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ.ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಪಡೆಯುವ ನಿಟ್ಟಿನಲ್ಲಿ ವರಿಷ್ಠರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಲು ಮುಂದಾಗಿರುವಂತೆ ಸಚಿವ ಸ್ಥಾನ ಕೈ ತಪ್ಪಲಿರುವವರು ಹಾಗೂ ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ. ಪಕ್ಷ ನಿಷ್ಠರನ್ನು ಕಡೆಗಣಿಸಿ ಅಧಿಕಾರದ ಆಸೆಗಾಗಿ ಬಂದವರಿಗೆ ಮಂತ್ರಿ ಸ್ಥಾನ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂಬುದು …
Read More »ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಸಿಐಡಿ ವಿಭಾಗದ ಮುಖ್ಯಸ್ಥ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್‍ಸೂದ್..”
ಬೆಂಗಳೂರು,ಜ.29-ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಸಿಐಡಿ ವಿಭಾಗದ ಮುಖ್ಯಸ್ಥ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್‍ಸೂದ್ ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಹಾಲಿ ಪೊಲೀಸ್ ಮಹಾನಿರ್ದೇಶಕರಾಗಿರುವ ನೀಲಮಣಿ ಎನ್.ರಾಜು ಅವರು ಶುಕ್ರವಾರ ಸೇವೆಯಿಂದ ನಿವೃತ್ತರಾಗಲಿದ್ದು, ತೆರವಾಗುವ ಈ ಸ್ಥಾನಕ್ಕೆ ಸಿಐಡಿ ವಿಭಾಗದ ಡಿಐಜಿ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲು ಸರ್ಕಾರ ಒಲವು ತೋರಿದೆ. ಕೊನೆ ಕ್ಷಣದಲ್ಲಿ ಯಾವುದೇ ಅಚ್ಚರಿಯ ಬೆಳವಣಿಗೆ ನಡೆಯದಿದ್ದರೆ ಪ್ರವೀಣ್‍ಸೂದ್ ಅವರು ರಾಜ್ಯ ಪೊಲೀಸ್ ಇಲಾಖೆಯ ನೂತನ ಮುಖ್ಯಸ್ಥರಾಗಿ …
Read More »ಉಪಚುನಾವಣೆಯಲ್ಲಿ ಗೆದ್ದಿರುವ 11 ಶಾಸಕರು ಮಂತ್ರಿಯಾಗುವುದು ನಿಶ್ಚಿತ: ಶಾಸಕ ರಮೇಶ್ ಜಾರಕಿಹೊಳಿ
ಉಪಚುನಾವಣೆಯಲ್ಲಿ ಗೆದ್ದಿರುವ 11 ಶಾಸಕರು ಮಂತ್ರಿಯಾಗುವುದು ನಿಶ್ಚಿತವಾಗಿದ್ದು ಎಚ್.ವಿಶ್ವನಾಥ್ ಅವರನ್ನು ಮಂತ್ರಿ ಮಾಡಲು ನಾವೆಲ್ಲ ಪ್ರಯತ್ನಿಸುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು.. ಶಾಸಕರಾದ ಮಹೇಶ್ ಕುಮಠಹಳ್ಳಿ, ಶ್ರೀಮಂತ ಪಾಟೀಲ್, ಮಾಜಿ ಸಚಿವ ಆರ್.ಶಂಕರ್ ಜೊತೆ ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಉಪಚುನಾವಣೆಯಲ್ಲಿ ಸ್ಪರ್ಧಿಸದಂತೆ ಸಿಎಂ ಯಡಿಯೂರಪ್ಪ ಹೇಳಿದ್ದು ನಿಜ. ಅವರು ನಮ್ಮ ನಾಯಕರು. ನಮ್ಮ …
Read More »ಐಎಂಎ ಬಹುಕೋಟಿ ವಂಚನೆ ಪ್ರಕರಣ ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ
ಬೆಂಗಳೂರು,ಜ.29- ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪಕ್ಕೆ ಸಿಲುಕಿರುವ ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿಗೆ ಸಂಕಷ್ಟ ಎದುರಾಗಿದೆ. ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಐಎಂಎ ಪ್ರಕರಣದಲ್ಲಿ ಆರೋಪಿ ಮನ್ಸೂರ್‍ಖಾನ್‍ಗೆ ಸಹಾಯ ಮಾಡಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಬಿಐ, ಇಬ್ಬರು ಅಧಿಕಾರಿಗಳ ವಿರುದ್ಧ …
Read More »ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್
ಬೆಂಗಳೂರು: ಆತನದ್ದು ತೀರ ಬಡ ಕುಟುಂಬ. ಮನೆಯಲ್ಲಿ ಹೆಚ್ಚು ಕಲಿತವರಿಲ್ಲ. ಸರ್ಕಾರಿ ನೌಕರಿ ಅಂದ್ರೆ ದೊಡ್ಡದು, ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್ ಪಾಸ್ ಆಗುವ ಹಂತದಲ್ಲಿ ಇದ್ದಾನೆಂದ್ರೆ ಸಂತಸಕ್ಕೆ ಪಾರವೇ ಇಲ್ಲ. ಹೌದು, ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಧು ಐಎಎಸ್ ಮುಖ್ಯ ಪರೀಕ್ಷೆಯಲ್ಲಿ ಪಾಸಾಗಿದ್ದು, ಸಂದರ್ಶನಕ್ಕೆ ಕಾಯುತ್ತಿದ್ದಾರೆ. ದಿನಕ್ಕೆ ಎಂಟು ಗಂಟೆ ಕಂಡಕ್ಟರ್ ಕೆಲಸ ಮಾಡುತ್ತಿದ್ದ ಮಧು …
Read More »ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆರಮೇಶ ಜಾರಕಿಹೊಳಿ ಮತ್ತು ಟೀಂ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ.
ಮೈಸೂರು: ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು.ಈ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳಾದ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಟೀಂ I ಇಂದು ನಂಜನಗೂಡು ಶ್ರೀಕಂಠೇಶ್ವರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಮಹೇಶ ಕುಮಟಳ್ಳಿ, ಆರ್ ಶಂಕರ್, ಮಾಜಿ ಶಾಸಕ ನಾಗರಾಜು ಕೂಡ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ರು. …
Read More »ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ಸತ್ತ ನಾಯಿ : ತೆರವುಗೊಳಿಸದ ಗ್ರಾಮ ಪಂಚಾಯಿತಿ ಆಡಳಿತ
ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ಸತ್ತ ನಾಯಿ : ತೆರವುಗೊಳಿಸದ ಗ್ರಾಮ ಪಂಚಾಯಿತಿ ಆಡಳಿತ ಬಂಗಾರಪೇಟೆ ತಾಲ್ಲೂಕು ಹುಲಿಬೆಲೆ ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ನಿನ್ನೆ ರಾತ್ರಿ ನಾಯಿಯೊಂದು ಸತ್ತಿದ್ದು, ಇದುವರೆಗೂ ತೆರವುಗೊಳಿಸುವಲ್ಲಿ ಗ್ರಾಮ ಪಂಚಾಯ್ತಿ ವಿಫಲವಾಗಿದೆ. ವಿಪರ್ಯಾಸ ಎಂದರೆ ನಾಯಿ ಸತ್ತ ಸ್ಥಳದಲ್ಲೇ ಅಂಗನವಾಡಿ ಕೇಂದ್ರವಿದ್ದು, ವಾಸನೆಯಿಂದ ಮಕ್ಕಳು ಹೈರಾಣಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಂಗನವಾಡಿ ಕಾರ್ಯಕರ್ತೆ, ಪಂಚಾಯಿತಿಗೆ ಮಾಹಿತಿ ನೀಡಲಾಗಿದೆ. ಸತ್ತ …
Read More »B j p ಅವರ್ ಮೇಲೆ ಕಿಡಿ ಕಾರಿದ ಕುಮಾರಣ್ಣ
‘ಮಿಣಿ ಮಿಣಿ ಪೌಡರ್’ ಟ್ರೋಲ್ ಮಾಡಿದ್ದೇ ಬಿಜೆಪಿ ಕಾರ್ಯಕರ್ತರು: ಅಬ್ಬರಿಸಿ ಬೊಬ್ಬಿರಿದ ಎಚ್ಡಿಕೆ..! ತಮ್ಮ ಮಿಣಿ ಮಿಣಿ ಪೌಡರ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿರೋದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರೇ ಟ್ರೋಲ್ ಮಾಡಿದ್ದಾರೆ ಎಂದು ಕಿಡಿಕಾರಿದರು. ಮಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೇಳಿಕೆ ನೀಡಿದ್ದ ಕುಮಾರಸ್ವಾಮಿ, ಅದು ಬಾಂಬ್ ಅಲ್ಲ ಕೇವಲ ಮಿಣಿ ಮಿಣಿ …
Read More »