ಬೆಂಗಳೂರು: ನಿಗದಿ ಮಾಡಿದ್ದ ಪ್ರಯಾಣ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿ ಕಾನೂನು ಬಾಹಿರವಾಗಿ ಆಟೋ ಚಾಲನೆ ಮಾಡುತ್ತಿದ್ದವರ ಮೇಲೆ ಸೋಮವಾರ ನಗರದ 11 ಆರ್ಟಿಒ ಕಚೇರಿಯ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ. ಸರ್ಕಾರ ನಿಗದಿಗೊಳಿಸಿದ ಕನಿಷ್ಠ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಮಾಹಿತಿ ಆಧರಿಸಿ ಇಂದು ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು …
Read More »ಬನ್ನೇರುಘಟ್ಟ ಅರಣ್ಯ ವಲಯದಲ್ಲಿ ಜಿಂಕೆ ಮಾಂಸ ಕಟ್ ಮಾಡುತ್ತಿದ್ದವ ಅರೆಸ್ಟ್
ನೆಲಮಂಗಲ, ಜೂನ್ 29: ಕಾಡುಪ್ರಾಣಿಗಳನ್ನು ಕೊಂದು ಮಾರಾಟ ಮಾಡುತ್ತಿದ್ದ ಜಾಲ ಬೆಂಗಳೂರಿನಲ್ಲಿ (Bengaluru) ಪತ್ತೆಯಾಗಿದೆ. ಬನ್ನೇರುಘಟ್ಟ ಅರಣ್ಯ ವಲಯದಲ್ಲಿ (Bannerghatta Forest Zone) ಜಿಂಕೆ ಮಾಂಸ ಕತ್ತರಿಸುತ್ತಿದ್ದಾಗ ಕಗ್ಗಲೀಪುರ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪ್ರತಾಪ್ (31) ಬಂಧಿತ ಆರೋಪಿ. ಬನ್ನೇರುಘಟ್ಟ ಅರಣ್ಯ ವಲಯದಲ್ಲಿ ಶೆಡ್ ನಿರ್ಮಿಸಿಕೊಂಡು ಆರೋಪಿ ಪ್ರತಾಪ್ ಸೇರಿದಂತೆ ನಾಲ್ವರು ಪ್ರಾಣಿಗಳ ಮಾಂಸ ಕತ್ತರಿಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕಗ್ಗಲಿಪುರ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. …
Read More »ಆರೋಪಿಗಳನ್ನು ಕರೆತರುವಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಸಾವು
ಬೆಂಗಳೂರು: ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಿ ಕರೆತರುವಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಲಘಟ್ಟಪುರ ಠಾಣೆಯ ಸಬ್ ಇನ್ಸ್ಪೆಕ್ಟರ್ ಮೆಹಬೂಬ್ ಗುಡ್ಡಹಳ್ಳಿ (40) ಸಾವನ್ನಪ್ಪಿದ ಅಧಿಕಾರಿ. ಜೂನ್ 24ರಂದು ನಸುಕಿನ 2:30ರ ಸುಮಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂರ್ಯನಗರ ಬಳಿ ಸಂಭವಿಸಿದ್ದ ಅಪಘಾತದಲ್ಲಿ ಮೆಹಬೂಬ್ ಅವರು ತೀವ್ರವಾಗಿ ಗಾಯಗೊಂಡಿದ್ದರು. ಮಾದಕ ಪದಾರ್ಥಗಳ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದಾಗ ಮೆಹಬೂಬ್ ಅವರ ಕಾರಿಗೆ ಟ್ರಕ್ ಡಿಕ್ಕಿಯಾಗಿತ್ತು. ಅಪಘಾತದ ಬಳಿಕ ಟ್ರಕ್ …
Read More »ಹಳೆ ವೈಷಮ್ಯಕ್ಕೆ ವ್ಯಕ್ತಿಯ ಕೊಲೆ ಪ್ರಕರಣ: ಅಪ್ರಾಪ್ತ ಸೇರಿ ಮೂವರ ಬಂಧನ
ಬೆಂಗಳೂರು: ಹಳೆಯ ವೈಷಮ್ಯದ ಕಾರಣದಿಂದ ವ್ಯಕ್ತಿಯೋರ್ವನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಜಿನಪ್ಪ (35) ಎಂಬವರನ್ನು ಕೊಂದಿದ್ದ ಆರೋಪದಡಿ ಪ್ರೇಮ್, ದರ್ಶನ್ ಹಾಗೂ ಮತ್ತೋರ್ವ ಅಪ್ರಾಪ್ತನನ್ನು ಬಂಧಿಸಲಾಗಿದೆ. ಥಣಿಸಂದ್ರದ ಆಕಾಶವಾಣಿ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಆಂಜಿನಪ್ಪ ಅವರ ಮೃತದೇಹ ಪತ್ತೆಯಾಗಿತ್ತು. ಕುರಿ ಮೇಯಿಸುವ ವಿಚಾರಕ್ಕೆ ಗಲಾಟೆ, ಹತ್ಯೆಯಲ್ಲಿ ಅಂತ್ಯ: ಪತ್ನಿಯಿಂದ ದೂರವಾಗಿದ್ದ ಆಂಜಿನಪ್ಪ ಉಚಿತವಾಗಿ ಊಟ ತಿಂಡಿ ಸಿಗುವ ಕಡೆಗಳಲ್ಲಿ ಹೊಟ್ಟೆ ತುಂಬಿಸಿಕೊಂಡು …
Read More »ಅರುಣ ಯಳ್ಳೂರಕರ ಗೆ ಕರ್ನಾಟಕ ಛಾಯಾರತ್ನ’ ಪ್ರಶಸ್ತಿ
ಅರುಣ ಯಳ್ಳೂರಕರ ಗೆ ಕರ್ನಾಟಕ ಛಾಯಾರತ್ನ’ ಪ್ರಶಸ್ತಿ ಬೆಳಗಾವಿ: ಇಲ್ಲಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಅರುಣ ಯಳ್ಳೂರಕರ ಅವರು, ‘ಕರ್ನಾಟಕ ಛಾಯಾರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಪತ್ರಿಕಾ ಛಾಯಾಗ್ರಹಕರಾಗಿ ಪತ್ರಿಕೆ ಮಾದ್ಯಮ ಕ್ಷೇತ್ರದಲ್ಲಿ ಹಲವು ದಶಕಗಳ ಲ್ಲಿ ಸಲ್ಲಿಸಿರುವ ಅಭೂತಪೂರ್ವ ಸೇವೆಯನ್ನು ಪರಿಗಣಿಸಿ, ಕರ್ನಾಟಕ ವಿಡಿಯೊ ಮತ್ತು ಫೊಟೊ ಅಸೋಸಿಯೇಷನ್ ಬ(ರಿ) ಮತ್ತು ಬೈಸೇಲ್ ಇಂಟ್ರಾಕ್ಷನ್ ಪ್ರವೇಟ್ ಲಿಮಿಟೆಡ್ ಸಹಯೊಗದೊಂದಿಗೆ ದಿನಾಂಕ 27-06-2025 ರಂದು ಬೆಂಗಳೂರಿನ ಅರಮನೆ ಮೈದಾನದ …
Read More »ಅನ್ಯ ರಾಜ್ಯಗಳ ಪೊಲೀಸ್ ಸಿಬ್ಬಂದಿಯ ಕ್ಯಾಪ್ ಪರಿಶೀಲಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗಳು ಬಳಸುತ್ತಿರುವ ಬ್ರಿಟಿಷರ ಕಾಲದ ಕ್ಯಾಪ್‌ಗಳ ಬದಲಾವಣೆಯ ಚರ್ಚೆಗಳು ಚಾಲ್ತಿಯಲ್ಲಿರುವಾಗ, ಅನ್ಯ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಧರಿಸುತ್ತಿರುವ ಟೋಪಿಗಳ ಮಾದರಿಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವೀಕ್ಷಿಸಿದ್ದಾರೆ. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆ ನಡೆಸಿದ ಅವರು, ಮಹಾರಾಷ್ಟ್ರ, ದೆಹಲಿ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಬಳಸುತ್ತಿರುವ ಕ್ಯಾಪ್‌ಗಳನ್ನು ಪರಿಶೀಲಿಸಿದರು. …
Read More »ತುರಿಮಣೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ
ರಾಮನಗರ, ಜೂನ್ 26: ಅಡುಗೆ (cooking) ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಈ ವೇಳೆ ತುರಿಮಣೆಯಿಂದ ಹೊಡೆದು ಪತಿಯಿಂದ ಪತ್ನಿ (wife) ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತಿಮ್ಮಮ್ಮ(65) ಹತ್ಯೆಗೈದ ರಂಗಯ್ಯ. ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಎದುರೇ ಬ್ಲೇಡ್ನಿಂದ ಕತ್ತುಕೊಯ್ದುಕೊಂಡ ವ್ಯಕ್ತಿ: ಆತ್ಮಹತ್ಯೆಗೆ ಯತ್ನ ಸಾರ್ವಜನಿಕರ ಎದುರೇ ಬ್ಲೇಡ್ನಿಂದ …
Read More »ಸಿದ್ದರಾಮಯ್ಯನವರು ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ: ಡಿಸಿಎಂ
ಬೆಂಗಳೂರು: ”ಸಿಎಂ ಸಿದ್ದರಾಮಯ್ಯನವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ನಾನು ಅದರ ಬಗ್ಗೆ ಏನೂ ಕೇಳಿಲ್ಲ. ನಮಗೆ ಹೈಕಮಾಂಡ್ ಇದ್ದು, ಎಲ್ಲವನ್ನೂ ನೋಡಿಕೊಳ್ಳುತ್ತದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಏನೂ ಸಮಸ್ಯೆ ಇಲ್ಲ. ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ಮಾಧ್ಯಮದವರೇ ಬ್ಲೋ ಅಪ್ ಮಾಡುತ್ತಿದ್ದಾರೆ” ಎಂದರು. …
Read More »ಸಮಾಧಾನ, ಅಸಮಾಧಾನ ಅಂತಾ ನಂದೇನೂ ಇಲ್ಲ:ಬಿ.ಆರ್.ಪಾಟೀಲ್
ಬೆಂಗಳೂರು : ಸಮಾಧಾನ, ಅಸಮಾಧಾನ ನಂದೇನೂ ಇಲ್ಲ. ನಡೆದಿದ್ದನ್ನು ಅವರಿಗೆ ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಶಾಸಕ ಬಿ. ಆರ್. ಪಾಟೀಲ್ ತಿಳಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಏನೆಲ್ಲ ಹೇಳಬೇಕಾಗಿತ್ತೋ ಹೇಳಿದ್ದೇನೆ. ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಎಲ್ಲ ವಿವರವಾಗಿ ಹೇಳಿದ್ದೇನೆ ಎಂದಿದ್ದಾರೆ. ಅವರು ಸಮಾಧಾನದಿಂದ ನಮ್ಮ ವಿಚಾರಗಳನ್ನು ಕೇಳಿದ್ದಾರೆ. …
Read More »ವರ್ಷಾಂತ್ಯಕ್ಕೆ ಭಾರಿ ಬದಲಾವಣೆ ಆಗಲ್ಲ, ಕೆಲ ಸಚಿವರ ಬದಲಾವಣೆಯಾಗಲಿದೆ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ”ವರ್ಷಾಂತ್ಯಕ್ಕೆ ಭಾರೀ ಬದಲಾವಣೆ ಆಗುವುದಿಲ್ಲ, ಸಣ್ಣಪುಟ್ಟ ಬದಲಾವಣೆಗಳಾಗಲಿವೆ” ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ವರ್ಷಾಂತ್ಯಕ್ಕೆ ಕಾಂಗ್ರೆಸ್ನಲ್ಲಿ ಭಾರೀ ಬದಲಾವಣೆ ಆಗಲಿದೆ ಎಂಬ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಣ್ಣಪುಟ್ಟ ಬದಲಾವಣೆಗಳಾಗಲಿದೆ. ಹಾಗಂತ ಭಾರಿ ಬದಲಾವಣೆ ಯಾವುದೂ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗಲ್ಲ. ಕೆಲ ಸಚಿವರ ಬದಲಾವಣೆ ಆಗಲಿದೆ” ಎಂದರು. ಜಲಸಂಪನ್ಮೂಲ ಇಲಾಖೆ ಮೇಲೆ ಶಾಸಕ ರಾಜು ಕಾಗೆ ಆರೋಪ ವಿಚಾರವಾಗಿ …
Read More »