ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವಂತ ರಾಜ್ಯದ ಜನರಿಗೆ ಉಚಿತ ಆಹಾರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬಿಪಿಎಲ್ ಪಡಿತರ ಚೀಟಿ( BPL Ration Card ) ಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಈ ಕಾರ್ಡಗಳಿಗಾಗಿ ಹೊಸದಾಗಿ ಅರ್ಜಿಯನ್ನು ಅನೇಕ ಅರ್ಹ ಫಲಾನುಭವಿ ಕುಟುಂಬಗಳಿಂದ ಸಲ್ಲಿಸಲಾಗಿದೆ. ಆದ್ರೇ ರಾಜ್ಯ ಸರ್ಕಾರ ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ಆರ್ಥಿಕ ಸಬಲರು ವಾಪಸ್ ಕೊಟ್ಟ ನಂತರವಷ್ಟೇ ಹೊಸ ಅರ್ಜಿದಾರರಿಗೆ ಕಾರ್ಡ್ ವಿತರಿಸಲು ನಿರ್ಧರಿಸಿದೆ ಎನ್ನಲಾಗಿದೆ. …
Read More »ಸಿ.ಟಿ.ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..?!
ಬೆಂಗಳೂರು,ಡಿ.8- ಮುಂಬರುವ 2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಬಿಜೆಪಿ ವರಿಷ್ಠರು ಹಾಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಮುಂದಾಗಿದ್ದಾರೆ. ಹಾಲಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರನ್ನು ಶೀಘ್ರದಲ್ಲಿ ಬದಲಾಯಿಸಿ ತೆರವಾಗಲಿರುವ ಈ ಸ್ಥಾನಕ್ಕೆ ಆರ್ ಎಸ್ ಎಸ್ ಹಾಗೂ ಸಂಘಪರಿವಾರದ ಹಿನ್ನೆಲೆಯ ರವಿ ಅವರಿಗೆ ಪಟ್ಟ ಕಟ್ಟಲು ದೆಹಲಿ ನಾಯಕರು ತೀರ್ಮಾನಿಸಿದ್ದಾರೆ. ಒಂದು ಕಡೆ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿರುವ …
Read More »ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ: ಹೆಬ್ಬಾಳ್ಕರ್ ಹೊಸ ಬಾಂಬ್
ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸೋಲಿಸುವುದೇ ನನ್ನ ಮುಖ್ಯ ಗುರಿ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಕಾಗವಾಡದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆ ಬಗ್ಗೆ ಈಗಾಗಲೇ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಗಾಗಿ ಆ …
Read More »ರಾಜ್ಯದಲ್ಲಿ ಐದು ಜನಕ್ಕೆ ಹರಡಿದೆ ಓಮಿಕ್ರಾನ್: ಬಿಬಿಎಂಪಿ ಸ್ಪಷ್ಟನೆ
ಬೆಂಗಳೂರು ಡಿಸೆಂಬರ್ 2: ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಎರಡಲ್ಲ ಐದು ಜನಕ್ಕೆ ಹರಡಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿಲಿಕಾನ್ ಸಿಟಿಗೆ ಓಮಿಕ್ರಾನ್ ಬಿಗ್ ಶಾಕ್ ಕೊಟ್ಟಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನ ಓಮಿಕ್ರಾನ್ ವೈರಸ್ ಸೋಂಕಿತ ಐದು ಪ್ರಕರಣಗಳು ದಾಖಲಾಗಿವೆ ಎಂದು ಗೌರವ್ ಗುಪ್ತ ಸ್ಪೋಟಕ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಮೂಲಕವೇ ಭಾರತದಲ್ಲಿ ಮೊದಲ ಬಾರಿಗೆ ಐದು ಓಮಿಕ್ರಾನ್ …
Read More »ನಾಲ್ವರ ಆತ್ಮಹತ್ಯೆ ಪ್ರಕರಣದ: ಪತ್ರಕರ್ತ ಹಲ್ಲೇಗೆರೆ ಶಂಕರ್ ಹಾಗೂ ಆತನ ಇಬ್ಬರು ಅಳಿಯಂದಿರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ
ಬೆಂಗಳೂರು: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಬ್ಯಾಡರಹಳ್ಳಿ ಪೊಲೀಸರು, ಪತ್ರಕರ್ತ ಹಲ್ಲೇಗೆರೆ ಶಂಕರ್ ಹಾಗೂ ಆತನ ಇಬ್ಬರು ಅಳಿಯಂದಿರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ತಿಗಳರಪಾಳ್ಯದಲ್ಲಿ ವಾಸವಿದ್ದ ಭಾರತಿ (51), ಅವರ ಮಕ್ಕಳಾದ ಸಿಂಚನಾ (34), ಸಿಂಧುರಾಣಿ (33) ಹಾಗೂ ಮಧುಸಾಗರ್ (25) ಆತ್ಮಹತ್ಯೆ ಮಾಡಿಕೊಂಡಿದ್ದರು ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಭಾರತಿ ಅವರ ಪತಿ ಶಂಕರ್ ಹಾಗೂ ಅಳಿಯಂದಿರನ್ನು ಬಂಧಿಸಲಾಗಿತ್ತು. ಮೂವರು ಸದ್ಯ …
Read More »ಹಣ ಇಲ್ಲದಿದ್ದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ: ಸರ್ಕಾರಕ್ಕೆ ಹೈಕೋರ್ಟ್ ಚಾಟಿ2017-18ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿ ಸ್ಥಾಪಿಸಲು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು: ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿ ಸ್ಥಾಪಿಸಲು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಹಣ ಇಲ್ಲದಿದ್ದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ ಎಂದು ಕಟುವಾಗಿ ಟೀಕಿಸಿದೆ. 2017-18ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿಗಳನ್ನು ಸ್ಥಾಪಿಸಲು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಬೀದರ್ನ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಲ್ಲಿಸಿರುವ …
Read More »#omicron ಆತಂಕದ ಮಧ್ಯೆಯೂ ಇಂದಿನಿಂದ ನಂದಿ ಬೆಟ್ಟ ಪ್ರವಾಸಿಗರಿಗೆ ಮುಕ್ತ ಮುಕ್ತ..!
ಬೆಂಗಳೂರು: ಸಿಲಿಕಾನ್ ಸಿಟಿಗೆ ಕೂಗಳತೆ ದೂರದಲ್ಲಿರುವ ಪ್ರವಾಸಿಗರ ಫೆವರೇಟ್ ಹಾಗೂ ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟ ಪ್ರಿಯರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಿಹಿ ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ. ಆರ್. ಮಾಹಿತಿ ನೀಡಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತದೆ. ಶನಿವಾರ ಮತ್ತು ಭಾನುವಾರದಂದು ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲಾಡಳಿತ …
Read More »₹ 20 ಸಾವಿರಕ್ಕೆ ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ!
ಬೆಂಗಳೂರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಪರೀಕ್ಷಾ ಮಂಡಳಿಗಳು ಹಾಗೂ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರುತ್ತಿದ್ದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ‘ಮರಿಯಣ್ಣಪಾಳ್ಯದ ಎಂ. ರಾಕೇಶ್ (37), ಹೆಬ್ಬಾಳ ಕೆಂಪಾಪುರದ ಕೆ. ಕೃಷ್ಣ (27), ಕೊತ್ತನೂರಿನ ಹನುಮಂತಪ್ಪ ಲೇಔಟ್‌ನ ತನ್ವಯ್ ದೇಬ್‌ರಾಯ್ (33) ಹಾಗೂ ಎಚ್‌ಬಿಆರ್ ಲೇಔಟ್‌ನ ಹೈದರ್ ಅಲಿ (37) ಬಂಧಿತರು. ಅವರಿಂದ 682 ನಕಲಿ ಅಂಕಪಟ್ಟಿಗಳು ಹಾಗೂ 18 …
Read More »ರಾಸಲೀಲೆ ವಿಡಿಯೋ ಪತಿಗೆ ಕಳಿಸಿದ್ದ ಅತ್ಯಾಚಾರ ಆರೋಪಿಗೆ ಜಾಮೀನು, ಅಕ್ರಮ ಸಂಬಂಧಕ್ಕೆ ಇಬ್ಬರ ಒಪ್ಪಿಗೆ ಇತ್ತು ಎಂದ ಹೈಕೋರ್ಟ್
ಬೆಂಗಳೂರು: ವಿವಾಹಿತೆಯಾಗಿರುವ ಸಂತ್ರಸ್ತೆ ಮಹಿಳೆಯು ಬೆಳಗಿನ ಜಾವ ಆರೋಪಿಗೆ ವಿಡಿಯೊ ಕರೆ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಸಂತ್ರಸ್ತೆಯ ಖಾಸಗಿ ಅಂಗಗಳ ಚಿತ್ರಗಳನ್ನು ಆತ ಸೆರೆ ಹಿಡಿದಿದ್ದಾನೆ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ, ಅತ್ಯಾಚಾರ ಆರೋಪಿಗೆ ಜಾಮೀನು ನೀಡಿದೆ. ಕೊಪ್ಪಳ ಜಿಲ್ಲೆಯ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಆಗಸ್ಟ್ ನಲ್ಲಿ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಆರೋಪಿ ಬಸನಗೌಡ ಅಲಿಯಾಸ್ ಬಸವರಾಜ್ ಅವರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ …
Read More »ಬೆಂಗಳೂರು: 28 ಮನೆ, 5 ಕಾರು, ಚಿನ್ನ, ಬೆಳ್ಳಿ; ಎಸಿಬಿ ದಾಳಿ ವೇಳೆ ವಾಸುದೇವ್ ಮನೆಯಲ್ಲಿ ಪತ್ತೆಯಾದ ಆಸ್ತಿ ವಿವರ ಇದು
ಬೆಂಗಳೂರು: ಇಲ್ಲಿನ ಗ್ರಾಮೀಣ ನಿರ್ಮಿತಿ ಕೇಂದ್ರದ ಮಾಜಿ ನಿರ್ದೇಶಕ ಆರ್.ಎನ್.ವಾಸುದೇವ್ ಮನೆ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಲಭ್ಯವಾಗಿದೆ. ಆದಾಯಕ್ಕಿಂತ ಶೇ.1408ರಷ್ಟು ಆಸ್ತಿ ಗಳಿಸಿರುವ ವಾಸುದೇವ್, ತನ್ನ, ಕುಟುಂಬಸ್ಥರ ಹೆಸರಿನಲ್ಲಿ ಆಸ್ತಿ ಗಳಿಸಿರುವ ಬಗ್ಗೆ ತಿಳಿದುಬಂದಿದೆ. ಬಾಡಿಗೆಗೆ ನೀಡುವ ಉದ್ದೇಶದಿಂದ 5 ಕಡೆ ಮನೆಗಳ ನಿರ್ಮಾಣ ಮಾಡಿದ್ದರು. ವಾಸುದೇವ್ ಕುಟುಂಬ ಸದಸ್ಯರ ಹೆಸರಲ್ಲಿ 28 ಮನೆಗಳು ಪತ್ತೆ ಆಗಿದೆ. ಕೆಂಗೇರಿಯ ಶಾಂತಿ ವಿಲಾಸ ಲೇಔಟ್‌ನ ಚರ್ಚ್ …
Read More »