ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ 26ನೇ ಅಧ್ಯಕ್ಷರಾಗಿ ನಾಡೋಜ ಡಾ. ಮಹೇಶ ಜೋಷಿ ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ಬೆಳಗ್ಗೆಯಿಂದ ಸಂಜೆವರೆಗೆ ನಡೆದ ಮತದಾನದಲ್ಲಿ 1.59 ಲಕ್ಷ ಮತದಾರರು ಭಾಗವಹಿಸಿದ್ದರು. ರಾತ್ರಿ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ ಜೋಷಿ ಅವರಿಗೆ 51,169 ಮತಗಳು ಲಭಿಸಿದ್ದು, ಎರಡನೇ ಸ್ಥಾನದಲ್ಲಿರುವ ಡಾ. ಶೇಖರಗೌಡ ಮಾಲಿಪಾಟೀಲ ಅವರಿಗೆ 17,656 ಮತಗಳು …
Read More »ಭಯಾನಕ ಮಳೆಯಲ್ಲಿ ಪುನೀತ್ ಬ್ಯಾನರ್ ಎದುರು ಕೈಮುಗಿದು ಕುಳಿತ ಅಭಿಮಾನಿ- ವಿಡಿಯೋ ವೈರಲ್
ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ಎಲ್ಲರನ್ನೂ ಅಗಲಿ ತಿಂಗಳಾಗುತ್ತ ಬಂದರೂ ಅವರ ಸಾವಿನ ಬಗ್ಗೆ ಇದುವರೆಗೂ ಹಲವು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಅಂಥ ಬೆಲೆ ಕಟ್ಟಲಾಗದ ಅಭಿಮಾನ ಅವರ ಮೇಲಿದೆ. ಇದಾಗಲೇ ಸಿನಿಕ್ಷೇತ್ರದವರು, ಕುಟುಂಬಸ್ಥರು ಸೇರಿದಂತೆ ಸಾಮಾನ್ಯ ಜನರು ಕೂಡ ಅಪ್ಪುವಿನ ಜತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಳ್ಳುತ್ತಿರುವ ಬೆನ್ನಲ್ಲೇ ಪುನೀತ್ ಅವರ ಸಮಾಧಿಯ ಮುಂದೆ ಬಂದು ರೋಧಿಸುತ್ತಿರುವವರೂ ಹಲವರು. ಇದೀಗ ಅಭಿಮಾನಿಯೊಬ್ಬ ಸುರಿಯುವ ಮಳೆಯನ್ನೂ ಲೆಕ್ಕಿಸದೇ ಪುನೀತ್ ಅವರ …
Read More »“ಕನಕದಾಸರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಕೊಡುವ ನಿಜವಾದ ಗೌರವ”
ಬೆಂಗಳೂರು,ನ.22-ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು. ನವಸಮಾಜ , ಸಮಸಮಾಜ ನಿರ್ಮಾಣವಾಗಬೇಕೆಂದು ಕನಸು ಕಂಡಿದ್ದ ಕನಕದಾಸರು ಪರಿವರ್ತನೆಯ …
Read More »ಮಳೆಯಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣವೇ 1 ಲಕ್ಷ ರೂ. ಪರಿಹಾರ ಬಿಡುಗಡೆ; ಸಿಎಂ ಬೊಮ್ಮಾಯಿ
ಬೆಂಗಳೂರು : ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮಳೆಯಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣವೇ 1 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆಹಾನಿ ಸಂಭವಿಸಿದ್ದು, 500 ಕೋಟಿ ರೂ.ಗಳನ್ನು ರಸ್ತೆ ದುರಸ್ತಿಪಡಿಸಲು ಬಿಡುಗಡೆ ಮಾಡಲಾಗಿದೆ. ಬೆಳೆ ಸಮೀಕ್ಷೆ ಇಂದಿನಿಂದ ಆರಂಭವಾಗಲಿದ್ದು, …
Read More »ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಮಳೆ : ಮುನ್ಸೂಚನೆ ನೀಡಿದ ಹವಮಾನ ಇಲಾಖೆ
ಬೆಂಗಳೂರು: ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊದಲ ಮೂರು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ನಂತರದ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳು ಮಳೆ ಸಾಧ್ಯತೆ ಇದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ನಾಳೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆ …
Read More »ಲಖನ್ ಜಾರಕಿಹೊಳಿ ಅವರಿಗೆB.J.P. ಟಿಕೆಟ್ ನೀಡಿಲ್ಲ, ಪಕ್ಷೇತರರಾಗಿ ಲಖನ್ ಸ್ಪರ್ಧೆ ಸಾಧ್ಯತೆ..?
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ 25 ಸ್ಥಾನಗಳಲ್ಲಿ 20 ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿಲ್ಲ. ಮಹಂತೇಶ್ ಕವಟಗಿಮಠ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಲಖನ್ ಜಾರಕಿಹೊಳಿಯವರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದರು. ಆದರೆ, ಟಿಕೆಟ್ ಕೈ ತಪ್ಪಿದೆ. …
Read More »RTE ಶುಲ್ಕ ಮರುಪಾವತಿ’ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನ
ಬೆಂಗಳೂರು: 2021-22ನೇ ಸಾಲಿನ ಆರ್ ಟಿ ಇ ಶುಲ್ಕ ( RTE Seat School Fee ) ಮರುಪಾವತಿಗೆ ಬೇಡಿಕೆ ಸಲ್ಲಿಸಲು ತಂತ್ರಾಂಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ( School Education Department ) ಬಿಡುಗಡೆ ಮಾಡಿದೆ. ಈ ತಂತ್ರಾಂಶದಡಿ ಶಾಲಾ ಮುಖ್ಯಸ್ಥರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು, ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಹಕ್ಕು …
Read More »ನಮ್ಮ ಈ ಪ್ರಯಾಣವನ್ನು ಪುನರಾರಂಭಿಸುತ್ತಿದ್ದೇವೆ’; ಪಿಆರ್ಕೆ ಪ್ರೊಡಕ್ಷನ್ನಿಂದ ಭಾವುಕ ಪೋಸ್ಟ್
2017ರ ಜುಲೈ 20ರಂದು ಪಿಆರ್ಕೆ ಪ್ರೊಡಕ್ಷನ್ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್ ಹೌಸ್ನಿಂದ ಹೊರ ಬಂದ ಮೊದಲ ಸಿನಿಮಾ.ಪುನೀತ್ ರಾಜ್‌ಕುಮಾರ್ (Puneeth Rajkumar) ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಭೇಷ್ ಎನಿಸಿಕೊಂಡಿದ್ದಾರೆ. ಅವರು ಪಿಆರ್ಕೆ ಪ್ರೊಡಕ್ಷನ್ (PRK Production) ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್ವುಡ್ನಲ್ಲಿ ಅವರು ಎಲ್ಲರಿಂದಲೂ …
Read More »ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. ಹುಸೇನ್ ಮೋದಿ ಬಾಬು, ಸೀಮಾ, ನಯಾಜ್ ಅಹ್ಮದ್, ಶಬ್ಬೀರ್ ಅಹ್ಮದ್, ಹರೀಶ್ನನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 63 ಲಕ್ಷ ರೂಪಾಯಿ ಮೌಲ್ಯದ ನಕಲಿ ಛಾಪಾ ಕಾಗದ (stamp papers) ವಶಕ್ಕೆ ಪಡೆದಿದ್ದಾರೆ. ಹೈಕೋರ್ಟ್ (High court) ಸೂಚನೆ ಮೇರೆಗೆ ರಚನೆಯಾಗಿದ್ದ ಎಸ್‌ಐಟಿ (SIT) ಅಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆಸಿದ್ದು, ಐವರು ಆರೋಪಿಗಳನ್ನು ಸದ್ಯ ವಿಚಾರಣೆಗೊಳಪಡಿಸಲಾಗಿದೆ. ನಕಲಿ …
Read More »ಮಳೆಗೆ ಬೆಂಗಳೂರಿನಲ್ಲಿ ಕೆರೆಯಂತಾದ ರಸ್ತೆಗಳು;
ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದಂತೆ ಬೆಂಗಳೂರಿನಲ್ಲಿ ಜಿಟಿ- ಜಿಟಿ ಮಳೆ ಇತ್ತು. ಆದರೆ ನಿನ್ನೆ (ನವೆಂಬರ್ 18) ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆ ಸುರಿದಿದೆ. ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟದ (Karnataka rains) ಪರಿಣಾಮ ಕೆಲವು ಕಡೆ ರಸ್ತೆಗಳು ಕೆರೆಯಂತಾದರೆ ಮತ್ತೆ ಹಲವು ಕಡೆ ಜನರ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು ಸೇರಿದಂತೆ ಹೊರವಲಯದಲ್ಲೂ ನಿನ್ನೆ ಸಂಜೆ ಧಾರಾಕಾರವಾಗಿ ಮಳೆ ಸುರಿದಿದೆ. ನಗರದ ಬಹುಪಾಲು ರಸ್ತೆಗಳು ಕೆರೆಯಂತಾಗಿ ಕೆಲಸ …
Read More »