ಬೆಂಗಳೂರು: ಸೆಪ್ಟೆಂಬರ್ 27 ರಂದು ಕೃಷಿ ಕಾಯ್ದೆ ವಿರೋಧಿಸಿ ನಡೆದ ಭಾರತ್ ಬಂದ್ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ವಾಕಿಟಾಕಿ ಕಳ್ಳತನವಾಗಿದೆ. ಟೌನ್ ಹಾಲ್ ಮುಂಭಾಗ ಘಟನೆ ನಡೆದಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಹಲವು ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು. ಈ ವೇಳೆ ಟೌನ್ ಹಾಲ್ ಬಳಿ ರೈತರು ಪ್ರತಿಭಟನಾ ಜಾಥಾ ನಡೆಸಿದ್ದರು. ಈ ವೇಳೆ ಟೌನ್ ಹಾಲ್ ಬಳಿ ಕರ್ತವ್ಯಕ್ಕೆ ಎಸ್ ಜೆ ಪಾರ್ಕ್ ಠಾಣೆ …
Read More »ಬಿಜೆಪಿ ಗೆಲ್ಲಿಸಲು ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದರಾಮಯ್ಯ
ಬೆಂಗಳೂರು: ‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಯಾಕೆ ಟಿಕೆಟ್ ಕೊಡಲ್ಲ ‘ ಎಂದು ಪ್ರಶ್ನಿಸಿದರು. ‘ಹಾನಗಲ್‌ನಲ್ಲಿ ಮನೋಹರ ತಹಶೀಲ್ದಾರ್ ಮತ್ತು …
Read More »ಭೂಸ್ವಾಧೀನಕ್ಕೆ ವಿರೋಧ; ಗಾಂಧಿ ವೇಷ ಧರಿಸಿ ಬೀದಿಗಿಳಿದ ಅನ್ನದಾತ; ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಶಿವರಾಮ್ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದಕ್ಕೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ವೇಷ ಧರಿಸಿ ವಿನೂತನ ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲಹಂಕ ತಾಲೂಕಿನ 17 ಗ್ರಾಮಗಳ ರೈತರು ಬಿಡಿಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಬಿಳಿ ಪಂಚೆ, ಶಾಲು, ಟೋಪಿ ಮತ್ತು ಕೋಲು ಹಿಡಿದು ಗಾಂಧಿ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಶಿವರಾಮ ಕಾರಂತ ಬಡಾವಣೆಗಾಗಿ ಬಿಡಿಎ …
Read More »ಗ್ರಾಮೀಣ ಜನತೆಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಸಮೀಪದಲ್ಲೇ ಸರ್ಕಾರಿ ಸೇವೆ ಒದಗಿಸಲು ಗ್ರಾಪಂಗಳಲ್ಲಿ ನಾಗರಿಕ ಸೇವಾ ಕೇಂದ್ರ ಸ್ಥಾಪನೆ
ಬೆಂಗಳೂರು: ರಾಜ್ಯದ ಗ್ರಾಮೀಣ ಜನರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗ್ರಾಮ ಪಂಚಾಯಿತಿಗೆ ಒಂದು ನಾಗರಿಕ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜನರಿಗೆ ಅಗತ್ಯವಿರುವ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ನಾಗರಿಕ ಸೇವಾ ಕೇಂದ್ರ ಆರಂಭಿಸುವಂತೆ ಇ -ಆಡಳಿತ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇ ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಎಲ್ಲಾ ಗ್ರಾಮ ಪಂಚಾಯಿತಿಗಳ …
Read More »ಹಾನಗಲ್ ಉಪಚುನಾವಣೆ: ರೇಸ್ನಲ್ಲಿ 11 ಮಂದಿ.. ಇಕ್ಕಟ್ಟಿನಲ್ಲಿ ಬಿಜೆಪಿ ಹೈಕಮಾಂಡ್..!
ಬೆಂಗಳೂರು: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್ಗಾಗಿ ಅಭ್ಯರ್ಥಿಗಳ ಲಾಭಿ ಜೋರಾಗಿದೆ. ಈಗಾಗಲೇ ಹಾನಗಲ್‌ನಲ್ಲಿ ಮೂರು ಪಕ್ಷಗಳ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಸದ್ಯ ಉಳಿದ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಯ ಸಲುವಾಗಿ ಕಸರತ್ತು ಶುರುವಾಗಿದೆ. ಬಿಜೆಪಿ ಟಿಕೆಟ್ ರೇಸ್ನಲ್ಲಿ ಬರೊಬ್ಬರಿ 11 ಮಂದಿ ದೆಹಲಿಯಲ್ಲಿ ಹೈಕಮಾಂಡ್ನಿಂದ ಅಭ್ಯರ್ಥಿ ಆಯ್ಕೆ ಸದ್ಯ ಬಿಜೆಪಿಯಲ್ಲಿ ಅಭ್ಯರ್ಥಿಯ ಆಯ್ಕೆ ದೊಡ್ಡ ತಲೆನೋವಾಗಿದ್ದು, ಬರೋಬ್ಬರಿ 11 ಮಂದಿ ಟಿಕೆಟ್ …
Read More »ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್‍ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್‍ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …
Read More »ಅಕ್ಟೋಬರ್ 11 ರಿಂದ ಒಂದು ವಾರ ಹೈಕೋರ್ಟ್‌ಗೆ ರಜೆ
ಬೆಂಗಳೂರು: ರಾಜ್ಯ ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ. ಹೈಕೋರ್ಟ್‌ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ …
Read More »ಇಂದಿನಿಂದ ಪಬ್-ಕ್ಲಬ್, ಚಿತ್ರಮಂದಿರ ಫುಲ್ ಓಪನ್..!
ಬೆಂಗಳೂರು, ಅ.1- ಇಂದಿನಿಂದ ಕ್ಲಬ್, ಪಬ್, ಚಿತ್ರಮಂದಿರ, ಧಾರ್ಮಿಕ ಕೇಂದ್ರಗಳೆಲ್ಲವೂ ಸಂಪೂರ್ಣ ತೆರೆದುಕೊಳ್ಳಲಿವೆ. ಕೊರೊನಾ ಗಣನೀಯವಾಗಿ ತಗ್ಗಿರುವ ಹಿನ್ನೆಲೆಯಲ್ಲಿ ಅ. 1ರಿಂದ ಶೇ.100ರಷ್ಟು ಅನ್‍ಲಾಕ್‍ಗೆ ರಾಜ್ಯಸರ್ಕಾರ ಸೆ.25ರಂದು ಆದೇಶ ನೀಡಿತ್ತು. ಹೀಗಾಗಿ ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್-ಕ್ಲಬ್‍ಗಳು ಸೇರಿದಂತೆ ಎಲ್ಲದಕ್ಕೂ ಸಂಪೂರ್ಣ ಅನುಮತಿ ದೊರೆಯಲಿದೆ. ಶಾಲಾ-ಕಾಲೇಜುಗಳು ಶೇ.100ರಷ್ಟು ಹಾಜರಾತಿಗೆ ಅನುಮತಿ ಸಿಕ್ಕಿದ್ದು, ಸೋಮವಾರದಿಂದ ಶುಕ್ರವಾರದವರೆಗೆ 5 ದಿನಗಳ ಕಾಲ ಶಾಲೆಗಳು ಸಂಪೂರ್ಣವಾಗಿ ನಡೆಯಲಿವೆ. ಈ ನಿಟ್ಟಿನಲ್ಲಿ ಇಂದಿನಿಂದ ಎಲ್ಲವೂ ಅನ್‍ಲಾಕ್ …
Read More »ರೌಡಿ ರಫೀ ವಿರುದ್ಧ ಗೂಂಡಾ ಕಾಯ್ದೆ: ಸಿಸಿಬಿ ಪೊಲೀಸರಿಂದ ಬಂಧನ
ಬೆಂಗಳೂರಿನಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿರುವ ರೌಡಿಗಳ ವಿರುದ್ಧ ನಿರಂತರವಾಗಿ ಸಿಸಿಬಿ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದು,ಇದೀಗ ರೌಡಿ ರಫೀ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಇನ್ನು ಬಸವೇಶ್ವರನಗರ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿರುವ ರಫೀ, 2013ರಿಂದ ತಾವರೆಕೆರೆ, ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಿರಂತರವಾಗಿ ರೌಡಿ ಚಟುವಟಿಕೆಗಳಲ್ಲಿ ತೊಡಗಿಕೊಂಡು ಒಟ್ಟು 8 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಅದಲ್ಲದೆ ರೌಡಿ ರಫೀ ಕಳೆದ ಒಂದೂವರೆ ತಿಂಗಳ ಹಿಂದೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ …
Read More »ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ: ಸಂಪುಟ ದರ್ಜೆ ಸ್ಥಾನಮಾನ
ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾಗಿ ಎಂ.ಪಿ.ರೇಣುಕಾಚಾರ್ಯ ಮತ್ತು ಡಿ.ಎನ್.ಜೀವರಾಜ್ ಅವರನ್ನು ನೇಮಿಸಿ ಸರ್ಕಾರದ ಆದೇಶ ಮಾಡಿದೆ. ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರಿಬ್ಬರೂ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲೂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಇದೀಗ ಅವರನ್ನು ಮತ್ತೆ ನೇಮಕ ಮಾಡಲಾಗಿದೆ. ತಕ್ಷಣದಿಂದ ಜಾರಿಯಾಗುವಂತೆ ಮತ್ತು ಮುಂದಿನ ಆದೇಶದವರೆಗೆ ಇಬ್ಬರನ್ನೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿ, ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲು ಸರ್ಕಾರ ಆದೇಶಿಸಿದೆ.
Read More »