Breaking News

ಬೆಂಗಳೂರು

ಹಾಲು ಉತ್ಪಾದಕರಿಗಾಗಿ ಬ್ಯಾಂಕ್‌: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ

ಬೆಂಗಳೂರು: ಹಾಲು ಉತ್ಪಾದಕರ ಅಭಿವೃದ್ಧಿ – ಆರ್ಥಿಕ ಸುಧಾರಣೆಗಾಗಿ ಹಾಲು ಉತ್ಪಾದಕರ ಬ್ಯಾಂಕ್‌ ತೆರೆಯಬೇಕು. ಇದಕ್ಕೆ ಸರಕಾರ 100 ಕೋಟಿ ರೂ. ಮೂಲ ಬಂಡವಾಳ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌)ಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೂತನ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿ, ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು. ಹಾಲು ಉತ್ಪಾದಕರನ್ನು ಆರ್ಥಿಕವಾಗಿ ಸಶಕ್ತ ಗೊಳಿಸಲು ಮತ್ತು ಮಹಾಮಂಡಳಿ ಹಾಗೂ ಒಕ್ಕೂಟಗಳನ್ನು …

Read More »

ಶಾಹೀನ್ ಚಂಡಮಾರುತ- ಅ.3ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ

ಬೆಂಗಳೂರು: ಶಾಹೀನ್ ಚಂಡಮಾರುತ ಹಿನ್ನೆಲೆ ಇಂದಿನಿಂದ ಅಕ್ಟೋಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅ.3ರ ವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.   ಇಂದಿನಿಂದ ಅ.3 ರವರೆಗೆ ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, …

Read More »

ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಬ್ಬ ಮಾಜಿ ಶಾಸಕ ಮತ್ತು ಒಬ್ಬ ಹಾಲಿ ಶಾಸಕರನ್ನು ತಮ್ಮ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿಕೊಂಡಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಶೃಂಗೇರಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕವಾಗಿದ್ದಾರೆ. ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಎಂ.ಪಿ. ರೇಣುಕಾಚಾರ್ಯ ಮತ್ತು ಡಿ.ಎನ್. ಜೀವರಾಜ್ ಅವರು ಈ ಹಿಂದೆ ಬಿ ಎಸ್‌ ಯಡಿಯೂರಪ್ಪ …

Read More »

ಕಳೆದ ಒಂದೂವರೆ ವರ್ಷದಲ್ಲಿ ವೈದ್ಯಕೀಯ ನಿರ್ಲಕ್ಷ್ಯದ 153 ದೂರು ದಾಖಲು

ಬೆಂಗಳೂರು: ಕಳೆದ ಒಂದೂವರೆ ವರ್ಷಗಳಲ್ಲಿ, ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ) ವೈದ್ಯಕೀಯ ನಿರ್ಲಕ್ಷ್ಯ ಮತ್ತು ವೃತ್ತಿಪರ ದುರ್ನಡತೆಗೆ ಸಂಬಂಧಿಸಿದಂತೆ 153 ದೂರುಗಳನ್ನು ಸ್ವೀಕರಿಸಿದೆ ಎಂದು ತಿಳಿದುಬಂದಿದೆ. 2020 ರಲ್ಲಿ 88 ದೂರುಗಳನ್ನು ಸ್ವೀಕರಿಸಿದ್ದು, 2021 ರಲ್ಲಿ 65 ದೂರುಗಳನ್ನು ಆಗಸ್ಟ್ ತಿಂಗಳವರೆಗೆ ದಾಖಲಿಸಿಕೊಳ್ಳಲಾಗಿದೆ. ಅಂತೆಯೇ ಹೊಸ ದೂರುಗಳ ಕುರಿತು 84 ಪ್ರತಿವಾದಿಗಳು ಅಥವಾ ಆಸ್ಪತ್ರೆಗಳಿಂದ ಪ್ರಾಥಮಿಕ ವಿವರಣೆಗಳನ್ನು ಕೇಳಲಾಗಿದೆ. ಆದಾಗ್ಯೂ, ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಲಾದ ಕೌನ್ಸಿಲ್ ಚುನಾವಣೆ ರಿಟ್ ಅರ್ಜಿಯ ಕಾರಣದಿಂದಾಗಿ ಎಲ್ಲಾ …

Read More »

ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದ ನಳೀನ್​ ಕುಮಾರ್ ಕಟೀಲ್.​..!

ಆರ್​​ಎಸ್​ಎಸ್​ನದ್ದು ತಾಲಿಬಾನ್​ ಸಂಸ್ಕೃತಿ ಎಂದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​​ ಭರ್ಜರಿ ಟಾಂಗ್​ ನೀಡಿದ್ದಾರೆ. ಮಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದು ಗುಡುಗಿದ್ರು. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಆಡಳಿತದಲ್ಲಿ ಅನೇಕರ ಹತ್ಯೆಯಾಯ್ತು. ಅವರ ಆಡಳಿತದಲ್ಲಿ ರಾಜ್ಯದಲ್ಲಿ ತಾಲಿಬಾನ್​ ಸ್ಥಿತಿಯೇ ಇತ್ತು. ರಾಜ್ಯದಲ್ಲಿ 24 ಹಿಂದೂ ಯುವಕರನ್ನು ಕೊಲೆಗೈಯಲಾಯ್ತು. ದಕ್ಷಿಣ ಕನ್ನಡದಲ್ಲಿ …

Read More »

ಕುಡುಕುನ ವೇಷ ಧರಿಸಿ ಆರೋಪಿ ಬಂಧಿಸಿದ ಪೊಲೀಸರು.. 9 ವರ್ಷಗಳ ಹಿಂದಿನ ಕೇಸ್​ಗೆ ಕೊನೆಗೂ ಮುಕ್ತಿ

ಬೆಂಗಳೂರು: ಒಂಭತ್ತು ವರ್ಷದ ಹಿಂದಿನ ಪ್ರಕರಣವೊಂದನ್ನ ಪೊಲೀಸರು ಬೇಧಿಸಿದ್ದಾರೆ, ಕುಡುಕನ ಸೋಗಿನಲ್ಲಿ ಹೋಗಿ ಆರೋಪಿಯನ್ನ ಬಂಧಿಸಿದ್ದಾರೆ. ಟ್ರ್ಯಾಕ್ಟರ್ ಓಡಿಸುತ್ತಿದ್ದ ಆಂಥೋನಿ ಎಂಬಾತ ಆಟೋಗೆ ಡಿಕ್ಕಿಹೊಡೆದು ಪರಾರಿಯಾಗಿದ್ದನಂತೆ. ಘಟನೆಯಲ್ಲಿ 8 ವರ್ಷದ ಕೌಶಲ್ ಕುಮಾರ್​ ಎಂಬಾತ ಮೃತಪಟ್ಟಿದ್ದ. ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಬಾಪೂಜಿನಗರದಲ್ಲಿ ಘಟನೆ ನಡೆದಿತ್ತು. ಪ್ರಕರಣ ಸಂಬಂಧ ಆರೋಪಿಗೆ 10 ತಿಂಗಳು 15 ದಿನ ಜೈಲು ಶಿಕ್ಷೆಯಾಗಿತ್ತು. ಆತನಿಗೆ ಶಿಕ್ಷೆ ಪ್ರಕಟ ಆಗ್ತಿದ್ದಂತೆ ಆತ ತಲೆಮೆರೆಸಿಕೊಂಡಿದ್ದ. ಬಳಿಕ ವಿಳಾಸ ಬದಲಿಸಿಕೊಂಡು …

Read More »

ಸರಕಾರಿ ಕಾಲೇಜುಗಳಲ್ಲಿ ದಾಖಲಾತಿ ದಾಖಲೆ!

ಬೆಂಗಳೂರು: ರಾಜ್ಯದ ಸರಕಾರಿ ಕಾಲೇಜುಗಳಲ್ಲಿ ಪ್ರವೇಶಾತಿ ಹೊಸ ದಾಖಲೆ ಸೃಷ್ಟಿಸಿದ್ದು, ಉನ್ನತ ಶಿಕ್ಷಣದ ದಾಖಲಾತಿಯೂ ಹೆಚ್ಚಿದೆ. ದ್ವಿತೀಯ ಪಿಯುಸಿಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿ ರುವುದರಿಂದ ಪದವಿ, ವೃತ್ತಿಪರ ಕೋರ್ಸ್‌ಗಳಲ್ಲಿಯೂ ದಾಖಲಾತಿ ಹೆಚ್ಚಲಿದೆ ಎಂಬ ನಿರೀಕ್ಷೆಯನ್ನು ಈ ಹಿಂದೆಯೇ ಸರಕಾರ ಮಾಡಿತ್ತು. ಈಗ ಸರಕಾರಿ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಅಕ್ಟೋಬರ್‌ ಮೊದಲ ವಾರದ ವರೆಗೂ ಅವಕಾಶ ನೀಡಲಾಗಿದೆ. ರಾಜ್ಯದ 330 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈಗಾಗಲೇ …

Read More »

ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆ.ಡಿ.ಎಸ್ ಕಣಕ್ಕೆ!

ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಅಕ್ಟೋಬರ್ 30ರಂದು ನಡೆಯಲಿರುವ ಎರಡೂ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಿಡದಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಎರಡು ಉಪ ಚುನಾವಣೆ ದಿನಾಂಕ ಅನೌನ್ಸ್ ಆಗಿದೆ. ಹಾಗೆ ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ …

Read More »

ಹಾನಗಲ್, ಸಿಂಧಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಭಯ್ಯಾಪುರ

ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದ್ದು, ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಶಾಸಕ ಅಮರೇಗೌಡ ಭಯ್ಯಾಪುರ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಜನರು ಬಿಜೆಪಿಯ ಆಡಳಿತ ಮತ್ತು ಬೆಲೆ ಹಗರಣ, ರೈತರ ಮೇಲಿನ ದೌರ್ಜನ್ಯಕ್ಕೆ ಬೇಸತ್ತಿದ್ದಾರೆ ಎಂದು ತಿಳಿಸಿದರು. ಹಾಗೆ ರೈತರು ಹತ್ತು ತಿಂಗಳಿಂದ ಪ್ರತಿಭಟನೆಯಲ್ಲಿ ತೊಡಗಿದ್ದು, ಸೌಹಾರ್ದಯುತವಾಗಿ ರೈತರ ಸಮಸ್ಯೆ ಬಗೆಹರಿಸಲು ಬಿಜೆಗೆ ಆಗ್ತಿಲ್ಲ ಎಂದು ಹೇಳಿದರು. ಅದಲ್ಲದೆ …

Read More »

ಉಪ ಚುನಾವಣೆ: ಮೂರು ಪಕ್ಷಗಳ ಸಂಭಾವ್ಯ ಅಭ್ಯರ್ಥಿಗಳ ಅಂತಿಮ ಪಟ್ಟಿ!

ಬೆಂಗಳೂರು, ಸೆ. 28: ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೆ ಮೂರು ರಾಜಕೀಯ ಪಕ್ಷಗಳಲ್ಲಿ ಸಂಚಲನ ಉಂಟಾಗಿದೆ. ಅಭ್ಯರ್ಥಿಗಳ ಆಯ್ಕೆ ಗೊಂದಲ ಸೃಷ್ಟಿಯಾಗಿದೆ. ಅದರಲ್ಲಿಯೂ ಆಡಳಿತ ಪಕ್ಷ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಮಾಜಿ ಸಚಿವ ಸಿ.ಎಂ. ಉದಾಸಿ ಅವರ ನಿಧನದಿಂದ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಜೊತೆಗೆ ಹಾನಗಲ್ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು, ಅಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಸವಾಲು ಬಿಜೆಪಿಗೆ ಎದುರಾಗಿದೆ. ಸಿಂದಗಿಯಲ್ಲಿ …

Read More »